ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರ ಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ‘ಪ್ಲೇಸ್ಮೆಂಟ್ ಸೆಲ್ ಮತ್ತು ಇಂಟರ್ನಲ್ ಕ್ವಾಲಿಟಿ ಅಸೂರೆನ್ಸ್ ಸೆಲ್’ (ಐಕ್ಯೂಎಸಿ) ವತಿಯಿಂದ “ಮಾಸ್ಟರಿಂಗ್ ದ ಆರ್ಟ್ ಆಫ್ ರೆಸುಮ” ಕಾರ್ಯಗಾರವನ್ನು ಹಮ್ಮಿ ಕೊಳ್ಳಲಾಗಿತ್ತು. ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಗಾರದ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಕುಮುದಿನಿ, ಹಂತ ಹಂತವಾಗಿ ರೆಸು ಮ್ ತಯಾರಿ ಬಗ್ಗೆ ಹಾಗೂ ಜಾಬ್ ಇಂಟರ್ವ್ಯೂಲ್ಲಿ ಯಾವ ರೀತಿ ಪ್ರಶ್ನೆ ಕೇಳುತ್ತಾರೆ ಹಾಗೂ ಯಾವ ರೀತಿ ಉತ್ತರಿಸಬೇ ಕೆಂದು, ಹೀಗೆ ರೆಸುಮ ತಯಾರಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಹೇಮಲತ ಪಿ ಅಧ್ಯಕ್ಷತೆ ವಹಿಸಿ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಕ್ಯಾಂಪಸ್ ಡ್ರೈವ್ ಹಮ್ಮಿಕೊಳ್ಳಲಾಗುತ್ತೆ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ರೆಸುಮ್ ತಯಾರಿ ಅತಿ ಮುಖ್ಯವಾದ ಅಂಶ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಗಾರವನ್ನು ಸಂಪೂರ್ಣವಾಗಿ ಅಳವ ಡಿಸಿಕೊಂಡು ಮುಂದಿನ ದಿನಗಳಲ್ಲಿ ನಿಮ್ಮ ಭವಿ ಷ್ಯವನ್ನು ರೂಪಿಸಿಕೊಳ್ಳಲು ಯಶಸ್ವಿಯಾಗಲಿ ಎಂದು ಹೇಳಿದರು. ಕಾರ್ಯಗಾರದಲ್ಲಿ…
Author: News Desk Benkiyabale
ಪಾವಗಡ: ಅಧಿಕಾರಿಗಳು ಜನಸಾಮಾನ್ಯರು ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ರವರು ಅಧಿಕಾರಿಗಳಿಗೆ ಸೂಚಿಸಿದರು ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕರ‍್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಮೊದಲೇ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿ ಮಾಡಬೇಕು, ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಬೇಕು, ಅಧಿಕಾರಿಗಳು ಹೊಣೆಗಾರಿಕೆಯಿಂದ ತಪ್ಪಿಸಿಕೊಂಡು ಹೋಗಲು ತಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ,ಜನಪ್ರತಿನಿಧಿಗಳು ಒಗ್ಗೂಡಿ ಕಾರ್ಯನಿರ್ವಸಲು ಬದ್ಧ ರಾಗಿದ್ದೆವೆ. ಇಲಾಖೆವಾರು ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಅವುಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಶಾಶ್ವತ ಬರಪೀಡಿತ ಪ್ರದೇಶವಾದ ಪಾವಗಡ ತಾಲ್ಲೂಕಿನ ಅಭಿವೃದ್ದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಯೋಜ ನೆಯೊಂದನ್ನು ಹಾಕಿಕೊಂಡಿದ್ದೇನೆ ಅದರ ಜಾರಿಗೆ ಅಧಿಕಾರಿಗಳು ಸಹಕಾರ ನೀಡಬೇಕು, ಹಳ್ಳಿಗಾಡಿನ ಪ್ರದೇಶಗಳಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲ ಎಂಬ ಬಗ್ಗೆ…
ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ ೨೦ರವರೆಗೆ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆ ಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾ ಮಿನಲ್ಲಿ ಈವರೆಗೆ ಶೇ.೧೩೪ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿ ಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬ ಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡ ಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ…
ಹುಳಿಯಾರು: ಹೈನುಗಾರಿಕೆಯಲ್ಲಿ ವರ್ಗೀಸ್ ಕುರಿಯನ್‌ವರ ಪಾತ್ರವನ್ನು ನಾವೆಲ್ಲರೂ ಇಂದಿಗೂ ನೆನೆಯಬೇಕು. ಪ್ರಸ್ತುತ ಭಾರತದ ಜನಸಂಖ್ಯೆಗೆ ಎಲ್ಲರಿಗೂ ಹಾಲಿನ ಉತ್ಪನ್ನಗಳನ್ನು ಒದಗಿಸುವ ಅಗತ್ಯತೆಯಿದೆ. ಹಾಗಾಗಿ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಬೇಕಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲ್ಲೂಕ್ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೆ.ಮ.ನಾಗಭೂಷಣ್ ತಿಳಿಸಿದರು. ಹುಳಿಯಾರು ಸಮೀಪದ ಬೆಳಗುಲಿ ಗ್ರಾಮದಲ್ಲಿ ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಲಾಗಿರುವ ರಾಷ್ಟಿçÃಯ ಸೇವಾ ಯೋಜನೆ ಘಟಕ-೧ ಮತ್ತು ೨ ರ ೨೦೨೪-೨೫ ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು “ಕರುಣ – ಕರುಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮ” ದ ಬಗ್ಗೆ ಮಾಹಿತಿ ನೀಡಿದ ಅವರು ಹಸುಗಳ ವಿವಿಧ ತಳಿಗಳನ್ನು ತಿಳಿಸುತ್ತಾ, “ಅವುಗಳಿಗೂ ಮನುಷ್ಯರಂತೆ ಪೌಷ್ಟಿಕಯುತವಾದ ಸಮತೋಲನ ಆಹಾರವನ್ನು ನೀಡಲು ಅವಶ್ಯಕತೆ ಇದೆ” ಎಂದರು. ಪಶು ಸಂಗೋಪನೆಯನ್ನು ಮಾಡಿ ಯಶಸ್ವಿಯಾದವರ ಉದಾಹರಣೆಗಳನ್ನು ನೀಡಿದರು. ಮುಂದುವರಿದು, “ಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಜೀವನದಲ್ಲಿ ಬೆಳೆಯಲು ಸಾಧ್ಯ”…
