ಬೆಂಗಳೂರು: ಸುನಾಮಿ ಕಿಟ್ಟಿಯ ಕಿರಿಕ್‌ಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಕಿಡ್ನಾಪ್ ಆಯ್ತು, ಒರೆಯಾನ್ ಮಾಲ್ ಗಲಾಟೆಯಾಯ್ತು, ಇದೀಗ ಮನೆ ಬಾಡಿಗೆ ವಿಚಾರಕ್ಕೆ ಮನೆ ಮಾಲೀಕನಿಗೆ ಕಿಟ್ಟಿ ಆವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 4 ತಿಂಗಳ ಮನೆ ಬಾಡಿಗೆ ಕೇಳಿದಕ್ಕೆೆ, ಕಿಟ್ಟಿ ಮನೆ ಮಾಲೀಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದ್ದು, ಮನೆ ಮಾಲೀಕ ಶಿವಣ್ಣ ಎಂಬುವವರು ಕಿಟ್ಟಿ ವಿರುದ್ಧ ಮಹಾಲಕ್ಷೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ₹88 ಸಾವಿರ ಬಾಡಿಗೆ ಕೊಡದೇ ಕಿಟ್ಟಿ ಸತಾಯಿಸುತ್ತಿದ್ದಾರೆ ಎಂದು ಮನೆ ಮಾಲೀಕ ಶಿವಣ್ಣ ಆರೋಪಿಸಿದ್ದಾರೆ. ಶಂಕರಮಠದ ಮನೆಯೊಂದರಲ್ಲಿ ಬಾಡಿಗೆಗೆ ವಾಸವಿರೋ ಸುನಾಮಿ ಕಿಟ್ಟಿ, ತಿಂಗಳಿಗೆ ₹22 ಸಾವಿರ ಬಾಡಿಗೆ ನೀಡಬೇಕು. ಆದರೆ 4 ತಿಂಗಳಿಂದ ಮನೆ ಬಾಡಿಗೆ ಕಟ್ಟದೇ ಮಾಲೀಕ ಶಿವಣ್ಣನನ್ನ ಸತಾಯಿಸುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಸುನಾಮಿ ಕಿಟ್ಟಿಯನ್ನ ಮಹಾಲಕ್ಷೀ ಲೇಔಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Author: News Desk Benkiyabale
ಬೆಂಗಳೂರು: ಎಚ್1ಎನ್1 ಮಹಾಮಾರಿಗೆ ಶನಿವಾರ ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 12 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಮಾರಣಾಂತಿಕ ಕಾಯಿಲೆಯಿಂದ ಜೀವ ಕಳೆದುಕೊಂಡವರ ಸಂಖ್ಯೆ ರಾಜ್ಯದಲ್ಲಿ 31ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆತಂಕ ಮತ್ತಷ್ಟು ತೀವ್ರಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಒಂದೇ ದಿನ ಅತಿ ಹೆಚ್ಚು ಎಚ್1ಎನ್1 ಸಾವು ವರದಿಯಾಗಿರುವುದು ಇದೇ ಮೊದಲು. ಅ.12ರಂದು ಒಂದೇ ದಿನ ಐದು ಮಂದಿ ಬಲಿಯಾಗಿದ್ದರು. ಈ ಮೂಲಕ ಮೃತರ ಸಂಖ್ಯೆ 13ಕ್ಕೆ ಹೆಚ್ಚಳವಾಗಿತ್ತು. ಬಳಿಕ ನವೆಂಬರ್ 16ರ ವೇಳೆಗೆ 19ಕ್ಕೆ ಏರಿಕೆಯಾಗಿದ್ದ ಮೃತರ ಸಂಖ್ಯೆ ನ.17ರಂದು ಒಂದೇ ದಿನ 31ಕ್ಕೆ ತಲುಪಿದೆ. ಈ ಮೂಲಕ ಅ.17ರಂದು ಒಂದೇ ದಿನ 12 ಮಂದಿ ಮೃತಪಟ್ಟಂತಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಎಚ್1ಎನ್1 ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಶನಿವಾರ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಎಲ್ಲಾ ಜಿಲ್ಲಾ ವೈದ್ಯಾಧಿಕಾರಿಗಳು ಹಾಗೂ ವಿಶೇಷ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ…
