ತುಮಕೂರು : ಗ್ರಾಹಕರಿಗೆ ಭಾರತ ಸಂಚಾರ ನಿಗಮದಿಂದ 4ಜಿ ತರಂಗಗಳ ಸೇವೆಯನ್ನು ಕೂಡಲೇ ಒದಗಿಸಬೇಕೆಂದು ಎಯುಎಬಿ(ಆಲ್ ಯೂನಿಯನ್ಸ್ ಅಂಡ್ ಅಸೋಸಿಯೇಷನ್ಸ್ ಆಫ್ ಬಿಎಸ್‍ಎನ್‍ಎಲ್)ಯ ಜಿಲ್ಲಾ ಸಂಚಾಲಕ ಕಾಂ.ಹೆಚ್. ನರೇಶ್ ರೆಡ್ಡಿ ತಿಳಿಸಿದರು. ನಗರದ ಬಿಎಸ್‍ಎನ್‍ಎಲ್ ಕಛೇರಿ ಮುಂದೆ ಫೆಬ್ರುವರಿ 18 ರಿಂದ 3 ದಿನಗಳ ಕಾಲ ಬಿಎಸ್‍ಎನ್‍ಎಲ್ ನೌಕರರಿಂದ ನಡೆಯುತ್ತಿರುವ ಮುಷ್ಕರದಲ್ಲಿಂದು ಪಾಲ್ಗೊಂಡು ಮಾತನಾಡಿದ ಅವರು ಎಯುಎಬಿ ಕರೆಯ ಮೇರೆಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ರಾಷ್ಟ್ರಾದ್ಯಂತ ಈ ಮುಷ್ಕರವನ್ನು ನಡೆಸಲಾಗುತ್ತಿದೆ. ಬಿಎಸ್‍ಎಲ್‍ಎಲ್ ನೌಕರರ 3ನೇ ವೇತನ ಪರಿಷ್ಕರಣೆ ಹಾಗೂ ಪಿಂಚಣಿ ಪರಿಷ್ಕರಣೆಯನ್ನು ದಿನಾಂಕ:1-1-2017ರಿಂದ ಜಾರಿಗೆ ತರಬೇಕು, 2ನೇ ವೇತನ ಪರಿಷ್ಕರಣೆಯಲ್ಲಿ ಆಗಿರುವ ಕೆಲವು ತಾರತಮ್ಯಗಳನ್ನು ಇತ್ಯರ್ಥಪಡಿಸಬೇಕು, ಬಿಎಸ್‍ಎನ್‍ಎಲ್‍ಗೆ ಸೇರಿದ ಖಾಲಿ ನಿವೇಶನ ಮತ್ತು ಆಸ್ತಿಯನ್ನು ಕೇಂದ್ರ ಸರ್ಕಾರದಿಂದ ನಿಗಮಕ್ಕೆ ಹಸ್ತಾಂತರಿಸಬೇಕು ಹಾಗೂ ಬಿಎಸ್‍ಎನ್‍ಎಲ್ ಟವರ್‍ಗಳನ್ನು ಹೊರಗುತ್ತಿಗೆಗೆ ನೀಡಬಾರದೆಂದು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರು. ಎಯುಎಬಿ.ಯ ಅಧ್ಯಕ್ಷ ಕಾಂ. ಎಂ.ರಾಜ್‍ಕುಮಾರ್,…
Author: News Desk Benkiyabale
ಮಧುಗಿರಿ : ಸಾಮಾನ್ಯ ಜನರಲ್ಲಿರುವ ದೇಶ ಪ್ರೇಮ ಪ್ರತಿಯೊಬ್ಬರಲ್ಲೂ ಮೂಡುವಂತಾಗಬೇಕೆಂದು ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗರ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥಸ್ವಾಮೀಜಿ ತಿಳಿಸಿದರು. ಪಟ್ಟಣದ ಕುಂಚಿಟಿಗ ಒಕ್ಕಲಿಗರ ಸಂಘದ ಆವರಣದಲ್ಲಿ ಮಧುಗಿರಿ ತಾಲ್ಲೂಕು ರಕ್ತಧಾನಿ ಶಿಕ್ಷಕರ ಸ್ನೇಹ ಬಳಗ, ರೋಟರಿ ಕ್ಲಬ್, ಒಕ್ಕಲಿಗರ ಸಂಘದ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ 49 ಯೋಧರು ಮೃತಪಟ್ಟ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು. ದೇಶವನ್ನು ಕಾಯುವ ಯೋಧ ಮತ್ತು ಜನರಿಗೆ ಆಹಾರ ನೀಡುವ ರೈತನನ್ನು ಯಾವುದೇ ಸಮುದಾಯದವರು ಗೌರವವನ್ನು ನೀಡಲೇಬೇಕು ತಂದೆ ತಾಯಿಗಳಿಗಿಂತಲೂ ಯೋಧ ಮತ್ತು ರೈತನಿಗೆ ಸಮಾಜದಲ್ಲಿ ಮನ್ನಣೆ ದೊರೆಯುವಂತಾಗಬೇಕು. ರಾಜಕಾರಣವನ್ನು ಪಕ್ಕಕ್ಕೆ ಇಟ್ಟು