Author: News Desk Benkiyabale

ತುಮಕೂರು: ಹರಿಕಥೆ ಎನ್ನುವುದು ಒಂದು ಜಾತ್ಯಾತೀತ ಕಲೆ. ಈ ಕಲೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಇದ್ದಾರೆ.ಹಾಗಾಗಿ ಈ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಯುವಕ ಕಲಾವಿದರನ್ನು ಇತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದು ಹಿರಿಯ ಸುಗಮ ಸಂಗೀತ ಕಲಾವಿದರಾದ ಡಾ.ಆರ್.ಕೆ.ಪದ್ಮನಾಭನ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಜಿ.ಸೋಮಶೇಖರದಾಸ್ ಪ್ರತಿಷ್ಠಾನ ಬೆಂಗಳೂರು ಇವರು, ಚಿರಂತ ಸಾಂಸ್ಕೃತಿಕ ಟ್ರಸ್ಟ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಹರಿದಾಸರ ಸಮಾವೇಶ-೨೦೨೫ ವನ್ನು ಉದ್ಭಾಟಿಸಿ ಮಾತನಾಡುತಿದ್ದ ಅವರು, ಸುಗಮ ಸಂಗೀತ, ನೃತ್ಯ,ಗಮಕ ಇಂತಹ ಕಲೆಗಳಿಗೆ ಅದರದ್ದೇ ಪ್ರೇಕ್ಷಕರ ವರ್ಗವಿದೆ.ಆದರೆ ಹರಿಕಥೆಗೆ ಎಲ್ಲಾ ವರ್ಗದ ಪ್ರೇಕ್ಷಕರು ಸಹ ಆಗಮಿಸಿ, ಕೇಳಿ ಆಸ್ವಾಧಿಸುತ್ತಾರೆ. ಹಾಗಾಗಿ ಇದೊಂದು ಜಾತ್ಯಾತೀತ ಕಲೆ. ಇದು ಉಳಿದು ಬೆಳೆಯಬೇಕಿದೆ ಎಂದರು. ನಾನು ಸಹ ಬಾಲ್ಯದಿಂದಲೂ ಹರಿಕಥೆಯನ್ನು ಕೇಳಿ ಬೆಳದವ. ಕಾಲೇಜು ದಿನಗಳಲ್ಲಿ ಗುರುರಾಜುಲುನಾಯ್ಡು ಅವರ ಹರಿಕಥಾ ಕಾರ್ಯಕ್ರಮಕ್ಕೆ ತಪ್ಪದೇ ಹೋಗುತ್ತಿದ್ದೇ, ನನ್ನ ಗಾಯನದ ಮೇಲೆ…

Read More

ಪಾವಗಡ: ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಜಾರಿಯಾಗಲು ಶ್ರಮಿಸಿದ ಹೋರಾಟಗಾರರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದುಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯ ಅಧ್ಯಕ್ಷರಾದ ಶಿವಪ್ರಸಾದ್ ರವರು ತಿಳಿಸಿದರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ.ನಂಜುAಡಪ್ಪ ವರದಿಯ ಪ್ರಕಾರ ಅತೀ ಹಿಂದುಳಿದ ಪ್ರದೇಶವಾಗಿದ್ದು, ಸದಾ ಬರಗಾಲಕ್ಕೆ ತುತ್ತಾಗುತಿತ್ತು ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಕೆರೆಗಳನ್ನು ತುಂಬಿಸುವ ಯೋಜನೆಗಳ ಜಾರಿಗೆ ಸಂಬAಧಿಸಿದAತೆ ಹಲವಾರು ಹೋರಾಟಗಳು ನಡೆದಿವೆ, ಆದ್ದರಿಂದ ಹೋರಾಟಗಾರರನ್ನು ಗೌರವಿಸಿ ಸನ್ಮಾನಿಸಲಾಗುವುದು. ಹೊಸಪೇಟೆ ಜಲಾಶಯದಿಂದ ತಾಲೂಕಿಗೆ ಕುಡಿಯುವ ನೀರು ಹರಿದು ಬಂದಿದೆ ದಶಕಗಳ ಹೋರಾಟ ಯಶಸ್ವಿಯಾಗಿದೆ ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನವಾಗಿದ್ದು ಪ್ರಗತಿಪ ಪದದತ್ತ ಸಾಗಿದೆ ಎತ್ತಿನಹೊಳೆ ಯೋಜನೆ ಮಂಜೂರಾಗಿದೆ ಸರ್ಕಾರವು ಕಾಮಗಾರಿಗಳನ್ನು ಕೈಗೊತ್ತಿಕೊಂಡಿದ್ದು ಈ ಮೂರು ಯೋಜನೆಗಳು ತಾಲೂಕಿಗೆ ಮಂಜೂರಾಗಲು ಅನುಷ್ಠಾನಗೊಳ್ಳಲು ಹಲವಾರು ದಶಕಗಳಿಂದ ಅನೇಕ ಹೋರಾಟಗಳು ನಡೆದಿವೆ, ವಿವಿಧ ರೀತಿಯ ಪ್ರತಿಭಟನೆಗಳು ನಡೆದು ಅವು ವಿವಿಧ ರೂಪ ಪಡೆದುಕೊಂಡು ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ಯಶಸ್ವಿಯಾಗಿವೆ.…

Read More

ತುರುವೇಕೆರೆ: ವಿದೇಶಿ ಸಂಸ್ಕೃತಿಯನ್ನು ಮಾರು ಹೋಗದೇ ನಮ್ಮ ದೇಶದ ಸಂಸ್ಕೃತಿಯನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಎಂ.ಟಿ .ಕೃಷ್ಣಪ್ಪನವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬುಧುವಾರ ಏರ್ಪಡಿಸಿದ್ದ “ನಮ್ಮ ಸಂಸ್ಕೃತಿ-ನಮ್ಮ ಹೆಮ್ಮೆ” ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಾವಿರಾ ರು ವರ್ಷಗಳಿಂದ ಬಂದAತ ದೇಶದ ಸಂಸ್ಕೃತಿ ಮುಂದೆಯೂ ಇರಲಿದೆ. ಆದರೆ ಹಳ್ಳಿಗಾಡಿಗಿಂತ ಪಟ್ಟಣದಲ್ಲಿ ದೇಶೀ ಸಂಸ್ಕೃತಿ ನಶಿಸುತ್ತಿರುವುದು ನಿಜಕ್ಕೂ ವಿಷಾದನೀಯ ಸಂಗತಿ. ನಮ್ಮ ತಾಲ್ಲೂಕಿನಲ್ಲೂ ಸಹಾ ಅತ್ಯುತ್ತಮ ಕಲಾವಿದರಿದ್ದು ಅಂತಹವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ದೇಶೀ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ನೀಡಲು ನಾವು ನೀವೆಲ್ಲರೂ ಕೈಜೋಡಿಸಬೇಕಾದ್ದು ನಮ್ಮೆಲ್ಲರ ಕರ್ತ ವ್ಯವಾಗಿದ್ದು ಇಂದು ಈ ಕಾಲೇಜಿನಲ್ಲಿ ಹಳ್ಳಿ ಗಾಡಿನ ಸೊಬಗನ್ನು ಬಿಂಬಿಸುವAತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯವೆಂದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೋ. ಈರಯ್ಯನವರು ಮಾತನಾಡಿ ನಮ್ಮ ಸಂಸ್ಕೃತಿಯನ್ನು ಪ್ರಾಚೀನ ದೇಶಗಳಲ್ಲಿ ಅನುಕರಣೆ ಮಾಡುತ್ತಿದ್ದು ಅಂತಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ…

Read More

 ತುರುವೇಕೆರೆ: ರಾಜ್ಯ ಕಾಂಗ್ರೇಸ್ ಸರ್ಕಾರನ ದುರಾಡಳಿತ ಹಾಗೂ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಿಂದ ಏ.೨೧ ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಸಾಲಜಯರಾಮ್ ತಿಳಿಸಿದರು. ಪಟ್ಟಣದ ಸಮೀಪದ ತೋಟದ ಮನೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಸರ್ಕಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ತುಗಲಕ್ ದರ್ಬಾರ್ ಮಾಡುತ್ತಿದ್ದಾರೆ. ಇಂದು ವರ್ಗದ ಜನರನ್ನು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಇವರ ಸರ್ಕಾರದಿಂದ ಬಡವರು ಜೀವನ ನೆಡೆಸಲು ಸಾದ್ಯವಿಲ್ಲ ದಂತಾಗಿದೆ. ಪೇಟ್ರೋಲ್, ಹಾಲು, ಸ್ಟಾಪ್ ಪೇಪರ್, ಮದ್ಯ, ವಿದ್ಯುತ್, ಬಸ್ ಧರ ಸೇರಿ ಎಲ್ಲದರ ಮೇಲೆ ಟ್ಯಾಕ್ಸ್ ಹಾಕಿ ತಮ್ಮ ಗ್ರಾರಂಟಿಗಳಿಗೆ ಹಣ ನೀಡಲು ಜನರ ಹೊಟ್ಟೇ ಮೇಲೆ ಹೊಡೆಯುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ಶೇ ೪೦ ಕಮಿಷನ್ ಸರ್ಕಾರ ಎಂದು ಹೇಳುತ್ತಿದ್ದ ಕಾಂಗ್ರೇಸ್ ನವರು ಇಂದು ಶೇ ೬೦ ಕಮಿಷನ್ ಸರ್ಕಾರವಾಗಿದೆ ಎಂದು ಕಾಂಗ್ರೇಸ್ ಮುಖಂಡರೇ ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಪ್ರತಿಭಟನೆಗೆ ಜೆಡಿಎಸ್ ಯುವ…

Read More

ತುರುವೇಕೆರೆ: ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಗ್ರಾಮದೇವತೆ ಶ್ರೀ ಉಡುಸಲಮ್ಮ ದೇವಿ ರಥೋತ್ಸವದ ಅಂಗವಾಗಿ ಏ.೨೧ರಂದು ಸೋಮವಾರ ಬೆಳಿಗ್ಗೆ ಭೀಮೋತ್ಸವ ಕೃಪಾಪೋಷಿತ ನಾಟಕ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಧರ್ಮರಾಜ್ಯ ಸ್ಥಾಪನೆ ಎಂಬ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಸಂಚಾಲಕ ಬಾಣಸಂದ್ರ ಕೃಷ್ಣಸ್ವಾಮಿ ತಿಳಿಸಿದರು. ಭೀಮೋತ್ಸವ ಆಚರಣಾ ಸಮಿತಿ ಕಛೇರಿಯಲ್ಲ್ಲಿ ನಾಟಕ ಕರಪತ್ರ ವಿತರಿಸಿ ಮಾತನಾಡಿದ ಅವರು ೨೧ರಂದು ಬೆಳಿಗ್ಗೆ ೯:೩೦ಕ್ಕೆ ನಾಟಕ ಪ್ರಾರಂಬಗೊಳ್ಳಲಿದೆ. ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದು ಇದೇ ಸಂಧರ್ಭದಲ್ಲಿ ತಾಲ್ಲೂಕಿನ ಹಲವು ಹಿರಿಯ ಕಲಾವಿದರಾದ ಸಂಗೀತ ನಿರ್ಧೇಶಕ ರಾದ ನಾಗಣ್ಣ, ರಂಗರಾಜು, ನಾದಸ್ವರವಾದಕ ಶಿವಣ್ಣ, ಹಿರಿಯ ರಂಗಭೂಮಿ ಕಲಾವಿದ ಮರಿಯಣ್ಣ, ಎಂ.ಎನ್.ಮೂರ್ತಿ ಹಾಗೂ ಜನಪದ ಕಲಾವಿದ ಮುನಿಯಪ್ಪ ಅವರನ್ನು ಗುರ್ತಿಸಿ ಸನ್ಮಾನಿಸಲಾಗುವುದು. ನಾಟಕ ಪ್ರದರ್ಶನದಲ್ಲಿ ಮಧ್ಯಾನಃ ಪ್ರೇಕ್ಷಕರಿಗೆ ಉಪಾಹಾರದ ವ್ಯವಸ್ಥೆ ಸಹಾ ಮಾಡಲಾಗಿದ್ದು ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಲೆಗೆ ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಮನವಿ ಮಾಡಿಕೊಂಡಿದ್ದಾರೆ.…

Read More

ತುರುವೇಕೆರೆ: ತಾಲ್ಲೂಕಿನ ಗೋಣಿ ತುಮಕೂರಿನಲ್ಲಿ ಗ್ರಾಮದೇವತೆಗಳಾದ ಶ್ರೀ ಗದ್ದೆ ಕೆಂಪಮ್ಮದೇವಿ ಮತ್ತು ಶ್ರೀ ಆದಿಶಕ್ತಿ ಅರಸಮ್ಮದೇವಿಯ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯ ಗಳೊಂದಿಗೆ ವೈಭವಯುತವಾಗಿ ನಡೆಯಿತು. ಗ್ರಾಮದಲ್ಲಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವದ ಸಂಭ್ರಮದ ಪರಾಕಾಷ್ಠೆ ಮೇಳೈಸಿದ್ದು, ದೇವರಿಗೆ ತಂಬಿಟ್ಟಿನ ಆರತಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಊರಿನ ಮಧ್ಯೆಭಾಗದಲ್ಲಿರುವ ದೇವರ ಗರ್ಭ ಗುಡಿಯಿಂದ ಕಳಸ ಮತ್ತು ಗೂಡೆಗಳೊಂದಿಗೆ ದೇವರನ್ನು ಅದ್ದೂರಿಯಾಗಿ ಊರಿನ ಹೆಬ್ಬಾಗಲಿನ ಮುಖೇನ ಅರಸಮ್ಮ ದೇವಾಲಯಕ್ಕೆ ವಿವಿಧ ವಾದ್ಯಗೋಷ್ಠಿಯೊಂದಿಗೆ ಕರೆದೊಯ್ಯಲಾಯಿತು. ಅರಸಮ್ಮ ದೇವಾಲಯಕ್ಕೆ ತೆರಳಿ ಮೂರು ಸುತ್ತು ದೇವಾಲಯ ಪ್ರದಕ್ಷಿಣೆ ಹಾಕಿದ ನಂತರ ನೆರೆದಿದ್ದ ಊರಿನ ಗ್ರಾಮಸ್ಥರು, ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಜಾತ್ರೆ ಯನ್ನು ಗ್ರಾಮಸ್ಥರು ಅದ್ದೂರಿಯಾಗಿ ಆಚರಿಸಿ ಅಮ್ಮನವರಿಗೆ ಸಕಲ ಸೇವೆಯನ್ನು ಸಲ್ಲಿಸಿ ಪುನೀತರಾದರು.

Read More

ತುಮಕೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಬಗ್ಗೆ ಕೂಲುಕುಷ ತನಿಖೆ ನಡೆಸುವಂತೆ ಬ್ರಾಹ್ಮಣ ಸಭಾದ ಪದಾಧಿಕಾರಿಗಳು ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿರವರ ಮೂಲಕ ರಾಜ್ಯಪಾ ಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಶಿವಮೊಗ್ಗ ಹಾಗೂ ಬೀದರ್ ನಗರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳು ಸಿ.ಇ.ಟಿ.ಪರೀಕ್ಷೆ ಬರೆಯ ಲು ಬಂದಾಗ ಆತನು ಗಾಯತ್ರಿ ದೀಕ್ಷೆ ಪಡೆದು ಧರಿಸಿದ್ದ ಜನಿವಾರವನ್ನು ತೆಗೆಸಿ ಹಾಕಿರುವ ಘಟನೆ ನಡೆದಿರುವುದು ಅಕ್ಷಮ್ಯ ಅಪರಾಧ. ಇದು ನಮ್ಮ ನಂಬಿಕೆ, ಧರ್ಮಕ್ಕೆ, ಜೀವನಶೈಲಿ, ಸಂಸ್ಕಾರ, ಪದ್ದತಿಗಳಿಗೆ ಮಾಡಿರುವ ಅಪಮಾನ. ಕೂಡಲೇ ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮ ಕೈಗೊ ಳ್ಳಬೇಕು ಎಂದು…

Read More

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ ೩೧ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು. ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹ ತ್ವವಾದದ್ದನ್ನು ಬರೆದರೆ ಅವರ ಬಗ್ಗೆ…

Read More

ತುಮಕೂರು: ರಾಜ್ಯ ಸರಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ನ್ಯಾ.ಕಾಂತರಾಜು ಅವರ ಸಮಿತಿಯಿಂದ ನಡೆಸಿರುವ ಸಾಮಾಜಿಕ ಮತ್ತು ಅರ್ಥಿಕ ಸಮೀಕ್ಷೆಯಲ್ಲಿ ಉಪ್ಪಾರ ಜನಾಂಗದ ಸಂಖ್ಯೆಯನ್ನು ಕಡಿಮೆ ನಮೂದಿಸಲಾಗಿದೆ .ಹಾಗಾಗಿ ಮರು ಸಮೀಕ್ಷೆ ನಡೆಸಿ, ಜನಾಂಗಕ್ಕೆ ನ್ಯಾಯ ಒದಗಿಸುವಂತೆ ಅಖಿಲ ಉಪ್ಪಾರ(ಸಗರವಂಶ) ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥ್ ಸರಕಾರವನ್ನು ಒತ್ತಾಯಿಸಿದ್ದಾರೆ. ಭಗೀರಥ ಜಯಂತಿ ಅಂಗವಾಗಿ ಕರೆದಿದ್ದ ಉಪ್ಪಾರ ಸಂಘದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರದ ಜಾತಿಗಣತಿಯ ಸೋರಿಕೆಯಾದ ಮಾಹಿತಿಯಂತೆ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಮಾಹಿತಿಯಂತೆ ರಾಜ್ಯದಲ್ಲಿ ಉಪ್ಪಾರ ಜನಾಂಗದ ಜನಸಂಖ್ಯೆ ೭.೫೦ ಲಕ್ಷ ಎಂದು ತೋರಿಸಲಾಗಿದೆ.ರಾಜ್ಯದಲ್ಲಿ ಉಪ್ಪಾರ ಸಮುದಾಯ ಸುಮಾರು ೩೫ ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.ತುಮಕೂರು ಜಿಲ್ಲೆಯಲ್ಲಿಯೇ ಸುಮಾರು ೧.೫೦ ಲಕ್ಷ ಇದ್ದೇವೆ.ಹಾಗಾಗಿ ಮರು ಸಮೀಕ್ಷೆ ನಡೆಸಿ, ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕೆಂಬುದು ಒತ್ತಾಯವಾಗಿದೆ ಎಂದರು. ಇತ್ತೀಚಗೆ ಅರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿರುವ ಉಪ್ಪಾರ ಸಮಾಜದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ನಮ್ಮ…

Read More

ತುಮಕೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಏಪ್ರಿಲ್ ೧೭ ರಿಂದ ೨೯ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಏಪ್ರಿಲ್ ೨೯ ಹಾಗೂ ೩೦ರಂದು ಆಯೋಜಿಸಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮದ ಅಂಗವಾಗಿ ಈ ರಥಯಾತ್ರೆಯನ್ನು ಆಯೋಜಿಸಲಾಗಿದೆ.  ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ ೧೭ರಂದು ರಥಯಾತ್ರೆಗೆ ಚಾಲನೆ ನೀಡಿದ್ದು,  ರಥಯಾತ್ರೆಯು ನಾಡಿನಾದ್ಯಂತ ಸಂಚರಿಸಿ ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ಪ್ರಚುರಪಡಿಸಲಿದೆ ಎಂದು ತಿಳಿಸಿದರು. ಇಂದು ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸ್ವಾತಂತ್ರö್ಯದ ಬಗ್ಗೆ ನಾವೆಲ್ಲಾ ಮಾತನಾಡುತ್ತಿದ್ದೇವೆ. ಆದರೆ ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ತಮ್ಮ ಅನುಭವ ಮಂಟಪದ ಮೂಲಕ ಮಹಿಳೆಯರು ಸೇರಿದಂತೆ ಎಲ್ಲಾ ಕಾಯಕ ಸಮುದಾಯಗಳಿಗೆ ಸಮಾನ ಅವಕಾಶ…

Read More