ಕೊರಟಗೆರೆ: ೨೦೧೮ರಿಂದ ೨೦೨೫ರವರೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಶಿವಗಂಗಾ ಚಿತ್ರಮಂದಿರದ ಮಾಲೀಕನಿಗೆ ಪ.ಪಂಚಾಯಿತಿ ಅಧಿಕಾರಿ ವರ್ಗ ಶುಕ್ರವಾರ ಬಿಗ್ ಶಾಕ್ ನೀಡಿದ್ದು ಚಿತ್ರಮಂದಿರ, ಕಲ್ಯಾಣಮಂಟಪ, ಹೋಟೆಲ್ ಜಪ್ತಿ ಮಾಡಿ ೩ದಿನದ ಒಳಗೆ ಕಂದಾಯ ಪಾವತಿ ಮಾಡುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕೊರಟಗೆರೆ ಪಟ್ಟಣ ಪಂಚಾಯಿತಿಯ ವಾರ್ಡ್ ನಂ.೧ರ ಗಂಗಾಧರಯ್ಯ ಬಿನ್ ಬಸೇಟಪ್ಪ ಖಾತೆ ನಂ.೩೭/೩೭ರ ಬಾಕಿ ಇರುವ ಆಸ್ತಿ ತೆರಿಗೆಯನ್ನು ೧೯೬೪ರ ಕಲಂ ಪುರಸಭಾ ಕಾಯ್ದೆ ಮತ್ತು ಸ್ವಯಂ ಘೋಷಣೆ ತೆರಿಗೆ ಪದ್ಧತಿಯಂತೆ ನಿಯಾಮನುಸಾರ ಪಾವತಿಸಬೇಕು. ಪ.ಪಂಚಾಯ್ತಿಯಿAದ ಈಗಾ ಗಲೇ ತೆರಿಗೆ ಪಾವತಿಸುವಂತೆ ೨೦೧೮ರಿಂದ ೨೦೨೨ರವರೆಗೆ ೬ಬಾರಿ ತಿಳುವಳಿಕೆ ನೋಟಿಸ್ ನೀಡಿದ್ದು ಅಂತಿಮವಾಗಿ ನೋಟಿಸ್ ರಿಜಿಸ್ಟರ್ ಮೂಲಕ ಕಳುಹಿಸಲಾಗಿತ್ತು. ತಿಳುವಳಿಕೆ ಪತ್ರ ಸ್ವೀಕರಿಸದೆ ತಿರಸ್ಕೃತ ಮಾಡಿದ ಕಾರಣ ಶಿವಗಂಗಾ ಚಿತ್ರಮಂದಿರಕ್ಕೆ ಮತ್ತು ಕಲ್ಯಾಣ ಮಂಟಪ, ಹೋಟೆಲ್ ಜಪ್ತಿ ಮಾಡಿ ಮಾಲೀಕನಿಗೆ ಪ.ಪಂಚಾಯಿತಿ ಅಧಿಕಾರಿಗಳು ಶುಕ್ರವಾರ ಬಿಗ್ ಶಾಕ್ ನೀಡಿದ್ದು, ಪಾವತಿಸಬೇಕಾಗಿರುವುದು ತಪ್ಪಿದಲ್ಲಿ ೧೪೩ರಂತೆ ಕ್ರಮ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಅಂತಿಮ…
Author: News Desk Benkiyabale
ತುಮಕೂರು: ಶರಣ ಶರಣೆಯರ ವಚನಗಳಲ್ಲಿ ಬದುಕಿಗೆ ಬೇಕಾದ ಆದರ್ಶ ಮೌಲ್ಯಗಳೇ ತುಂಬಿವೆ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳು, ಖ್ಯಾತ ಮಿಮಿಕ್ರಿ ಹಾಸ್ಯ ಕಲಾವಿದರಾದ ಈಶ್ವರಯ್ಯ ನವರು ನುಡಿದರು. ತುಮಕೂರು ಜಿಲ್ಲಾ, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಗ್ಲೋಬಲ್ ಪೀಸ್ ಸಂಯುಕ್ತವಾಗಿ “ತುಮಕುರು ಚಂದಯ್ಯ ಟಿ.ಎಸ್. ಭಾಗೀರಥಮ್ಮ’’ ದತ್ತಿ ಉಪನ್ಯಾಸ ನೀಡುತ್ತಿದ್ದರು. ೧೨ನೇ ಶತಮಾನ ಕನ್ನಡ ನಾಡಿನ ಸಾಹಿತ್ಯದ ಆಸ್ತಿ. ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ತುಂಬಿಕೊAಡಿದೆ. ಆಬಾಲ ವೃದ್ಧರಾಗಿ ಎಲ್ಲರೂ ಪಾಲಿಸಬೇಕಾದ ಮೌಲ್ಯಗಳು ದಾರಿದೀಪಗಳಾಗಿವೆ ಎಂದು ಶರಣ ಶರಣೆಯರ ವಚನಗಳನ್ನು ಪ್ರಾಸಂಗಿಕವಾಗಿ ಉದಾಹರಿಸುತ್ತಾ ಇಂದಿನ ಆ ಧುನಿಕ ಯುವಜನಾಂಗಕ್ಕೆ ವಚನಗಳ ಅಧ್ಯಯನ ಎಂದಿಗಿAತ ಇಂದು ಮುಖ್ಯ ಎಂದರು. ದೀಪ ಬೆಳಗಿಸಿ ದತ್ತಿ ಕಾರ್ಯಕ್ರಮ ಉದ್ಘಾಟನೆ ಮಾಡಿದ ನಿವೃತ್ತ ಇಂಜಿಯರಿAಗ್ ಪ್ರಾಧ್ಯಾಪಕರಾದ ಪಿ.ಎಂ.ಚAದ್ರಶೇಖರಯ್ಯ ನವರು ಮಾತನಾಡುತ್ತಾ ಶರಣರ ವಚನಗಳು ಕಾವ್ಯಗಳಲ್ಲ, ಪುರಾಣಗಳಲ್ಲ, ಕಾಲ ಕಳೆದು ರಂಜಿಸುವ ಸಾಹಿತ್ಯ ಪ್ರಕಾರಗಳಲ್ಲ. ವಚನಗಳಲ್ಲಿ ಜೀವನದ ಅನುಭವದ ಮೂಸೆಯಿಂದ ಹೊರ ಬಂದ…
