Author: News Desk Benkiyabale

 ತುಮಕೂರು:       ಐತಿಹಾಸಿಕ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಡಿ.15ಮತ್ತು16ರಂದು ನಡೆಯಲಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯ ಗೂಳೂರು ಶಿವಕುಮಾರ್ ತಿಳಿಸಿದ್ದಾರೆ.       ನರಕ ಚರ್ತುದರ್ಶಿಯಂದು ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡಿದ್ದು, ಸಕಲ ಧಾರ್ಮಿಕ ವಿಧಿವಿಧಾನಗಳ ಮೂಲಕ ಡಿಸೆಂಬರ್ 15ರಂದು ಮಹಾಗಣಪತಿಯ ಉತ್ಸವ ಹಾಗೂ 16ರಂದು ಗೂಳೂರು ಕೆರೆಯಲ್ಲಿ ವಿಸರ್ಜನಾ ಮಹೋತ್ಸವ ನಡೆಯಲಿದೆ       ಡಿ.15ರಂದು ರಾತ್ರಿ 8ಗಂಟೆಗೆ ಗ್ರಾಮದ 18 ಕೋಮಿನ ಜನರು ಒಗ್ಗೂಡಿ ನಿರ್ಮಿಸಿರುವ ಸರ್ವಾಲಂಕೃತ ವಾಹನದಲ್ಲಿ ಗಣಪತಿ ಮೂರ್ತಿಯನ್ನು ಸ್ಥಾಪಿಸಲಾಗುವುದು ನಂತರ ಇಡೀರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾದಸ್ವರ, ಕರಡಿಮಜಲು, ನಾಸಿಕ್ ಡೋಲ್, ನಂದಿಕೋಲು, ಕೀಲು ಕುದುರೆ, ಬೊಂಬೆಕುಣಿತ, ವೀರಭದ್ರನ ಕುಣಿತ, ಡೊಳ್ಳುಕುಣಿತ, ಪೂಜಾಕುಣಿತ, ಸೋಮನ ಕುಣಿತದಂತಹ ಜನಪದ ಕಲಾತಂಡಗಳ ಜೊತೆಗೆ ಬಾಣಬಿರುಸು, ಸಿಡಿಮದ್ದಿನ ಸದ್ದಿನೊಂದಿಗೆ ಮೆರವಣಿಗೆ ನಡೆಸಲಾಗುವುದು.       ಮೆರವಣಿಗೆ…

Read More

ಚನ್ನೈ:       ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಿದ್ದಗಂಗಾ ಮಠ ಇವರ ಆರೋಗ್ಯ ವಿಚಾರಿಸಿದರು.       ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

Read More

ತುಮಕೂರು:       ನಗರದ 15ನೇ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಾಕುಮಾರ್ ಅವರ ಅಧ್ಯಕ್ಷತೆ ಯಲ್ಲಿ ಇಂದು ಪಾಲಿಕೆಯ ಅಧಿಕಾರಿಗಳು ಮತ್ತು ನಾಗರಿಕರ ಜನಸ್ಪಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.        ಪಾಲಿಕೆಯ ಪರವಾಗಿ ಆರೋಗ್ಯಾಧಿಕಾರಿ ಡಾ.ನಾಗೇಶ್,ಇಂಜಿನಿಯರ್‍ಗಳಾದ ಸಂದೀಪ್, ಮಧುಸೂಧನ್, ಪರಿಸರ ವಿಭಾಗದ ಕೃಷ್ಣಮೂರ್ತಿ, ಕಂದಾಯ ವಿಭಾಗದ ರುದ್ರಮೂರ್ತಿ, ಬೀದಿ ದೀಪ, ಕಸ ನಿರ್ವಹಣೆ ವಿಭಾಗಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರೆ,ಜೈನ ಸಮಾಜದ ಸುರೇಶ್, ಧನಿಯಕುಮಾರ್,ಬೆಸ್ಟೆಕ್ ರಾಮರಾಜು,ವಿನೋದ್,ಬಾಲಚಂದ್ರ, ಸುಮಾರು ಮೂವತ್ತು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೊದಲಿಗೆ ಮಾತನಾಡಿದ ಪಾಲಿಕೆಯ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್,ನಾವು ಚುನಾವಣೆ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಹಲವು ನಾಗರಿಕರು ತಮ್ಮ ಬಡಾವಣೆಯ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದಿದ್ದರು. ಅವರುಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಕುಡಿಯುವ ನೀರು ಮತ್ತು ಕಸ ವಿಲೇವಾರಿಯನ್ನು ಹೊರತುಪಡಿಸಿ, ಉಳಿದಂತೆ ಬೇರೆ ಸಮಸ್ಯೆಗಳು ಬಗೆಹರಿದಿಲ್ಲ.ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳು ಮತ್ತು ಜನಸಾಮಾನ್ಯರನ್ನು ಮುಖಾಮುಖಿಯಾಗಿಸಿ,ಅವರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುವ ನಿಟ್ಟಿನಲ್ಲಿ…

