ತುಮಕೂರು: ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬAಧಿಸಿದ ಕಚೇರಿಯನ್ನು ಸಂಪರ್ಕಿಸಬೇಕೆAದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಫಲಾನುಭವಿಗಳಿಗೆ ಕಿವಿ ಮಾತು ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು. ನಿಗಮದಿಂದ ೨೦೨೪-೨೫ನೇ ಸಾಲಿಗಾಗಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸಾಲ / ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು. ಸಾಲ ಸೌಲಭ್ಯ ಕೋರಿ ಒಟ್ಟು ೮೧೦ ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ ವಿವಿಧ ಕಾರಣಗಳಿಂದ ೪೨ ಅರ್ಜಿಗಳು ತಿರಸ್ಕೃತಗೊಂಡಿವೆ. ಉಳಿದ ೭೬೮ ಫಲಾನುಭವಿಗಳು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಿದರು. ಯೋಜನೆಗೆ ಅರ್ಹತೆ ಪಡೆದ ಫಲಾನುಭವಿಗಳು ಜೂನ್…
Author: News Desk Benkiyabale
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರಸ್ತುತ ನೂತನವಾಗಿ ಮೆನು ಸಿದ್ಧಪಡಿಸಲಾಗಿದ್ದು, ಈ ಮೆನುವಿನಂತೆ ಬೆಳಗಿನ ಉಪಹಾರದಲ್ಲಿ ರೈಸ್‌ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ-ಸಾಂಬಾರ್-ಚಟ್ನಿ; ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ, ಸಾಂಬಾರ್, ಮೊಸರನ್ನ, ಚಪಾತಿ ಹಾಗೂ ರಾತ್ರಿ ಊಟಕ್ಕೆ ರೈಸ್‌ಬಾತ್ ಮತ್ತು ಮೊಸರನ್ನ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ೪ ಇಂದಿರಾ ಕ್ಯಾಂಟೀನ್‌ಗಳೊAದಿಗೆ ಹೊಸದಾಗಿ ತುಮಕೂರು ಜಿಲ್ಲಾಸ್ಪತ್ರೆ ಮತ್ತು ಎಪಿಎಂಸಿ ಮಾರುಕಟ್ಟೆ ಬಳಿ ೨ ಇಂದಿರಾ ಕ್ಯಾಂಟೀನ್‌ಗಳನ್ನು ಕಾರ್ಯಾರಂಭಗೊಳಿಸಲಾಗಿದೆ. ಪ್ರತಿ ದಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ರೋಗಿಗಳು ಹಾಗೂ ಮಾರುಕಟ್ಟೆಗೆ ಆಗಮಿಸುವ ರೈತರು, ಗ್ರಾಹಕರು ಹಾಗೂ ವರ್ತಕರ ಅನುಕೂಲಕ್ಕಾಗಿ ಹೊಸದಾಗಿ ೨ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗಿದ್ದು, ಮೇ ೧೭ರಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಉದ್ಘಾಟಿಸಿದ್ದಾರೆ. ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಂದಾಗಿ ಬಡಜನರು ಅವರ ಸಮತೋಲಿತ ಹಾಗೂ ಪೌಷ್ಠಿಕ ಆಹಾರದಿಂದ…
ತುಮಕೂರು: ಜಿಲ್ಲೆಯ ಬರೊಬ್ಬರಿ ೭೪ ರೌಡಿಶೀಟರ್ ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸನ್ನಡತೆ ಆಧಾರದ ಮೇಲೆ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ. ತುಮಕೂರು ಎಸ್ ಪಿ ಕಚೇರಿ ಬಳಿಯಿರುವ ಡಿಆರ್ ಗ್ರೌಂಡ್ ನಲ್ಲಿ ರೌಡಿಶೀಟರ್ ಸಭೆ ಕರೆದು, ೭೪ ರೌಡಿಶೀಟರ್ ಗಳನ್ನ ರೌಡಿಶೀಟರ್ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ತುಮಕೂರು ಜಿಲ್ಲೆಯಲ್ಲಿ ಒಟ್ಟು ೯೦೧ ಜನ ರೌಡಿಶೀಟರ್ ಗಳಿದ್ದಾರೆ. ಅವರನ್ನ ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್ ಗಳು ಕಳೆದ ೧೦ ವರ್ಷಗಳಿಂದ ಯಾವುದೇ ಕೇಸ್ ಗಳಲ್ಲಿ ಭಾಗಿಯಾಗಿರಲಿಲ್ಲ. ಜೊತೆಗೆ ಅವರ ಮೇಲಿದ್ದ ಕೇಸ್ ಗಳು ಕೋರ್ಟ್ ನಲ್ಲಿ ಖುಲಾಸೆಯಾಗಿದ್ದು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದೇ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ರು. ಅಂತವರ ಬಗ್ಗೆ ರಿಪೊರ್ಟ್ ಪಡೆದು ಅವರ ಮೇಲಿದ್ದ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ ಎಂದು ತಿಳಿಸಿದರು. ಇವತ್ತು ಒಟ್ಟು ೭೪ ಜನ ರೌಡಿಶೀಟರ್ ಗಳನ್ನ ರೌಡಿ ಪಟ್ಟಿಯಿಂದ ಮುಕ್ತಾಯ ಮಾಡಲು ತೀರ್ಮಾನ…
ತುಮಕೂರು: ಜಿಲ್ಲೆಯಲ್ಲಿ ಕಾರ್ಖಾನೆ, ಗ್ಯಾರೇಜ್, ಅಂಗಡಿಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕರಿದ್ದಲ್ಲಿ ಪತ್ತೆ ಹಚ್ಚುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಿಕ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ೩೯೭ ತಪಾಸಣೆಗಳನ್ನು ಮಾತ್ರ ಕೈಗೊಂಡಿದ್ದು, ಕೇವಲ ೧೧ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಮುಂದಿನ ೧೦ ದಿನಗಳಲ್ಲಿ ಎಲ್ಲಾ ಕಾರ್ಮಿಕ ನಿರೀಕ್ಷ ಕರು ತಮ್ಮ ವ್ಯಾಪ್ತಿಯ ಇಟ್ಟಿಗೆ ಕಾರ್ಖಾನೆ, ಹೆಂಚಿನ ಕಾರ್ಖಾನೆ, ಮಾರಾಟ ಮಳಿಗೆ, ತೆಂಗಿನ ಕಾಯಿ ಸಗಟು ವ್ಯಾಪಾರ ಸ್ಥಳ, ಗ್ಯಾರೇಜ್, ಮತ್ತಿತರ ಸ್ಥಳಗಳಿ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಈ ಸ್ಥಳಗಳಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಿದರು. ಎಲ್ಲಾ ತಾಲ್ಲೂಕುಗಳಲ್ಲಿ ಶಿಕ್ಷಣ ಹಾಗೂ…
ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾದ್ಯ ಇಂತಹ ಸಮಾಜವನ್ನು ಕಟ್ಟುವ ವ್ಯಕ್ತಿಯನ್ನು ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿ ಮಾತ್ರಅದ್ದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚು ಇಂತಹ ಶಿಕ್ಷಣವನ್ನು ಕೇವಲ ಶೈಕ್ಷಣಿಕವಾಗಲ್ಲದೆ ಶೈಕ್ಷಣೇತರವಾದ ಶಿಸ್ತು, ಸಂಯಮ, ಏಕಾಗ್ರತೆ, ಸಂಸ್ಕಾರ, ಸಂಸ್ಕೃತಿಯನ್ನು ಅವರಲ್ಲಿ ಬೆಳೆಸುವ ಮೂಲಕ ಮುಂದೆ ಉತ್ತಮ ಪಲಿತಾಂಶವನ್ನು ನಿರೀಕ್ಷಿಸಬಹುದು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಸೋಮವಾರ ೨೦೨೫-೨೬ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ನಾನು ನಮ್ಮ ಕ್ಷೇತ್ರವನ್ನು ಶೈಕ್ಷಣಿಕವಾಗಿ ಅಭಿವೃದ್ದಿ ಮಾಡಬೇಕೆಂಬ ಉದ್ದೇಶದಿಂದ ಚುನಾವಣೆಯ ನಂತರ ಮೊದಲು ಶಿಕ್ಷಕರ ಸಭೆ ಕರೆದು ಪ್ರತಿ ಶಾಲೆಗೆ ಮೂಲಭೂತವಾಗಿ ಯಾವ ಕೆಲಸಗಳು ಅಗಬೇಕು ಹಾಗೂ ಶಿಕ್ಷಕರ ಸಮಸ್ಯೆ ಎನು ಎಂಬುದರ ಬಗ್ಗೆ ಚರ್ಚಿಸಿ ೫೪ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿದ್ದು ಅದಾದನಂತರ ನಮ್ಮ ತಾಲ್ಲೂಕಿಗೆ ಗಣಿಬಾದಿತ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ೫೩ಕೋಟಿ ಮಂಜೂರಾಗಿದ್ದು ಅದರ ಜೊತೆ ನಮ್ಮ…
