ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ಕೋಲಹಲ ಎಬ್ಬಿಸಿದ್ದ ಶೃತಿ ಹರಿಹರನ್ಗೆ ಇದೀಗ ಸಂಕಷ್ಟ ಎದುರಾಗಿದ್ದು, ಶ್ರುತಿ ಹರಿಹರನ್ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಮ್ಮ ಇಮೇಜ್ ಗೆ ಡ್ಯಾಮೇಜ್ ಆಗಿರುವ ಕಾರಣ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಹಾಗೂ ವಕೀಲರು ಲಿಖಿತ ದೂರು ನೀಡಿದ್ದಾರೆ. ಸೈಬರ್ ಕ್ರೈಂ ಪೊಲೀಸರು ಐಟಿ ಆ್ಯಕ್ಟ್ 200 ಅಡಿಯಲ್ಲಿ ಶ್ರುತಿ ಹರಿಹರನ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇಬ್ಬರ ನಡುವೆ ಸಂಧಾನ ನಡೆಸಲು ಚಲನಚಿತ್ರ ರಂಗದ ಪ್ರಮುಖರು ಪ್ರಯತ್ನಿಸುತ್ತಿರುವ ಮಧ್ಯೆಯೇ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
Trending
- ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
- ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
- ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
- ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
- ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
- ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
- ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ


