ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಶಿವೈಕ್ಯರಾಗಿದ್ದು, ಇಂದು ಅವರ ಕ್ರಿಯಾ ಸಮಾಧಿಯ ವಿಧಿ ವಿಧಾನಗಳು ವೀರಶೈವ ಲಿಂಗಾಯಿತ ಆಗಮೋಕ್ತ ರೀತಿಯಲ್ಲಿ ನಡೆಯಲಿದೆ. ಲಿಂಗ ಶರೀರವನ್ನ ರುದ್ರಾಕ್ಷಿ ಮಂಟಪದಲ್ಲಿ ಕೂರಿಸಿಕೊಂಡು ಹಳೇ ಮಠದ ಕ್ರಿಯಾ ಸಮಾಧಿವರೆಗೆ ಮೆರವಣಿಗೆ ಮಾಡಲಾಯಿತು. ಸದ್ಯ ಪಾರ್ಥೀವ ಶರೀರ ಕ್ರಿಯಾ ಸಮಾಧಿ ಬಳಿ ತಲುಪಿದ್ದು, ಸಕಲ ಸರ್ಕಾರಿ ಗೌರವಗಳು ನಡೆಯುತ್ತಿದೆ. ಇನ್ನೇನು ಕೆಲ ವೇ ಹೊತ್ತಿನಲ್ಲಿ ಅಂತಿಮ ವಿಧಾನ ಆರಂಭವಾಗಲಿದೆ. ಮೊದಲಿಗೆ ಪಾರ್ಥಿವ ಶರೀರಕ್ಕೆ ಅಂತಿಮಪುಣ್ಯ ಸ್ನಾನ ಮಾಡಿಸಲಾಗುತ್ತದೆ. ನಾಡಿನ ಪುಣ್ಯ ನದಿಗಳಿಂದ ತರಿಸಿರುವ ಪವಿತ್ರ ತೀರ್ಥಗಳಿಂದ ಅಭಿಷೇಕ ನೆರವೇರಿಸಿ ಹೊಸ ಕಷಾಯ ವಸ್ತ್ರಗಳನ್ನು ಧಾರಣೆ ಮಾಡಿಸಲಾಗುತ್ತದೆ. ನಂತರ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ಪಟ್ಟಾಧಿಕಾರ ಹಸ್ತಾಂತರ ಮಾಡಲಾಗುತ್ತದೆ. ಬಳಿಕ ಪಾರ್ಥಿವ ಶರೀರವನ್ನು ಗದ್ದುಗೆಯ ಒಳಭಾಗದ ಗೂಡಿನಲ್ಲಿ ಪದ್ಮಾಸನ ಸ್ಥಿತಿಯಲ್ಲಿ ಕೂರಿಸಲಾಗುತ್ತದೆ. ಈ ವೇಳೆ ಶ್ರೀಗಳ ಕೈಯಲ್ಲಿ ಇಷ್ಟ ಲಿಂಗವನ್ನು…
Author: News Desk Benkiyabale
ತುಮಕೂರು: ನಡೆದಾಡುವ ದೇವರು ಡಾ.ಶಿವಕುಮಾರ ಶ್ರೀಗಳಿಗೆ ಭಾರತರತ್ನ ಮಾತ್ರವಲ್ಲ ವಿಶ್ವರತ್ನ ಪ್ರಶಸ್ತಿ ಕೊಟ್ಟರೂ ಕಡಿಮೆಯಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಭಿಪ್ರಾಯಪಟ್ಟರು. ತುಮಕೂರು ನಗರದ ಅಮಾನಿಕೆರೆ ಬಳಿ ಇರುವ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮಠದ ಭಕ್ತರು ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಹೀಗೆ ಭಾರತರತ್ನ ಪ್ರಶಸ್ತಿಯನ್ನು ನೀಡಿ ಸ್ವಾಮೀಜಿಯವರನ್ನು ಕುಬ್ಜರನ್ನಾಗಿ ಮಾಡುತ್ತಿದ್ದಾರೆ ಎನಿಸುತ್ತದೆ. ಹಾಗಾಗಿ ಶ್ರೀಗಳಿಗೆ ಯಾವ ಪ್ರಶಸ್ತಿ ನೀಡಿದರೂ ಅದು ಕಡಿಮೆಯೇ ಆಗುತ್ತದೆ ಎಂದು ಹೇಳಿದರು. ಶ್ರೀಗಳು ಯಾವುದೇ ವಿದೇಶಕ್ಕೆ ಹೋಗಲಿಲ್ಲ. ಪ್ರಶಸ್ತಿಯ ಹಿಂದೆ ಬೀಳಲಿಲ್ಲ. ಆದರೂ ಅವರನ್ನು ಅರಸಿಕೊಂಡು ಹಲವು ಪದವಿಗಳು ಬಂದಿವೆ. ವಿಶ್ವದ ಯಾವುದೇ ನಾಯಕರು ನಿರ್ಗಮಿಸಿದ ಸಂದರ್ಭದಲ್ಲಿಯೂ ಇಷ್ಟೊಂದು ಜನರು ಸೇರಿರಲಿಲ್ಲ. ಆದರೆ ಶ್ರೀಗಳ ನಿರ್ಗಮನದ ಸಂದರ್ಭದಲ್ಲಿ ಲಕ್ಷಾಂತರ ಮಂದಿ ಬಂದು…
ತುಮಕೂರು: ನಗರದ ಟಿಪ್ಪುನಗರ ಮುಖ್ಯರಸ್ತೆಯ ಮಾರಿಮುತ್ತು ದೇವಸ್ಥಾನದ ಹಿಂಭಾಗ ತುಮಕೂರು ಜಿಲ್ಲಾ ಅಂತಾರಾಷ್ಟ್ರೀಯ ಮಾನವ ಹಕ್ಕು ಕಾರ್ಯ ಸಮಿತಿಯನ್ನು ಉದ್ಘಾಟಿಸಲಾಯಿತು. ಐ.ಹೆಚ್.ಆರ್.ಎ.ಸಿ. (International Human Rights Action Committee) ಅಂತಾರಾಷ್ಟ್ರೀಯ ಮಾನವಹಕ್ಕು ಕಾರ್ಯ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸ್ಥಾಪಕ ಎಂ. ರಾಜಾ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ವಿಧಿಸಲಾಗಿರುವ ಕಾನೂನುಗಳು ಯಾವು ಮೇಲು ಕೀಳುಗಳಿಲ್ಲದೆ ಎಲ್ಲರಿಗೂ ಅನ್ವಯವಾಗುತ್ತವೆ. ಕಾನೂನಿನ ಮುಂದೆ ಯಾರೂ ದೊಡ್ಡವರೂ ಅಲ್ಲ ಚಿಕ್ಕವರೂ ಅಲ್ಲ. ಮಾನವ ಸ್ವತಂತ್ರವಾಗಿ ಬದುಕಲು ಕಾನೂನು ಹಾಗೂ ನಿಯಮ ನಿಬಂಧನೆಗಳನ್ನು ರಚಿಸಲಾಗಿದೆ. ಆದರೆ, ಕೆಲವೊಮ್ಮೆ ಸಮಾಜಘಾತುಕರಿಂದ ಹಾಗೂ ಮೋಸಗಾರರ ದಬ್ಬಾಳಿಕೆದಾರರ ಕುತಂತ್ರ ಹಾಗೂ ಕಾನೂನು ತಿರುಚುವಿಕೆಯಿಂದ ಅಮಾಯಕರು ನರಳಾಡುವಂತಾಗಿದೆ. ಆದ್ಧರಿಂದ ಸರ್ವರೂ ಸಂವಿಧಾನದಲ್ಲಿ ಮಾನವನಿಗಾಗಿ ನೀಡಲಾಗಿರುವ ಮೂಲಭೂತ ಹಕ್ಕುಗಳ ಬಗ್ಗೆ ಅರಿಯುವುದು ಅಗತ್ಯ. ಈ ನಿಟ್ಟಿನಲ್ಲಿ ನಮ್ಮ ಸಂಘಟನೆ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಬ್ಬರಿಗೂ ಕಾನೂನಿನ ಅರಿವಿನ ನೆರವು ನೀಡುವುದು ಹಾಗೂ ಅವಶ್ಯಕತೆ ಇರುವಲ್ಲಿ ಮಾನವಹಕ್ಕುಗಳ…
ತುಮಕೂರು: ಇಹಲೋಕದ ಹಂಗು ತೊರೆದು ಸಾಗಿರುವ ಸಿದ್ದಗಂಗಾ ಶ್ರೀಗಳ ಕ್ರಿಯಾದಿಗಳು ಕಾರ್ಯ ಮಂಗಳವಾರ (ಜನವರಿ 22) ಸಂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಗುರುವಿನಂತೆ ಶಿಷ್ಯರ ಅಂತಿಮ ವಿಧಿ ವಿಧಾನ: ತಮ್ಮ ಗುರು ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳಿಗೆ ಯಾವ ರೀತಿಯಲ್ಲಿ ಅಂತಿಮ ವಿಧಿ ವಿಧಾನ ಪೂರೈಸಲಾಗಿರುತ್ತದೋ ಅದೇ ರೀತಿಯಲ್ಲಿ ತಮ್ಮ ಕ್ರಿಯಾ ವಿಧಾನ ಮಾಡಬೇಕೆಂದು ಶ್ರೀಗಳು ಬರೆದಿಟ್ಟಿದ್ದು ಅದೇ ರೀತಿಯಲ್ಲಿ, ಅವರು ಇಚ್ಛೆಪಟ್ಟ ಜಾಗದಲ್ಲಿಯೇ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಕ್ರಿಯಾ ಸಮಾಧಿ ಕಾರ್ಯಗಳಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 15-20 ಶ್ರೀಗಳ ಸಮ್ಮುಖದಲ್ಲಿ ಕ್ರಿಯಾ ಸಮಾಧಿ ಕಾರ್ಯ ನೆರವೇರಲಿದೆ. ತಮ್ಮ ಗುರು ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳ ರೀತಿಯಲ್ಲಿ ಅಂತಿಮ ವಿಧಿ ವಿಧಾನ ಪೂರೈಸಲಾಗಿರುತ್ತೋ ಅದೇ ರೀತಿಯಲ್ಲಿ ತಮ್ಮ ಕ್ರಿಯಾ ವಿಧಾನ ಮಾಡಬೇಕೆಂದು ಶ್ರೀಗಳು ಬರೆದಿಟ್ಟಿದ್ದು ಅದೇ ರೀತಿಯಲ್ಲಿ, ಅವರ ಸ್ವಯಿಚ್ಚೆಯಂತೆ ಅವರ…
ತುಮಕೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜ.22) ತುಮಕೂರಿಗೆ ಆಗಮಿಸುತ್ತಿದ್ದಾರೆ. ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಇಂದು ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೂ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ. ರಾಜ್ಯ ಮಾತ್ರವಲ್ಲದೇ, ದೇಶದ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು, ಗಣ್ಯರು ಸ್ವಾಮೀಜಿಯ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ದರ್ಶನ ಪಡೆದಿದ್ದು, ಸುಮಾರು 10 ಲಕ್ಷ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಸ್ವಾಮೀಜಿ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ, ಗಣ್ಯರಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ನಿಂತು ಅಪಾರ ಸಂಖ್ಯೆಯ ಭಕ್ತರು ಸ್ವಾಮೀಜಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ವಿವಿಧ ಮಠಾಧೀಶರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಗೃಹಸಚಿವ ಎಂ.ಬಿ. ಪಾಟೀಲ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅಪಾರ ಸಂಖ್ಯೆಯ…
ತುಮಕೂರು: ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಲಿಂಗೈಕ್ಯರಾದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮಿ ಅವರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯ ಮೆರವಣಿಗೆಯೊಂದಿಗೆ ಗೋಸಲ ಸಿದ್ದೇಶ್ವರ ವೇದಿಕೆಗೆ ತರಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುವಾಗುವಂತೆ ಶಾಲಾ ಕಾಲೇಜುಗಳು ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮಠಕ್ಕೆ ಆಗಮಿಸಲು ರಾಷ್ಟ್ರೀಯ ಹೆದ್ದಾರಿ-4 ಒಂದೇ ಸಂಚಾರಿ ಮಾರ್ಗವಿದ್ದು, ಸಂಚಾರವನ್ನು ಸುಗಮವಾಗಿಸಲು ರಸ್ತೆ ಮಾರ್ಗವನ್ನು ಬದಲಾಯಿಸಲಾಗಿದೆ. ಪೂನಾ, ಶಿರಾ ಮಾರ್ಗದ ಕಡೆ ಹೋಗುವ ವಾಹನಗಳನ್ನು ಡಾಬಸ್‍ಪೇಟೆ ಜಂಕ್ಷನ್‍ನಿಂದ ಹಾಗೂ ಶಿವಮೊಗ್ಗ ಕಡೆ ಹೋಗುವ ವಾಹನಗಳಿಗೆ ನೆಲಮಂಗಲ ಜಂಕ್ಷನ್‍ನಿಂದ ಡೈವರ್ಟ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ-4ನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಂತ್ರಿಗಳು, ವಿವಿಧ ಗಣ್ಯ ಮಹೋದಯರು ಸಂಚರಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಖಾಸಗಿ,…
ತುಮಕೂರು : ಹಲವಾರು ದಿನಗಳಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ: ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಬೆಳಿಗ್ಗೆ ಶಿವಸಾಯುಜ್ಯ ಹೊಂದಿದ್ದು, ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಠದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಪಾರ್ಥೀವ ಶರೀರವನ್ನು ಮಠದ ಗೋಸಲ ಸಿದ್ಧೇಶ್ವರ ವೇದಿಕೆಯಲ್ಲಿ ಮಂಗಳವಾರ ಸಂಜೆವರೆಗೂ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. ಗೌರವಾರ್ಥವಾಗಿ ರಾಜ್ಯಾದ್ಯಂತ ಶೋಕಾಚರಣೆ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಜರುಗುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದರು. ಪರಮಪೂಜ್ಯ ಸ್ವಾಮೀಜಿಯವರ ಕ್ರಿಯಾಸಮಾಧಿಯ ಕಾರ್ಯಗಳು, ಅಂತ್ಯಸಂಸ್ಕಾರವನ್ನು ಮಂಗಳವಾರ ಸಂಜೆ ನಡೆಸಲು ನಿಶ್ಚಯಿಸಲಾಯಿಸಲಾಗಿದೆ. ಅಂತಿಮ ದರ್ಶನವನ್ನು ಶಾಂತಿಯುತವಾಗಿ ನಡೆಸುವ…
ತುಮಕೂರು: ಸಿದ್ಧಗಂಗಾ ಶ್ರೀಗಳು ವೆಂಟಿಲೇಟರ್ ಇಲ್ಲದೆ ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ. ಎಂದಿನಂತೆ ಸಾರ್ವಜನಿಕರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ. ಈ ಕುರಿತು ವಿಜಯ ಕರ್ನಾಟಕ ಪ್ರತ್ಯಕ್ಷವಾಗಿ ಪರಿಶೀಲಿಸಿದ್ದು, ಶ್ರೀಗಳು ಸಹಜವಾಗಿ ಉಸಿರಾಟ ನಡೆಸುತ್ತಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಎಂದಿನಂತೆ ಕಿಟಕಿ ಮೂಲಕ ಭಕ್ತರಿಗೆ ದರ್ಶನ ನೀಡುತ್ತಿದ್ದಾರೆ. ಶ್ರೀಗಳ ದರ್ಶನ ಮಾಡಿದ ಭಕ್ತರು, “ಶ್ರೀಗಳು ಚೆನ್ನಾಗಿದ್ದಾರೆ. ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಹಬ್ಬುತ್ತಿದ್ದಾರೆ”, ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದರ್ಶನಕ್ಕೆ ತೊಂದರೆ ಇಲ್ಲ: ಸಿದ್ಧಗಂಗಾ ಶ್ರೀಗಳ ಸಾರ್ವಜನಿಕ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಆದರೂ ನಡೆದಾಡುವ ದೇವರು ಸಿದ್ಧಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ: ಕಾಫಿ ಕುಡಿದು ತಾಯಿ ಮತ್ತು ಮಗಳು ಮೃತಪಟ್ಟಿದ್ದು, ಇಬ್ಬರು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ಅಕ್ಕುಲಮ್ಮ (70) ಮತ್ತು ನರಸಮ್ಮ (50) ಕಾಫಿ ಕುಡಿದು ಮೃತಪಟ್ಟಿದ್ದಾರೆ. ನರಸಮ್ಮನ ಮೊಮ್ಮಕ್ಕಳಾದ ಅರವಿಂದ್ (7) ಮತ್ತು ಆರತಿ (5) ಅಸ್ವಸ್ಥರಾಗಿದ್ದು ಅವರನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಗ್ರಾಮದ ಅಂಗಡಿಯೊಂದರಿಂದ ಕಾಫಿಪುಡಿ ತಂದಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ ಕಾಫಿ ಸೇವಿಸಿದ ನಂತರ ನಾಲ್ವರೂ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಅಕ್ಕುಲಮ್ಮ ಮತ್ತು ನರಸಮ್ಮ ಮೃತಪಟ್ಟಿದ್ದಾರೆ. ಕಾಫಿಯಲ್ಲಿ ವಿಷ ಬೆರತಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.











