Author: News Desk Benkiyabale

ತುಮಕೂರು: ಸರ್ಕಾರದ ಆಡಳಿತ ವ್ಯವಸ್ಥಿತವಾಗಿ ನಡೆಯಬೇಕು. ಸರ್ಕಾರವೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ತಾಲ್ಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ಪ್ರಜಾ ಸೇವಾ ಇಲಾಖೆಯನ್ನು ಇಂದಿನಿAದ ಹೊಸದಾಗಿ ಆರಂಭಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ.ಪರಮೇಶ್ವರ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಶನಿವಾರ ಗುಬ್ಬಿ ಪಟ್ಟಣದಲ್ಲಿ ಆಯೋಜಿಸಿದ್ದ ಮೊದಲ ಪ್ರಜಾ ಸೇವಾ ಅಭಿಯಾನ ಜನಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸೆಪ್ಟೆಂಬರ್ ೫ ನಮ್ಮೆಲ್ಲರಿಗೂ ಆದರ್ಶಪ್ರಾಯರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ. ಇಡೀ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಅದೇ ದಿನ ಪ್ರಜಾ ಸೇವಾ ಅಭಿಯಾನ ಆಚರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಕರೆಯಂತೆ ಇಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ನೂತನ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದಾರೆ…

Read More

ಹುಳಿಯಾರು: ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲ್ಪಟ್ಟಿತÀÄ. ಆಧ್ಯಾತ್ಮಿಕ ವಾತಾವರಣದೊಂದಿಗೆ ಪುಟಾಣಿ ಮಕ್ಕಳ ಕೇಕೆ, ನಗು ಹಾಗೂ ಕೃಷ್ಣನ ಲೀಲೆಗಳ ಕಲರವ ಎಲ್ಲರಮನಸೂರೆಗೊಂಡಿತು. ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಆಧ್ಯಾತ್ಮ ಶಿಕ್ಷಕಿ ಬಿ.ಕೆ.ಗೀತಕ್ಕ ಅವರು ಮಾತನಾಡಿ ಮಕ್ಕಳಿಗೆ ಬಿಡುವಿನ ವೇಳೆಯಲ್ಲಿ ಭಗವದ್ಗೀತೆ, ಶ್ರೀಕೃಷ್ಣನ ವಿಚಾರಧಾರೆ ಬೋಧಿಸಬೇಕು ಎಂದು ಹೇಳಿದರು. ಶ್ರೀಕೃಷ್ಣ ಮಹಾಪುರುಷ. ಲೋಕ ಕಲ್ಯಾಣಕ್ಕಾಗಿ ಹಾಗೂ ಮಾನವೀಯ ಧರ್ಮದ ಉಳಿವಿಗಾಗಿ ಹಲವಾರು ಸಂದೇಶಗಳನ್ನು ನೀಡಿದ್ದಾರೆ. ಪೋಷಕರು ಭಗವದ್ಗೀತೆ ಮತ್ತು ಮಹಾಭಾರತ ದಲ್ಲಿನ ವಿಚಾರಧಾರೆಗಳನ್ನು ಮಕ್ಕಳಿಗೆ ತಿಳಿಸುವುದು ಅಗತ್ಯವಿದೆ. ಇದರಿಂದ ಮುಂದಿನ ಪೀಳಿಗೆ ಸನ್ಮಾರ್ಗದಲ್ಲಿ ಸಾಗುತ್ತದೆ ಎಂದು ತಿಳಿಸಿದರು. ತಮ್ಮ ಮನೆಯ ಪುಟಾಣಿ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ ಕಾರ್ಯಕ್ರಮಕ್ಕೆ ಕರೆತಂದು ಪಾಲಕರು ಖುಷಿ ಪಟ್ಟರು. ಪುಟ್ಟ ಮಕ್ಕಳು ಕೊಳಲು ಕೈಯಲ್ಲಿ ಹಿಡಿದು, ಕಿರೀಟ ತೊಟ್ಟು, ಪೀರಾಂಬರಿ ಧರಿಸಿ ಸಂಭ್ರಮಿಸಿದರು. ಬಾಲಕಿಯರೂ ಉದ್ದ ಜಡೆ, ಬಣ್ಣಬಣ್ಣದ…

