Author: News Desk Benkiyabale

ತುಮಕೂರು: ಜಿಲ್ಲೆಯಲ್ಲಿ ೨೬೫ ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಕಡ್ಡಾಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಉರ್ದು ಭಾಷೆ ಬಲ್ಲ ಕಾರ್ಯಕರ್ತೆಯರನ್ನು ನೇಮಕ ಮಾಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಬೇಕು. ೧ನೇ ತರಗತಿಗೆ ದಾಖಲಾದ ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಮುಂದುವರೆಸಿ ೧೦ನೇ ತರಗತಿವರೆಗೂ ವ್ಯಾಸಂಗ ಮಾಡುತ್ತಿರುವ ಬಗ್ಗೆ ನಿಗಾವಹಿಸಬೇಕು ಎಂದು ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಮ್ಮ ಅವರಿಗೆ ನಿರ್ದೇಶನ ನೀಡಿದರು. ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ…

Read More

ತುಮಕೂರು: ದೇವರಾಜ ಅರಸು, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಅಹಿಂದ ವರ್ಗಗಳ ನಾಯಕರ ಸ್ಥಾನ ತುಂಬಿರುವ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ,  ಅಹಿಂದ ಮತ್ತು ಶೋಷಿತ ಸಮುದಾಯಗಳ ಪಾಲಿಗೆ ಸ್ವಾಭಿಮಾನದ ಹಬ್ಬವಾಗಿದ್ದು, ಎಲ್ಲಾ ಶೋಷಿತ ಸಮುದಾಯಗಳ ಜನರು ಕಾರ್ಯ ಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ವಿರೂಪಾಕ್ಷ ಡ್ಯಾಗೇರಹಳ್ಳಿ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆ.ಎನ್.ರಾಜಣ್ಣ ಅವರು ತಮ್ಮ ೫೦ ವರ್ಷಗಳ ರಾಜಕೀಯ ಜೀವನದಲ್ಲಿ ತಬ್ಬಲಿ ಸಮುದಾಯಗಳ ನೋವು, ನಲಿವುಗ ಳಲ್ಲಿ ಭಾಗಿಯಾಗಿದ್ದಾರೆ.ದ್ವನಿ ಯಿಲ್ಲದ ಸಮುದಾ ಯಗಳ ದ್ವನಿಯಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಅಹಿಂದ ವರ್ಗಗಳು ಬಯಸುತ್ತೇವೆ.ರಾಜಕಾರಣದ ಹೊರತಾಗಿಯೂ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಮತ್ತು ಬಡವರ ಪರವಾಗಿ ಕೆಲಸ ಮಾಡಿದ್ದಾರೆ.ಹಾಗಾಗಿ ಅವರ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯ ಕ್ರಮವನ್ನು ಅಹಿಂದ ವರ್ಗ ಹಬ್ಬದ ರೀತಿಯಲ್ಲಿ ಆಚರಿಸಬೇಕಿದೆ ಎಂದರು. ದಲಿತ ಹೋರಾಟಗಾರರಾದ ಕುಂದೂರು ತಿಮ್ಮಯ್ಯ…

