Author: News Desk Benkiyabale

ಹುಳಿಯಾರು:       ಅಧಿಕಾರಕ್ಕೋಸ್ಕರ ಖರೀದಿಯಾದ ಶಾಸಕರುಗಳಿಗೆ ಹಾಗೂ ಅಭಿವೃದ್ಧಿ ಬಗ್ಗೆ ಚಿಂತಿಸದೆ ರೈತರ ಹಿತ ಕಡೆಗಣಿಸಿದ ಸರ್ಕಾರಕ್ಕೆ ಛೀ.. ಥೂ ಎಂದು ಉಗಿಯುವ ಚಳುವಳಿಯನ್ನು ಹುಳಿಯಾರಿನಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.       ಹುಳಿಯಾರಿನ ಬಸ್ ನಿಲ್ದಾಣದಲ್ಲಿ ನಡೆದ ವಿನೂತನ ಪ್ರತಿಭಟನೆಯಲ್ಲಿ ತಮ್ಮ ಶಾಸಕ ಸ್ಥಾನವನ್ನು ದುಡ್ಡಿಗೆ ಮಾರಾಟ ಮಾಡಿಕೊಂಡ ಶಾಸಕರುಗಳಿಗೆ ಛೀಮಾರಿ ಹಾಕಿದ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಂಕೆರೆ ಸತೀಶ್ ಜನರಿಂದ ಆಯ್ಕೆಯಾಗಿ ಶಾಸಕರಾದ ಇವರುಗಳಿಂದು ಕೇವಲ ಹಣ ಹಾಗೂ ಸಚಿವಗಿರಿ ಸ್ಥಾನಕ್ಕಾಗಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಖಂಡಿಸಿದರಲ್ಲದೆ ಹಣಕ್ಕಾಗಿ ಮತದಾರರನ್ನು ಕಡೆಗಣಿಸಿ ರೆಸಾರ್ಟ್‍ನಲ್ಲಿ ವಾಸಿಸುತ್ತಿರುವ ಶಾಸಕರುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಅವರ ಜನ್ಮ ಜಾಲಾಡಿದರು.       ತಾಲೂಕು ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ರೈತರ, ಸಾರ್ವಜನಿಕರ ಹಿತಾಸಕ್ತಿಗೆ ಸ್ಪಂದಿಸದ ಇವರುಗಳು ಕೇವಲ ಹಣ ಹಾಗೂ ಅಧಿಕಾರದ ಲಾಲಸೆಗಾಗಿ ಸಚಿವರಾಗಿ…

Read More

ತುಮಕೂರು:       ರಾಜ್ಯದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದರೂ ಸಹ ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿ ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ರೈತರು ಸಮ್ಮಿಶ್ರ ಸರ್ಕಾರ ಹಾಗೂ ಶಾಸಕರು, ಸಚಿವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.       ಪ್ರತಿಭಟನಾಕಾರರನ್ನು ಉದ್ದೇಶಿಸಿ ರೈತ ಸಂಘದ ಆನಂದ್‍ಪಾಟೀಲ್ ಮಾತನಾಡಿ, ರಾಜ್ಯ ವಿಧಾನಸಭೆಯಲ್ಲಿ ಎಬ್ಬಿಸಿರುವ ಗಲಭೆಯನ್ನು ಗಮನಿಸಿದರೆ ರಾಷ್ಟ್ರದ ಮುಂದೆ ಕರ್ನಾಟಕದ ಜನತೆ ತಲೆತಗ್ಗಿಸುವಂತಹ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಮುಂಗಾರು ಮಳೆ ಆಗದೇ ಸಕಾಲಕ್ಕೆ ಬೆಳೆಯೂ ಇಲ್ಲದೆ ರೈತರು ಬರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶಾಸಕರು, ಸಚಿವರುಗಳು ರಾಜ್ಯದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಗಮನ ಹರಿಸದೆ ತಮ್ಮ…