Read More

ಪಾವಗಡ: ಧಾರ್ಮಿಕ ಭಾವನೆಗಳ ಹಾಗೂ ಸಾಂಸ್ಕöÈತಿಕ ಪರಂಪರೆಯ ಸಂಕೇತವಾಗಿರುವ ಗೌರಿ-ಗಣೇಶ ಹಬ್ಬದ ಆಚರಣೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಹಬ್ಬವನ್ನು ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟು ಕಾನೂನುಬದ್ಧವಾಗಿ ಹಾಗೂ ಶಾಂತಿಯುತ ಸೌಹಾರ್ದಯುತವಾಗಿ ಆಚರಿಸಲು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವೈ ರವಿ ಯವರ ನಾಯಕತ್ವದಲ್ಲಿ ಅಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಹಬ್ಬದ ಆಯೋಜಕರಿಗೆ ಮಾರ್ಗದರ್ಶನ ನೀಡುವುದು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು. ನಂತರ ತಹಶೀಲ್ದಾರ್ ರವರು ಮಾಧ್ಯಮದವರೊಂದಿಗೆ ಮಾತನಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಆಯೋಜಕರು ಅರ್ಜಿ ಸಲ್ಲಿಸಿದರೆ, ಸಂಬAಧಪಟ್ಟ ಅಧಿಕಾರಿಗಳು ಕಛೇರಿಯಲ್ಲೇ ಇದ್ದು ಪರಿಶೀಲಿಸಿ ತಕ್ಷಣ ಪರ್ಮಿಷನ್ ನೀಡಬೇಕು.ಪುರಸಭೆ ಅಥವಾ ಗ್ರಾಮ ಪಂಚಾಯಿತಿಯ ಮುಂಜಾಗ್ರತಾ ಅನುಮತಿ ಇಲ್ಲದೆ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕುವಂತಿಲ್ಲ.ಮೂರ್ತಿ ವಿಸರ್ಜನೆಯ ದಿನದಂದು ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಗಣಪತಿ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆಯವರೆಗೆ ಯಾವುದೇ ರೀತಿಯ ಗಲಾಟೆ, ಘರ್ಷಣೆಗಳು ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಮುನ್ನೆಚ್ಚರಿಕೆ…

Read More

ಬೆಂಗಳೂರು/ತುಮಕೂರು: “ಭಾರತ್ ಜೋಡೋ” ಲೋಗೋವನ್ನು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಲೋಗೋ ಅನಾವರಣವು ರಾಜ್ಯಾದ್ಯಂತ “ಭಾರತ್ ಜೋಡೋ” ಕಾರ್ಯಕ್ರಮದ ಅನುಷ್ಠಾನದ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಹೊಸ ಲೋಗೋವು ಏಕತೆ, ಒಗ್ಗಟ್ಟು, ಯುವಜನರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಕರ್ನಾಟಕದ ಜನತೆಯ ಸಾಮೂಹಿಕ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. “ಭಾರತ್ ಜೋಡೋ” ಕಾರ್ಯಕ್ರಮದ ಮೂಲ ಆಶಯ ಹಾಗೂ ದೂರದೃಷ್ಟಿಯನ್ನು ಪ್ರತಿನಿಧಿಸುವ ರೀತಿಯಲ್ಲಿ ಲೋಗೋವನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಿದರು. ಯುವಜನರನ್ನು ಒಗ್ಗೂಡಿಸಿ, ಏಕತೆ, ಸಾಮಾಜಿಕ ಸಾಮರಸ್ಯ, ಜವಾಬ್ದಾರಿಯುತ ನಾಗರಿಕತ್ವ ಹಾಗೂ ರಾಷ್ಟç ನಿರ್ಮಾಣದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ರೂಪಿಸಲಾಗಿರುವ ಮಹತ್ವಾಕಾಂಕ್ಷಿ ಕಾರ್ಯಕ್ರಮವೇ “ಭಾರತ್ ಜೋಡೋ” ಎಂದು ಹೇಳಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ವಿಶಿಷ್ಟ ಗುರುತನ್ನು ರೂಪಿಸುವ ನಿಟ್ಟಿನಲ್ಲಿ “ಭಾರತ್ ಜೋಡೋ” ಲೋಗೋ ವಿನ್ಯಾಸಕ್ಕಾಗಿ ಸಾರ್ವಜನಿಕರಿಂದ ವಿನ್ಯಾಸಗಳನ್ನು ಆಹ್ವಾನಿಸಲಾಗಿತ್ತು. ಇದಕ್ಕೆ ರಾಜ್ಯದಾದ್ಯಂತ ಉತ್ತಮ ಸ್ಪಂದನೆ ದೊರೆತಿದ್ದು, ಒಟ್ಟು ೨೫೫ ಲೋಗೋ ವಿನ್ಯಾಸಗಳು ಸಲ್ಲಿಕೆಯಾಗಿದ್ದವು ಎಂದು ತಿಳಿಸಿದರು. ಲೋಗೋ ಆಯ್ಕೆ ಪ್ರಕ್ರಿಯೆಯನ್ನು ಪಾರದರ್ಶಕ,…