ಕಲಬರುಗಿ : ನಗರದ ಕುಖ್ಯಾತ ರೌಡಿಶೀಟರ್ 7 ಸ್ಟಾರ್ ಪ್ರದೀಪ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದಲ್ಲಿ ನಡೆದಿದೆ. ಪ್ರಕರಣವೊಂದರ ಸ್ಥಳ ಪರಿಶೀಲನೆಗೆ ಪೊಲೀಸರು ಕರೆದುಕೊಂಡು ಹೋದಾಗ ಆತ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ. ಆಗ ಆತ್ಮ ರಕ್ಷಣೆಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಫೈರಿಂಗ್ ನಡೆಸಿದ್ದಾಗಿ ಎಸ್.ಪಿ ಶಶಿಕುಮಾರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಅಶೋಕ ನಗರದ ಸಿಪಿಐ ಪ್ರದೀಪ್ ಕಾಲಿಗೆ ಗುಂಡಿಟ್ಟಿದ್ದಾರೆ. ಪ್ರದೀಪ್ 19 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ, ಈತನ ಮೇಲೆ ಅಪಹರಣ, ಕೊಲೆ ಯತ್ನ, ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಇತ್ಯಾದಿ ಪ್ರಕರಣಗಳು ದಾಖಲಾಗಿದ್ದವು. ಗಾಯಾಳು ರೌಡಿಶೀಟರ್ನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲಬುರಗಿ ಹೊರವಲಯದ ಗ್ರೀನ್ ಸಿಟಿ ಬಳಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು…
ಕುಣಿಗಲ್: ತಾಲ್ಲೂಕಿನ ಗ್ರಾಮ ಪಂಚಾಯಿತಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ತಾಪಂ ಮುಂಭಾಗ ಪ್ರತಿಭಟನೆ ನಡೆಸಿದರು . ತಾಲ್ಲೂಕಿನ ಗ್ರಾಮ ಪಂಚಾಯಿತಿ ನೌಕರರು ತಾಪಂ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷ ನಾಗೇಶ್ ಮತ್ತು ಶ್ರೀನಿವಾಸ್ ನೇತೃತ್ವದಲ್ಲಿ ಜಮಾವಣೆಗೊಂಡ ಗ್ರಾಪಂ ನೌಕರರು ಸುಮಾರು ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ನೌಕರರಿಗೆ ಅನ್ಯಾಯವಾಗಿದೆ ಸರ್ಕಾರದ ಆದೇಶದಂತೆ ಸಂಬಳ, ನಿವೃತ್ತಿ ಮರಣೋತ್ತರ ಉಪಧನ, ಹಾಗೂ ಬಿಲ್ ಕಲೆಕ್ಟರ್, ಮತ್ತು ಡಾಟಾ ಎಂಟ್ರಿ ಆಪರೇಟರ್ಗಳ ಜೇಷ್ಠತಾ ಪಟ್ಟಿಯನ್ನು ಜಿಪಂಗೆ ರವಾನಿಸಬೇಕು,ಬಾಕಿ ಉಳಿದುಕೊಂಡಿರುವ ವೇತನವನ್ನು ನೀಡಲು ಪಿಡಿಒಗಳಿಗೆ ಆದೇಶ ನೀಡಬೇಕು, ಖಾಲಿ ಇರುವ ಬಿಲ್ ಕಲೆಕ್ಟರ್ ಹುದ್ದೆಗೆ ನೌಕರರನ್ನು ಕೂಡಲೇ ಭರ್ತಿ ಮಾಡಬೇಕು ,ಸರ್ಕಾರದ ಆದೇಶದಂತೆ ನೌಕರರ ವಿವರಗಳನ್ನು ಪಂಚತಂತ್ರದಲ್ಲಿ ಅಳವಡಿಸಲು ಪಿಡಿಒ ಹಾಗೂ ಇಒ ರವರು ಕ್ರಮ ವಹಿಸಬೇಕು,ಇನ್ನು ಹತ್ತು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಸರ್ಕಾರ ನೌಕರರಿಗೆ ಅನ್ಯಾಯ ಮಾಡದೇ ಕ್ರಮ ವಹಿಸಬೇಕೆಂದು…