Read More

ತುಮಕೂರು: ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸೇವೆಯಲ್ಲಿ ತೊಡಗಿಕೊಂಡಿರುವ ಶಬರಿಮಲೆ ಅಯ್ಯಪ್ಪ  ಸೇವಾ ಸಮಾಜಂನ ರಾಷ್ಟಿçÃಯ  ಅಧ್ಯಕ್ಷ ಟಿ.ಬಿ.ಶೇಖರ್ ಅವರನ್ನು  ಅಭಿನಂದನಾ ಸಮಿತಿ ಬುಧವಾರ ನಗರದಲ್ಲಿ ನಾಗರೀಕ ಸನ್ಮಾನ ನೀಡಿಗೌರವಿಸಿ, ಅವರ  ಅನನ್ಯಸೇವೆ ಸ್ಮರಿಸಿತು. ಡಾ.ಗುಬ್ಬಿವೀರಣ್ಣ   ರಂಗಮAದಿರದಲ್ಲಿ ನಡೆದ  ಅಭಿನಂದನಾ   ಸಮಾರಂಭದಲ್ಲಿ   ಅಟವಿ   ಸುಕ್ಷೇತ್ರದ  ಅಟವಿ ಶಿವಲಿಂಗ ಸ್ವಾಮೀಜಿ, ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಸಿದ್ಧೇಶ್ವರ ಸ್ವಾಮೀಜಿಯವರು ಟಿ.ಬಿ.ಶೇಖರ್‌ಗೆ ಬೆಳ್ಳಿ ಕಿರೀಟ ತೊಡಿಸಿ, ‘ಸತ್ಯಾರ್ಥ ಸೇವಾ’ ಅಭಿದಾನ ನೀಡಿಶೇಖರ್ ಹಾಗೂ ಇವರ ಪತ್ನಿಟಿ.ಎಸ್.ಆಶಾಅವರನ್ನು ಸನ್ಮಾನಿಸಿ ಗೌರವಿಸಿದರು. ಸಮಾರಂಭ ಉದ್ಘಾಟಿಸಿದ ಸಹಕಾರ ಸಚಿವಕೆ.ಎನ್.ರಾಜಣ್ಣ ಮಾತನಾಡಿ, ಯಾವುದೇ ಪ್ರತಿ  ಫಲಾಪೇಕ್ಷೆ   ಇಲ್ಲದೆ ಸಮಾಜ ಸೇವಾಕಾರ್ಯ ಮಾಡುತ್ತಿರುವ ಟಿ.ಬಿ.ಶೇಖರ್‌ಅವರುದೇವರಲ್ಲಿ ನಂಬಿಕೆ, ಶ್ರದ್ಧೆಯಿಟ್ಟು   ದೇವರು ಮೆಚ್ಚುವಂಥಾ ಕೆಲಸ ಮಾಡುತ್ತಿದ್ದಾರೆ. ನಿಸ್ವಾರ್ಥತೆಯಿಂದ ಸಮಾಜದ ಒಳಿತಿಗಾಗಿ ಶ್ರಮಿಸಿದರೆ ಭಗವಂತ ಶ್ರೇಯಸ್ಸುಕೊಡುತ್ತಾನೆ. ಮನುಷ್ಯರಾಗಿ ಹುಟ್ಟಿದ ಮೇಲೆ ಈ ಸಮಾಜಕ್ಕೆಏನನ್ನಾದರೂ ಮಾಡಬೇಕು, ನಮ್ಮ ಹೆಜ್ಜೆಗುರುತು ಉಳಿಸಿ ಹೋಗಬೇಕುಎಂದು ಹೇಳಿದರು. ಟಿ.ಬಿ.ಶೇಖರ್‌ಅವರಿಗೆ ಸಮಾಜಸೇವೆತಮ್ಮತಂದೆಯಿAದ ಬಂದ ಬಳುವಳಿ.ತಂದೆಯನ್ನು ಮೀರಿಸಿ ಸೇವಾಕಾರ್ಯದಲ್ಲಿತೊಡಗಿಕೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕಕಾರ್ಯದಲ್ಲಿತಮ್ಮನ್ನು ಅರ್ಪಿಸಿಕೊಂಡು…

Read More

ತುಮಕೂರು: ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರಕ್ಕೆ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು ಸೋಂಕುಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕರ್ನಾಟಕ ಅಲೈಡ್ & ಹೆಲ್ತ್ಕೇರ್ ಪ್ರೊಫೆಷನಲ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ನಗರದ ಶ್ರೀ ಸಿದ್ದಾ ರ್ಥ  ವೈದ್ಯಕೀಯ ಕಾಲೇಜಿನ ನಾಗಾರ್ಜುನ ಸಭಾಂಗಣದಲ್ಲಿ ಹಮ್ಮಿಕೊ ಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿದ ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ. ಲಿಂಗೇಗೌಡ ಆರೋಗ್ಯ ಕ್ಷೇತ್ರದ ವೃತ್ತಿಪರರಿಗೆ ಉತ್ತಮ ಕಾರ್ಯತತ್ಪರತೆಯ ಪರಿಸ್ಥಿತಿಗಳನ್ನು ಅನಾವರಣಗೊಳಿಸುವುದು, ವೃತ್ತಿಜೀವನದ ನಿರಂತರ ಜ್ಞಾನದ ಉನ್ನತೀಕರಣ, ಮಾಹಿತಿ ಮತ್ತು ಆಲೋಚನೆಗಳು, ಜ್ಞಾನ, ಅನುಭವಗಳು ಮತ್ತು ಉತ್ತಮ ಅಭ್ಯಾಸಗಳ ಕಲಿಕೆಗೆ ಕಾರ್ಯಾಗಾರಗಳು ಅನುಕೂಲವಾಗುತ್ತವೆ ಎಂದರು. ಸಾಹೇ ರಿಜಿಸ್ಟಾçರ್ ಡಾ.ಅಶೋಕ್ ಮೆಹ್ತಾ ಮಾತನಾಡಿ, ಆಸ್ಪತ್ರೆಯ ವ್ಯವಸ್ಥೆಯಲ್ಲಿ, ಪ್ರಯೋಗಾಲಯದಲ್ಲಿ…

Read More

ಕೊರಟಗೆರೆ:  ತುಮಕೂರು ಪಟ್ಟಣದಲ್ಲಿ ಮೇ ೧೩ ರಂದು ನಡೆಯುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನದ ಅಮೃತ್ಸವ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರöಮವನ್ನು ಅದ್ದೂರಿಯಾಗಿ ಆಚರಿಸಲ್ಲಿದ್ದು ಸಚಿವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಧನ್ಯ ಕುಮಾರ್ ಮನವಿ ಮಾಡಿದ್ದಾರೆ. ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಳ ಜನಾಂಗದವರು ತಿರ್ಮಾನದಂತೆ ಮೇ.೧೩ ರಂದು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರು ನಗರದ ಬಿ.ಹೆಚ್.ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನವಾಗಿದ್ದು ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸೇರಿದಂತೆ, ಸಾಮಾಜಿಕ, ಸಹಕಾರ ವಲಯದ ಸಮಗ್ರ ಅಭಿವೃದ್ದಿಗೆ ಬದ್ದತೆಯಿಂದ ತೊಡಗಿಸಿಕೊಂಡಿರುವ ಜನಪ್ರಿಯ ನಾಯಕ ಸಹಕಾರ ರಂಗದ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕೃತರು, ಕರ್ನಾಟಕ ಸರ್ಕಾರದ ಸಹಕರ ಸಚಿವರಾದ ಕೆ.ಎನ್.ರಾಜಣ್ಣ ನವರು ೭೫ನೇ ವರ್ಷಕ್ಕೆ ಕಾಲಿರಿಸಿದ್ದಾರೆ, ಅವರು ಅಪೆಕ್ಸ್ ಬ್ಯಾಂಕ್…

Read More

ತುಮಕೂರು:  ನಗರದ ಕೋತಿ ತೋಪು ಬಾಬು ಜಗಜೀವನ್ರಾಂ ವೃತ್ತದಲ್ಲಿ ಕರ್ನಾಟಕ ಸರ್ಕಾರದ ಆದೇಶ ಮತ್ತು ಜಸ್ಟೀಸ್ ಹೆಚ್ ಎನ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ  ಪರಿಶಿಷ್ಟರ ಜಾತಿಗಳ ಸಮಗ್ರ ಸಮೀಕ್ಷೆ- ೨೦೨೫ಕ್ಕೆ ಜಿಲ್ಲಾಡಳಿತದಿಂದ ಚಾಲನೆ  ನೀಡಲಾಯಿತು. ಕಾಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರರಾದ ಬಾಬು ಜಗಜೀವನ್ರಾಂ ರವರ ಬಾವಚಿತ್ರಳಿಗೆ ಪುಸ್ಪ ನಮನವನ್ನು ಸಲ್ಲಿಸಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ- ೨೦೨೫ಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಅವರು ಜಸ್ಟೀಸ್ ಹೆಚ್ ಎನ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟರ ಜಾತಿಗಳ ಸಮಗ್ರ ಸಮೀಕ್ಷೆ ಕರ್ನಾಟಕದಲ್ಲೆ ಪ್ರಥಮವಾಗಿದೆ. ಒಳ ಮೀಸಲು ಸಮೀಕ್ಷೆ ಸಂಬAದ ಸಮೀಕ್ಷಾ ವರದಿ ಸಂಗ್ರಹಣೆ ಬಗ್ಗೆ ೧೦ ದಿನಗಳ ಕಾಲ ರಾಜ್ಯ ಮಟ್ಟದಲ್ಲಿ ವೈಜ್ಞಾನಿಕ ತರಬೇತಿ ನೀಡಲಾಗಿದೆ. ಜಿಲ್ಲಾ ಮಟ್ಟದ ೧೫ ಜನ ಅಧಿಕಾರಿಗಳನ್ನು ಗುರುತಿಸಿ ಮಾಸ್ಟರ್…

Read More

ತುಮಕೂರು: ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ೪೦೦ ರಿಂದ ೫೦೦ ಜನ ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಮೂಲಕ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೧ ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಗುರಿಯನ್ನು ತಲುಪಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿAದು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿಗಳೊAದಿಗೆ ನರೇಗಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯು ಮೊದಲ ಸ್ಥಾನ ಪಡೆದಿದೆ. ಈ ವರ್ಷವೂ ಮೊದಲ ಸ್ಥಾನವನ್ನು ಯಥಾರೀತಿ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಕಳೆದ ವರ್ಷ ಸುಮಾರು ೧೨೨ ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದ ೩೬೬೦ ಶಾಲಾಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿವೆ.  ಪ್ರಸಕ್ತ ಆರ್ಥಿಕ…