Read More

ತುಮಕೂರು :       ತಮಗೆ ಲಭಿಸಿದ ಖಚಿತ ವರ್ತಮಾನ ಆಧರಿಸಿ ಗೋಡೋನ್ ಒಂದರ ಮೇಲೆ ದಾಳಿ ನಡೆಸಿದ ತುಮಕೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಸುಮಾರು 1 ಲಕ್ಷ ರೂ. ಮೌಲ್ಯದ 1,200 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರಲ್ಲದೆ, ಸಂಬಂಧಿಸಿದವರಿಗೆ 50,000 ರೂ. ದಂಡ ವಿಧಿಸಿರುವ ಮಹತ್ವದ ಘಟನೆ ಶುಕ್ರವಾರ ನಡೆದಿದೆ.      ತುಮಕೂರು ನಗರದ ಮಂಡಿಪೇಟೆಯ ಒಂದನೇ ಮುಖ್ಯರಸ್ತೆಯ ಮೂರನೇ ತಿರುವಿನಲ್ಲಿರುವ ಗೋಡೋನ್‍ನಲ್ಲಿ ಈ ಘಟನೆ ಜರುಗಿದೆ. ಇದು ಅಮ್ಜದ್ ಪಾಷ ಎಂಬುವವರಿಗೆ ಸೇರಿದ ಗೋಡೋನ್ ಆಗಿದೆ.       ದೊಡ್ಡ ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ವರ್ತಮಾನದ ಹಿನ್ನೆಲೆಯಲ್ಲಿ ಗುರುವಾರ ಸಂಜೆಯೇ ಪಾಲಿಕೆಯ ಅಧಿಕಾರಿಗಳು ಈ ಗೋಡೋನ್‍ಗೆ ದಾಳಿ ನಡೆಸಿದ್ದರು. ಆದರೆ ಗೋಡೋನ್ ಮಾಲೀಕರು ಬಾಗಿಲು ತೆರೆಯಲು ಒಪ್ಪಿರಲಿಲ್ಲ. ಹೀಗಾಗಿ ಸದರಿ ಗೋಡೋನ್ ಅನ್ನು ಪಾಲಿಕೆಯವರು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.       ಶುಕ್ರವಾರ ಮಧ್ಯಾಹ್ನ ಆಯುಕ್ತ ಟಿ.ಭೂಬಾಲನ್…

Read More

ತುಮಕೂರು :       ನಗರದ ಕೇಂದ್ರಭಾಗದಲ್ಲಿರುವ ಅಮಾನಿಕೆರೆಗೆ ಸುಮಾರು 887 ವರ್ಷಗಳ ಇತಿಹಾಸವಿದೆ. ಮಾನವ ನಿರ್ಮಿತ ವೈಭವದಿಂದ ಕೂಡಿದ್ದ ಈ ಕೆರೆಯು ಕೆಲವು ವರ್ಷಗಳ ಹಿಂದೆ ಸಂಸ್ಕರಿಸದ ಒಳಚರಂಡಿ ನೀರು, ಕಸದ ರಾಶಿಯಿಂದ ತುಂಬಿಕೊಂಡು ಅಸಹನೀಯ ದುರ್ವಾಸನೆಯಿಂದ ಕೂಡಿದ ಅವ್ಯವಸ್ಥೆಯ ತಾಣವಾಗಿತ್ತು. ಮತ್ತೊಮ್ಮೆ ಈ ಕೆರೆಗೆ ಪುನಶ್ಚೇತನ ನೀಡಿ ಹೊಸ ರೂಪ ನೀಡಲು ಸ್ಮಾರ್ಟ್ ಸಿಟಿ ಸಂಸ್ಥೆಯು ಮುಂದಾಗಿದೆ.   28ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ:       ಭಾರತದಲ್ಲಿ ನೀರಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಖಿieಡಿ (ಟೈರ್)-1 ನಗರಗಳಾದ ದೆಹಲಿ, ಬೆಂಗಳೂರು, ಹೈದ್ರಬಾದ್, ಮತ್ತಿತರ ನಗರಗಳಲ್ಲಿ 2020ರ ವೇಳೆಗೆ ಅಂತರ್ಜಲ ಬರಿದಾಗಲಿದೆ ಎಂದು ಓIಖಿI ಆಯೋಗವು ಇತ್ತೀಚಿಗಷ್ಟೇ ವರದಿ ಮಾಡಿದೆ. ಇದನ್ನು ಮನಗಂಡ ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧ್ಯಕ್ಷೆ ಡಾ|| ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಗರದ ನಾಗರಿಕರಿಗೆ ಉಪಯೋಗವಾಗುವಂತೆ ಅಮಾನಿಕೆರೆಯನ್ನು ಪುನರುಜ್ಜೀವನಗೊಳಿಸಿ ಸೌಂದರ್ಯೀಕರಣಗೊಳಿಸಲು 28 ಕೋಟಿ ರೂ.ಗಳ ಅಂದಾಜು ವೆಚ್ಚದ ಯೋಜನೆಯೊಂದನ್ನು ರೂಪಿಸಿ ಈಗಾಗಲೇ…