ಮಧುಗಿರಿ : ತಾಲೂಕಿನಲ್ಲಿ ಮಳೆ ಬೀಳದೆ ಬೇಸಿಗೆಕಾಲ ಬೀಕರವಾಗಿದ್ದು ಅಂತರ್ಜಲ ಸಂಪೂರ್ಣ ಕುಸಿದಿರುವುದರಿಂದ ಜನ, ಜಾನುವಾರುಗಳಿಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಪುರಸಭೆ ಹಾಗೂ ನಿರಾವರಿ ಇಲಾಖೆಯ ಅಧಿಕಾರಿಗಳು ಒಂದು ಮಾಸ್ಟರ್ ಪ್ಲಾನ್ ತಯಾರಿಸಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಎಂ.ವಿ.ವೀರಭದ್ರಯ್ಯ ಸಲಹೆ ನೀಡಿದರು. ಶನಿವಾರ ಮಧುಗಿರಿ ಪುರಸಭೆಯಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಪೌರ ಕಾಮಿರ್ರಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಬಾರಿ ಸಕಾಲದಲ್ಲಿ ಮಳೆ ಬಾರದೆ ಜಲ ಮೂಲಗಳಾದ ಕೆರೆ, ಕಟ್ಟೆಗಳು ಬತ್ತಿದ್ದು, ಕೊಳವೆ ಬಾವಿಗಳಲ್ಲಿ ನೀರು ಸಿಗದ ಕಾರಣ ಮತ್ತು ಈಗ ಸಿಗುವ ನೀರನ್ನೇ ಸಮರ್ಪಕವಾಗಿ ವಿತರಿಸುವ ಮೂಲಕ ಕುಡಿವ ನೀರಿಗೆ ಜನ, ಜಾನುವಾರುಗಳಿಗೆ ತೊಂದರೆ ಆಗದಂತೆ ಸದಾ ಕಾಲ ಪುರಸಭೆ ಮತ್ತು ನಿರಾವರಿ ಇಲಾಖೆಯ ಅಧಿಕಾರಿಗಳು ಕಾಳಾಜಿ…
ತುಮಕೂರು : ಜಿಲ್ಲೆಯ ರೈತರು “ಬೆಳೆ ದರ್ಶಕ್” ಮೊಬೈಲ್ ಆ್ಯಪ್ ಮೂಲಕ ಮುಂಗಾರು ಋತುವಿನಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2018ರ ಮುಂಗಾರು ಋತುವಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಸ್ಥಳೀಯ ವಿದ್ಯಾವಂತ ಯುವಕರನ್ನು ತೊಡಗಿಸಿಕೊಂಡು, ಮೊಬೈಲ್ ತಂತ್ರಾಂಶದ ಮೂಲಕ ಈಗಾಗÀಲೇ ಸಂಗ್ರಹಿಸಲಾಗಿದೆ. ಸಂಗ್ರಹಿತ ಮಾಹಿತಿಯನ್ನು ತಾಲ್ಲೂಕು ಆಡಳಿತವು ಈಗಾಗಲೇ ಪರಿಶೀಲಿಸುತ್ತಿದೆ. ಸರ್ಕಾರವೂ ಸಹ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವ ಸಾಧ್ಯತೆಯ ಬಗ್ಗೆ ಪರಿಶೀಲಿಸುತ್ತಿದ್ದು, ಸರ್ಕಾರವು ದಾಖಲಿಸಿರುವ ಈ ಮಾಹಿತಿಯನ್ನು ರೈತರು ಪರಿಶೀಲಿಸಿಕೊಳ್ಳುವುದು ಅತಿ ಮಹತ್ವದ್ದಾಗಿರುತ್ತದೆ. ಈ ಹಿನ್ನಲೆಯಲ್ಲಿ ಆಯಾ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿ ಕಛೇರಿಗಳಲ್ಲಿ ಗ್ರಾಮವಾರು ಪ್ರತಿಯೊಬ್ಬ ರೈತರ ಜಮೀನಿನ ಮಾಹಿತಿಯನ್ನು ದಾಖಲಿಸಿಡಲಾಗಿದೆ.…