Read More

ಕೊರಟಗೆರೆ: ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಶ್ರೀ ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಹೂವಿನ ಅಲಂಕಾರ ನೆರವೇರಿತು. ಭಕ್ತರಾದ ನಲ್ಲಮಂಜು ಹಾಗೂ ಸ್ನೇಹಿತರ ನೇತೃತ್ವದಲ್ಲಿ ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಯಿತು. ಬೆಳಗ್ಗಿನಿಂದಲೇ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಅಲಂಕಾರವನ್ನು ಕಣ್ತುಂಬಿಕೊAಡರು. ವಿಶೇಷ ಪೂಜೆ, ಮಂಗಳಾರತಿ ಹಾಗೂ ಪ್ರಸಾದ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಪ್ರಸಾದ ಸೇವೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಹತ್ತು ವರ್ಷಗಳಿಂದ ಸೇವೆ: ಭಕ್ತ ನಲ್ಲಮಂಜು ಮಾತನಾಡಿ, ಸುಮಾರು ಹತ್ತು ವರ್ಷಗಳಿಂದ ಪ್ರತಿ ಶ್ರಾವಣ ಶನಿವಾರದಂದು ಬಯಲು ಆಂಜನೇಯ ಸ್ವಾಮಿ ಹಾಗೂ ಶನೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಪ್ರಸಾದ ಸೇವೆ ನಡೆಸಿಕೊಂಡು…

Read More

ತುಮಕೂರು: ಕೇವಲ ಶೇ. ೧೦೦ ರಷ್ಟು ಫಲಿತಾಂಶದ ಹಿಂದೆ ಬೀಳದೆ, ಶೇ. ೧೦೦ ರಷ್ಟು ಪ್ರಾಮಾಣಿಕ ಪರಿಶ್ರಮವನ್ನು ಹಾಕಿ ವಿದ್ಯಾರ್ಥಿಗಳಲ್ಲಿ ನೈತಿಕತೆ ಮತ್ತು ಕೌಶಲ್ಯ ಬೆಳೆಸುವ ಕಾಯಕವೇ ನಿಜವಾದ ಶಿಕ್ಷಕ ವೃತ್ತಿ ಎಂದು ವಿ ಆರ್ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಘು ವಿ. ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸೆ. ೫ ರಂದು ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತಗೊಳಿಸದೆ, ಅವರಲ್ಲಿ ಜೀವನೋಪಯುಕ್ತ ಕೌಶಲ್ಯಗಳನ್ನು ತುಂಬುವ ಜವಾಬ್ದಾರಿ ಶಿಕ್ಷಕರ ಮೇಲಿದೆ.ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದಾಗ ಅವರಿಗೆ ಧೈರ್ಯ ತುಂಬಿ, ಸರಿಯಾದ ಮಾರ್ಗದರ್ಶನ ನೀಡುವುದೇ ನಿಜವಾದ ಗುರುವಿನ ಲಕ್ಷಣ ಎಂದರು. ಕೇವಲ ಪಾಠ ಮಾಡಿ ಮುಗಿಸುವುದಷ್ಟೇ ಅಲ್ಲದೆ, ವಿದ್ಯಾರ್ಥಿಗಳ ವೈಯಕ್ತಿಕ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಗುಣವನ್ನು ಶಿಕ್ಷಕರು ರೂಢಿಸಿಕೊಳ್ಳಬೇಕು. ಕೇವಲ ಅಂತಿಮ ಫಲಿತಾಂಶದ…

