Author: News Desk Benkiyabale

ತುಮಕೂರು:       ಲೋಕಸಭಾ ಚುನಾವಣೆ ರಾಜ್ಯದಲ್ಲಿ ಮುಗಿದಿದೆ. ಬರ ಪರಿಹಾರ ಕಾಮಗಾರಿ ಕೈಗೊಳ್ಳಲು, ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಲು ನೀತಿ ಸಂಹಿತೆ ಅಡ್ಡಿಯಾಗಿದೆ. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಚುನಾವಣಾ ಆಯೋಗಕ್ಕೆ ಪತ್ರ ಬರೆದು ನೀತಿ ಸಂಹಿತೆ ಸಡಿಸಲು ಕೋರಬೇಕು ಎಂದು ಜಿಲ್ಲೆಯ ಬಿಜೆಪಿ ಶಾಸಕರು ಒತ್ತಾಯ ಮಾಡಿದ್ದಾರೆ.       ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆ.ಸಿ.ಮಾಧುಸ್ವಾಮಿ, ಬಿ.ಸಿ.ನಾಗೇಶ್, ಮಸಾಲಾ ಜಯರಾಮ್, ಜ್ಯೋತಿಗಣೇಶ್, ‘ರಾಜ್ಯದಲ್ಲಿ 126 ತಾಲ್ಲೂಕು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಕಾರಣ ಹೇಳಿಕೊಂಡು ಎರಡು ತಿಂಗಳು ಏನೂ ಕೆಲಸಗಳು ಆಗಿಲ್ಲ. ಚುನಾವಣೆ ಮುಗಿದ ಬಳಿಕವೂ ಅದೇ ಸ್ಥಿತಿ ಆದರೆ ಹೇಗೆ’..? `ನಮ್ಮ ಕ್ಷೇತ್ರದಲ್ಲಿ ನೀರಿಗಾಗಿ, ದನಕರುಗಳಿಗೆ ಮೇವಿಗಾಗಿ, ಬರಪರಿಹಾರ ಕಾಮಗಾರಿಗೆ ಜನ ಒತ್ತಾಯಿಸುತ್ತಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಹಿಡಿದು ಜಿಲ್ಲಾಧಿಕಾರಿವರೆಗೂ ಯಾರೂ ನಮ್ಮ ಕಷ್ಟ ಕೇಳುತ್ತಿಲ್ಲ. ಫೋನ್ ಮಾಡಿದರೆ ನೀತಿ ಸಂಹಿತೆ ಸರ್ ಏನು ಮಾತಾಡಂಗಿಲ್ಲ. ಮೇಲಧಿಕಾರಿಗಳ ಆದೇಶ ಇದೆ ಅಂತಾರೆ.  …

Read More

ಮಧುಗಿರಿ:       ಗಡಿಭಾಗದಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾದ ಹಿನ್ನೆಲೆಯಲ್ಲಿ ಇತ್ತೀಚಿಗೆ ಮೇವು ಬ್ಯಾಂಕ್ ತೆರೆದಿದ್ದು ದಿಢೀರ್ ಜಿಲ್ಲಾಧಿಕಾರಿ ಡಾ ಕೆ ರಾಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.       ತಾಲೂಕಿನ ಪುರವರ ಗಂಕಾರನಹಳ್ಳಿ ತೋಪು ಹಾಗೂ ಮೈದನಹಳ್ಳಿ ಮೇವು ಬ್ಯಾಂಕಿಗೆ ಭೇಟಿ ನೀಡಿ ಪಶು ಅಧಿಕಾರಿಗಳು ಹಾಗೂ ರೈತರೊಂದಿಗೆ ಚರ್ಚಿಸಿದರು. ಈ ವೇಳೆ ಗೋ ಶಾಲೆಯ ಬದಲು ಮೇವು ಬ್ಯಾಂಕ್ ತೆರದಿದ್ದು ತುಂಬ ಅನುಕೂಲಕರವಾಗಿದೆ, ಆದರೆ ಮೈದನಹಳ್ಳಿ ಮೇವು ಬ್ಯಾಂಕಿನಲ್ಲಿ ಹಸಿ ಮೇವು ವಿತರಿಸಲಾಗುತ್ತಿದೆ ಜೋಳದ ಮೇವು ಹಸಿಯಾಗಿರುತ್ತದೆ ಇದರ ಬದಲು ಬತ್ತದ ಮೇವು ಗುಣಮಟ್ಟದಿಂದ ಕೊಡಿದ್ದು ಇದನ್ನೇ ವಿತರಿಸಿ ಎಂದು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿದರು       ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ 14 ನೇ ಹಣಕಾಸಿನ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಪಂಚಾಯತಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದೇ ವೇಳೆ…

Read More

ಪಾವಗಡ :       ಬರನಿರ್ವಹಣೆಯಲ್ಲಿ ಶುದ್ದಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತಾರತಮ್ಯ ಮಾಡುವಂತಿಲ್ಲ ಸಾಕಷ್ಟು ಅನುದಾನವಿದ್ದು ಬಳಕೆ ಮಾಡಿಕೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆಯ ಪ್ರಾಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ತಿಳಿಸಿದರು.       ಬುದವಾರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಶುದ್ದಕುಡಿಯುವ ನೀರಿನ ಸಮಸ್ಯೆ ಮತ್ತು ನರೇಗ ಕಾಮಗಾರಿಗಳನ್ನು ವೀಕ್ಷಣೆಗಾಗಿ ಆರ್.ಹೊಸಕೋಟೆ ಗ್ರಾಮಕ್ಕೆ ಬೇಟಿ ನೀಡಿ ಶುದ್ದಕುಡಿಯುವ ನೀರು ಪೂರೈಕೆಗಾಗಿ ಖಾಸಗಿಯವರಿಂದ ಬಾಡಿಗೆಗೆ ಪಡೆದ ಬೋರೆಗಳ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದು ,ಬೆಳೆ ಇಟ್ಟರೆ ನೀರು ಬಿಡಲು ಸಾದ್ಯವಿಲ್ಲ ಎಂದು ರೈತರು ತಿಳಿಸಿದ್ದು, ಗ್ರಾಮದಲ್ಲಿನ ಶುದ್ದಕುಡಿಯುವ ನೀರಿನ ಘಟಕಗಳ ನಿರ್ವಹಣಿಯ ಬಗ್ಗೆ ಮಾಹಿತಿ ಪಡೆದರು.       ಕೋಡಮೋಡಗು ಗ್ರಾಮ ಪಂಚಾಯ್ತಿಯ ನೂತನ ಕಟ್ಟಡ ಪರಿಶೀಲಿಸಿ ಗುಣಮಟ್ಟದ ಕಟ್ಟದ ನಿರ್ಮಾಣಕ್ಕೆ ಹಣ ಅಗತ್ಯವಾದಲ್ಲಿ ನರೇಗ ಹಣ ಬಳಕೆ ಮಾಡಿಕೋಳ್ಳಲು ತಿಳಿಸಿದ ಅವರು ಬೈರಾಪುರ ಗ್ರಾಮದ ರೇಷ್ಮೆ ಬೆಳೆಯುವಾ ಘಟಕ್ಕೆ ಬೇಟಿ ನೀಡಿ ರೈತನಿಂದ ಮಾಹಿತಿ ಪಡೆದಾ ಕಾರ್ಯದರ್ಶಿಗಳು ಇಂತಹ…