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಂಚಾಘಟ್ಟ ಗ್ರಾಮದ ಮಜರೆ ಗೊಲ್ಲರಹಟ್ಟಿ ಗ್ರಾಮ ತಿಪಟೂರು ನಗರಕ್ಕೆ ಹೊಂದಿಕೊAಡAತೆ ಇದ್ದು, ಸುಮಾರು ೫೦ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುವ ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ನಮ್ಮ ಗ್ರಾಮಕ್ಕೆ ರಸ್ತೆ ಸೌಕರ್ಯ ಕಲ್ಪಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಿಪಟೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಕಾಡುಗೊಲ್ಲ ಸಮಾಜದ ಮುಖಂಡ ಪ್ರಕಾಶ್ ಯಾದವ್ ಮಾತನಾಡಿ, ಕಂಚಾಘಟ್ಟ ಗೊಲ್ಲರ ಹಟ್ಟಿಗೆ ಸೂಕ್ತ ರಸ್ತೆ ಸಂಪರ್ಕವಿಲ್ಲದೆ ಪರದಾಡುವಂತಾಗಿದೆ, ಮಹಿಳೆಯರು ಮಕ್ಕಳು ಪರದಾಡುವಂತಾಗಿದೆ. ಶಾಲಾ ಮಕ್ಕಳು ರಸ್ತೆ ಸಂಪರ್ಕವಿಲ್ಲದೆ, ಸುಮಾರು ಮೂರ್ನಾ ಲ್ಕು ಕಿಲೋ ಮೀಟರ್ ಸುತ್ತಿಕೊಂಡು ನಗ ರದ ಶಾಲಾ ಕಾಲೇಜಿಗೆ ತಲುಪಬೇಕು. ಅಂಗ ವಿಕಲರು ವಯೋವೃದ್ದರ ಸ್ಥಿತಿಯಂತೂ ಅಯೋ ಮಯವಾಗಿದೆ. ಹಟ್ಟಿಯಲ್ಲಿ ಯಾರಾದರೂ ಅನಾರೋಗ್ಯ ಪೀಡಿತರಾದರೆ ಅಂಬುಲೆನ್ಸ್ ಬರುವುದಕ್ಕೂ ರಸ್ತೆಇಲ್ಲ. ಸರ್ಕಾರ ಕೂಡಲೇ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಗ್ರಾಮದ ಮುಖಂಡ ಹೊನ್ನಪ್ಪ ಮಾತನಾಡಿ, ಕಂಚ್ಚಾಘಟ್ಟ ಗೊಲ್ಲರ ಹಟ್ಟಿ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ, ಹಿಂದೆ ಇದ್ದ…
ತುಮಕೂರು: ವಿದೇಶದಲ್ಲಿ ಕಲಿತಿದ್ದರು,ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮಗಾಂಧಿಯೊAದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟ ದೇಶ ಪ್ರೇಮ ಹೊಂದಿದ್ದ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಪ್ರಧಾನಿ ಪಂಡಿತ ಜವಹರಲಾಲ್ ನೆಹರು ಅವರು ೬೧ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಹುಟ್ಟಿ,ಸಾವಿರಾರು ಕೋಟಿ ರೂಗಳ ಆಸ್ತಿಯನ್ನು ಸರಕಾರಕ್ಕೆ ದಾನ ನೀಡಿ,ದೇಶವನ್ನು ಸುಭೀಕ್ಷವಾಗಿ ಕಟ್ಟಲು ಕಟ್ಟಿಬದ್ದರಾಗಿ ದುಡಿದವರು ಪಂಡಿತ ನೆಹರು.ಪಂಚವಾರ್ಷಿಕ ಯೋಜನೆಗಳು, ಅಲಿಪ್ತ ನೀತಿಯ ಮೂಲಕ ಭಾರತ ಎಲ್ಲ ರಂಗದಲ್ಲಿಯೂ ಉನ್ನತ್ತಿ ಸಾಧಿಸಲು ಕಾರಣರಾದರು.ನೆರೆಯ ರಾಷ್ಟçಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದರು. ಬಿಜೆಪಿ ಪಕ್ಷದವರು ನೆಹರು ಕುಟುಂಬವನ್ನು ಬದ್ದ ವೈರಿಗಳಂತೆ ಭಾವಿಸಿ,ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ.ತಮ್ಮ ಪತ್ನಿ ಕಮಲ ನೆಹರು ಅವರ ಅನಾರೋಗ್ಯದ ನಡುವೆಯೂ ದೇಶದ ಸ್ವಾತಂತ್ರಕ್ಕಾಗಿ ೯ ವರ್ಷಗಳ…
ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು. ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೦ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ೩೩೦ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ…