ತುಮಕೂರು : ಇಂದು ನಗರದ ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃಧ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಜವಳಿ ಮತ್ತು ಕೈಮಗ್ಗ ಇಲಾಖೆಯಿಂದ ನಡೆಯುತ್ತಿರುವ ಉಚಿತ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳಿಗಾಗಿ ತುಮಕೂರಿನ ಭೀಮಸಂದ್ರದಲ್ಲಿ ಇರುವ ಷಾಹಿ ಗಾರ್ಮೆಂಟ್ಸ್ ನ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮವವನ್ನು ಏರ್ಪಡಿಸಲಾಗಿತ್ತು. ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಷಾಹಿ ಗಾರ್ಮೆಂಟ್ಸ್‍ನ ಮಾನವ ಸಂಪನ್ಮೂಲ ಅಧಿಕಾರಿಯಾದ ಲೋಕೇಶ್ ರವರು ಮಾತನಾಡುತ್ತಾ. ಒಬ್ಬ ಹೆಣ್ಣು ಮಗಳಿಂದ ಪ್ರಾರಂಭವಾದ ಪುಟ್ಟ ಕಂಪನಿ 21 ಘಟಕಗಳನ್ನು ಹೊಂದಿದ್ದು ಇಂದು ಒಂದೂವರೆ ಲಕ್ಷ ಹೆಣ್ಣುಮಕ್ಕಳಿಗೆ ಉದ್ಯೋಗ ಒದಗಿಸಿದೆ, ಕೇವಲ ಸಹಿ ಮಾಡಲು ಬರುವ ಕ್ರಿಯಾಶೀಲ ಹೆಣ್ಣು ಮಕ್ಕಳು ಇಪ್ಪತ್ತು ಸಾವಿರಕ್ಕಿಂತಲೂ ಹೆಚ್ಚು ವೇತನವನ್ನು ಪಡೆದು ತಮ್ಮ ಕುಟುಂಬ ನಡೆಸುತ್ತಿದ್ದಾರೆ. ಅಂತಹ ವ್ಯಾಪಕ ಅವಕಾಶವನ್ನು ಗಾರ್ಮೆಂಟ್ಸ್ ವಲಯ ಸೃಷ್ಠಿಸಿದೆ. ನೀವು ಇಲ್ಲಿ ತರಬೇತಿ ಮುಗಿಸಿದ ನಂತರ ನಮ್ಮಲ್ಲಿ ಬಂದು ಉದ್ಯೋಗ ಮಾಡಬಹುದು ಎಂದರು. ಸಮರ್ಥ್ ಫೌಂಡೇಷನ್ನಿನ ಅಧ್ಯಕ್ಷರಾದ ಹೆಚ್.ಮಲ್ಲಿಕಾರ್ಜುನ್.ರವರು ಮಾತನಾಡುತ್ತಾ…
ಹುಳಿಯಾರು: ಭಾರತದ ಸನಾತನ ಸಂಸ್ಕೃತಿಯಲ್ಲಿ ಹೆಣ್ಣಿಗೆ ಹೆಚ್ಚು ಪ್ರಾಧ್ಯಾನ್ಯತೆ ಕೊಟ್ಟಿದ್ದು ಹೆಣ್ಣಿನಲ್ಲಿ ಸೃಷ್ಟಿಯ ಎಲ್ಲಾ ಗುಣಗಳು ಇರುತ್ತದೆ. ಆಕೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬ ನಿದರ್ಶನಗಳಿವೆ. ಸ್ತ್ರೀಯಲ್ಲಿ ಅಪಾರ ಶಕ್ತಿ, ಸಹನೆ, ಸಾಮಥ್ರ್ಯವಿರುವ ಕಾರಣ ಸ್ತ್ರೀರೂಪದಲ್ಲಿನ ಅಷ್ಟಲಕ್ಷ್ಮಿಯರನ್ನು ಪೂಜಿಸುತ್ತಾರೆಂದು ಹುಳಿಯಾರು ಪಿಎಸೈ ವಿಜಯ್ ಕುಮಾರ್ ನುಡಿದರು. ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಶುಭಸಂಕಲ್ಪ ದೀಪೋತ್ಸವ ಹಾಗೂ ಅಷ್ಟ ಚೈತನ್ಯ ಲಕ್ಷ್ಮಿಯರ ದಿವ್ಯ ದರ್ಶನ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಮನುಷ್ಯನಿಗೆ ಕೇವಲ ಹಣವಿದ್ದರೆ ಮಾತ್ರ ಸಾಲದು ಜೊತೆಗೆ ಮಾನಸಿಕ ಶಾಂತಿ, ಸಹನೆ ಎಂಬ ಸದ್ಗುಣಗಳ ಅವಶ್ಯಕತೆ ಇದೆ.ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಶಾಂತಿ ಪ್ರಶಾಂತತೆ ದೊರೆಯಲಿದ್ದು ಇದಕ್ಕಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ ಎಂದರು. ವರ್ತಕರಾದ ಪ್ರಭಾಕರ್ ರವರು ಮಾತನಾಡಿ ಜೀವನೋಪಾಯಕ್ಕಾಗಿ ಹಗಲಿರುಳು ಶ್ರಮಿಸಿ ಉದ್ಯೋಗದಲ್ಲಿ ತೊಡಗಿ ಸಂಪಾದಿಸಿದ…