Read More

  ತುಮಕೂರು:       ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ತುರುವೇಕೆರೆ ತಾಲೂಕಿನ ಸಿ.ವಿ.ಮಹಾಲಿಂಗಪ್ಪ ಅವರು ಆಯ್ಕೆಯಾಗಿದ್ದಾರೆ. ಜಿಲ್ಲೆಯ 10 ತಾಲೂಕುಗಳಿಂದ ತಲಾ ಒಬ್ಬರಂತೆ 10 ಜನ ನಿರ್ದೇಶಕರು ಹಾಗೂ 4 ಜನ ಅಧಿಕಾರಿಗಳನ್ನು ಒಳಗೊಂಡ 14 ಜನ ಮತದಾರರನ್ನು ಹೊಂದಿದ್ದು,9 ಮತಗಳನ್ನು ಪಡೆದ ಪಡೆದ ಸಿ.ವಿ.ಮಹಾಲಿಂಗಪ್ಪ ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಡಿ.ಕೃಷ್ಣಕುಮಾರ್ 5 ಮತಗಳನ್ನು ಪಡೆದರು.       ಇಂದು ಮಧ್ಯಾಹ್ನ 12ಕ್ಕೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತುರುವೇಕೆರೆ ಕ್ಷೇತ್ರದ ಸಿ.ವಿ.ಮಹಾಲಿಂಗಯ್ಯ ಮತ್ತು ಕುಣಿಗಲ್ ಕ್ಷೇತ್ರದ ಡಿ.ಕೃಷ್ಣಮೂರ್ತಿ ಅವರುಗಳು ಅಧ್ಯಕ್ಷಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ವಾಪಸ್ಸು ಪಡೆಯಲು ನಿಗಧಿಪಡಿಸಿದ್ದ ಕಾಲಾವಕಾಶದಲ್ಲಿ ಇಬ್ಬರಲ್ಲಿ ಯಾರು ತಮ್ಮ ನಾಮಪತ್ರ ಹಿಂಪಡೆಯದ ಕಾರಣ ಚುನಾವಣೆ ನಡೆಸಲಾಯಿತು.       10 ತಾಲೂಕುಗಳ ಚುನಾಯಿತ ನಿರ್ದೇಶಕರಲ್ಲದೆ,ಸಹಕಾರ ಇಲಾಖೆಯ ಜಂಟಿ ಉಪನಿಬಂಧಕರು, ಕೆ.ಎಂ.ಎಫ್. ಪ್ರತಿನಿಧಿ, ಪಶುಸಂಗೋಪನಾ ಇಲಾಖೆಯ ಸಹಕಾರ ಇಲಾಖೆಯ ಉಪನಿರ್ದೆಶಕರು ಹಾಗೂ ಸರಕಾರದ ನಾಮನಿರ್ದೇಶಿತ ನಿರ್ದೇಶಕ ಅಬ್ದುಲ್ ರಜಾಕ್ ಸೇರಿದಂತೆ…

