Author: News Desk Benkiyabale

       ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಸಂಖ್ಯಾ ಬಲವಿಲ್ಲ ಎಂದು ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.       ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು,  ವಿಶ್ವಾಸ ಮತಯಾಚನೆಗೆ ನಮ್ಮ ಮೈತ್ರಿ ಸರಕಾರ ಸಿದ್ಧವಿದೆ. ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಸಂಖ್ಯಾ ಬಲವಿಲ್ಲ ಎಂದು ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿ. ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುವಂತಹ ರೀತಿಯಲ್ಲಿ ವರ್ತಿಸುವುದನ್ನು ಮೊದಲು ಬಿಜೆಪಿ ನಿಲ್ಲಿಸಲಿ, ಸಂವಿಧಾನದಲ್ಲಿ ಅವಕಾಶವಿರುವುದರಿಂದಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದ್ದೇವೆ, ಇಲ್ಲಿ ಅಪವಿತ್ರತೆಯ ಪ್ರಶ್ನೆಯೇ ಇಲ್ಲ ಎಂದರು.       ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕರೊಬ್ಬರೊಂದಿಗೆ ಬಿಜೆಪಿ ಶಾಸಕರು ಮಾತನಾಡಿರುವ ವಿಷಯದಲ್ಲಿ ಸ್ವೀಕರ್ ಹಾಗೂ ಪ್ರಧಾನಿ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಈಗಾಗಲೇ ವಿಧಾನಸಭಾ ಸ್ವೀಕರ್ ಗಮನಕ್ಕೆ ತಂದಿದ್ದು, ಸದನದಲ್ಲಿ ತೀರ್ಮಾನಕೈಗೊಳ್ಳಲಿದ್ದಾರೆ ಎಂದರು. ಧ್ವನಿ ಎಸ್‍ಎಫ್‍ಎಲ್ ಪರೀಕ್ಷೆಯಾಗಲಿ:        ಮಾಜಿ ಸಿಎಂ, ಬಿಜೆಪಿ…

Read More

 ತುಮಕೂರು :       ರಾಜ್ಯದ 2019-20ನೇ ಸಾಲಿನ ಆಯವ್ಯಯದಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ. ಪರಮೇಶ್ವರ್ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸರ್ಕಾರ ಮಂಡಿಸಿರುವ ಈ ಆಯವ್ಯಯವನ್ನು ಯಾವುದೇ ಕ್ಷೇತ್ರದ ಶಾಸಕರನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಿಲ್ಲ. ಇಡೀ ರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ತಯಾರಿಸಿರುವ ಈ ಆಯವ್ಯಯವು ಜನಪರ ಹಾಗೂ ರೈತಪರವಾಗಿದೆ ಎಂದು ತಿಳಿಸಿದರು.       ಕಳೆದ 2018-19ರಲ್ಲಿ 2,18,488ಕೋಟಿ ರೂ.ಗಳಷ್ಟಿದ್ದ ಆಯವ್ಯಯ ಗಾತ್ರವನ್ನು ಪ್ರಸಕ್ತ 2019-20ನೇ ಸಾಲಿಗಾಗಿ ಅಂದಾಜು 2,34,153ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದಾಗ ಸುಮಾರು ಶೇ.7.17ರಷ್ಟು ಅಂದರೆ 15,665ಕೋಟಿ ರೂ.ಗಳಷ್ಟು ಹೆಚ್ಚಿನ ಹಣವನ್ನು ಆಯವ್ಯಯದಲ್ಲಿ ಮಂಡನೆ ಮಾಡಲಾಗಿದೆ. ಈ ಆಯವ್ಯಯದಲ್ಲಿ ಬಿಡುಗಡೆ ಮಾಡಲಾಗಿರುವ 2,34,000ಕೋಟಿ ರೂ.ಗಳ ಪೈಕಿ ಕೃಷಿಗಾಗಿ 46,853 ಕೋಟಿ ರೂ.ಗಳಷ್ಟು ಮೀಸಲಿಡುವ ಮೂಲಕ ಕೃಷಿಗೆ ಆದ್ಯತೆ ನೀಡಲಾಗಿದೆ…