ಚಿಕ್ಕನಾಯಕನಹಳ್ಳಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಅಧಿಕ ರಕ್ತದೊತ್ತಡದಿನಾರಣೆ ಆಚರಿಸಲಾಯಿತು. ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ನಡೆದಕಾರ್ಯಕ್ರಮದಲ್ಲಿ ಹೃದಯರೋಗ ತಜ್ಙ ಡಾ. ನಟರಾಜ್ ರವರು ರಕ್ತದೊತ್ತಡದ ತಪಾಸಣೆ, ಚಿಕಿತ್ಸೆ, ಸಮತೋಲನ ಆಹಾರದ ಕುರಿತು ಮಾಹಿತಿ ನೀಡಿ ದುಶ್ಚಟಗಳಿಂದ ದೂರವಿರಬೇಕೆಂದರು. ಹಿರಿಯ ತಜ್ಞವೈದ್ಯರಾದ ಚೇತನ್ ಮಾತನಾಡಿ, ರಕ್ತದೊತ್ತಡ ನಿಯಂತ್ರಣಿಸಲು ಆಹಾರ ಕ್ರಮದಲ್ಲಿ ಬದಲಾವಣೆ ಹಾಗೂ ದೈಹಿಕ ಹಾಗೂ ಮಾನಸಿಕವಾಗಿ ಶಾಂತಿ ಯಿಂದಿರಲು ಧ್ಯಾನ ಹಾಗೂ ಯೋಗಗಳು ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯಶವಂತ್ ರವರು ಗೃಹ ಆರೋಗ್ಯ ಹಾಗೂ ಎನ್‌ಸಿಡಿ ವಿಬಾಗದ ಚಟುವಟಿಕೆಗಳ ಮಾಹಿತಿ ನೀಡಿದರು. ಡಾ, ಕವಿತ ಮಾತನಾಡಿ, ಗರ್ಭಿಣಿಯರು ಆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಆರೋಗ್ಯ ತಪಾಸಣೆ ಹಾಗೂ ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಪ್ರ ಯೋಗಗಳನ್ನು ಮಾಡಬಾರದಾಗಿ ಎಚ್ಚರಿಸಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕೆ.ಜೆ. ಕೃಷ್ಣೇಗೌಡ ಹಾಗೂ ಜಾಕೀರ್‌ಹುಸೇನ್ ಮತ್ತು ಕೀರ್ತಿ ಮಾತ ನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವ ವೈದ್ಯರ ಸೇವೆ ಹಾಗೂ…
ಪಟ್ಟ ನಾಯಕನಹಳ್ಳಿ: ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಉದ್ದೇಶದಿಂದ ೫೦. ಕೋಟಿ ರೂಪಾಯಿ ವೆಚ್ಚ ದಲ್ಲಿ ಶಿರಾ ತಾಲೂಕಿನ ವಿವಿಧ ಭಾಗಗಳ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಜನ ಮೆಚ್ಚುವಂತಹ ಕಾಮಗಾರಿ ಮಾಡಿ ಪೂರೈಸಬೇಕು ಎಂದು ದೆಹಲಿ ವಿಶೇಷ ಪ್ರತಿನಿಧಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಶಿರಾ ತಾಲೂಕಿನ ಪಟ್ಟ ನಾಯಕನಹಳ್ಳಿ ಕ್ರಾಸ್ ನಿಂದ ಉದ್ದ ರಾಮನಹಳ್ಳಿ ವರೆಗೆ ೧. ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ದೂರ ದೃಷ್ಟಿ ಚಿಂತನೆಯೊAದಿಗೆ ಹೇಮಾವತಿ ನೀರು ಶಿರಾ ತಾಲೂಕಿಗೆ ಹರಿಸಿರುವ ಕಾರಣ ಅಂತರ್ಜಲ ಹೆಚ್ಚಾಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿದೆ. ಎತ್ತಿನ ಹೊಳೆ ಕಾಮಗಾರಿ ಕೂಡ ಶೀಘ್ರದಲ್ಲಿಯೇ ಮುಗಿ ಯಲಿದ್ದು, ಈ ಯೋಜನೆಯಿಂದ ಹಲವಾರು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಕ್ರಿಯಾಯೋಜನೆ ರೂಪುಗೊಂಡಿದೆ ಎಂದರು. ನಾದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್,…
