ತುಮಕೂರು: ಕರ್ನಾಟಕ ಸರ್ಕಾರ 2 ಸದನಗಳ ಒಪ್ಪಿಗೆ ಪಡೆದು ರೂಪಿಸಿರುವ ಮೀಸಲಾತಿ ಆಧಾರದಲ್ಲಿ ಬಡ್ತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪಗಂಡಗಳ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜೇಷ್ಠತೆ ವಿಸ್ತರಿಸುವ ಕಾಯ್ದೆ 2017 ಜಾರಿಗೆ ತರಬೇಕೆಂದು ಒತ್ತಾಯಿಸಿ ಇಂದು ಸರ್ಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ದೇವರಾಜಅರಸು ಅವರ ಕಾಲದಲ್ಲಿ ಜಾರಿಗೆ ತಂದಿದ್ದ ಬಡ್ತಿ ಮೀಸಲಾತಿ ಕಾಯ್ದೆ ವಿರುದ್ಧ ಬಿ.ಕೆ.ಪವಿತ್ರ ಪ್ರಕರಣ ತೀರ್ಪಿನಿಂದ ಉಂಟಾದ ನಷ್ಟವನ್ನು ತಡೆಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಅಂದಿನ ಸರ್ಕಾರ ಸದರಿ ಕಾಯ್ದೆಯನ್ನು ಎಲ್ಲ ಇಲಾಖೆಗಳ ಮಾಹಿತಿ ಪಡೆದು ರೂಪಿಸಿತ್ತು. ಸದರಿ ಕಾಯ್ದೆ ಕರ್ನಾಟಕ ಸರ್ಕಾರದ ಮೇಲ್ಮನೆ ಹಾಗೂ ಕೆಳಮನೆಯಲ್ಲಿ ವಿಸ್ಕøತವಾಗಿ ಚರ್ಚೆಯಾಗಿ ಅನುಮೋದನೆಗೊಂಡು, ರಾಷ್ಟ್ರಪತಿಗಳ ಅಂಕಿತ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಗೊಂಡು ತಿಂಗಳುಗಳೇ ಕಳೆಯುತ್ತಿದ್ದರು, ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರ ಇದುವರೆಗೆ ಕಾಯ್ದೆಯನ್ನು ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದ್ದು,…
Author: News Desk Benkiyabale
ತುಮಕೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಸಿದ್ದಗಂಗಾ ಮಠಾಧ್ಯಕ್ಷರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ರಾತ್ರಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಆದರೆ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಿಗ್ಗೆಯಿಂದ ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ಕಳೆದ ರಾತ್ರಿ ಶ್ರೀಗಳ ಹೃದಯಬಡಿತದಲ್ಲಿ ಕೊಂಚ ಏರುಪೇರಾಗಿತ್ತು. ಅಲ್ಲದೆ ಶೀತ, ಕೆಮ್ಮು, ಜ್ವರ ಸಹ ಕಾಣಿಸಿಕೊಂಡಿತ್ತು. ಇದರಿಂದ ಶ್ರೀಕ್ಷೇತ್ರ ಸೇರಿದಂತೆ ಕಲ್ಪತರುನಾಡಿನಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ವಿಚಾರ ತಿಳಿಯುತ್ತಿದ್ದಂತೆ ಶ್ರೀಗಳ ಆಪ್ತ ವೈದ್ಯರಾದ ಡಾ. ಪರಮೇಶ್ ನೇತೃತ್ವದ ತಂಡ ಮಠಕ್ಕೆ ತೆರಳಿ ಶ್ರೀಗಳಿಗೆ ಚಿಕಿತ್ಸೆ ನೀಡಿದರು. ನಂತರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ. ರವೀಂದ್ರ ನೇತೃತ್ವದ ವೈದ್ಯರ ತಂಡವೂ ಶ್ರೀಕ್ಷೇತ್ರಕ್ಕೆ ಆಗಮಿಸಿ ತಡರಾತ್ರಿವರೆವಿಗೂ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು. ವೈದ್ಯರ…
ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ದಳದ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಯಾಣಿಕರ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು. ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ರಕ್ಷಣಾ ದಳದ ಉಪನಿರೀಕ್ಷಕ ಕುಬೇರಪ್ಪ ಅವರು, ರೈಲ್ವೆ ರಕ್ಷಣಾ ದಳದ ಮುಖ್ಯ ಸುರಕ್ಷಾ ಆಯುಕ್ತರ ಆದೇಶದ ಮೇರೆಗೆ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ರೈಲ್ವೆ ಪ್ರಯಾಣಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ವಿಶೇಷವಾಗಿ ಮಹಿಳೆಯರು, ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ತಾವು ಪ್ರಯಾಣಿಸುವ ಸ್ಥಳದಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ ತುರ್ತಾಗಿ ಆರ್‌ಪಿಎಫ್ ಟಾಲ್ ಫ್ರೀ ನಂ. 182ಗೆ ಕರೆ ಮಾಡುವಂತೆ ಅವರು ಮನವಿ ಮಾಡಿದರು. ರೈಲಿನಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಅಪರಿಚಿತರಿಂದ ಯಾವುದೇ ರೀತಿಯ ತಿಂಡಿ, ತಿನಿಸುಗಳನ್ನು ಪಡೆಯಬಾರದು. ಒಂದು ವೇಳೆ ಅಂತಹವರಿಂದ ಏನನ್ನಾದರೂ…
ತುಮಕೂರು: ಪ್ರಪಂಚದ ಮುಂದುವರೆದ ದೇಶಗಳು ಡಾ.ಬಿ.ಆರ್.ಅಂಬೇಡ್ಕರ್ ರನ್ನು ಸ್ಮರಿಸುತ್ತವೆ ಎಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್ ತಿಳಿಸಿದರು. ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿ, ಶೋಷಿತ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ ಡಾ.ಅಂಬೇಡ್ಕರ್ ಅವರು, ಕಡುಬಡತನದ ನಡುವೆಯೇ ಭಾರತಕ್ಕೆ ಪ್ರಪಂಚದಲ್ಲಿಯೇ ಶ್ರೇಷ್ಠ ಸಮುದಾಯವನ್ನು ನೀಡಿದವರು. ದೇಶದ ಮೂಲ ನಿವಾಸಿಗಳಾದ ದಲಿತರ ಮೇಲಿನ ಅಸ್ಪಶ್ಯತೆ ವಿರುದ್ಧ ಹೋರಾಡಿದ ಫಲವಾಗಿಯೇ ಸಂವಿಧಾನವನ್ನು ಸಮಾನತೆಯ ತಳಹದಿಯ ಮೇಲೆ ರೂಪಿಸಿದ್ದಾರೆ ಎಂದರು. ಅತ್ಯಂತ ಬಲಿಷ್ಠ ಸಂವಿಧಾನವನ್ನು ರೂಪಿಸಿದ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಲೇ ಇಲ್ಲ ಎನ್ನುವಂತಹ ಸುಳ್ಳು ವದಂತಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದ್ದು, ಯುವ ಸಮುದಾಯ ಅಂಬೇಡ್ಕರ್ ಅವರ ಬಗ್ಗೆ ಅರಿಯುವ ಅವಶ್ಯಕತೆ ಇದೆ. ಭಾರತದ ಸಂವಿಧಾನದ ಆತ್ಮ ಅಂಬೇಡ್ಕರ್ ಎನ್ನುವುದನ್ನು ಯಾರು ಅಳಿಸಲು ಸಾಧ್ಯವಿಲ್ಲ ಎಂದು…
ತಿಪಟೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕೃಷಿ ಚಟುವಟಿಕೆಗಳು ಭಾರತದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ವಿನಾಶದ ಹಾದಿ ತಲುಪುತ್ತಿರುವುದು ವಿಷಾಧನೀಯ ಎಂದು ಶಾಸಕ ಬಿ.ಸಿ.ನಾಗೇಶ್ ತಿಳಿಸಿದರು. ನಗರದ ಸಹಾಯಕ ಕೃಷಿ ಇಲಾಖೆಯ ಕಛೇರಿಯ ಆವರಣದಲ್ಲಿ ಕೃಷಿ ಇಲಾಖೆ ಹಾಗೂ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆಯ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ದುರಾಸೆಗೆ ಕೀಟ ನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದ್ದು ಮಣ್ಣಿನ ಸಾರಾಂಶ ಕಡಿಮೆಯಾಗಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಹಿಂದೆ ಭೂಮಿಯಲ್ಲಿ ಬೇಕಾದ ಬೆಳೆಯನ್ನು ಬೆಳೆಯುವ ಕಾಲವಿತ್ತು. ಆದರೆ ಇಂದು ರಾಸಾಯನಿಕ ಗೊಬ್ಬರಗಳ ಸಿಂಪಡಣೆಯಿಂದ ಬೆಳೆದ ಬೆಳೆಗಳನ್ನು ತಿನ್ನುವಂತಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ಗೊಬ್ಬರಗಳಿಂದ ಕೊಟ್ಯಾಂತರ ಕ್ರಿಮಿ, ಕೀಟಗಳು ನಶಿಸಿ ಹೋಗುತ್ತಿರುವುದರಿಂದ ಇಂದಿನ ದಿನಮಾನಗಳಲ್ಲಿ ಮಣ್ಣಿನ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ಎಂ.ಸುರೇಶ್…
ತಿಪಟೂರು : ಸಾರ್ವಜನಿಕರ ಸಂಪರ್ಕ ರಸ್ತೆಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ ಘಟನೆ ಕಸಬಾ ಹೋಬಳಿ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಬುಧವಾರ ರಾತ್ರಿ ನಡೆಯಿತು. ಈ ವೇಳೆ ಮಾತನಾಡಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅನುದಾನದಲ್ಲಿ ಬಿದರೆಗುಡಿಯಿಂದ ಮತ್ತಿಹಳ್ಳಿ ಹಾಗೂ ಮಾಣಿಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜೆಲ್ಲಿ-ಕಲ್ಲು, ಮಣ್ಣನ್ನು ಹಾಕಿ ರಸ್ತೆ ನಿರ್ಮಾಣ ಮಾಡಲಾಗಿತ್ತು. ಸುಮಾರು ವರ್ಷಗಳಿಂದ ಇದೇ ರಸ್ತೆಯಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರು. ಆದರೆ ಏಕಾಏಕಿ ರಸ್ತೆಗೆ ಕೆಲವರು ಮುಳ್ಳು ಹಾಕಿ, ಗುಂಡಿಗಳನ್ನು ತೆಗೆದು ರಸ್ತೆಯಲ್ಲಿ ಓಡಾಡಲು ತೊಂದರೆ ಮಾಡುತ್ತಿದ್ದಾರೆಂದು ಆರೋಪಿಸಿದರು. ಈ ಬಗ್ಗೆ ಗ್ರಾಮಪಂಚಾಯಿತಿಗೆ ದೂರು ಸಲ್ಲಿಸಲಾಗಿದ್ದು, ಅಲ್ಲದೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಆಕ್ರಮ ಎಸೆಗಿರುವ ವ್ಯಕ್ತಿಗೆ ನೊಟೀಸ್ ಜಾರಿ ಮಾಡಿದರೂ ಅದನ್ನು ತಿರಸ್ಕರಿಸಿದÀ ಕಾರಣ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ದಂಡಾಧಿಕಾರಿ ಡಾ.…