ಚಿಕ್ಕನಾಯಕನಹಳ್ಳಿ: ದಲಿತರಲ್ಲಿ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆದಿರುವ ಜಾತಿಗಣಿತಿ ಕಾರ್ಯ ತಾಲ್ಲೂಕಿನಲ್ಲಿ ಬೇಕಾಬಿಟ್ಟಿಯಂತೆ ನಡೆಸಲಾಗುತ್ತಿದ್ದು ಸಂಬAಧಿಸಿದ ಅಧಿಕಾರಿವರ್ಗ ದಿವ್ಯ ನಿರ್ಲ್ಯಕ್ಷ ತೋರಿದೆ ಎಂದು ಛಲವಾದಿ ಮಹಾಸಭಾದ ತಾಲ್ಲೂಕು ಮುಖಂಡರು ಆರೋಪಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ತಾಲ್ಲೂಕು ಅಧ್ಯಕ್ಷ ನಿರಂಜನ್ ಮಾತನಾಡಿ, ಪರಿಶಿಷ್ಟಜಾತಿಯಡಿ ಬರುವ ೧೦೧ ಜಾತಿಗಳಿಗೆ ಸಮರ್ಪಕವಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚಿಕೆ ಮಾಡುವ ಉದ್ದೇಶದಿಂದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ರವರ ಏಕಸದಸ್ಯಪೀಠವನ್ನು ಸರ್ಕಾರ ನೇಮಿಸಿದೆ. ಸದರಿ ಆಯೋಗವು ಸಮೀಕ್ಷೆ ನಡೆಸಿ ಮಾಹಿತಿ ನೀಡುವ ಸಲುವಾಗಿ ರಾಜ್ಯಾದ್ಯಂತ ಜಾತಿ ಸಮೀಕ್ಷೆಕಾರ್ಯ ನಡೆದಿದೆ. ಈ ಸಮೀಕ್ಷೆ ನಮಗೆ ಅತ್ಯಂತ ಉಪಯುಕ್ತವಾದುದಾಗಿದೆ. ಆದರೆ ತಾಲ್ಲೂಕಿನಲ್ಲಿ ಈಗಾಗಲೇ ಹತ್ತುದಿನದಿಂದ ನಡೆದಿರುವ ಸಮೀಕ್ಷೆಕಾರ್ಯ ಕೇವಲ ಕಾಟಾಚಾರವೆಂಬತೆ ನಡೆದಿದೆ ಉಸ್ತು ವಾರಿಯ ಪ್ರಮುಖರಾದ ತಹಸೀಲ್ದಾರ್ ರಾಗಲಿ, ಹೆಚ್ಚು ಜವಾಬ್ದಾರಿ ಹೊಂದಿದ ಸಮಾಜಕಲ್ಯಾಣ ಇಲಾಖೆಯಾಗಲಿ ಈ ಸಮೀಕ್ಷಾ ಕಾರ್ಯದ ಮಹತ್ವದ ಅರಿವೆ ಇಲ್ಲದಂತೆ ವರ್ತಿ ಸಿದ್ದಾರೆ. ಸಮೀಕ್ಷೆಯಲ್ಲಿ ನಿಯೋಜನೆಗೊಂಡ ಸಿಬ್ಬಂದಿ ಹತ್ತು ದಿನ ಕಳೆದರೂ…
ಕೊರಟಗೆರೆ: ರಾಜ್ಯ ಸರ್ಕಾರವು ನಡೆಸುತ್ತಿರುವ ಒಳಮೀಸಲಾತಿ ಜಾತಿಗಣತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವಂತೆ ಕೊರಟಗೆರೆ ತಾಲ್ಲೂಕು ಛಲವಾದಿ ಮಹಾಸಭಾ ಉಪಾದ್ಯಕ್ಷ ಹನುಮಂತರಾಯಪ್ಪ ಸರ್ಕಾರವನ್ನು ಮನವಿ ಮಾಡಿದ್ದಾರೆ. ಅವರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಈಗಾಗಲೇ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗ್‌ಮೋಹನ್ದಾಸ್ ರವರ ತೀರ್ಪಿನಂತೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಒಳಮೀಸಲಾತಿ ಜಾತಿಗಣತಿ ಪ್ರಾರಂಭಿಸಿದ್ದು ಛಲವಾದಿ ಮಹಾಸಭಾ ಇದನ್ನು ಸ್ವಾಗತಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ, ಆದರೆ ಈ ಜಾತಿಗಣತಿಯಲ್ಲಿ ಹಲವಾರು ತಾಂತ್ರಿಕ ದೋಷಗಳು ಬರುತ್ತಿವೆ ಸರ್ಕಾರವು ಈ ಜನಗಣತಿಗೆ ಇದೇ ಮೇ ತಿಂಗಳ ೧೭ ನೇ ತಾರೀಖು ಅಂತಿಮ ದಿನಾಂಕ ನಿಗದಿಪಡಿಸಿದ್ದು ಇದರಿಂದ ತಾಂತ್ರಿಕ ದೋµದಿಂದ ನಡೆಯುತ್ತಿರುವ ಜಾತಿಗಣತಿ ನಿಖರವಾಗಿ ಮತ್ತು ಗುಣಮಟ್ಟವಾಗಿ ಆಗದ ಕಾರಣ ಸರ್ಕಾರ ಇದರ ಕಾಲಮಿತಿಯನ್ನು ವಿಸ್ತರಿಸಬೇಕು ಎಂದ ಅವರು ಛಲವಾದಿಗಳು ಜಾತಿ ಗಣತಿ ಸಮಯದಲ್ಲಿ ಆದಿದ್ರಾವಿಡ ಎಂದು ಬರೆಸಿ ಬ್ರಾಕೆಟ್ ನಲ್ಲಿ ಛಲವಾದಿ ಎಂದು ಬರೆಸಬೇಕು ಎಂದು ಮನವಿ ಮಾಡಿದರು, ಜಿಲ್ಲಾ ದಲಿತ ಸೇನೆ ಅದ್ಯಕ್ಷ ಅನಂತ್‌ಕುಮಾರ್ ಮಾತನಾಡಿ ಕೊರಟಗೆರೆ ತಾಲ್ಲೂಕು…