Read More

ಗುಬ್ಬಿ:       ದಶಕದ ಹಿಂದೆ ಗಣಿಗಾರಿಕೆಯಿಂದ ನಲುಗಿದ್ದ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಸುತ್ತಲಿನ ಹಳ್ಳಿಗಳ ಜನರಿಗೆ ಮೂಲ ಸೌಲಭ್ಯಗಳು ಮರೀಚಿಕೆ ಆಗಿವೆ. ಇಲ್ಲಿ ಮೊದಲಿದ್ದ ಅತ್ಯಂತ ಸುಂದರ ಭೌಗೊಳಿಕ ರಚನೆ ಹಾಗೂ ಪ್ರಕೃತಿಯ ಸೌಂದರ್ಯ ನಾಶವಾಗಿದೆ. ಇದನ್ನು ಪುನಃ ಕಟ್ಟುವ ಯೋಜನೆಗೆ ಕಾಯಕಲ್ಪ ಸಿಗಬೇಕಿದೆ.       ಶಿವಸಂದ್ರ, ಎಮ್ಮೆದೊಡ್ಡಿ, ಮುಸಕೊಂಡ್ಲಿ, ಮಾವಿನಹಳ್ಳಿ, ಕಂಚಿಗಾನಹಳ್ಳಿ, ಕೊಂಡ್ಲಿಕ್ರಾಸ್, ಬ್ಯಾಟಪ್ಪನಪಾಳ್ಯ, ಹೊನ್ನೇನಹಳ್ಳಿ, ದೊಡ್ಡಕೊಂಡ್ಲಿ, ಹರೇನಹಳ್ಳಿ, ಕಾರೇಕುರ್ಚಿ ಭಾಗದ ರೈತರು ಗಣಿಗಾರಿಕೆಯ ಕರಾಳ ಪರಿಣಾಮಗಳಿಂದ ಈಗಾಗಲೇ ತತ್ತರಿಸಿದ್ದಾರೆ. ಇಲ್ಲಿನ ಜನರು ಪಂಚಾಯಿತಿ ಮಟ್ಟದಲ್ಲಿ ಜಾರಿಯಾಗುವ ಯೋಜನೆಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಬೇಕಿದೆ.       ‘ಗಣಿಗಾರಿಕೆ ಕಾರಣ ಸುತ್ತಲ ಹಳ್ಳಿಗಳ ರೈತರ ಜಮೀನು ಫಲವತ್ತತೆ ಕಳೆದುಕೊಂಡಿದೆ. ಗೋಮಾಳ, ಹುಲ್ಲುಗಾವಲು ಪ್ರದೇಶ ಮತ್ತು ಗೋಕಟ್ಟೆ ಮರೆಯಾಗಿವೆ. ಇವನ್ನು ಮೊದಲಿನಂತೆ ಪುನರ್ ನಿರ್ಮಿಸಬೇಕು ಎನ್ನುವ ಒತ್ತಾಯವೂ ರೈತರಿಂದ ಕೇಳಿಬಂದಿದೆ. ಒಮ್ಮೊಮ್ಮೆ ಹೆಚ್ಚು ಮಳೆಯಾದರೂ ಬವಣೆ ತೀರದಾಗಿದೆ. ವಾರ್ಷಿಕವಾಗಿ 300 ಮಿ.ಮಿ.ಗೂ ಕಡಿಮೆ ಮಳೆ ಆಗುತ್ತಿರುವುದರಿಂದ ಯಾವುದೇ…

Read More

ಚಿಕ್ಕನಾಯಕನಹಳ್ಳಿ:      ತಾಲ್ಲೂಕಿನ ಭೂ ಸ್ವರೂಪ ಅರೆ ಮಲೆನಾಡು ಹಾಗೂ ಬಯಲುಸೀಮೆಯನ್ನು ಕೂಡಿಸುವ ಕೊಂಡಿಯಂತಿದೆ. ಕೃಷ್ಣ ಹಾಗೂ ಕಾವೇರಿ ಕೊಳ್ಳಗಳ ನಡುವೆ ವಿಭಾಗಿಸಿದೆ.       ಆದ್ದರಿಂದ ತಾಲ್ಲೂಕಿನ ರೈತರು ತೆಂಗಿಗೂ ಸೈ ಹಾಗೂ ಸಿರಿಧಾನ್ಯಕ್ಕೂ ಜೈ ಎನ್ನುತ್ತಾರೆ. ಆದರೆ ಕಳೆದ ಎರಡು ದಶಕಗಳಿಂದ ತಾಲ್ಲೂಕಿನಲ್ಲಿ ಚಾಲ್ತಿಯಲ್ಲಿರುವ ಕಬ್ಬಿಣದ ಅದಿರು ಗಣಿಗಾರಿಕೆ, ಅಕ್ರಮ ಮರಳು ಮಾಫಿಯಾ ಹಾಗೂ ಅಕ್ರಮ ಇಟ್ಟಿಗೆ ಕಾರ್ಖಾನೆಗಳು ತಾಲ್ಲೂಕಿನ ಭೂ ಸ್ವರೂಪ ಹಾಳುಗೆಡವಿವೆ. ರೈತರ ಬದುಕನ್ನು ಮೂರಾಬಟ್ಟೆ ಮಾಡಿವೆ.       ತಾಲ್ಲೂಕಿನ ಉದ್ದಕ್ಕೂ ಚಾಚಿಕೊಂಡಿದ್ದ ಅಬ್ಬಿಗೆ, ಮದನಿಂಗನಕಣಿವೆ ಹಾಗೂ ಕುದುರೆ ಕಣಿವೆಯ ಬೆಟ್ಟಸಾಲುಗಳು ಹಾಗೂ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆಯಿಂದ ಬೋರನಕಣಿವೆ ವರೆಗೆ ಚಾಚಿಕೊಂಡಿರುವ ಸುವರ್ಣಮುಖಿ ಹಳ್ಳ ತಾಲ್ಲೂಕಿನ ಭೂ ಶ್ರೀಮಂತಿಕೆಯನ್ನು ಹೆಚ್ಚಿಸಿದ್ದವು. ಕಬ್ಬಿಣದ ಅದಿರು ಗಣಿಗಾರಿಕೆ ಹಾಗೂ ಅಕ್ರಮ ಮರಳು ಗಣಿಗಾರಿಕೆ ನೇರವಾಗಿ ಈ ಎರಡು ಪ್ರಾಕೃತಿಕ ವೈವಿಧ್ಯದ ಮೇಲೆ ಹೊಡೆತ ಕೊಟ್ಟಿದೆ. ಶತಮಾನಗಳಿಂದ ಮದನಿಂಗನ ಕಣಿವೆಯ ಬೆಟ್ಟಗಳು ಮಳೆಯ ಮಾರುತಗಳನ್ನು…