Read More

 ತುಮಕೂರು:        ನರೇಗಾ ಅನುದಾನವನ್ನು ಬಳಕೆ ಮಾಡಿ ಬತ್ತಿಹೋಗಿರುವ ಕೆರೆ, ಕಟ್ಟೆ, ಕಲ್ಯಾಣಿಗಳನ್ನು ಪುನಶ್ಚೇತನ ಹಾಗೂ ರಾಜಕಾಲುವೆ ತೆರವು ಮಾಡಿ ನೀರು ಹರಿಯುವಂತೆ ಮಾಡಬೇಕೆಂದು ಗ್ರಾಮೀಣ ಮೂಲಭೂತ ಸೌಕರ್ಯಗಳ ನಿರ್ದೇಶಕ ಡಾ|| ಎನ್. ಕೃಷ್ಣಪ್ಪ ಕೋಡಿಪಾಳ್ಯ ಸಲಹೆ ನೀಡಿದರು.       ಕುಣಿಗಲ್ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಇತ್ತೀಚೆಗೆ ಕುಣಿಗಲ್ ತಾಲೂಕಿನ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ನಡೆಸಿ ಮಾತನಾಡಿದ ಅವರು ಪಾತಾಳಕ್ಕೆ ಕುಸಿದಿರುವ ಅಂತರ್ಜಲವನ್ನು ಭರ್ತಿ ಮಾಡಲು ಮಳೆ ನೀರು ಇಂಗಿಸುವ ಕ್ರಮವನ್ನು ಅನುಸರಿಸಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗಳು ಕನಿಷ್ಠ ಒಂದು ಕೋಟಿ ರೂ.ಗಳ ಅನುದಾನ ಬಳಸಿಕೊಳ್ಳಲು ಅವಕಾಶವಿದ್ದು, ಸ್ಥಳೀಯ ಜನಪ್ರತಿನಿಧಿಗಳಿಂದ ಸಲಹೆ ಸಹಕಾರ ಪಡೆದು 2019-20ನೇ ಸಾಲಿನಲ್ಲಿ ಉತ್ತಮ ಕ್ರಿಯಾ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.       ಸಭೆಯಲ್ಲಿ ಕುಣಿಗಲ್ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶಿವರಾಜು, ವ್ಯವಸ್ಥಾಪಕ ಬೋರೇಗೌಡ, ವಿವಿಧ ಗ್ರಾಮ…

Read More

ತುಮಕೂರು:       ಗ್ರಾಮಂತರ ಕ್ಷೇತ್ರದಲ್ಲಿರುವ ವಿದ್ಯಾವಂತ ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಚ್ ತಿಂಗಳಲ್ಲಿ ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೋಧ್ಯಮಿಗಳ ಕೆ ಐ ಎ ಡಿ ಬಿ ಅಧಿಕಾರಿಗಳು, ಡಿ ಐ ಸಿ ಅಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒ ಒಳಗೊಂಡಂತೆ ಬೃಹತ್ ಸಭೆ ಕರೆದು ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ಸಂಬಂಧ ಚರ್ಚಿಸುವುದಾಗಿ ಶಾಸಕ ಡಿ. ಸಿ. ಗೌರೀಶಂಕರ್ ಭರವಸೆ ನೀಡಿದರು.       ಅವರು ಗೂಳೂರು ಜಿಲ್ಲಾ ಪಂಚಾಯ್ತಿ ವಾಪ್ತಿಯಯಲ್ಲಾಪುರ ಗ್ರಾಮದಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ನೂತನ ಆಲಯ ಜೀರ್ಣೋದ್ದಾರ ಮತ್ತು ದುರ್ಗಾದೇವಿಯ ನೂತನ ಸ್ತಿರಬಿಂಭಪ್ರತಿಷ್ಠಾಪನ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.       ಗ್ರಾಮಂತರ ಕ್ಷೇತ್ರದ ವಿದ್ಯಾವಂತ ಯುವಕರು ಉದ್ಯೋಗ ಅರಸಿ ಬೆಂಗಳೂರು ಸೇರಿದಂತೆ ವಿವಿಧೆಡೆ ಫಲಾಯನ ಮಾಡುತ್ತಿದ್ದಾರೆ.ಇನ್ನು ಕೆಲ ಯುವಕರು ತಮ್ಮ ವಿಧ್ಯಾಭ್ಯಾಸಕ್ಕೆ ತಕ್ಕ ಉದೋಗ ಲಭಿಸದೆ ನಿರುದ್ಯೋಗಿಗಳಾಗಿದ್ದಾರೆ ಇದನ್ನು ತಪ್ಪಿಸಲು ವಸಂತ ನರಸಾಪುರದಲ್ಲಿ ಕೈಗಾರಿಕೋಧ್ಯಮಿಗಳು ಹಾಗು ಅಧಿಕಾರಿಗಳ ಬೃಹತ್ ಸಭೆ…