ತುಮಕೂರು: ಕಾಶ್ಮೀರದ ಪಹಲ್ಗಾಮ್‌ಗೆ ಪ್ರವಾಸಕ್ಕೆಂದು ತೆರಳಿದ್ದ ೨೬ ಅಮಾಯಕ ಪ್ರವಾಸಿಗರನ್ನ ತಮ್ಮ ಕುಟುಂಬದ ಮುಂದೆಯೇ ಧರ್ಮವನ್ನು ಕೇಳಿ ಅಮಾನುಷವಾಗಿ ಹತ್ಯೆ ಮಾಡಿರುವುದು ಇಡೀ ಮಾನವ ಸಮಾಜವೇ ತಲೆ ತಗ್ಗಿಸುವ ವಿಚಾರವಾಗಿದೆ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರ ರಣಹೇಡಿ ಕೃತ್ಯಕ್ಕೆ ಸಾಕ್ಷಿಯಾಗಿದೆ. ಈ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಣಾಮ ಮಾಡುವ ಒಂದೇ ಸಂಕಲ್ಪದೊAದಿಗೆ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದೀ ನೇತೃತ್ವದ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ರಾಜತಾಂತ್ರಿಕ ನಿರ್ಧಾರಗಳನ್ನು ಕೈಗೊಂಡು ಭಯೋತ್ಪಾದಕರ ಹುಟ್ಟಡಗಿಸುವ ಕ್ರಮ ಕೈಗೊಂಡಿತು. ನಮ್ಮ ದೇಶದ ಹೆಮ್ಮೆಯ ಸೈನಿಕರು ನಮ್ಮ ಮಾತೆಯರ, ಸಹೋದರಿಯರ ಸಿಂಧೂರವನ್ನ ಅಳಿಸಿದ ಪಾಪಿ ಪಾಕಿಸ್ತಾನಿ ಭಯೋತ್ಪಾದಕರಿಗೆ `ಆಪರೇಷನ್ ಸಿಂಧೂರ್’ ಎಂಬ ಘೋಷ ವಾಕ್ಯದೊಂದಿಗೆ ಪಾಕಿಸ್ತಾನದಲ್ಲಿರುವ ೦೯ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿ ೧೦೦ಕ್ಕೂ ಹೆಚ್ಚು ಉಗ್ರರನ್ನ ಸಂಹರಿಸಿ, ಪಾಕಿಸ್ತಾನದ ವಾಯು ನೆಲೆಗಳನ್ನು ದ್ವಂಸ ಮಾಡುವುದರ ಮೂಲಕ ಭಯೋತ್ಪಾದಕರಿಗೆ ಹಾಗೂ ಭಯೋತ್ಪಾದನೆಯನ್ನು ಬೆಂಬಲಿಸುವವರಿಗೆ ಉಳಿಗಾಲವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಭಾರತದ ಹೆಮ್ಮೆಯ…
ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬ0ಧಿಸಿದ0ತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ ೧೮ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ ಪರಿಹಾರವನ್ನು ಪಾವತಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಗುರುವಾರ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಭದ್ರಾ ಮೇಲ್ದಂಡೆ ಯೋಜನೆಗಾಗಿ ಭೂಸ್ವಾಧೀನಪಡಿಸಿಕೊಂಡಿರುವ ಚಿಕ್ಕನಾಯಕನಹಳ್ಳಿ ತಾಲ್ಲೂಕು ಬೆಳ್ಳಾರ, ತಿಮ್ಲಾಪುರ, ಹುಲ್ಲೇನಹಳ್ಳಿ, ಕಲ್ಲಹಳ್ಳಿ, ಡಿಂಕನಹಳ್ಳಿ, ಮೋಟಿಹಳ್ಳಿ ಹಾಗೂ ತಿಮ್ಮನಹಳ್ಳಿ ಗ್ರಾಮಗಳ ೨೨೬ ಭೂ ಮಾಲೀಕರಿಗೆ ಮೇ ೧೮ರಂದು ಭೂ ಪರಿಹಾರ ಪಾವತಿಸಬೇಕು. ಅಂದಾಜು ೨೦ ಕೋಟಿ ರೂ.