Read More

 ತುಮಕೂರು:       ಗ್ರಾಮೀಣ ಪ್ರದೇಶದ ಪ್ರಯಾಣಿಕರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಲ್ಲೂರು ಗ್ರಾಮದಿಂದ ತುಮಕೂರು ನಗರಕ್ಕೆ ಕಡಬ, ನಿಟ್ಟೂರು, ಗುಬ್ಬಿ ಮಾರ್ಗವಾಗಿ ಗ್ರಾಮೀಣ ಸಾರಿಗೆ ಮಾರ್ಗಕ್ಕೆ ಚಾಲನೆ ನೀಡಲಾಯಿತು.       ಹೊಸ ಮಾರ್ಗದ ಬಸ್ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಂಸ್ಥೆಯ ವಿಭಾಗೀಯ ತಾಂತ್ರಿಕ ಶಿಲ್ಪಿ ಕೆ.ಜೆ.ಬಸವರಾಜು ಈ ಮಾರ್ಗದಲ್ಲಿ ಬಸ್‍ಬೇಕೆಂಬ ಇಲ್ಲಿನ ಜನರ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದರು.       ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆಗನುಣವಾಗಿ ಹೆಚ್ಚಿನ ಟ್ರಿಪ್‍ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಈ ಭಾಗದ ಪ್ರಯಾಣಿಕರ ಮತ್ತು ವಿದ್ಯಾರ್ಥಿಗಳ ಬೇಡಿಕೆಯಂತೆ ಮುಂದಿನ ದಿನಗಳಲ್ಲಿ ಕಲ್ಲೂರಿನ ಅಕ್ಕಪಕ್ಕದ ಹಳ್ಳಿಗಳಿಗೂ ಬಸ್ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದರು.       ಈ ಕಾರ್ಯಕ್ರಮದಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿಗಳಾದ ಬಿ.ಮಂಜುನಾಥ್, ಮಹೇಶ್ ಮತ್ತು ಜಿಲ್ಲಾ ಪಂಚಾಯತಿ ಸದಸ್ಯ ನಾಗರಾಜ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Read More

ಕಲಬುರಗಿ:        ಇಲ್ಲಿನ ಶಾಲೆ, ಕಾಲೇಜುಗಳಆವರಣದಲ್ಲಿ ಎಗ್ಗಿಲ್ಲದೆ ಹುಕ್ಕಾ ಮಾರಾಟ ನಡೆಯುತ್ತಿದ್ದು, ವಿದ್ಯಾರ್ಥಿಗಳು ಹುಕ್ಕಾ ಚಟಕ್ಕೆ ದಾಸರಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.       ಶಹಬಾದ್​ನ ನಿವಾಸಿ ರಜ್ವಾನ್​ ಎಂಬಾತ ಆರನೇ ತರಗತಿ ಮಕ್ಕಳಿಗೆ 1 ಸಾವಿರ ರೂ.ದಿಂದ 1,200 ರೂ.ವರೆಗೆ ಹಣ ತೆಗೆದುಕೊಂಡು ಹುಕ್ಕಾ ಮಾರಾಟ ಮಾಡಿ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದು ದಂಧೆ ಬಯಲಾಗಿದೆ. ಶಹಬಾದ್​ನ ಖಾಸಗಿ ಶಾಲೆ ಹಾಗೂ ಕಾಲೇಜಿನಲ್ಲಿ ವಿದ್ಯಾರ್ಥಿಗಳುಬಿಂದಾಸ್​ ಆಗಿ ಹುಕ್ಕಾ ಸೇದುತ್ತಿದ್ದಾರೆ. ಮಕ್ಕಳ ಈ ಚಟ ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳ್ಳತನದಲ್ಲಿ ತೊಡಗಿದ್ದ ಮಕ್ಕಳು:       ತಮ್ಮ ಮನೆಯಲ್ಲಿ ಹಣ ಕಳವು ಆಗುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪಾಲಕರು ಮಗನನ್ನು ಹಿಂಬಾಲಿಸಿದಾಗ ಹುಕ್ಕಾ ತೆಗೆದುಕೊಂಡು ಹಣ ನೀಡುತ್ತಿದ್ದುದನ್ನು ಕಂಡು ಕಂಗಾಲಾಗಿದ್ದಾರೆ. ಕೂಡಲೇ ರಿಜ್ವಾನ್​ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಕ್ಕಳಿಗೆ ಹಣ ಕದಿಯುವ ಉಪಾಯವನ್ನೂ ಆತನೇ ಹೇಳಿಕೊಟ್ಟಿದ್ದ ಎನ್ನಲಾಗಿದೆ

