Author: News Desk Benkiyabale

ತುಮಕೂರು:      ತುಮಕೂರು ಲೋಕಸಭಾ ಕ್ಷೇತ್ರ ರಾಷ್ಟ್ರ ರಾಜಕಾರಣದ ಕೆಂಗಣ್ಣಿಗೆ ಗುರಿಯಾಗುವಂತೆ ಕಂಡುಬರುತ್ತಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ತುಮಕೂರು ಸ್ಪರ್ಧಿಸುವ ನಿರ್ಧಾರ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ  ಹೆಚ್.ಡಿ.ದೇವೇಗೌಡರು ಜೆಡಿಎಸ್ ನ ಪಾಬಲ್ಯ ಅತ್ಯಧಿಕವಾಗಿರುವ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ, ಅನಾಯಾಸವಾಗಿ ಜಯಗಳಿಸಬಹುದೆಂಬ ಲೆಕ್ಕಾಚಾರದಲ್ಲಿದ್ದಾರೆ.       ಕಳೆದ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ನ ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಟಾಂಗ್ ನೀಡಿ ಜೆಡಿಎಸ್ ಪಕ್ಷವು ತನ್ನ ವಶಕ್ಕೆ ತುಮಕೂರು ಕ್ಷೇತ್ರವನ್ನ ಪಡೆದುಕೊಂಡಿರುವುದರಿಂದ ಸಂಸದ ಮುದ್ದಹನುಮೇಗೌಡರ ಆಕ್ರೋಶಕ್ಕೂ ಹೊರತಾಗಿಲ್ಲ. ಬೇರೆ ಕ್ಷೇತ್ರಗಳ ರೀತಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನ ಹೊಂದಾಣಿಕೆ ಎರಡೂ ಪಕ್ಷಗಳ ಸ್ಪಷ್ಟ ನಿಲುವು ಒಮ್ಮತವಾಗಿ ಕಂಡುಬರುತ್ತಿಲ್ಲ. ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನರಾಗ ಹೆಚ್ಚಾಗುತ್ತಿದೆ. ಹೇಮಾವತಿ ನೀರನ್ನು ತುಮಕೂರಿಗೆ ಸಮರ್ಪಕವಾಗಿ ಹರಿಸಿಲ್ಲವೆಂಬ ಕೂಗು ಉಲ್ಬಣಗೊಂಡಿದೆ.        ಬಿಜೆಪಿ ಪಕ್ಷದಲ್ಲಿ ಮಾಜಿ ಶಾಸಕ ಬಿ.ಸುರೇಶ ಗೌಡ ಮತ್ತು ಜಿ.ಎಸ್.ಬಸವರಾಜು ರವರ ಹೆಸರು ದೆಹಲಿ ವಲಯ ತಲುಪಿದ್ದು, ಅಲ್ಲಿ…

Read More

ಕೊಡಿಗೇನಹಳ್ಳಿ:       ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರ ವಾಹನದಿಂದ ಬಿದ್ದ ವ್ಯಕ್ತಿಗೆ ಗಂಭಿರ ಗಾಯಗಳಾದ ಘಟನೆ ಭಾನುವಾರ ರಾತ್ರಿ ನಡೆದಿದೆ.       ತಾಲೂಕಿನ ಕೋಡ್ಗದಾಲ ಮೂಲಕ ಬ್ಯಾಲ್ಯ ಗ್ರಾಮಕ್ಕೆ ಹೋಗುತಿದ್ದ ಅಗ್ರಹಾರ ಗ್ರಾಪಂ ಸದಸ್ಯ ಉಗ್ರಪ್ಪನ ವಾಹನಕ್ಕೆ ದಿಢೀರ ಬೀದಿ ನಾಯಿ ಅಡ್ಡ ಬಂದ ಪರಿಣಾಮ ದ್ವೀಚಕ್ರವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದ್ದಾರೆ.        ಅದೆ ರಸ್ತೆಯಲ್ಲಿ ಸಂಚರಿಸುತಿದ್ದ ಪರಿಚಿತ ವ್ಯಕ್ತಿ ಹನುಮಂತರಾಯಪ್ಪ ತಕ್ಷಣ ಗಾಯಾಳಾನ್ನು ಆಂಬುಲೆನ್ಸ್ ಮೂಲಕ ಮಧುಗಿರಿ ಆಸ್ಪತ್ರೆಗೆ ರವಾನಿಸಿದ್ದು, ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.