Read More

 ತುಮಕೂರು: ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಿಪ್ಪೇಶ ಹಾಗೂ ಲಕ್ಷ್ಮಣ್ ಎಂಬುವವರ ಮೇಲೆ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದ ರಂಗಪ್ಪ, ಭೀಮಣ್ಣ ಬಿನ್ ನರಸಪ್ಪ ಹಾಗೂ ಭೀಮಣ್ಣ ಬಿನ್ ಯಲ್ಲಪ್ಪ ಎಂಬ ಮೂರು ಮಂದಿ ಆರೋಪಿಗಳಿಗೆ 4 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 15000 ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ. ಪ್ರಕರಣದ ಹಿನ್ನಲೆ:- ಮೂವರು ಆರೋಪಿಗಳು ಸೇರಿ 2018ರ ಮಾರ್ಚ್ 10ರಂದು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿ ರಿಂಗ್ ರಸ್ತೆಯಲ್ಲಿರುವ ಡಿ.ಎ.ಟಿ ಮಸೀದಿ ಬಳಿ ತಿಪ್ಪೇಶ ಮತ್ತು ಲಕ್ಷ್ಮಣ ಎಂಬುವವರನ್ನು ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಮಾಡಬೇಕೆಂಬ ಉದ್ದೇಶದಿಂದ ಇಬ್ಬರಿಗೂ ಇಟ್ಟಿಗೆಯಿಂದ ಹಣೆ, ಕೆನ್ನೆ, ಹೊಟ್ಟೆ, ಎದೆ, ಕಿವಿ ಭಾಗಕ್ಕೆ ಹೊಡೆದು ತೀವ್ರ ಸ್ವರೂಪದ ಗಾಯಪಡಿಸಿ ಪ್ರಾಣಬೆದರಿಕೆ ಹಾಕಿರುವುದು ತನಿಖೆಯಿಂದ ಸಾಬೀತಾಗಿದೆ. ಆರೋಪ ರುಜುವಾತಾದ ಕಾರಣ ರಂಗಣ್ಣ, ಭೀಮಣ್ಣ ಬಿನ್ ನರಸಪ್ಪ, ಭೀಮಣ್ಣ ಬಿನ್ ಯಲ್ಲಪ್ಪ ಅವರಿಗೆ…

Read More

 ತುಮಕೂರು:       ಶ್ರೀಗಂಧ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲಕ್ಷ್ಮಿ ಎಂಬ ಮಹಿಳೆಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ.ಗಳ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ ತೀರ್ಪು ನೀಡಿದ್ದಾರೆ.      ಪ್ರಕರಣದ ಹಿನ್ನೆಲೆ:-       ಗುಬ್ಬಿ ಅರಣ್ಯ ವಲಯದ ವ್ಯಾಪ್ತಿಯೊಳಗಿನ ದೊಡ್ಡಗುಣಿ ಅನುಭಾಗದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ ಹಂಡನಹಳ್ಳಿ ಗುಡ್ಡದ ತಪ್ಪಲಿನಲ್ಲಿ ಸುಮಾರು 17 ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದರೆಂಬ ಖಚಿತ ಮಾಹಿತಿ ಮೇರೆಗೆ ದೊಡ್ಡಗುಣಿ ಉಪವಲಯ ಅರಣ್ಯಾಧಿಕಾರಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಆರೋಪಿ ಲಕ್ಷ್ಮಿ ಬಳಿ ಶ್ರೀಗಂಧದ ಮರಗಳಿರುವುದು ಸಾಬೀತಾಗಿದೆ. ಆರೋಪಿ ಲಕ್ಷ್ಮಿ ಬಳಿಯಿದ್ದ ಶ್ರೀಗಂಧದ ಮರಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ. ಅರಣ್ಯ ಅಧಿಕಾರಿ ಆರ್.ರಮೇಶ್ ಅವರು ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ…

Read More

ತುಮಕೂರು:       ಮಾಧ್ಯಮ ಕ್ಷೇತ್ರದ ಒಟ್ಟಾರೆ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿ ಅಡಗಿದೆ ಎಂದು ದುಬೈಯ ಹೈಯರ್ ಕಾಲೇಜಸ್ ಆಫ್ ಟೆಕ್ನಾಲಜಿಯ ಅಪ್ಲೈಡ್ ಮೀಡಿಯ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ. ಅಭಿಪ್ರಾಯಪಟ್ಟರು.       ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಶುಕ್ರವಾರ ಹಮ್ಮಿಕೊಂಡಿದ್ದ ‘ಮಾಧ್ಯಮರಂಗ: ಭವಿಷ್ಯದಲ್ಲೇನಿದೆ?’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.       ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಸಾಮಾಜಿಕ ಮಾಧ್ಯಮಗಳು ಆವರಿಸಿಕೊಳ್ಳುತ್ತಿವೆ. ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂದು ಇದರರ್ಥವಲ್ಲ. ಭವಿಷ್ಯದಲ್ಲಿ ಅದರ ಸ್ವರೂಪ ಬದಲಾಗಲಿದೆ. ವಾಸ್ತವವಾಗಿ ಸ್ಥಳೀಯ ಪತ್ರಿಕೆಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು.       ಕಾರ್ಪೋರೇಟ್ ಕಂಪೆನಿಗಳು ತಮ್ಮ ಜಾಹೀರಾತು ಮೊತ್ತದ ಶೇ. 45 ಪಾಲನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಬಳಸಲಿವೆ. ಸೋಶಿಯಲ್ ಮೀಡಿಯಾ ಮ್ಯಾನೇಜರ್ ಎಂಬುದು ಮುಂದಿನ ಕೆಲವೇ ವರ್ಷಗಳಲ್ಲಿ ಪ್ರತಿಷ್ಠಿತ ಹುದ್ದೆಯಾಗಲಿದೆ ಎಂದು ಪ್ರತಿಪಾದಿಸಿದರು.       2000ದಲ್ಲಿ ಭಾರತದಲ್ಲಿ…

Read More

ಶಿರಾ :       ನಗರದ ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲವೆಂದು ಆರೋಪಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸಾರಿಗೆ ಬಸ್ಸನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ನಡೆದಿದೆ.       ಕಳ್ಳಂಬೆಳ್ಳ ಹೋಬಳಿಯ ಬೆಂಚೆ, ಕಳ್ಳಂಬೆಳ್ಳ ಗ್ರಾಮ, ಗೋಪಾಲದೇವರಹಳ್ಳಿ, ದೊಡ್ಡ ಅಗ್ರಹಾರ, ಚಿಕ್ಕ ಅಗ್ರಹಾರ, ಬಟ್ಟಿಗಾನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ಶಿರಾ ನಗರದ ಶಾಲಾ-ಕಾಲೇಜುಗಳಿಗೆ ಬರಬೇಕಿದ್ದು, ಬೆಳಗ್ಗೆ ಕೇವಲ ಒಂದು ಸರ್ಕಾರಿ ಬಸ್ ಬಿಟ್ಟರೆ ಇನ್ನಾವುದೇ ಸರ್ಕಾರಿ ಬಸ್‍ಗಳನ್ನು ಈ ರಸ್ತೆಯ ಮೂಲಕ ಚಲಿಸಲು ಅವಕಾಶ ಕಲ್ಪಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.       ಕಳ್ಳಂಬೆಳ್ಳ ಗ್ರಾಮದ ಗೇಟ್‍ನಲ್ಲಿ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸ್‍ನ್ನು ಅಡ್ಡಗಟ್ಟಿದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸದ ಹೊರತು ಬಸ್ಸನ್ನು ಬಿಡುವುದಿಲ್ಲ ಎಂದು ಹಠ ಹಿಡಿದು ಕೂತರು.       ವಿವಿಧ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ಮಂದಿ…