ಸ್ವಾರ್ಥ ಬಿಟ್ಟು ದೇಶವನ್ನು ಕಾಯುವ ಯೋಧನಿಗೆ ಸಕಲ ಗೌರವಗಳು ಸಮಾಜದಲ್ಲಿ ದೊರಕುವಂತೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಯೋಧನಾದವನು ಬಡ ಕುಟುಂಬದಿಂದ ಬಂದವನಾಗಿರುವವರನ್ನೆ ಹೆಚ್ಚಾಗಿ ಕಾಣುತ್ತೇವೆ. ರಾಜಕಾರಣಿಗಳು ಮತ್ತು ಕೋಟ್ಯಾಧಿಪತಿಗಳ ಮಕ್ಕಳ್ಯಾರು ವೈದ್ಯ…
ತುಮಕೂರು: ಉಗ್ರರ ದಾಳಿಯಿಂದ ವೀರ ಮರಣವನ್ನಪ್ಪಿದ ಮಂಡ್ಯ ಜಿಲ್ಲೆ ಗುಡಿಗೆರೆ ಗ್ರಾಮದ ಯೋಧ ಗುರು ಕುಟುಂಬಕ್ಕೆ ತುಮಕೂರು ಗ್ರಾಮಾಂತರ ಶಾಸಕ ಡಿ ಸಿ ಗೌರೀಶಂಕರ್ ಜೆಡಿಎಸ್ ಮುಖಂಡರ ಮೂಲಕ ಒಂದು ಲಕ್ಷ ರೂ ಹಣ ನೀಡಿ ಕುಟುಂಬವರ್ಗಕ್ಕೆ ದೈರ್ಯತುಂಬಿದ್ದಾರೆ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಹೆಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಪೆ,16 ರಂದು ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಬಳಿಕ ಶಾಲಾ ಮಕ್ಕಳೊಂದಿಗೆ ಯೋಧ ಗುರು ನಿಧನಕ್ಕೆ ಸಂತಾಪ ಸೂಚಿಸಿ ವೀರ ಮರಣವನ್ನಪ್ಪಿದ ಗುರು ಕುಟುಂಬಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ನೆರವು ನೀಡುವುದಾಗಿ ಘೋಷಿಸಿದ್ದರು, ಶಾಸಕ ಡಿ ಸಿ ಗೌರೀಶಂಕರ್ ನೀಡಿದ ಭರವಸೆಯಂತೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಹಾಲನೂರು ಅನಂತ್ ಹಾಗು ಜೆಡಿಎಸ್ ಮುಖಂಡರ ಮುಖೇನ ಒಂದು ಲಕ್ಷ ಹಣವನ್ನು ಮಂಗಳವಾರದಂದು ಮೃತ ವೀರ ಯೋಧ ಗುರು ತಾಯಿ ಹಾಗು ಆತನ ಮಡದಿಗೆ ತಲುಪಿಸಿದ್ದಾರೆ, ನಿಮ್ಮ ಜೊತೆ ನಾವಿದ್ದೇವೆ ಎದೆಗುಂದಬೇಡಿ…
ತುಮಕೂರು: ಜಿಲ್ಲೆಯ ದಲಿತ ಕಾಲೋನಿಗಳಲ್ಲಿ ಅಂಬೇಡ್ಕರ್ ಸಮುದಾಯ ಭವನಗಳನ್ನು ನಿರ್ಮಿಸಬೇಕೆಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ದಲಿತ ಕಾಲೋನಿಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸಲು ಈಗಾಗಲೇ ಅನುದಾನ ಬಿಡುಗಡೆಯಾಗಿದ್ದರೂ ಇನ್ನೂ ಅಧಿಕಾರಿಗಳು ಮುಂದಾಗಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಕಾಲೋನಿಗಳಲ್ಲಿ ಸಮುದಾಯಗಳನ್ನು ನಿರ್ಮಿಸಿದರೆ ಬಡ ಕುಟುಂಬಗಳು ಮದುವೆ, ಮತ್ತಿತರ ಶುಭ ಸಮಾರಂಭಗಳನ್ನು ನಡೆಸಲು ಅನುಕೂಲವಾಗುತ್ತದೆ ಎಂದರಲ್ಲದೆ ದಲಿತರ ಸ್ಮಶಾನಭೂಮಿಗೆ ಆವರಣ ಗೋಡೆಗಳನ್ನು ನಿರ್ಮಿಸದಿದ್ದರೆ ಒತ್ತುವರಿಯಾಗುವ ಸಾಧ್ಯತೆಯಿದ್ದು, ಅಧಿಕಾರಿಗಳು ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಸೂಚಿಸಿದರು. ಸಾಮಾನ್ಯ ಸ್ಥಾಯಿ ಸಮಿತಿ ಸಭೆಗೆ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಗಳಿಗೆ ಕೂಡಲೇ ನೋಟೀಸ್ ನೀಡುವಂತೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಆಡಳಿತ) ಪ್ರೇಮ್ ಕುಮಾರ್ ಅವರಿಗೆ ಸೂಚನೆ ನೀಡಿದರು. …
ಪಾವಗಡ: ರಾಜ್ಯ-ಅಂತರಾಜ್ಯಗಳಲ್ಲಿ ಹೆಸರುವಾಗಿಯಾಗಿರುವ ಪಾವಗಡ ಪಟ್ಟಣದ ಹೆಸರಾಂತ ದೇಗುಲ ಶ್ರೀಶನೇಶ್ವರ ಸ್ವಾಮಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವವು ಮಂಗಳವಾರ ಬಹಳ ವೈಭವದೊಂದಿಗೆ ನಡೆಯಿತು. ಶ್ರೀಶನೇಶ್ವರ ಸ್ವಾಮಿಯ ದೇವಾಲಯದಲ್ಲಿ ಮಂಗಳವಾರ ಬೆಳಗಿನ ಜಾವದಿಂದಲೇ ಭಕ್ತರು ಹೋಮ, ನವಗ್ರಹ ಪೂಜೆ, ಸರ್ವಸೇವಾ ಪೂಜೆಗಳನ್ನು ನೆರವೇರಿಸಲು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಾಲಯದಲ್ಲಿ ಅಲಂಕೃತ ಉತ್ಸವ ಮೂರ್ತಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿದ ನಂತರ ಮದ್ಯಾನ 12:20 ಗಂಟೆಗೆ ಸರಿಯಾಗಿ ಉತ್ಸವ ಮೂರ್ತಿಯನ್ನು ಅಲಂಕೃತಗೊಂಡಿದ್ದ ರಥದ ಸುತ್ತಲೂ ಪ್ರದಕ್ಷಿಣೆ ಹಾಕಿದ ನಂತರ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತು. ವಿಶೇಷ ವಾಧ್ಯಗೋಷ್ಟಿಯೊಂದಿಗೆ ಶನೇಶ್ವರ ಸ್ವಾಮಿಯ ರಥಕ್ಕೆ ಅರ್ಚಕರು, ಟ್ರಸ್ಟಿಗಳು ಹಾಗೂ ಸಾವಿರಾರು ಭಕ್ತರು ಸೇರಿ ಸ್ವಾಮಿ ರಥಕ್ಕೆ ಚಾಲನೆ ನೀಡಿದರು. ಭಕ್ತರು ವಾಡಿಕೆಯಂತೆ ಸ್ವಾಮಿಗೆ ಬಾಳೆಹಣ್ಣು ಮತ್ತು ಕಾಣಿಕೆಗಳನ್ನು ರಥದತ್ತ ಎಸೆದು ತಮ್ಮ ಹರಕೆಗಳನ್ನು ತೀರಿಸಿಕೊಂಡು…
ಗುಬ್ಬಿ: ಕೆರೆಯಲ್ಲಿ ಕುರಿ ಮೈತೊಳೆಯಲು ಹೋದ ವ್ಯಕ್ತಿಯೋರ್ವ ಆಯತಪ್ಪಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಗ್ಗರೆಯಲ್ಲಿ ನಡೆದಿದೆ. ರಾಜಣ್ಣ(46) ಸಾವನ್ನಪ್ಪಿರುವ ದುರ್ದೈವಿ. ರಾಜಣ್ಣ ತಮ್ಮ ಕುರಿಗಳನ್ನು ಕಗ್ಗರೆ ಕೆರೆಯಲ್ಲಿ ತೊಳೆಯುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ತುಮಕೂರು ನಗರವನ್ನು ಬೆಂಗಳೂರಿನಂತೆ ಅಭಿವೃದ್ಧಿಪಡಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಯು.ಟಿ.