Read More

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತುಮಕೂರು ವಿವಿ ಕುಲಪತಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳ ಕಚೇರಿ ಮುಂಭಾಗ ಜಮಾಯಿಸಿದ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ರವರ ಭಾವಚಿತ್ರವನ್ನು ದಹಿಸಿ ಆಕ್ರೋಶ ಹೊರ ಹಾಕಿ, ಕೂಡಲೇ ಸಿಂಡಿಕೇಟ್ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಪ್ರಭಾರ ಕುಲಪತಿಗಳಿಗೆ ಮನವಿ ಸಲ್ಲಿಸಿದರು. ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದು ಪ್ರವೇಶಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಬೆಳಕಿಗೆ ಬಂದಿದೆ. ದುರಾದೃಷ್ಟವಶಾತ್ ಆಕಾಂಕ್ಷಿತ ಅಭ್ಯರ್ಥಿಗಳ ಹಿತ ಕಾಯಬೇಕಾದ ಆಗಿನ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹಾಗೂ ತುಮಕೂರು ವಿವಿ ರಾಜ್ಯಪಾಲರ ನಾಮ ನಿರ್ದೇಶಿತ ಸಿಂಡಿಕೇಟ್ ಸದಸ್ಯರಾದ ಬಸವರಾಜ್ ಕನ್ನಾಳೆ…

Read More

ತುಮಕೂರು: ಸರಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ.ಇದಕ್ಕಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾರೋಗೆರೆ ಎಂ.ಮಹೇಶ್ ತಿಳಿಸಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ,ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲಾ ಗೊಲ್ಲರ(ಯಾದವ) ಸಂಘ ವತಿಯಿಂದ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಸ್ವಾತಂತ್ರ ನಂತರ ಮೊದಲ ಬಾರಿ ನಿಗಮ ಸ್ಥಾಪಿಸಿ, ಅದರ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡುವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ ಎಂದರು. ಗೊಲ್ಲ ಮತ್ತು ಕಾಡುಗೊಲ್ಲ ಸಮುದಾಯದ ತಮ್ಮ ಜಾತಿಯ ಹೆಸರನ್ನು ಎದೆ ಉಬ್ಬಿಸಿ ಹೇಳುವಂತಹ ಧೈರ್ಯ ತೋರಬೇಕು.ಅದರಲ್ಲಿಯೂ ವಿದ್ಯಾವಂತರು ಈ ನಿಟ್ಟಿನಲ್ಲಿ ಇತರರಿಗೆ ಮಾದರಿಯಾಗಬೇಕು.ರಾಜ್ಯದಲ್ಲಿ ಕಾಡುಗೊಲ್ಲರ ಸಂಖ್ಯೆ ೧೦ ಲಕ್ಷಕ್ಕೂ ಅಧಿಕವಿದೆ.ಆದರೆ ವಿವಿಧ ಸೌಲಭ್ಯಗಳಿಗಾಗಿ ನಿಗಮ ಅರ್ಜಿ ಕರೆದರೆ ಕೇವಲ ೪೫೦೦ ಜನರು ಮಾತ್ರ ಅರ್ಜಿ…

Read More

ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಸಾಕಷ್ಟು ವೈಯಕ್ತಿಕ ಕಾಮಗಾರಿಗಳು ಹಾಗೂ ಸಮುದಾಯ ಕಾಮಗಾರಿಗಳನ್ನು ತೆಗೆದುಕೊಳ್ಳಬಹುದಾಗಿದೆ. ಎಲ್ಲಾ ಅರ್ಹ ರೈತರು ತಪ್ಪದೇ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವ ಮೂಲಕ ಸದೃಢ ಜೀವನವನ್ನು ಕಟ್ಟುಕೊಳ್ಳಿ ಎಂದು ಸಾರ್ವಜನಿಕರಿಗೆ ಪಂಚಾಯತಿ ಕಾರ್ಯದರ್ಶಿಗಳಾದ ಹೇಮಂತ್ ಅವರು ರೈತರಲ್ಲಿ ಮನವಿ ಮಾಡಿದರು. ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಸಿಡ್ಲಹಳ್ಳಿಯಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ ೧೫ ರಿಂದ ಸೆಪ್ಟಂಬರ್ ೧೫ ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ, ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ…

Read More

ಹುಳಿಯಾರು: ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ (ವಿಬಿ-ಜಿ ರಾಮ್ ಜಿ ಯೋಜನೆ) ತಾಲ್ಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಮೇಶ್ ಅವರು ತಿಳಿಸಿದರು. ಹುಳಿಯಾರು ಸಮೀಪದ ಮತ್ತಿಘಟ್ಟ ಗ್ರಾಮ ಪಂಚಾಯಿತಿ ಬಸ್ ನಿಲ್ದಾಣದಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ಎಂದು ಮಾಹಿತಿ ನೀಡಿದರು. ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ…

Read More