Read More

ಕೊರಟಗೆರೆ :       ಮತದಾನ ನಮ್ಮ ಹಕ್ಕು ಯಾರು ಮರೆಯಬಾರದು ಉತ್ತಮ ಸಮಾಜನಿರ್ಮಾಣಕ್ಕಾಗಿ ಯೋಗ್ಯ ಅಭ್ಯüರ್ಥಿಯನ್ನು ಆರಿಸಬೇಕು ಯಾವುದೇ ಅಸೆ, ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಮತ ಚಲಾಯಿಸಬೇಕು, ಪ್ರಜಾಪ್ರಭುತ್ವ ಬಲಪಡಿಸಲು ಮತದಾನ ಅತ್ಯತ್ತಮ ಅವಕಾಶವಾಗಿದೆ ಎಂದು ತಾ.ಪಂ. ಕಾರ್ಯನಿರ್ನಹಣಾದಿಕಾರಿ ಶಿವಪ್ರಕಾಶ್ ತಿಳಿಸಿದರು.       ಅವರು ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಭಾರತ ಚುನಾವಣಾ ಆಯೋಗ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಚಲಾಯಿಸಲು ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮತದಾರರಿಗೆ ಅರಿವು ಎವಿಎಂ-ವಿವಿಪ್ಯಾಡ್ ಬಗ್ಗೆ ಪ್ರಾತ್ಯಕ್ಷಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹಬ್ಬದಂತಾಗಬೇಕು, ಕುಟುಂಬ ಸಮೇತ ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು, ಯಾರೋಬ್ಬರೂ ಕೂಡ ಮತದಾನದಿಂದ ವಂಚಿತರಾಗಬಾರದು, ಚುನಾವಣೆಯಲ್ಲಿ ಪಕ್ಷ, ವ್ಯಕ್ತಿ ಅನ್ನುವುದು ಮುಖ್ಯವಲ್ಲ ಎಂದು ಅವರು 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ…

Read More

ಕೊರಟಗೆರೆ:       ಮಹಿಳೆಯ ಹೊಟ್ಟೆಯಲ್ಲಿ ಕಳೆದ ನಾಲ್ಕು ವರ್ಷದಿಂದ ಗರ್ಭಕೋಶದ ಸುತ್ತಲು ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ನಡೆಸಿದ ಶಸ್ತ್ರಚಿಕಿತ್ಸೆ ಮಂಗಳವಾರ ಯಶಸ್ವಿಯಾಗಿದೆ.       ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ನಾಗಭೂಷನ್, ಅರವಳಿಕೆ ತಜ್ಞ ಡಾ.ಪ್ರಕಾಶ್, ಆಸ್ಪತ್ರೆಯ ಸಿಬ್ಬಂದಿಗಳಾದ ಚಂದ್ರಕಲಾ, ಪ್ರೇಮಾ ಮತ್ತು ನಂಜೇಗೌಡ ನೇತೃತ್ವದ ವೈದ್ಯರ ತಂಡ ಕಮಲಮ್ಮ ಎಂಬ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.        ತುಂಬಾಡಿ ಗ್ರಾಪಂ ವ್ಯಾಪ್ತಿಯ ಪುಟ್ಟಮ್ಮನಪಾಳ್ಯ ಗ್ರಾಮದ ಕಮಲಮ್ಮ ಎಂಬ ಮಹಿಳೆಯ ಹೊಟ್ಟೆಯಲ್ಲಿ ಗರ್ಭಕೋಶ ಸುತ್ತಲೂ ಕಳೆದ ನಾಲ್ಕು ವರ್ಷದಿಂದ ಬೆಳೆದಿದ್ದ 2ಕೆಜಿ 650ಗ್ರಾಂ ತೂಕದ ಗೆಡ್ಡೆಯನ್ನು ಕೊರಟಗೆರೆ ಪಟ್ಟಣದ ಸರಕಾರಿ ವೈದ್ಯರ ತಂಡ ಸುಸುತ್ರವಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೀದ್ದಾರೆ.       ಕಳೆದ ಹದಿನೈದು ದಿನದ ಹಿಂದೆ ಹೊಟ್ಟೆ ನೋವಿನ ಚಿಕಿತ್ಸೆಗಾಗಿ ಸಾರ್ವಜನಿಕ…