ಗಳಷ್ಟು ಭೂ ಪರಿಹಾರ ಪಾವತಿಸಲು ಬಾಕಿಯಿದ್ದು, ಭೂ ಮಾಲೀಕರಿಂದ ಅಗತ್ಯ ದಾಖಲೆಗಳನ್ನು ಪಡೆದು ಪರಿಹಾರ ಹಣವನ್ನು ಪಾವತಿಸಲು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಭೈರಲಿಂಗನಹಳ್ಳಿ ಹಾಗೂ ಕೇಶವಾಪುರದಲ್ಲಿ ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯಿಂದ ಈವರೆಗೂ ಮರ ಮತ್ತು ಮಾಲ್ಕಿ ಮೌಲ್ಯ ನಿರ್ಧರಣೆ ಮಾಡದೇ ಇರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಬಾಕಿ…
ತುಮಕೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲೆಯ ೧೦ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯು ಪ್ರಾರಂಭವಾಗಿ ೩ ವರ್ಷಗಳು ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ.೧೪ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. ಕಾರಣವೇನೆಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಅನುಮೋದನೆ ನೀಡಿದ ೨೭ ಕಾಮಗಾರಿಗಳ ಪೈಕಿ ಕೇವಲ ೪ ಕಾಮಗಾರಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, ೬ ಕಾಮಗಾರಿಗಳು ಇನ್ನೂ ಟೆಂಡರು ಪ್ರಕ್ರಿಯೆ ಹಂತದಲ್ಲಿವೆ. ಇದೇ ರೀತಿ ಕಾಮಗಾರಿ ಪ್ರಗತಿಯಲ್ಲಿ ಹಿನ್ನಡೆ ಕಂಡು ಬಂದರೆ ಸಂಬAಧಿಸಿದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಕ್ರಮವಿಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ ಹಾಗೂ ಚರಂಡಿ…
ತುಮಕೂರು: ನಗರ ಪ್ರದೇಶ ವ್ಯಾಪ್ತಿಯಲ್ಲಿ ಮನೆ, ನಿವೇಶನಗಳಿಗೆ ಎ-ಖಾತೆ ಮತ್ತು ಬಿ-ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ ೩ ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ ಮನೆ, ನಿವೇಶನಗಳಿಗೆ ದಾಖಲಾತಿ ಮಾಡಿಕೊಡುವ ಸಲುವಾಗಿ ಬಿ ಖಾತೆಯನ್ನು ಜಾರಿಗೆ ತರಲಾಗಿದ್ದು, ಈಗಾಗಲೇ ೩ ತಿಂಗಳ ಅವಧಿ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಶೇ.೫೦ರಷ್ಟು ಮಾತ್ರ ಬಿ ಖಾತೆಗಳಾಗಿರುವ ಹಿನ್ನೆಲೆಯಲ್ಲಿ ಉಳಿದವರಿಗೂ ಅನುಕೂಲ ಕಲ್ಪಿಸುವ ಸಲುವಾಗಿ ಬಿ ಖಾತೆ ಮಾಡಿಕೊಡುವ ಅವಧಿಯನ್ನು ಮತ್ತೆ ೩ ತಿಂಗಳ ಕಾಲ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದರು. ಕಳೆದ ೩೦-೪೦ ವರ್ಷಗಳಿಂದ ಯಾವುದೇ ದಾಖಲಾತಿಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಬಡ ಜನರಿಗೆ ಅನುಕೂಲ ಕಲ್ಪಿಸಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಸೆ ಮೇರೆಗೆ ಸಚಿವ ಸಂಪುಟ ಹಾಗೂ ವಿಧಾನಸಭೆಯಲ್ಲಿ ಈ…