ಖಾದರ್ ತಿಳಿಸಿದರು. ಮಹಾನಗರಪಾಲಿಕೆ, ತುಮಕೂರು ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಭಿವೃದ್ಧಿಯಲ್ಲಿ ಬೆಂಗಳೂರಿನ ನಂತರ ತುಮಕೂರು ನಗರ ಮುಂಚೂಣಿಯಲ್ಲಿದ್ದು, ಬೆಂಗಳೂರಿನ ಮಾದರಿಯಲ್ಲಿ ತುಮಕೂರು ನಗರಕ್ಕೂ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಇದರಿಂದ ಬೆಂಗಳೂರಿನ ಜನದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದರು. ನಗರದ ಅಭಿವೃದ್ಧಿಗಾಗಿ ಗುಬ್ಬಿಗೇಟ್‍ನಿಂದ ಐಡಿಎಸ್‍ಎಂಟಿ ಬಡಾವಣೆವರೆಗೆ ಹೊರ ವರ್ತುಲದಲ್ಲಿ 2 ಕಿ.ಮೀ. ಉದ್ದದ ರಿಂಗ್ ರಸ್ತೆ ಕಾಮಗಾರಿಯನ್ನು ಕೈಗೊಳ್ಳಲು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೈತರಿಗೆ ಭೂಸ್ವಾಧೀನ ವೆಚ್ಚ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಕ್ಯಾತ್ಸಂದ್ರ ವಸತಿ ಬಡಾವಣೆಯಲ್ಲಿ ಪ್ರಾಧಿಕಾರದ ವತಿಯಿಂದ ಕ್ರೀಡಾ ಸಮುಚ್ಛಯ ನಿರ್ಮಾಣ…
ತುಮಕೂರು: ಪುಲ್ವಾಮದಲ್ಲಿ ಭಯೋತ್ಪಾಧಕರ ಧಾಳಿಯಿಂದ ವೀರ ಮರಣವನ್ನಪ್ಪಿದ ಮಂಡ್ಯದ ಯೋಧ ಗುರು ಕುಟುಂಬಕ್ಕೆ ಗ್ರಾಮಾಂತರ ಶಾಸಕ ಡಿ.ಸಿ.ಗೌರೀಶಂಕರ್ ವೈಯಕ್ತಿಕವಾಗಿ 1 ಲಕ್ಷ ಪರಿಹಾರ ಘೋಷಿಸಿದ್ದಾರೆ . ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಹೆಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಾದ ಕಣಕುಪ್ಪೆ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ.ಹೆಬ್ಬೂರು ಕೊಲ್ಲಾಪುರದಮ್ಮ ದೇವಸ್ಥಾನದ ಬಳಿ ಸಿ ಸಿ ನಿರ್ಮಾಣಕ್ಕೆ ಶಂಕು ಸ್ತಾಪನೆ.ಗರಗದ ಕುಪ್ಪೆ ಆಂಜನೇಯ ಸ್ವಾಮಿ ದೇವಸ್ತಾನದ ಬಳಿ ರಸ್ತೆ ನಿರ್ಮಾಣಕ್ಕೆ ಶಂಕು ಸ್ತಾಪನೆ, ಕೋಡಿ ಮುದ್ದನಹಳ್ಳಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ,ಗೋವಿಂದರಾಜಪುರ ಸಿ ಸಿ ರಸ್ತೆ ನಿರ್ಮಾಣಕ್ಕೆ ಶಂಕುಸ್ತಾಪನೆ ರಿಸಾಲ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ,ನಾಗೇನಹಳ್ಳಿಯಲ್ಲಿ ದೇವಸ್ತಾನ ನಿರ್ಮಾಣಕ್ಕೆ ಶಂಕುಸ್ತಾಪನೆ,ಹೆಬ್ಬೂರಿನಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಹೆಬ್ಬೂರು ಸರ್ಕಲ್ ನಲ್ಲಿ ಶಾಲಾ ಮಕ್ಕಳ ಜೊತೆ ಅಗಲಿದ ವೀರ ಯೋಧರ ನಿಧನಕ್ಕೆ ಕಂಬನಿ ಮಿಡಿದು ಸಂತಾಪ…