Read More

ದೆಹಲಿ:       ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದ  ವಿತ್ತ ಸಚಿವ ಅರುಣ್‌ ಜೇಟ್ಲಿ ಭಾರತಕ್ಕೆ ಮರಳಿದ್ದಾರೆ.       ಭಾರತಕ್ಕೆ ಮರಳುತ್ತಲೇ ಟ್ವಿಟ್‌ ಮಾಡಿದ ಜೇಟ್ಲಿ, “ಮನೆಗೆ ಮರಳಿರುವುದಯ ಸಂತಸ ನೀಡಿದೆ” ಎಂದು ತಿಳಿಸಿದ್ದಾರೆ.       ಜೇಟ್ಲಿ (66) ಅವರು ಅನಾರೋಗ್ಯ ಕಾರಣದಿಂದ ನಾರ್ಥ್​ ಬ್ಲಾಕ್​ನಲ್ಲಿರುವ ತಮ್ಮ ಆಫೀಸ್​ಗೆ ಬರುವುದನ್ನು ಕಳೆದ ವರ್ಷದ ಏಪ್ರಿಲ್​ನಲ್ಲೇ ಕೊನೆಗೊಳಿಸಿದ್ದರು. ಅದರ ಮರುತಿಂಗಳೇ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾದರು. ಆನಂತರ ಆಗಸ್ಟ್​ನಲ್ಲಿ ತಮ್ಮ ಕಚೇರಿ ಬಂದರಾದರೂ ಜನವರಿಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದರು.       ಅಂಗಾಂಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು ಕಳೆದ ತಿಂಗಳು ಚಿಕಿತ್ಸೆಗೆಂದು ನ್ಯೂಯಾರ್ಕ್‌‌ಗೆ ತೆರಳಿದ್ದರು.       ಮೇ 14, 2018ರಲ್ಲಿ AIIMS ನಲ್ಲಿ ದೊಡ್ಡ ಸರ್ಜರಿ ಮಾಡಿಸಿಕೊಂಡಿದ್ದ ಜೇಟ್ಲಿ ಇದೇ ಮೊದಲ ಬಾರಿಗೆ ವಿದೇಶಕ್ಕೆ ತೆರಳಿದ್ದರು.  ಈ ಕಾರಣ ಅವರು, ಈ ವರ್ಷದ ಬಜೆಟ್‌ ಮಂಡನೆ ಮಾಡಲು ಆಗಲಿಲ್ಲ. ಜೇಟ್ಲಿ ಅನುಪಸ್ಥಿತಿಯಲ್ಲಿ…