Read More

ಕೊರಟಗೆರೆ:       ದ್ವಿಚಕ್ರ ವಾಹನವೊಂದು ರಸ್ತೆ ಬದಿ ಚಲಿಸುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊರಟಗೆರೆ ಪಟ್ಟಣದ ಜೆಟ್ಟಿಅಗ್ರಹಾರ ರಸ್ತೆ ಬಳಿ ನಡೆದಿದೆ.       ಜೆಟ್ಟಿ ಅಗ್ರಹಾರ ಗ್ರಾಮದ ವಾಸಿ ನರಸಿಂಹಯ್ಯ(60) ಮೃತಪಟ್ಟ ದುದೈವಿ. ಇವರು ಕೈಮರದ ಆಶ್ರಮಕ್ಕೆ ಭೇಟಿ ನೀಡಿ ಮರಳಿ ನಡೆದುಕೊಂಡು ಮನೆಗೆ ಬರುತ್ತಿರುವ ವೇಳೆ ಪಾದಚಾರಿಗೆ ದ್ವೀಚಕ್ರ ವಾಹನ ಏಕಾಏಕಿ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಅಜ್ಜಿಹಳ್ಳಿ ಗ್ರಾಮದ ವಾಸಿಯಾದ ದ್ವಿಚಕ್ರ ವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.       ಅಪಘಾತ ನಡೆದ ಸ್ಥಳಕ್ಕೆ ಕೊರಟಗೆರೆ ಆರಕ್ಷಕ ಉಪನೀರಿಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸಿದ್ದು, ಕೊರಟಗೆರೆ ಪೆÇಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Read More