ತುಮಕೂರು: ಕೃಷಿ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಕೊಟ್ಟಿರುವ ನರೇಂದ್ರ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯಾದ್ಯಾಂತ ರೈತಮೋರ್ಚಾದಿಂದ ಗೋ-ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಗೋ-ಪೂಜೆ ಮಾಡುವ ಮೂಲಕ ಕಾರ್ಯಕ್ರಮವನ್ನು ರಾಜ್ಯ ರೈತಮೋರ್ಚಾ ಉಪಾಧ್ಯಕ್ಷರಾದ ಶ್ರೀ ಎಸ್.ಶಿವಪ್ರಸಾದ್ ಉದ್ಘಾಟಿಸಿ, ಮಾತನಾಡುತ್ತಾ ರೈತನ ವಾರ್ಷಿಕ ವರಮಾನ ದ್ವಿಗುಣಗೊಳಿಸಲು ಕಳೆದೈದು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (ಪ್ರತಿವರ್ಷ 6000 ರೂಪಾಯಿ) ಬೇವು ಮಿಶ್ರಿತ ಯೂರಿಯದೊಂದಿಗೆ ದೇಶದ ರೈತರಿಗೆ ಸಮರ್ಪಕ ರಸಗೊಬ್ಬರಗಳನ್ನು ನೀಡಿರುವುದು, ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಿ ವಿದ್ಯುತ್ ಸಂಪರ್ಕ ಇಲ್ಲದ 18452 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಮಾಡಿರುವುದು, ಇ-ಮಾರುಕಟ್ಟೆಗಳಿಗೆ ಅನುದಾನ ನೀಡಿ ಉತ್ತಮ ಮಾರುಕಟ್ಟೆ ವ್ಯವಸ್ಥೆ ಮಾಡಿರುವುದು, ರೈತರ 22 ಬೆಳೆಗಳಿಗೆ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಜಾಸ್ತಿ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡುತ್ತಿರುವುದು, ವಿಶೇಷವಾಗಿ ಗೋವುಗಳ ರಕ್ಷಣೆ, ದೇಶೀಯ ತಳಿಗಳನ್ನು…
ತುಮಕೂರು: ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿಯಿರುವ 870 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಈಗಾಗಲೇ ಅನುಮತಿ ನೀಡಲಾಗಿದ್ದು, ಶೀಘ್ರದಲ್ಲೇ ಕೆಪಿಎಸ್‍ಸಿ ಇಂದ ಅಧಿಸೂಚನೆ ಪ್ರಕಟವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ್ ತಿಳಿಸಿದರು. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಸಹಯೋಗದಲ್ಲಿಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 2 ದಿನಗಳ ತುಮಕೂರು-ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸುಮಾರು 12 ಲಕ್ಷ ಪದವೀಧರ ನಿರುದ್ಯೋಗಿಗಳಿದ್ದು, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳನ್ನು ಪಟ್ಟಿ ಮಾಡಲಾಗಿದೆ. ಶೀಘ್ರದಲ್ಲೇ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ವಿವಿಧ ಕೋರ್ಸ್ ಮುಗಿಸಿರುವ…