Read More

ನವದೆಹಲಿ:        ಪಾಕಿಸ್ತಾನ ಸೈನಿಕರ ಮತ್ತು ಅಲ್ಲಿನ ಉಗ್ರರ ಸ್ನೈಪರ್ ರೈಫಲ್ ಗಳಿಗೆ ಬಲಿಯಾಗುತ್ತಿದ್ದ ಭಾರತೀಯ ಸೈನಿಕರ ಬಹು ದಿನಗಳ ಆಸೆ ಕೊನೆಗೂ ಈಡೇರಿದ್ದು, ಇದೀಗ ಭಾರತೀಯ ಸೈನಿಕರ ಕೈಗೂ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಬಂದಿವೆ.       ಡೆಡ್ಲಿ ಸ್ನೈಪರ್ ರೈಫಲ್ಸ್ ಎಂದೇ ಕರೆಯಲಾಗುವ ಅತ್ಯಾಧುನಿಕ ಬೆರೆಟ್ಟಾ ಸಂಸ್ಥೆಯ 0.338 ಲಪುವಾ ಮ್ಯಾಗ್ನಮ್ ಸ್ಲಾರ್ಪಿಯೋ ಟಿಜಿಟಿ ಸೂಪರ್ ಸ್ನೈಪರ್ ರೈಫಲ್ ಹಾಗೂ ಬರೆಟ್ಟ್ ಸಂಸ್ಥೆಯ 0.50 ಕ್ಯಾಲಿಬರ್ ಎ095 ಸ್ನೈಪರ್ ರೈಫಲ್‍ಗಳನ್ನ ಖರೀದಿ ಮಾಡಲಾಗಿದೆ. ಒಂದು ವರ್ಷದ ಹಿಂದೆಯೇ ಸರ್ಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು.        ಪಾಕ್‌ ಮೂಲದ ನುಸುಳುಕೋರ ಉಗ್ರರನ್ನು ಮತ್ತು ಅಪ್ರಚೋದಿತ ದಾಳಿ ಮಾಡುವ ಪಾಕ್ ಸೈನಿಕರ ಮಟ್ಟಹಾಕಲು ಅನುಕೂಲವಾಗುವಂತೆ ಅತ್ಯಾಧುನಿಕ ಸ್ನೈಪರ್‌ ರೈಫ‌ಲ್ ಗ‌ಳ ಬಳಕೆಯನ್ನು ಭಾರತೀಯ ಸೇನೆ ಆರಂಭಿಸಿದೆ.         ಮೂಲಗಳ ಪ್ರಕಾರ ಈ ಎರಡೂ ಮಾದರಿ ಒಟ್ಟು…

Read More

ತುಮಕೂರು:       ಶಿಕ್ಷಣ, ಕ್ರೀಡೆ ಮಾತ್ರವಲ್ಲದೆ ಸಾಂಸ್ಕೃತಿಕ ರಂಗದ ಕೊಡುಗೆಯಲ್ಲೂ ಮಹಿಳೆಯರದು ಬಹುಪಾಲು ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.       ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಗಳ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ “ಮಹಿಳಾ ಸಾಂಸ್ಕೃತಿಕ ಉತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ಇಂದು ಸಮಾಜದಲ್ಲಿ ಪುರುಷರಷ್ಟೆ ಸಮಾನತೆಯನ್ನು ಪಡೆದುಕೊಳ್ಳುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಮಹಿಳಾ ಸಾಂಸ್ಕೃತಿಕ ಉತ್ಸವದ ಮೂಲಕ ಮಹಿಳೆಯರಲ್ಲಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ಪ್ರತ್ಯೇಕ ವೇದಿಕೆ ಕಲ್ಪಿಸಿರುವುದು ಸ್ವಾಗತಾರ್ಹ. ಮಹಿಳೆಯರು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಕೀರ್ತಿ ತರಬೇಕೆಂದು ಹಾರೈಸಿದರು.       ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತವಾಗದೆ…

