ಐಟಿ ದಾಳಿ ಬೆನ್ನಲ್ಲೇ ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು!!

ತುಮಕೂರು:

      ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ಆದ ಬೆನ್ನಲ್ಲೆ ಪರಮೇಶ್ವರ್ ಅವರ ಆಪ್ತ ರಮೇಶ್ ಅವರು ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

      ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿ ಗ್ರೌಂಡ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ಶವ ಪತ್ತೆ ಆಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

       ಹಲವು ವರ್ಷಗಳಿಂದ ರಮೇಶ್ ಅವರು ಪರಮೇಶ್ವರ್ ಗೆ ಆಪ್ತರಾಗಿದ್ದಾರೆ. ಪರಮೇಶ್ವರ್ ಅವರ ಮೇಲೆ ಐಟಿ ದಾಳಿ ಆದಾಗ ರಮೇಶ್ ಅವರನ್ನೂ ಸಹ ಹಲವು ಗಂಟೆಗಳ ಕಾಲ ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

      ಇಂದು ಬೆಳಿಗ್ಗೆ ಹಲವರಿಗೆ ಕರೆ ಮಾಡಿದ್ದ ರಮೇಶ್ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಅನ್ನು ಸ್ವಿಚ್‌ ಆಫ್ ಮಾಡಿದ್ದರು. ರಮೇಶ್ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು, ಆದರೆ ಕೆಲವೇ ಹೊತ್ತಿನ ಮುಂಚೆ ಅವರು ಹೆಣವಾಗಿ ಪತ್ತೆ ಆಗಿದ್ದಾರೆ.

(Visited 6 times, 1 visits today)

Related posts