Read More

 ತುಮಕೂರು:       ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 36196 ವಿದ್ಯಾರ್ಥಿಗಳು ಮಾರ್ಚ್ 21ರಿಂದ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಡಿಡಿಪಿಐ ಎಂ.ಆರ್.ಕಾಮಾಕ್ಷಿ ತಿಳಿಸಿದ್ದಾರೆ. 141 ಪರೀಕ್ಷಾ ಕೇಂದ್ರ :-       ಜಿಲ್ಲೆಯ 141(ತುಮಕೂರು-83, ಮಧುಗಿರಿ-58)ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ತುಮಕೂರಿನ 23751(ಬಾಲಕರು-13156, ಬಾಲಕಿಯರು-10595) ಹಾಗೂ ಮಧುಗಿರಿಯ 12445(ಬಾಲಕರು-6572, ಬಾಲಕಿಯರು-5873) ಸೇರಿ ಒಟ್ಟು 36,196 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.       ಜಿಲ್ಲೆಯಲ್ಲಿ 141 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 62 ಕ್ಲಸ್ಟರ್ ಸಹಿತ, 76 ಕ್ಲಸ್ಟರ್ ರಹಿತ ಹಾಗೂ 3 ಖಾಸಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ತುಮಕೂರು ನಗರದ ವಿದ್ಯಾನಿಕೇತನ ಶಾಲೆ, ಎಸ್.ಐ.ಟಿ.ಯ ವಾಸವಿ ಪ್ರೌಢಶಾಲೆ ಹಾಗೂ ಮಧುಗಿರಿಯ ಜ್ಯೂಪಿಟರ್ ಪಬ್ಲಿಕ್ ಶಾಲೆ ಸೇರಿ 3 ಖಾಸಗಿ ಕೇಂದ್ರಗಳಲ್ಲಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.       ಪರೀಕ್ಷಾ ಅಕ್ರಮಗಳನ್ನು ತಡೆಯಲು…

Read More

ತುರುವೇಕೆರೆ:      ಜ್ಞಾನದ ಸಂಪತ್ತಿಗಿಂತ ಮಿಗಿಲಾದುದು ಬೇರಾವುದೇ ಸಂಪತ್ತಿಲ್ಲ ಎಂದು ತುರುವೇಕೆರೆ ವಿರಕ್ತ ಮಠದ ಶ್ರೀ ಶ್ರೀ ಕರಿವೃಷಭ ದೇಶೀಕೇಂದ್ರ ಮಹಾ ಸ್ವಾಮಿಗಳು ಅಭಿಪ್ರಾಯಪಟ್ಟರು.       ಮೈಸೂರಿನಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕ್ರಾಫರ್ಡ್ ಭವನದಲ್ಲಿ ಆಯೋಜಿಸಿದ್ದ ತೊಂಬತ್ತೊಂಬತ್ತನೇ ವಾರ್ಷಿಕ ಘಟಿಕೋತ್ಸವ ಪದವಿ ಪ್ರಧಾನ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ನನ್ನನ್ನು ಆಯ್ಕೆ ಮಾಡಿ ಗೌರವ ಡಾಕ್ಟರೇಟ್ ಕೊಟ್ಟಿರುವುದು ನನಗೆ ಹಾಗು ನನ್ನ ಸಮಾಜದ ಸಧ್ಬಕ್ತರಿಗೆ ಗೌರವ ತಂದುಕೊಟ್ಟಿದೆ. ಮೈಸೂರು ವಿಶ್ವವಿಧ್ಯಾನಿಲಯ ಇಡೀ ದೇಶದಲ್ಲಿಯೇ ಆರನೆಯ ವಿಶ್ವವಿಧ್ಯಾಲಯವಾಗಿದ್ದು ಕರ್ನಾಟಕ ರಾಜ್ಯದ ಮೊದಲನೆಯ ವಿಶ್ವವಿದ್ಯಾಲಯವಾಗಿದೆ. ಕಳೆದ 99 ವರ್ಷಗಳಲ್ಲಿ ವಿಶ್ವವಿದ್ಯಾಲಯ ಎಲ್ಲಾ ಕ್ಷೇತ್ರಗಳಲ್ಲಿಯೂ ಗಣನೀಯ ಸೇವೆ ಸಲ್ಲಿಸಿದೆ. ಆ ನಿಟ್ಟಿನಲ್ಲಿ ಇಂದು ಶ್ರೀ ಮಠಕ್ಕೆ ಗೌರವ ನೀಡಿ ನಮ್ಮನ್ನು ಸತ್ಕರಿಸಿರುವುದು ನಮ್ಮ ಬದುಕಿನ ಯಾತ್ರೆಯಲ್ಲಿ ಬಹು ಮಹತ್ವದ ಯಾತ್ರೆಯಾಗಿದೆ. ಮೂಲ ರಚನೆ, ಗ್ರಂಥಾಲಯ ಸಂಪನ್ಮೂಲ, ಭೋಧನೆ-ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆ ಈ…

Read More

 ತುಮಕೂರು :       ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ರಾಜಕೀಯ ಪಕ್ಷಗಳು ಹೊರತರುವ ಪಕ್ಷದ ಪ್ರಣಾಳಿಕೆಯಲ್ಲಿ ಸಭೆ/ ಸಮಾರಂಭ/ ರ್ಯಾಲಿ/ ವೇದಿಕೆ ಕಾರ್ಯಕ್ರಮಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಂತಹ ಹಾಗೂ ಕೋಮು ಪ್ರಚೋದನಾಕಾರಿ ಭಾಷಣ/ ಹೇಳಿಕೆಗಳನ್ನು ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಅವರು ತಿಳಿಸಿದರು.       ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇತ್ತೀಚೆಗೆ ಜರುಗಿದ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಒಂದು ಕೋಮು/ಜಾತಿ/ಸಮಾಜದ ಘನತೆಗೆ ವೈಯಕ್ತಿಕವಾಗಿ ಘಾಸಿಯಾಗುವಂತಹ ಹೇಳಿಕೆಗಳನ್ನು ನೀಡಬಾರದು ಹಾಗೂ ಸಾಮಾಜಿಕ ಜಾಲತಾಣಾಗಳಾದ ಟ್ವೀಟರ್, ಫೇಸ್‍ಬುಕ್ ಮತ್ತು ವಾಟ್ಸ್‍ಆಪ್‍ಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದೆಂದು ತಿಳಿಸಿದರು.   ತಹಶೀಲ್ದಾರ್ ವಶಕ್ಕೆ ಸರ್ಕಾರಿ ಅತಿಥಿ ಗೃಹ:-       ಸರ್ಕಾರಿ/ವಸತಿ ಗೃಹಗಳನ್ನು ಆಯಾ ತಾಲ್ಲೂಕು ತಹಶೀಲ್ದಾರರ ವಶಕ್ಕೆ ಪಡೆಯಲಾಗಿದ್ದು, ಸರ್ಕಾರಿ ಅತಿಥಿ ಗೃಹಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳು…

Read More

ತುಮಕೂರು:       ಸಂತ ಶಿಶುನಾಳ ಷರೀಫರಿಗೆ ಇನ್ನೊಬ್ಬ ಪರ್ಯಾಯ ಸಾಧಕ ಇಲ್ಲ. ಅವರಿಗೆ ಅವರೇ ಸಾಟಿ ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.       ತುಮಕೂರು ವಿಶ್ವವಿದ್ಯಾನಿಲಯದ ಸಂತ ಶಿಶುನಾಳ ಷರೀಫರ ಅಧ್ಯಯನ ಕೇಂದ್ರವು ಹಮ್ಮಿಕೊಂಡಿದ್ದ ‘ಶಿಶುನಾಳ ಷರೀಫರ ಧೋರಣೆ ಮತ್ತು ಪ್ರೇರಣೆ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.       ಷರೀಫರು ಸಂತ ಶರಣ ಸೂಫಿಗಳ ಹಾದಿಯಲ್ಲಿ ಸಾಗಿದರು. ಎಲ್ಲರಿಗೂ ಮಾದರಿಯಾದರು. ಗಗನಕ್ಕೆ ಗಗನವೇ ಸಾಟಿ ಎಂಬಂತೆ ಷರೀಫರಿಗೆ ಷರೀಫರೇ ಸಾಟಿ, ಬೇರೊಬ್ಬರಿಲ್ಲ. ಇಂತಹ ದಾರ್ಶನಿಕನ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸಿರುವುದು ಶ್ಲಾಘನೀಯ ಎಂದರು.       ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂತ ಶಿಶುನಾಳ ಷರೀಫರ ಹಾಗೂ ಕಳಸದ ಗುರು ಗೋವಿಂದ ಭಟ್ಟರ ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಮಹೇಶ್‍ಜೋಷಿ ಮಾತನಾಡಿ, ಷರೀಫರು ನಡೆದು ಬಂದ ದಾರಿ ಮಹತ್ವಪೂರ್ಣದ್ದೆಂದು ಸ್ಮರಿಸಿದರು.       ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ…