ರಾಮನಗರ: ಸಿಎಂ ಕುಮಾರಸ್ವಾಮಿ ಅವರು ಆಯ್ಕೆಯಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಘಟಕದ ಪಕ್ಷದ ಕಚೇರಿಯಲ್ಲಿ ಮಾರಾಮಾರಿ ನಡೆದಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷ, ಒಕ್ಕಲಿಗರ ಸಂಘದ ಸದಸ್ಯ ಜಯಮುತ್ತು ಮತ್ತು ಬಮೂಲ್ನ ಮಾಜಿ ನಿರ್ದೇಶಕ ಲಿಂಗೇಶ್ಕುಮಾರ್ ಅವರ ನಡುವಿನ ಸಿಟ್ಟು ಘಟನೆಗೆ ಕಾರಣ ಎನ್ನಲಾಗಿದೆ. ಜಯಮುತ್ತು ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅವರ ಬೆಂಬಲಿಗರು ಬುಧವಾರ ಮೊದಲಿಗೆ ಆಕ್ರೋಶ ವ್ಯಕ್ತಪಡಿಸಿದರು. ನಂತರ ಎರಡೂ ಬಣಗಳ ಮುಖಂಡರ ನಡುವೆ ಹೊಡೆದಾಟ ಸಂಭವಿಸಿದೆ. ಪಕ್ಷದ ಕಚೇರಿಯ ಪೀಟೋಪಕರಣಗಳನ್ನು ಪುಡಿ ಮಾಡಿ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದರು. ಈ ವೇಳೆ ಜಯಮುತ್ತು ಸೇರಿದಂತೆ ಹಲವು ಮುಖಂಡರಿಗೆ ಗಾಯಗಳಾಗಿವೆ. ಇನ್ನೂ ಘಟನೆ ನಡೆದ ಸ್ಥಳಕ್ಕೆ ಚನ್ನಪಟ್ಟಣದ ಪುರ ಪೋಲೀಸರು ಭೇಟಿ ನೀಡಿದ್ದಾರೆ.
ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬಳಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ವೇಗವಾಗಿ ಹೋಗುತ್ತಿದ್ದ ಮಾರುತಿ ಓಮ್ನಿವ್ಯಾನ್ ಮುಂದೆ ಹೋಗುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ದೇವನಹಳ್ಳಿಯ ಬಳಿ ಮಧ್ಯರಾತ್ರಿ ಘಟನೆ ನಡೆದಿದೆ . ಆರ್ . ಟಿ ನಗರದ ಚೋಳನಾಯ್ಕನಪಾಳ್ಯದ ಸುಂದರ್ ( 25), ವೆಂಕಟೇಶ್ (28) ಸತೀಶ್ (24), ವಿಕಾಸ್ ( 23) ಮೃತಪಟ್ಟವರು.ಗಾಯಗೊಂಡಿರುವ ವ್ಯಾನ್ ಚಾಲಕ ಹೇಮಂತ್, ಅಜೀತ್, ರವಿ,ಭರತ್, ಅವಿನಾಶ್, ಮಧು ಹಾಗೂ ಮನೋಜ್ ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಹೂವಿನ ಅಲಂಕಾರ ಮಾಡುವ ಕೆಲಸ ಮಾಡುತ್ತಿದ್ದ ಮೃತ ನಾಲ್ವರು ಗಾಯಗೊಂಡಿರುವಹೇಮಂತ್ , ಅಜೀತ್ , ರವಿ , ಭರತ್ , ಅವಿನಾಶ್ ಸೇರಿ 9ಮಂದಿ ಮಾರುತಿ ವ್ಯಾನ್ ನಲ್ಲಿನಂದಿಬೆಟ್ಟದ ಕಡೆಗೆ ರಾತ್ರಿ 12.30ರ ವೇಳೆ ದೇವನಹಳ್ಳಿಯ ಕನ್ನಮಂಗಲಪಾಳ್ಯ ಗೇಟ್ ರಸ್ತೆಯಲ್ಲಿ ಅತಿ ವೇಗವಾಗಿ ಹೋಗುತ್ತಾ ಮುಂದೆ ಚಿಕ್ಕಬಳ್ಳಾಪುರದ ಕಡೆ ಹೋಗುತ್ತಿದ್ದ ಇನ್ನೋವಾಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ . ಢಿಕ್ಕಿಯ ರಭಸಕ್ಕೆ ಸುಂದರ್ , ವೆಂಕಟೇಶ್ , ಸತೀಶ್ , ವಿಕಾಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇತರ ಐವರು ಗಾಯಗೊಂಡಿದ್ದಾರೆ.