Read More

ತುಮಕೂರು:       ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಇದಕ್ಕೆ ಪ್ರಮುಖ ಕಾರಣ ಪರಿಚಯಸ್ಥರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ಆಗಿರುತ್ತಾರೆ. ಇಂತಹ ಪ್ರಕರಣಗಳು ಮಕ್ಕಳ ಮೇಲೆ ಮಾನಸಿಕವಾಗಿ ಗಂಭೀರ ಪರಿಣಾಮ ಬೀರುತ್ತಿರುವುದು ಆಘಾತಕಾರಿ ಅಂಶವಾಗಿದ್ದು, ಇದಕ್ಕೆ ಪೋಷಕರ ನಿರ್ಲಕ್ಷ್ಯ ಹಾಗೂ ಮಕ್ಕಳಿಗೆ ಈ ಕುರಿತು ಅರಿವು ಇಲ್ಲದಿರುವುದೇ ಪ್ರಮುಖ ಕಾರಣ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ  ಪ್ರೊಬೇಷನರಿ ಅಧಿಕಾರಿ ಕವಿತಾ ತಿಳಿಸಿದರು.       ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತುಮಕೂರು ಇವರ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012 ಹಾಗೂ ಮಕ್ಕಳ ಮಾರಾಟ ಹಾಗೂ ಸಾಕಾಣಿಕೆ ಕುರಿತು ಮಾತನಾಡಿದ ಅವರು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಪರಿಚಯಿಸಿದರು. ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತು ಉದಾಹರಣೆಗಳೊಂದಿಗೆ ವಿವರಿಸುತ್ತಾ ಬಾಲ್ಯ ವಿವಾಹ ನಿಷೇಧ ಕಾಯ್ದೆಯಲ್ಲಿ ಬಾಲ್ಯ ವಿವಾಹ ಮಾಡಿದರೆ ಯಾರೆಲ್ಲಾ ಶಿಕ್ಷೆಗಳಿಗೆ ಗುರಿಯಾಗುತ್ತಾರೆ ಹಾಗೂ ಬಾಲ್ಯ…

Read More

 ತುಮಕೂರು :       ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೂಚನೆ ನೀಡಿದರು.       ಜಿಲ್ಲಾ ಪಂಚಾಯತಿಯಲ್ಲಿಂದು ನರೇಗಾ ಮತ್ತು ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲಾನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಅಸ್ಪಷ್ಟ ಮಾಹಿತಿ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಮಾಡಲಾಗುವುದೆಂದ ಅವರು ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶೇ.48ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಇದರಿಂದ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಲ್ಲಿ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದಿದ್ದೇವೆ. ನರೇಗಾ ಯೋಜನೆಯಡಿ ಗುರಿ ಮೀರಿ ಸಾಧನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.       ಕೃಷಿ ಭಾಗ್ಯ ಯೋಜನೆಯಡಿ ಕೈಗೊಳ್ಳಲಾಗುವ ಕೃಷಿ ಹೊಂಡ ಕಾಮಗಾರಿಯನ್ನು ಜುಲೈ 31ರೊಳಗಾಗಿ ಪೂರ್ಣಗೊಳಿಸಬೇಕು. ಮಳೆಗಾಲ ಪ್ರಾರಂಭವಾಗುವ ಮುನ್ನವೇ ಪೂರ್ಣಗೊಳಿಸಬೇಕಿತ್ತು. ಮಳೆ…

Read More