Read More

 ತುಮಕೂರು:       ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಇಲ್ಲದೆ ಸಂಕಷ್ಟ ಎದುರಿಸುತ್ತಿರುವ ಇಂದಿನ ದಿನಗಳಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ “ನೇಗಿಲು” ಎಂಬ ನಾಟಕದ ಮೂಲಕ ರೈತ ಅನುಭವಿಸುತ್ತಿರುವ ಸಂಕಷ್ಟಗಳ ಕುರಿತು ಜಾಗೃತಿ ಮೂಡಿಸಲು ಹೊರಟಿರುವುದು ಶ್ಲಾಘನೀಯ ಕೆಲಸ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ.       ಗುಬ್ಬಿ ಪಟ್ಟಣದ ನಾಟಕರತ್ನ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ) ತುಮಕೂರು,ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿ.ಇಂದ್ರಕುಮಾರ್ ರಚಿಸಿರುವ “ನೇಗಿಲು” ನಾಟಕದ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಇಂದು ರೈತರ ಸಮಸ್ಯೆಗಳ ಕುರಿತು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಸುದ್ದಿ ಬಿತ್ತರಿಸುವುದು ಕಡಿಮೆಯಾಗಿದೆ. ಒಂದು ರೀತಿಯಲ್ಲಿ ರೈತ ಮಾಧ್ಯಮಗಳಿಗೆ ಟಿಆರ್‍ಪಿ ಗಳಿಸಿಕೊಡದ ವಿಷಯವಾಗಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ನಾಟಕದ ಮೂಲಕ ಯುವ ಸಮೂಹ ರೈತರ ಸಂಕಷ್ಟಗಳ ಪರಿಚಯ ಮಾಡಿಸಲು ಗ್ರಾಮೀಣ ಯುವಕರು,ವಿದ್ಯಾರ್ಥಿಗಳು ಹೊರಟಿರುವುದು ಹೆಮ್ಮೆ ಪಡುವ ವಿಚಾರವಾಗಿದೆ.ಇದಕ್ಕಾಗಿ ಗ್ರಾಮೀಣ ಕ್ರಿಯಾತ್ಮಕ…

Read More

ತುಮಕೂರು:       ನಗರದ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್‍ರವರು ನಗರದ 27ನೇ ವಾರ್ಡಿನ ಅಮರಜ್ಯೋತಿನಗರದಲ್ಲಿ ಪಿ.ಡಬ್ಲು.ಡಿ. ಇಲಾಖೆಯಿಂದ ಎಸ್.ಎಫ್.ಸಿ. ಯೋಜನೆಯಲ್ಲಿ ಕೈಗೊಂಡಿರುವ ಸಿ.ಸಿ. ರಸ್ತೆ. ಮತ್ತು ಸಿ.ಸಿ. ಚರಂಡಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.       ತುಮಕೂರು ಮಹಾನಗರ ಪಾಲಿಕೆ ಸದಸ್ಯರಾದ ಮಂಜುನಾಥ್, ವೇದಮೂರ್ತಿ, ಕುಮಾರ್, ಜಿತೇಂದ್ರ, ಹನುಮಂತಪ್ಪ ಹಾಗೂ ಪಿ.ಡಬ್ಲು.ಡಿ. ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Read More

 ತುಮಕೂರು :       ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ನಿರುದ್ಯೋಗಿಗಳಿಗಾಗಿ ಫೆಬ್ರುವರಿ 16 ಹಾಗೂ 17ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು 10ಸಾವಿರಕ್ಕೂ ಹೆಚ್ಚು ಉದ್ಯೋಗಾರ್ಥಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಆಯುಕ್ತ ಬಾಲಯ್ಯ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ ಜಿಲ್ಲೆಯ ವಿವಿಧ ಕಂಪನಿ/ ಕೈಗಾರಿಕೆಗಳನ್ನು ನಡೆಸುತ್ತಿರುವ ಉದ್ಯೋಗದಾತರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮೇಳದಲ್ಲಿ ಭಾಗವಹಿಸಲು 10ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿಕೊಂಡಿರುವುದು ಸಂತಸ ತಂದಿದೆ. ಇವರಲ್ಲಿ ಕನಿಷ್ಠ 7ಸಾವಿರ ಮಂದಿ ತಾಂತ್ರಿಕೇತರ ಉದ್ಯೋಗಾರ್ಥಿಗಳು ಇರುವ ಸಾಧ್ಯತೆ ಇದೆ. ಬೆಂಗಳೂರಿನ ಸುಮಾರು 50 ಐಟಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯಲ್ಲಿರುವ ಉದ್ಯೋಗದಾತರು ಹೆಚ್ಚಿನ ಸಂಖ್ಯೆಯಲ್ಲಿ ಮೇಳದಲ್ಲಿ ಭಾಗವಹಿಸಿದರೆ ಮಾತ್ರ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ತಿಳಿಸಿದರು.       ರಾಜ್ಯದಲ್ಲಿರುವ ಎಲ್ಲಾ ಉದ್ಯಮಗಳು/ ಕಂಪನಿ/ ಸಂಸ್ಥೆಗಳು ತನ್ನಲ್ಲಿ ಖಾಲಿ…

Read More