ತುಮಕೂರು: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-೨ ಮೇ ೨೬ ರಿಂದ ಜೂನ್ ೨ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪ ದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ೩೫ ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಿರುವ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪರೀಕ್ಷೆಗೆ ನೋಂದಾಯಿಸಿಕೊAಡಿರುವ ೧೧೯೫೧ ಮಕ್ಕಳಿಗೆ ಸುಗಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು. ಡಿಡಿಪಿಐ ಮನಮೋಹನ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ೨೨ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ೭೪೨೯ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾ ಯಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಮಧುಗಿರಿ ಡಿಡಿಪಿಐ ಗಿರಿಜಾ ಸಭೆಗೆ ಮಾಹಿತಿ ನೀಡುತ್ತಾ, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೧೩ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ೪೫೨೨ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾ ಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ…
ಚಿಕ್ಕನಾಯಕನಹಳ್ಳಿ: ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಲು ತಾಲ್ಲೂಕಿನ ಆರು ಜಿ.ಪಂ. ವ್ಯಾಪ್ತಿಯಲ್ಲಿ ಹಾಗೂ ಒಂದು ಪಟ್ಟಣ ಪಂಚಾಯಿತಿ, ಒಂದು ಪುರಸಭೆಯ ವ್ಯಾಪ್ತಿಯಲ್ಲಿ ಪ್ರತಿಶುಕ್ರವಾರ ಗ್ರಾಮಪಂಚಾಯಿವಾರು ಪ್ರತಿಗ್ರಾ ಮಗಳಿಗೆ ಬೇಟಿ ನೀಡುವಂತಹ ರಾಜ್ಯದಲ್ಲೇ ವಿಶೇಷವಾದ ಮನೆ ಬಾಗಿಲಿಗೆ ಮನೆಮಗ ಕಾರ್ಯಕ್ರಮವನ್ನು ಆಯೋ ಜಿಸುವ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನಾಲ್ಕನೇ ವಾರದ ಮನೆ ಬಾಗಿಲಿಗೆ ಮನೆಮಗ ಶಿರ್ಷಿಕೆಯ ಕಾರ್ಯಕ್ರಮದಡಿಯಲ್ಲಿ ಪಟ್ಟಣದ ನಾಲ್ಕು ವಾರ್ಡ್ ಗಳಲ್ಲಿ ಸಭೆ ನಡೆಸಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಈಗಾಗಲೇ ಮನೆಬಾಗಿಲಿಗೆ ಮನೆಮಗ ಎಂಬ ಶಿರ್ಷಿಕೆಯಡಿ ಕಂದಿಕೆರೆ , ಹಂದನಕೆರೆ, ಬುಕ್ಕಾಪಟ್ಟಣ ಹೋಬಳಿಗಳಲ್ಲಿ ಈ ಕಾರ್ಯಕ್ರಮವನ್ನು ಮಾಡಿದ್ದು ಇಂದು ಪಟ್ಟಣದ ನಾಲ್ಕು ವಾರ್ಡಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಜನಪ್ರತಿನಿಧಿಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು ಮನೆಬಾಗಿಲಿಗೆ ಬರುವ ಮೂಲಕ ಅಧಿಕಾರ ಶಾಶ್ವತವಲ್ಲ ನಾವು ಮಾಡುವಂತಹ ಸೇವೆ ಶಾಶ್ವತ ಎಂಬAತೆ ಜನರ ಸಮಸ್ಯೆಗಳ ಅಹವಾಲುಗಳನ್ನು…