ಮಧುಗಿರಿ:      ಚಾಲಕನ ನಿಯಂತ್ರಣ ತಪ್ಪಿ ಪೆಟ್ರೊಲ್ ಲಾರಿಯೊಂದು ರಸ್ತೆ ಪಕ್ಕಕ್ಕೆ ಉರುಳಿಬಿದ್ದ ಪರಿಣಾಮ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ.       ತಾಲೂಕಿನ ಕೊಡಿಗೇನಹಳ್ಳಿ ಹೊಬಳಿಯ ಯಾಕಾರ್ಲಹಳ್ಳಿ ಕಡಗತ್ತೂರು ರಸ್ತೆಯಲ್ಲಿ ಬೆಳಿಗ್ಗೆ 11 ಗಂಟೆ ಆಸುಪಾಸಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇಂದನ ತುಂಬಿದಲಾರಿ ರಸ್ತೆ ಪಕ್ಕಕ್ಕೆ ಉರುಳಿದೆ. ಲಾರಿ ಪಲ್ಟಿಯಾಗಿ ಸೋರಿಕೆಯಾಗುವ ಇಂಧನದಿಂದ ಸ್ಪೋಟಿಸುವ ಸಾಧ್ಯತೆ ಹೆಚ್ಚಾಗಿ ಗ್ರಾಮಸ್ಥರ ಭೀತಿಯಿಂದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.       ತಕ್ಷಣ ಸುತ್ತಮುತ್ತಲಿನ ಗ್ರಾಮಸ್ಥರು ಬಿಂದಿಗೆ, ನೀರಿನ ಡಬ್ಬಗಳೊಂದಿಗೆ ದೌಡಾಯಿಸಿ ಸೋರಿಕೆಯಾಗುತಿದ್ದ ಪೆಟ್ರೋಲ್ ತುಂಬಿಕೊಳ್ಳಲು ಮುಗಿಬಿದ್ದರು. ಸ್ಥಳಕ್ಕೆ ಪಿಎಸೈ ಮೋಹನ್ ಕುಮಾರ್ ಭೇಟಿ ನೀಡಿ ಟ್ಯಾಂಕರ್‍ನ್ನು ತೆರವು ಮಾಡಿದ್ದು ಯಾವುದೆ ಪ್ರಾಣಪಾಯ ಸಂಭವಿಸಿಲ್ಲಾ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Read More

ಗುಬ್ಬಿ:       ‘ದೊಡ್ಡಗೌಡರನ್ನು ಗೆಲ್ಲಿಸಿಕೊಂಡು ಬರ್ತೀನಿ, ಇಲ್ಲ ಅಂದ್ರೆ ರಾಜೀನಾಮೆ ಪತ್ರದ ಜೊತೆ ಬರ್ತೀನಿ’ ಎಂಬ ಪೋಸ್ಟ್ ಅನ್ನು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ ತಮ್ಮ ಫೇಸ್‍ಬುಕ್ ಪುಟದಲ್ಲಿ ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.       ಇದರ ಅಡಿಯಲ್ಲಿ ‘ದೇವೇಗೌಡರನ್ನು ಗೆಲ್ಲಿಸಿಕೊಂಡು ಬರುವಂತೆ ಕುಮಾರಣ್ಣನಿಗೆ ವಾಗ್ದಾನ ಮಾಡಿದ ಮಿನಿಸ್ಟ್‍ರ್ ವಾಸಣ್ಣ (ಎಸ್.ಆರ್.ಶ್ರೀನಿವಾಸ್)’ ಎಂದು ಬರೆಯಲಾಗಿದೆ. ಈ ಪೋಸ್ಟ್ ಗುರುವಾರ ಬೆಳಿಗ್ಗೆ 10.35ರಲ್ಲಿ ಹಂಚಿಕೊಂಡಿದ್ದಾರೆ.       28 ಸಾವಿರ ಫಾಲೋವರ್ಸ್‍ಗಳನ್ನು ಹೊಂದಿರುವ ಈ ಫೇಸ್‍ಬುಕ್ ಖಾತೆಯಲ್ಲಿರುವ ಪೋಸ್ಟ್ ಅನ್ನು ಹಲವರು ಹಂಚಿಕೊಂಡಿದ್ದಾರೆ. ಕೆಲವರು `ಮಾತು ಅಂದ್ರೆ ಮಾತು, ಅದೇ ವಾಸಣ್ಣನ ಗತ್ತು. ದೇವೇಗೌಡರ ಗೆಲುವು ನಿಶ್ಚಿತ, ಬನ್ನಿ ಒಟ್ಟಾಗಿ ಶ್ರಮಿಸೋಣ, ಸಂಭವಾಮಿ ಯುಘೇ ಯುಘೇ’ ಎಂದು ಬರೆದುಕೊಂಡಿದ್ದಾರೆ.       ಸಚಿವ ಎಸ್.ಆರ್.ಶ್ರೀನಿವಾಸ್ ಗುಬ್ಬಿ ತಾಲ್ಲೂಕು ದೊಡ್ಡನೆಟ್ಟಗುಂಟೆಯಲ್ಲಿ ಗುರುವಾರ ಮತಚಲಾಯಿಸಿದರು. ಈ ಪೋಸ್ಟ್ ಬಗ್ಗೆ  ಸಚಿವರು ಮಾತನಾಡಿ, ‘ಜನರ ಮನಸ್ಥಿತಿ ನೋಡಿಕೊಂಡು ನಾನು…