ಭೂಮಿಗೆ ಸಂಬಂಧಿಸಿದ ವ್ಯಾಜ್ಯಗಳ ಕುರಿತು ಪೊಲೀಸರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರು ಸುತ್ತೋಲೆಯೊಂದನ್ನ ಹೊರಡಿಸಿದ್ದಾರೆ. ಭೂ ದಾಖಲೆಗಳು ಯಾರ ಹೆಸರಿನಲ್ಲಿವೆಯೋ ಆತನಿಗೇ ರಕ್ಷಣೆ ನೀಡಬೇಕು ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿಯೇ ಪರಿಹಾರವಾಗಬೇಕು ಎಂದು ಡಿಜಿ ಐಜಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜನರಲ್ ಪವರ್ ಆಫ್ ಅಟಾರ್ನಿ ಮೂಲಕ ಕೃಷಿ ಅಥವಾ ಕೃಷಿಯೇತರ ಭೂಮಿಯ ಸ್ವಾಧೀನ ಪಡೆಯಲು ಬಯಸುವ ವ್ಯಕ್ತಿಗೆ ರಕ್ಷಣೆ ನೀಡುವಂತಿಲ್ಲ ಎಂದೂ ಅವರು ತಾಕೀತು ಮಾಡಿದ್ದಾರೆ. ಒಂದು ವೇಳೆ ಪ್ರಕರಣಗಳು ನ್ಯಾಯಾಲಯದ ಕಟೆಕಟೆಗೆ ಹೋದರೆ ಕಾನೂನು ಸಲಹೆಗಾರರ ಸಲಹೆ ಪಡೆದು ನ್ಯಾಯಾಲಯಕ್ಕೆ ಸೂಕ್ತ ಕಾರಣಗಳೊಂದಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದ್ದಾರೆ. ಡಿಜಿಐಜಿ ನೀಲಮಣಿ ರಾಜು ಸುತ್ತೋಲೆ: ಜಮೀನು ಮಾರಾಟದ ಒಪ್ಪಂದ ಪತ್ರ, ಅಡ್ವಾನ್ಸ್ ಹಣ ನೀಡಿರುವ ದಾಖಲೆಗಳ ಆಧಾರದ ಮೇಲೆ ಒಂದು ವೇಳೆ ನಿಜವಾದ ಮಾಲೀಕನನ್ನ ಹೊರ ಹಾಕಿದರೆ…
ತಿಪಟೂರು: ಹಳೇ ದ್ವೇಷದ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ. 22 ವರ್ಷದ ಯೋಗೀಶ್ ಎಂಬುವವನೇ ಚಾಕುವಿನಿಂದ ಇರಿತಕ್ಕೆ ಒಳಗಾದ ಯುವಕ. ಈಡೇನಹಳ್ಳಿ ಗ್ರಾಮದ ಯೋಗೀಶ್ ಹಾಗೂ ಸೂಗುರಿನ ರಾಜೇಶ್ ಎಂಬುವನಿಗೂ ಹಲವು ದಿನಗಳಿಂದ ವೈಶಮ್ಯ ಇತ್ತು, ಹಲವು ಬಾರಿ ಹಲ್ಲೆ ಮಾಡೋಕೆ ರಾಜೇಶ್ ಪ್ರಯತ್ನಿಸಿದ್ದನಂತೆ.. ಇಂದು ಯೋಗೀಶ್ ಒಂಟಿಯಾಗಿದ್ದುದ್ದನ್ನು ಗಮನಿಸಿದ ರಾಜೇಶ್ ಏಕಾಏಕಿ ಚಾಕುವಿನಿಂದ ಪಕ್ಕೆಗೆ ಇರಿದು ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಯೋಗೀಶ್ ನನ್ನು ತಿಪಟೂರು ತಾಲೂಕು ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ನೊಣವಿನಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಜೇಶ್ ಬಂಧಿಸಲು ಬಲೆ ಬೀಸಿದ್ದಾರೆ.