ತುಮಕೂರು : ಕಳೆದ ವರ್ಷದಂತೆ ಈ ಬಾರಿಯೂ ನವೆಂಬರ್ 26ರಂದು ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಅರ್ಥಪೂರ್ಣ ಹಾಗೂ ಸಂತಸದಿಂದ ಆಚರಿಸಲು ತುಮಕೂರು ಜಿಲ್ಲೆಯಲ್ಲಿರುವ ಕುರುಬ ಸಮುದಾಯದ ಸಂಘ ಸಂಸ್ಥೆಗಳು-ಮುಖಂಡರ ಸಹಕಾರ ಅತಿ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಅಂದು ಕನಕದಾಸರ ಭಾವಚಿತ್ರದ ಮೆರವಣಿಗೆಯನ್ನು ಕಲಾ ತಂಡಗಳೊಂದಿಗೆ ಶಿರಾಗೇಟ್‍ನ ಬಳಿಯ ಕನಕ ವೃತ್ತದಲ್ಲಿರುವ ಕನಕದಾಸರ ಪ್ರತಿಮೆಗೆ ಪೂಜೆ ಸಲ್ಲಿಸಿದ ನಂತರ ಚಾಲನೆ ನೀಡಲಾಗುತ್ತದೆ. ಮೆರವಣಿಗೆಯು ತುಮಕೂರು ನಗರದ ವಿವಿಧ ರಸ್ತೆಗಳಲ್ಲಿ ತೆರಳಿ ಸಮಾರಂಭ ನಡೆಯುವ ಸ್ಥಳದಲ್ಲಿ ಕೊನೆಗೊಳ್ಳಲಿದೆ ಎಂದು ಅವರು ಹೇಳಿದರು. ಕನಕದಾಸರ ಬದುಕು ಮತ್ತು ಸಂದೇಶದ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಹಾಗೂ ಜನರಿಗೆ ಅರಿವು…
ಮೈಸೂರು: ಅರ್ಥಿಕ ಪರಿಸ್ಥಿತಿ ಹಿಂದುಳಿದ ಏರಿಯಾಗಳಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡುತ್ತೇನೆ. ಹಾಗೆಯೇ ಸರ್ಕಾರದಿಂದ ಮಹಿಳೆಯರಿಗೆ ಬರುವ ಎಲ್ಲಾ ಸೌಲಭ್ಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೂತನ ಮೇಯರ್ ಪುಷ್ಪಲತಾ ಹೇಳಿದರು. ಉಪ ಮೇಯರ್ ಆಗಿ ಅನುಭವ ಪಡೆದಿದ್ದೆ. ಈಗ ಮೇಯರ್ ಆಗಿರುವುದು ತುಂಬಾ ಖುಷಿ ತಂದಿದೆ. ಈ ಹಿಂದೆ ಕೆಲಸ ಮಾಡಿದ ರೀತಿಯಲ್ಲೇ ಕೆಲಸ ಮಾಡಿ ಪ್ರಾಮಾಣಿಕತೆಯಿಂದ ಇರುತ್ತೇನೆ. ನನ್ನ ಮೊದಲ ಆದ್ಯತೆ ಸ್ವಚ್ಛತೆ ಕಡೆಗೆ. ಸ್ವಚ್ಛತೆಯಲ್ಲಿ ಮೈಸೂರಿಗೆ ಮತ್ತೆ ಮೊದಲ ಸ್ಥಾನ ತರುವುದು ನನ್ನ ಗುರಿ ಎಂದರು. ಮಾಧ್ಯಮಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರ ಹಠ ಈ ಚುನಾವಣೆಯಲ್ಲಿ ಗೆದ್ದಿದೆ. ಅದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ. ಮೈಸೂರಿನಲ್ಲಿ ಕಾಂಗ್ರೆಸ್ಗೆ ಅಧಿಕಾರ ಇರಲಿಲ್ಲ. ಆದರೆ ಮೈತ್ರಿ ಸರ್ಕಾರದಿಂದ ಈಗ ಮೇಯರ್ ಸ್ಥಾನ ಸಿಕ್ಕಿದೆ. ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ. ಶಾಸಕರಾದ ವಾಸು, ತನ್ವೀರ್…