Read More

ಮಧುಗಿರಿ:       ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಈ ಬಾರಿ ಪ್ರಧಾನಿಯಾಗುವುದು ಖಚಿತ ಎಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.       ಪಟ್ಟಣದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಂಬಾ ಆಶಾಭಾವನೆಯನ್ನು ಹೊಂದಿರುವ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ನಿರಾಶೆ ಕಾದಿದೆ ಎಂದು ತಿಳಿಸಿದರು.       ಈ ಬಾರಿಯ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿ ಎಚ್ ಡಿ ದೇವೇಗೌಡರು ಪ್ರಚಂಡ ಬಹುಮತಗಳಿಂದ ಗೆಲ್ಲುವುದಾಗಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ .       ಮಾಜಿ ಶಾಸಕ ಕೆ.ಎನ್.ರಾಜಣ್ಣನವರ ಬಗ್ಗೆ ಅಸಮಾಧಾನವಿಲ್ಲ ನಮಗೆ ಈ ಬಾರಿ ಅವರ ಸಹಕಾರ ಹೆಚ್ಚಾಗಿದೆ, ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಹಾಗೂ ಕೆ.ಎನ್.ರಾಜಣ್ಣ ಭೇಟಿ ಉಭಯ ಕುಶಲೋಪರಿ ಅನಿಸುತ್ತೆ, ಮದುವೆ, ಹುಟ್ಟಿದ ಹಬ್ಬ ಹಾಗೂ ಇತರೆ ವಿಶೇಷ ಸಂದರ್ಭದಲ್ಲಿ ಎಲ್ಲರೂ ಒಟ್ಟಿಗೆ…

Read More

 ಪಾವಗಡ:       ತಾಲ್ಲೂಕಿನ ಗುಜ್ಜನಡು ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಸದಸ್ಯ ಹನುಮಂತರಾಯ ತಾವು ಮತ ಹಾಕಿದ ಚಿತ್ರವನ್ನು ಗುರುವಾರ ಫೇಸ್ ಬುಕ್‍ಗೆ ಅಪ್ ಲೋಡ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಆಕ್ಷೇಪ ವ್ಯಕ್ತವಾಗಿದೆ.       ಜನಪ್ರತಿನಿಧಿ ಕಾಯ್ದೆ ಪ್ರಕಾರ ಮತದಾನವನ್ನು ಬಹಿರಂಗಪಡಿಸುವಂತಿಲ್ಲ. ಆದ್ದರಿಂದಲೇ ಗುಪ್ತ ಮತದಾನ ಎಂದು ಕರೆಯಲಾಗುತ್ತದೆ. ಆದರೆ, ಗುಜ್ಜನಡು ಗ್ರಾಮದ ತಾಲ್ಲೂಕು ಪಂಚಾಯಿತಿ ಸದಸ್ಯ ಹನುಮಂತರಾಯ ಅವರು ತಾವು ಯಾರಿಗೆ ಮತ ಹಾಕಿದ್ದು ಎಂಬುದನ್ನು ಚಿತ್ರ ಸಹಿತ ಫೇಸ್ ಬುಕ್ ನಲ್ಲಿ ಬಹಿರಂಗಪಡಿಸಿದ್ದಾರೆ. ಓರ್ವ ಜನಪ್ರತಿನಿಧಿಯೇ ಕಾನೂನು ಉಲ್ಲಂಘಿಸಿರುವ ಬಗ್ಗೆ ಯುವ ಜನರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.       ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಆದರೂ ಮೈತ್ರಿ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರಿಗೆ ಮತ ಹಾಕಿದ ರೀತಿಯಲ್ಲಿ, ಲೈಟ್ ಬೆಳಗುತ್ತಿದ್ದಾಗಲೇ ಚಿತ್ರ ತೆಗೆಯಲಾಗಿದೆ. ಶುಭಾರಂಭ ಬಿ.ಎನ್. ಚಂದ್ರಪ್ಪ, ಜೈ ಚಂದ್ರಪ್ಪ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು…

Read More