ತುಮಕೂರು: ಸತತ ಪರಿಶ್ರಮದಿಂದ ಪ್ರತಿಭೆಗ ಳಿಸಿಕೊಳ್ಳುವುದು ಒಂದು ವಿಧಾನವಾದರೆ ಮತ್ತೆ ಕೆಲವರಿಗೆ ದೈವದತ್ತವಾಗಿ ಅಸಾಧಾರಣಾ ಪ್ರತಿಭೆ ಹುಟ್ಟಿನಿಂದಲೆ ಬಂದಿರುತ್ತದೆ. ಅದು ಮಕ್ಕಳೇ ಆಗಿರಬಹುದು, ದೊಡ್ಡವರೇ ಆಗಿರಬಹುದು ಈ ಕಾರಣಕ್ಕಾಗಿಯೇ ಪ್ರತಿಭೆ ಯಾರ ಮನೆಯ ಖಾಸಗಿ ಸ್ವತ್ತಲ್ಲ ಮತ್ತು ಎಂದೂ ಕಳ್ಳಕದಿಯದ ಆಸ್ತಿಯಲ್ಲ ಎಂದು ಹೇಳುವುದು ಸಾಮಾನ್ಯವಾಗಿದೆ. ಕಾಲದ ಮಹಿಮೆಗೆ ತಕ್ಕಂತೆ ನಿರೀಕ್ಷೆಗೂ ಮೀರಿದ ಅಸಾಧಾರಣ ಪ್ರತಿಭೆಯ ಪ್ರಚಂಡ ಪುಟಾಣಿಗಳು ಅಲ್ಲಲ್ಲಿ ಕಾಣುವುದುಂಟು. ಈಗ ನಾವು ಹೇಳುತ್ತಿರುವ ಇಂತಹ ಪ್ರಚಂಡ ಪುಟಾಣಿ ಹೆಸರು ಕಿಯಾನ್ಷ ಎಂ.ಜಿ. ಮೂಲತಃ ಆನವಟ್ಟಿ ಗ್ರಾಮದ ಸೊರಬ ತಾಲ್ಲೂಕಿನ ಶಿವಮೊಗ್ಗ ಜಿಲ್ಲೆಯವರು ವಯಸ್ಸಿನ್ನೂ ಎರಡು ವರ್ಷ, ಅಬ್ಬಬ್ಬಾ ಅದೇನು ಗ್ರಹಿಕೆ ಶಕ್ತಿ. ಮಗುವಿನ ಸಾಧನೆಯನ್ನು ಇತ್ತೀಚಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಮಾಣೀಕರಿಸಿ ಐ.ಬಿ.ಆರ್. ಸಾಧಕಿ ಎಂದು ಬಿರುದು ನೀಡಿದ್ದಾರೆ. ಸಾಮಾ ನ್ಯವಾಗಿ ಮಕ್ಕಳು ಶಾಲೆಗೆ ಸೇರಿದ ನಂತರವೂ ಬಹಳ ಕಷ್ಟಪಟ್ಟು ನೆನಪಿಟ್ಟುಕೊಳ್ಳುವ ಮಗ್ಗಿ, ತಿಂಗಳುಗಳ ಹೆಸರುಗಳು, ವಿವಿಧ ರಾಜ್ಯಗಳ ರಾಜಧಾನಿಗಳ ಹೆಸರುಗಳೆಲ್ಲವೂ ಈ ಮಗುವಿನ ಮೆದುಳಿನಲ್ಲಿ ಸಂಗ್ರಹವಾಗಿರುವ…
ತುಮಕೂರು: ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಅವಕಾಶವನ್ನು ಕಲ್ಪಿಸಿಕೊಡುತ್ತವೆ, ಈ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪ ಯೋಗಪಡಿ ಸಿಕೊಳ್ಳಬೇಕು ಎಂದು ಸಾಹೇ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಕೆ.ಲಿಂಗೇಗೌಡ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿ ದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಕಲೋತ್ಸವ ೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲೋತ್ಸವ ಆರಂಭವಾಗಿ ೨೫ವರ್ಷಗಳು ಸಂದ ಸಂತಸದಲ್ಲಿ ಬೆಳ್ಳಿ ಮಹೋತ್ಸವದ ಪ್ರಯುಕ್ತ ಪ್ರತಿ ವರ್ಷಕ್ಕಿಂತ ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ಬಹುದೊಡ್ಡ ವೇದಿಕೆಯಾಗಿದೆ. ಜೊತೆಗೆ ಕಲೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಇವುಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು. ಸಾಹೇ ವಿವಿಯ ಕುಲಸಚಿವರಾದ ಡಾ. ಅಶೋಕ್ ಮೆಹ್ತಾ ಮಾತನಾಡಿ, ಅವಕಾಶಗಳಿಗೆ ಕಾಯುತ್ತಿರುವ ಪ್ರತಿಭೆಗಳಿಗೆ ಈ ಕಲೋತ್ಸವ ಒಂದು ಅತ್ಯುತ್ತಮ ವೇದಿಕೆಯಾಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಪಾಲ್ಗೊಳ್ಳಲು ಇರುವಂತಹ ಒಂದೇ ಒಂದು ಅವಕಾಶವೆಂದರೆ ಅದು ಈ ಕಲೋತ್ಸವ.…
ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಔಷಧಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ಲಭ್ಯವಿರುವಂತೆ ಕ್ರಮವಹಿಸಬೇಕು. ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡ ಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆ ಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು ಎಂದು ನಿರ್ದೇಶಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರಯೋಗಾಲಯ ಹಾಗೂ ಔಷಧ ಸಂಗ್ರಹಣಾ ಘಟಕಗಳನ್ನು ಉತ್ತಮ ವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಜನರಿಗೆ ಸುಗಮವಾದ, ಸುಸ್ಥಿರವಾದ ಆರೋಗ್ಯ ಸೇವೆ…
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು. ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೧ ಹಾಗೂ ೧೫ನೇ ವಾರ್ಡಿನಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ೧೧ನೇ ವಾರ್ಡಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕುಡಿಯುವ ನೀರು ಪೋಲಾಗುತ್ತಿದ್ದು, ಯಾವೊಬ್ಬ ಗುತ್ತಿಗೆದಾರರು, ಅಧಿಕಾರಿಗಳೂ ಗಮನಿಸದೇ ಇರುವುದು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷö್ಯತೆ ಎದ್ದು ಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಸಂಬAಧಪಟ್ಟ ಅಧಿಕಾರಿಗಳು ಹಾಜರಿದ್ದು, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು. ಕಾಮಗಾರಿ ಸ್ಥಳಕ್ಕೆ ಕೂಡಲೇ ಇಂಜಿನಿಯರ್‌ಗಳನ್ನು ನಿಯೋಜಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ನಿರ್ದೇಶನ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ನೀರಿನ ಪೈಪ್‌ಲೈನ್‌ಗೆ ಚರಂಡಿ ನೀರು ಮಿಶ್ರಣವಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲವಾಗಿರುವುದರಿಂದ ಮಳೆ ನೀರು ತೆರೆದ ಚರಂಡಿಗೆ ಸೇರಿ…