ತುಮಕೂರು: ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ ೮ ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು. ತುಮಕೂರು ನಗರದ ಬುಗುಡನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಸೋಮವಾರ ಭೇಟಿ ನೀಡಿದ ನಂತರ ನಗರದ ಎಂ.ಜಿ.ಸ್ಟೇಡಿಯAನಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಗೊರೂರು ಜಲಾಶಯದಿಂದ ಹೇಮಾವತಿ ನಾಲೆಗೆ ಮೇ ೨೩ರಂದು ನೀರು ಹರಿಯಬಿಟ್ಟಿದ್ದು, ಮೇ ೨೫ರ ರಾತ್ರಿ ಬುಗಡನಹಳ್ಳಿ ಕೆರೆಗೆ ನೀರು ತಲುಪಿದೆ ಎಂದು ತಿಳಿಸಿದ ಅವರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆAಬ ಉದ್ದೇಶದಿಂದ ಹಾಸನದಲ್ಲಿ ಇತ್ತೀಚೆಗೆ ಜರುಗಿದ ನೀರಾವರಿ ಸಮಿತಿ ನಿರ್ಣಯದಂತೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಮಕೂರಿಗೆ ಗೊರೂರು ಜಲಾಶಯದಿಂದ ನೀರು ಹರಿಸಲಾಗಿದೆ. ಮುಂದಿನ ೫೦ ದಿನಗಳಿಗೆ ಮಾತ್ರ ಪೂರೈಕೆ ಮಾಡುವಷ್ಟು ಕೆರೆಯಲ್ಲಿ ನೀರು ಲಭ್ಯವಿತ್ತು. ಮುಂದಾಲೋಚನೆಯಿAದ ಕೆರೆಗೆ ನೀರು ಹರಿಸಲಾಗಿದೆ ಎಂದು ತಿಳಿಸಿದರು. ಹೇಮಾವತಿ ನೀರನ್ನು ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿಸಿ ಶುದ್ಧೀಕರಿಸಿ ನಾಗರಿಕರಿಗೆ…
ತುಮಕೂರು: ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನಸ್ವಾಮಿಯ ಪುನ: ಪ್ರತಿಷ್ಠಾಪನಾ ಮಹೋತ್ಸವ ಶ್ರೀ ಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು. ವಿವಿಧ ಮಠಗಳ ಮಠಾಧೀಶರು, ಗಣ್ಯರು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಲ್ಲಿಕಾರ್ಜುನ ಸ್ವಾಮಿಗೆ ಪೂಜೆ ಸಲ್ಲಿಸಿದರು. ಇದರ ಅಂಗವಾಗಿ ಮಠದಲ್ಲಿ ಮೂರು ದಿನ ಕಾಲ ನಡೆದ ವಿವಿಧ ಧಾರ್ಮಿಕ, ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಿಲಾಗಿತ್ತು. ಮಠದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ವಸತಿ ನಿಲಯ ಮತ್ತು ದಾಸೋಹ ಭವನದ ಉದ್ಘಾಟನೆ ಮಾಡಲಾಯಿತು. ಧಾರ್ಮಿಕ ಮಹಾಸಭೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಭಾನುವಾರ ಬೆಳಿಗ್ಗೆ ಶುಭ ಬ್ರಾಹ್ಮೀ ಮುಹೂರ್ತದಲ್ಲಿ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಅಮೃತಾಸ್ತದಿಂದ ಮಲ್ಲಿಕಾರ್ಜುನಸ್ವಾಮಿ, ನಂದೀಶ್ವರ ಸ್ವಾಮಿ ವಿಗ್ರಹಗಳಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿತು. ನೇತ್ರೋನ್ಮೀಲನ ಮತ್ತು ಗೋಪುರ ಕಲಶಾರೋಹಣ, ಕುಂಭಾಭಿಷೇಕ, ನಂತರ ಮಲ್ಲಿಕಾರ್ಜುನ ಸ್ವಾಮಿಗೆ ಮಹಾರುದ್ರಾಭಿಷೇಕ, ಜಯಾದಿ ಹೋಮಗಳು, ನಂತರ ಮಹಾಪೂರ್ಣಾಹುತಿ, ರಾಜೋಪಚಾರಸಹಿತ ಮಹಾಮಂಗಳಾರತಿ ಹಮ್ಮಿಕೊಳ್ಳಲಾಗಿತ್ತು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ,…