Read More

ಬೆಂಗಳೂರು:       ಪ್ರಾಥಮಿಕ ಶಾಲಾ ಮಕ್ಕಳಿಗೆ ನೀಡುವಂತೆ ಅಂಗನವಾಡಿ ಮಕ್ಕಳಿಗೂ ಶಾಲಾ ಸಮವಸ್ತ್ರ ನೀಡುವ ಯೋಜನೆಗೆ ಮುಂದಿನ ಆಯವ್ಯಯದಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ ತಿಳಿಸಿದರು.       ಗುರುವಾರ ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ವೀಣಾ ಅಚ್ಚಯ್ಯ ಪ್ರಶ್ನೆಗೆ ಉತ್ತರಿಸಿದ ಅವರು, ಅಂಗನವಾಡಿ ಮಕ್ಕಳಿಗೂ ಶಾಲಾ ಸಮವಸ್ತ್ರ ನೀಡುವ ಯೋಜನೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಮುಂದಿನ ಆಯವ್ಯಯದಲ್ಲಿ ಚಾಲನೆ ನೀಡಲಾಗುವುದು. ಮಾತೃಪೂರ್ಣ ಯೋಜನೆಯಡಿ 7 ತಿಂಗಳ ಗರ್ಭಿಣಿ ಮಹಿಳೆ ಅಂಗನವಾಡಿಗೆ ಬರಲು ಕಷ್ಟವಾಗುವುದರಿಂದ ಕಿಟ್ ಅನ್ನು ಮನೆಗೆ ತಲುಪಿಸಲಾಗುವುದು ಎಂದರು.       ಈ ವೇಳೆ ವೀಣಾ ಅಚ್ಚಯ್ಯ ಮಾತನಾಡಿ, ಉದ್ಯೋಗ ಯೋಜನೆಯಡಿ 40ಕ್ಕೂ ಹೆಚ್ಚು ಮಹಿಳೆಯರು ಟೈಲರಿಂಗ್ ತರಬೇತಿ ಪಡೆದಿದ್ದು, ಅವರಿಗೆ ಶಾಲಾ ಮಕ್ಕಳ ಸಮವಸ್ತ್ರ ಹೊಲಿಯುವ ಸೌಲಭ್ಯ ಕಲ್ಪಿಸಬೇಕು. ಕೊಡಗಿನಲ್ಲಿ ಅತಿವೃಷ್ಟಿಯಿಂದ 6 ಗ್ರಾಮ ಪಂಚಾಯತ್‍ಗಳು, 35 ಗ್ರಾಮಗಳು ನೆರೆಗೆ ತುತ್ತಾಗಿದ್ದು,…

Read More

ಬೆಳಗಾವಿ:       2006ರ ನಂತರ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಯೋಜನೆ ಪರಾಮರ್ಶೆ ಕುರಿತಂತೆ ಹಿರಿಯ ಐಎಎಸ್ ಅಧಿಕಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ. ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೌಕರರಿಗೆ ಭರವಸೆ ನೀಡಿದ್ದಾರೆ.       ಸುವರ್ಣಸೌಧದಲ್ಲಿ ಇಂದು ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ಉಪ ನಾಯಕ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಬರ ನಿರ್ವಹಣೆ ಚರ್ಚೆಯ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ, ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ, ನಿವೃತ್ತಿ ಹೊಂದಿದ ನೌಕರರಿಗೆ ಸೌಲಭ್ಯಗಳನ್ನು ಮುಂದುವರೆಸಬೇಕೆಂದು ಸಲಹೆ ಮಾಡಿದರು.       ಮುಖ್ಯಮಂತ್ರಿ ಕುಮಾರಸ್ವಾಮಿ 2004ರಲ್ಲಿ ಅಂದಿನ ಕೇಂದ್ರ ಸರ್ಕಾರ ಜಾರಿಗೆ ತಂದು ನೌಕರರಿಗೆ ಪಿಂಚಣಿ ರಹಿತ ವೇತನ ನೀಡುವ ಯೋಜನೆ ಜಾರಿಗೆ ತಂದಿತ್ತು. ಅದನ್ನು 2006ರಿಂದ ರಾಜ್ಯದಲ್ಲಿಯೂ ಜಾರಿ ಮಾಡಲಾಗಿತ್ತು ಎಂದು ಮಾಹಿತಿ ನೀಡಿ,…

Read More

ಬೆಂಗಳೂರು:       2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣಾ ಮಂಡಳಿ ಗುರುವಾರ ಬಿಡುಗಡೆ ಮಾಡಿದೆ. ಪರೀಕ್ಷೆಯು 2019ರ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿವೆ. ದಿನಾಂಕ ವಿಷಯ ಸಮಯ 21-3-2019 ಗುರುವಾರ ಪ್ರಥಮ ಭಾಷೆಕನ್ನಡ ತೆಲುಗು ಹಿಂದಿ ಮರಾಠಿ ತಮಿಳು ಉರ್ದು ಇಂಗ್ಲಿಷ್ ಸಂಸ್ಕೃತ ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30 23-3-2019 ಶನಿವಾರ 1)ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್2)ಎಂಜಿನಿಯರಿಂಗ್-2 ಎಂಜಿನಿಯರಿಂಗ್ ಗ್ರಾಫಿಕ್ಸ್-2 3)ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಎಂಜಿನಿಯರಿಂಗ್ 4)ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ 5)ಅರ್ಥಶಾಸ್ತ್ರ ಬೆ.9.30ರಿಂದ 12.452ರಿಂದ05.15 ಬೆ.9.30ರಿಂದ 12.45 ಬೆ.9.30ರಿಂದ 12.45 ಬೆ.9.30ರಿಂದ 12.30 25-3-2019 ಸೋಮವಾರ ಗಣಿತ, ಸಮಾಜ ಶಾಸ್ತ್ರ, ಬೆ.9.30ರಿಂದ 12.30 27-3-2019 ಬುಧವಾರ ದ್ವಿತೀಯ ಭಾಷೆಇಂಗ್ಲಿಷ್, ಕನ್ನಡ ಬೆ.9.30ರಿಂದ 12 29-3-2019 ಶುಕ್ರವಾರ ಸಮಾಜ ವಿಜ್ಞಾನ ಬೆ.9.30ರಿಂದ 12.30 2-4-2019 ಮಂಗಳವಾರ ವಿಜ್ಞಾನ,ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದುಸ್ತಾನಿ ಸಂಗೀತ ಬೆ.9.30ರಿಂದ 12.30ಬೆ.9.30ರಿಂದ…

Read More

 ತುಮಕೂರು:       ಕಾರ್ಮಿಕ ಕಾನೂನುಗಳನ್ನು ಗಾಳಿಗೆ ತೂರಿ ಯಾವುದೇ ನೋಟಿಸ್ ನೀಡದೆ ಅಮಾನತುಗೊಳಿಸುವ ಮೂಲಕ ನೌಕರ ಆತ್ಮಹತ್ಯೆಗೆ ಯತ್ನಿಸಲು ಕಾರಣವಾದ ಬಳ್ಳಾರಿ ಜಿಲ್ಲೆಯ ತುಂಗಭದ್ರ ಪವರ್ ಪ್ರಾಜೆಕ್ಟ್ ಲಿಮಿಟೆಡ್ ಕಂಪೆನಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ‌       ಕಾರ್ಖಾನೆಯ ಈ ಧೋರಣೆಯಿಂದಾಗಿ ಮನನೊಂದು ಅಮಾನತುಗೊಂಡಿರುವ ನೌಕರ ಹೂವಿನ ಹಡಗಲಿಯ ಸಂತೋಷ್ ಕುಮಾರ್ ಆತ್ಮಹತ್ಯೆ ಯತ್ನಿಸಿದ್ದು, ಸದ್ಯ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ಜ್ಞಾನ ಪ್ರಕಾಶ್, ಸಂತೋಷ್‌ಕುಮಾರ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿ, ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಬಗ್ಗೆ ದೂರು ದಾಖಲಿಸಿಕೊಂಡು ಕಾನೂನಾತ್ಮಕವಾಗಿ ಬಡ ನೌಕರನಿಗೆ ನ್ಯಾಯ ಒದಗಿಸಬಕು. ಅಲ್ಲದೇ ಅದೇ ಕಾರ್ಖಾನೆಯಲ್ಲಿ ಇವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.    …

Read More