Read More

ತುಮಕೂರು:        ತುಮಕೂರು ರಾಜ್ಯದಲ್ಲಿ ಹಾಲಿ ಸಂಸದರು ಇರುವ ಲೋಕಸಭಾ ಕ್ಷೇತ್ರಗಳ ಪೈಕಿ ತುಮಕೂರು ಕ್ಷೇತ್ರವನ್ನು ಮಾತ್ರ ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.       ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್. ರಾಜೇಂದ್ರ ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‍ಗೆ ತುಮಕೂರು ಕ್ಷೇತ್ರ ಬಿಟ್ಟು ಕೊಟ್ಟಿರುವ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.       ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್. ರಾಜೇಂದ್ರ ಮಾತನಾಡಿ, ದೇಶದಲ್ಲಿ 44 ಜನ ಕಾಂಗ್ರೆಸ್ ಸಂಸದರು ಗೆದ್ದಿದ್ದಾರೆ. ಇವರ ಪೈಕಿ ಮುದ್ದಹನುಮೇಗೌಡರಿಗೆ ಟಿಕೆಟ್ ತಪ್ಪಿಸಲಾಗಿದೆ. ಇದರ ಅರ್ಥವೇನು. ಯಾವುದೇ ಕಾರಣಕ್ಕೂ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಡಬಾರದು. ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲೇಬೇಕು ಎಂದು ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.       ಶತಾಯ ಗತಾಯ ತುಮಕೂರು ಲೋಕಸಭಾ…

Read More

 ತುಮಕೂರು:       ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ಜೀವನದ ಆರೋಗ್ಯ ಸುಧಾರಣೆ ಸೇರಿದಂತೆ ಇತರೆ ಜೀವನದ ಭದ್ರತೆಗಾಗಿ ಜೀವವಿಮೆ ಅವಶ್ಯವಾಗಿದ್ದು, ‘ಎಕ್ಸೈಡ್ ಲೈಫ್’ ಇನ್ಷೂರೆನ್ಸ್ ಮೂಲಕ ಗ್ರಾಹಕರಿಗೆ ಹೊಸ ವಿಮಾ ಯೋಜನೆಯನ್ನು ಕಲ್ಪಿಸಲಾಗುತ್ತಿದೆ ಎಂದು ವಿಮಾ ಕಂಪೆನಿಯ ತರಬೇತುದಾರ ಆಶಿಕ್ ಮನೋಹರ್ ತಿಳಿಸಿದರು.      ನಗರದಲ್ಲಿಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2015ರಲ್ಲಿ ಪ್ರಾರಂಭವಾದ ದಿನದಿಂದಲೂ ಎಕ್ಸೈಡ್ ಲೈಫ್ ಇನ್ಷೂರೆನ್ಸ್ ದೇಶಾದ್ಯಂತ ಟೈಯರ್2 ಮತ್ತು ಟೈಯರ್ 3 ನಗರಗಳ ಜನರೊಂದಿಗೆ ಸಕ್ರಿಯವಾಗಿದ್ದು ಅವರಿಗೆ ವಿಮೆಯ ಪ್ರಾಮುಖ್ಯತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಅವರಿಗೆ ಅವರ ಭವಿಷ್ಯಕ್ಕೆ ಸೂಕ್ತ ಹಣಕಾಸು ನಿರ್ಧಾರ ಕೈಗೊಳ್ಳಲು ಮಾಹಿತಿಯೊಂದಿಗೆ ಸನ್ನದ್ಧವಾಗಿಸುತ್ತಿದೆ ಎಂದರು.       ಎಕ್ಸೈಡ್ ಲೈಫ್ ಇನ್ಷೂರೆನ್ಸ್‍ನಲ್ಲಿ ನಾವು ಪ್ರತಿ ವ್ಯಕ್ತಿಯೂ ಆರ್ಥಿಕವಾಗಿ ರಕ್ಷಣೆ ಹೊಂದಿರುವುದು ಮುಖ್ಯ ಎಂದು ನಂಬಿದ್ದೇವೆ. `ಅತ್ಯಂತ ಬೇಗ ಪ್ರಾರಂಭಿಸುವುದು’, `ಒಗ್ಗೂಡಿಸುವುದರ ಶಕ್ತಿ’ ಮತ್ತು `ತಕ್ಕಷ್ಟು ಜೀವವಿಮೆ’ಯ ಪರಿಕಲ್ಪನೆಗಳನ್ನು ಪ್ರತಿ ಭಾರತೀಯರು ಅರ್ಥ ಮಾಡಿಕೊಳ್ಳಬೇಕು” ಎಂದರು.    …

Read More