Read More

ತುರುವೇಕೆರೆ: ಕೃಷಿ ಇಲಾಖೆಯಿಂದ ಸಿಗುವಂತ ಸವಲತ್ತುಗಳನ್ನು ರೈತರು ಪಡೆದುಕೊಂಡು ಅದುನಿಕ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದು  ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ಬೀಜ ವಿತರಣೆ, ಜೀಜೋಪಚಾರ ಆಂದೋಲನ ಹಾಗೂ ಕೃಷಿ ಪರಿಕರ ವಿತರಣ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು ರೈತರು ಆದುನಿಕ ಕೃಷಿಗೆ ಬೇಕಾದ ಸಲಕರಣೆಗಳನ್ನು ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ತೆಗೆದುಕೊಂಡು ವ್ಯವಸಾಯಕ್ಕೆ ಬಳಸಿಕೊಳ್ಳಬೇಕು. ಕೇವಲ ಒಂದೇ ಬೆಳೆಯನ್ನು ನಂಬಿ ವ್ಯವಸಾಯ ಮಾಡುವ ಬದಲು ರೈತರ ಆರ್ಥಿಕ ಸ್ಥಿತಿ ಸುದಾರಿಸಲು ಲಾಭ ಬರುವಂತಹ ಬೆಳೆಗಳನ್ನು ರೈತರು ಬೆಳೆಯಬೇಕು ಎಂದು ಸಲಹೆ ನೀಡಿದರು. ಈ ಸಂದರ್ಬದಲ್ಲಿ ಪಲಾನುಭವಿಗಳಿಗೆ ಟಾರ್ಪಲ್, ನೇಗಿಲುಸೇರಿದಂತೆ ಕೃಷಿಗೆ ಸಂಬAದಿಸಿದAತೆ ಕೃಷಿ ಪರಿಕರಗಳನ್ನು ನೀಡಲಾಯಿತು. ಸಮಗ್ರ ಅಭಿವೃದ್ದಿ ಹೊಂದಿದ ಪ್ರಗತಿಪರ ರೈತರನ್ನು ಗುರುತಿಸಿ ಆತ್ಮ ಶ್ರೇಷ್ಟ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಸಹಾಯಕ ನಿದೇಶಕ ಪೂಜಾ, ಕೃಷಿಕ…

Read More

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಮೇ.೧೩ರಂದು  ಹಮ್ಮಿಕೊಂಡಿರುವ ಕೆ.ಎನ್.ಆರ್.ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ,ರಾಜಣ್ಣನವರ  ಪರ ಶಕ್ತಿ ಪ್ರದರ್ಶನವಲ್ಲ, ಬದಲಿಗೆ ಅವರ ಅಭಿಮಾನ ದರ್ಶನ ಸಮಾವೇಷವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ತುಮಕೂರು ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷರಾದ ಎನ್.ಗೋವಿಂದರಾಜು ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಕೆ.ಎನ್.ಆರ್.ಅಭಿನಂದನಾ ಗ್ರಂಥ ಬಿಡುಗಡೆ ಸಮಿತಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ನಾನು ಕೂಡ ಕೆ.ಎನ್.ರಾಜಣ್ಣನವರ ಅಭಿಮಾನಿ.ಅಹಿಂದ ಸಮುದಾಯಕ್ಕೆ ಕೆ.ಎನ್.ರಾಜಣ್ಣ ಅವರು ಮಾರ್ಗದರ್ಶಕರಿದ್ದಂತೆ ಎಂದರು. ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಐದು ದಶಕಗಳ ರಾಜಕೀಯ ಜೀವನವನ್ನು ಅವಲೋಕಿಸಿದರೆ ಜಿಲ್ಲೆಯ ರಾಜಕೀಯ, ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಇಂತಹ ಓರ್ವ ರಾಜಕಾರಣಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಸಲುವಾಗಿ ಅವರ ಅಭಿಮಾನಿಗಳು ೭೫ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ “ಸಹಕಾರ ಸಾರ್ವಬೌಮ” ಅಭಿನಂದನಾ ಗ್ರಂಥ ಸಮರ್ಪಣೆಯನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗೋವಿಂದರಾಜು…

Read More

ತುಮಕೂರು: ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ವಿವಿಧ ಯೋಜನೆಗಳಡಿ ನೋಂದಾಯಿಸುವ ಸಲುವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂ ಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವಾರು, ಚಿಂದಿ ಆಯುವವರು, ಗೃಹ ಕಾರ್ಮಿ ಕರು, ಟೈಲರ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿ ಕರು ಮತ್ತಿತರ ಅಸಂಘಟಿತ…

Read More