Author: News Desk Benkiyabale

ಬೆಂಗಳೂರು:       ಪರೀಕ್ಷಾ ಕೇಂದ್ರಗಳಲ್ಲಿನ ನಕಲು ತಡೆಯುವ ಉದ್ದೇಶದಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವೇಳೆ ಕೈ ಗಡಿಯಾರ ಕಟ್ಟಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವುದಕ್ಕೆ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿಷೇಧ ಹೇರಲಾಗಿದೆ.        ಮುಂದಿನ ವರ್ಷ ನಡೆಯಲಿರುವ ಎಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಿಂದ ಈ ನಿಯಮ ಅನ್ವಯವಾಗಲಿದ್ದು, ಪರ್ಯಾಯ ಮಾರ್ಗವಾಗಿ ಪರೀಕ್ಷಾ ಕೇಂದ್ರಗಳಲ್ಲೆ ಗೋಡೆ ಗಡಿಯಾರ ಹಾಕಲು ನಿರ್ಧರಿಸಿದೆ.       ಇದರಿಂದಾಗಿ ವಿದ್ಯಾರ್ಥಿಗಳು ಕೈ ಗಡಿಯಾರ ಬಿಟ್ಟು ಪರೀಕ್ಷಾ ಕೊಠಡಿಗೆ ತೆರಳಬೇಕು. ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಿಇಟಿಯಲ್ಲಿ ಇದನ್ನು ಜಾರಿಗೆ ತರಲಾಗಿತ್ತು. ಕೆಇಎ ತನ್ನ ಹಣದಿಂದಲೇ ಪರೀಕ್ಷಾ ಕೇಂದ್ರಗಳಿಗೆ ಗೋಡೆ ಗಡಿಯಾರ ಖರೀದಿಸಿ ಹಾಕಿತ್ತು.       ಪರೀಕ್ಷಾ ಸಮಯದಲ್ಲಿ ಗಡಿಯಾರ ಇಲ್ಲದಿದ್ದರೆ ನಾವು ಸಮಯದ ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಡಿಜಿಟಲ್ ಗಡಿಯಾರಗಳನ್ನು ಬೇಕಾದರೆ ನಿಷೇಧ ಮಾಡಿ. ಸಾಮಾನ್ಯ ವಾಚ್ ಕಟ್ಟಿಕೊಳ್ಳುವವರಿಗೆ ಪ್ರವೇಶ ನೀಡಬೇಕು. ಅಲ್ಲದೆ,…

Read More

ತುಮಕೂರು :       ಕಟ್ಟಡ ಹಂತದಲ್ಲಿದ್ದ ಆಸ್ಪತ್ರೆಯಲ್ಲಿ ಮಹಿಳೆಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.       ನಗರದ ರಾಜಲಕ್ಷ್ಮೀ ನರ್ಸಿಂಗ್ ಹೋಂನಲ್ಲಿ ಈ ಘಟನೆ ನಡೆದಿದ್ದು, ನೆಲಮಂಗಲ ತಾಲ್ಲೂಕಿನ ಹಳೆ ನಿಜಗಲ್ ಗ್ರಾಮದ ವಸಂತ (32)ಮೃತ ಪಟ್ಟ ದುರ್ದೈವಿ. ಅಪೆಂಡಿಕ್ಸ್ ನಿಂದ ಬಳಲುತ್ತಿದ್ದ ವಸಂತ ನ.21 ರಂದು ರಾಜಲಕ್ಷ್ಮೀ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಳು. ನಿನ್ನೆ ಮದ್ಯಾಹ್ನ ಅಂದರೆ ನ.26 ರಂದು ಡಾ.ನರೇಂದ್ರ ರವರು ವಸಂತಗೆ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ ಮಾಡಿದ್ದರು. ಆಸ್ಪತ್ರೆಯಲ್ಲಿ ಐಸಿಯು ಇಲ್ಲದ ಕಾರಣ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಸಂಜೆ ವೇಳೆಗೆ ಉಸಿರಾಟದ ಸಮಸ್ಯೆ ಅಧಿಕವಾದ ಕಾರಣ ತುರ್ತು ನಿಗಾ ಘಟಕದ ಅಗತ್ಯತೆ ಅನಿವಾರ್ಯವಾಗಿದ್ದು, ಚಿಕಿತ್ಸೆ ನೀಡದೇ ಟಿಎಚ್‍ಎಸ್ ಆಸ್ಪತ್ರೆಗೆ ಮಹಿಳೆಯನ್ನು ವರ್ಗಾಯಿಸಿ ಕೈತೊಳೆದುಕೊಂಡಿದ್ದಾರೆ. ಟಿಹೆಚ್‍ಎಸ್ ಆಸ್ಪತ್ರೆಗೆ ತೆರಳುತ್ತಿದ್ದಂತೆ ವಸಂತ ಮೃತಪಟ್ಟಿದ್ದಾಳೆ. ಆಸ್ಪತ್ರೆ ಯಲ್ಲಿನ ಅವ್ಯವಸ್ಥೆ, ವೈದ್ಯರ ನಿರ್ಲಕ್ಷದಿಂದ ವಸಂತಾ…

Read More

ಮಧುಗಿರಿ  :       ರಾಜ್ಯ ಸರಕಾರ ಗ್ರಾಮೀಣ ಭಾಗದ ಬಡವರು ಹಾಗೂ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದ್ದು, ಫಲಾನುಭವಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.       ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಗರಣಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗರಣಿ ಗ್ರಾ.ಪಂ.ನಿಂದ ವಿವಿಧ ಫಲಾನುಭವಿಗಳಿಗೆ ಹಲವಾರು ಯೋಜನೆಯಡಿ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.       ದೇಶವು ಅಭಿವೃದ್ಧಿ ಪಥದಲ್ಲಿ ಮುನ್ನೆಡೆಯಲು ಮೊದಲು ಹಳ್ಳಿಗಳ ಅಭಿವೃದ್ಧಿಯಾಗಬೇಕು ಎಂದು ರಾಷ್ಟ್ರಪಿತ ಮಹಾತ್ಮ ಗಾಂೀಜಿಯವರು ಹೇಳಿದ್ದರು. ಕುಮಾರಸ್ವಾಮಿ ನೇತೃತ್ವದ ಸರಕಾರವು ಅದೇ ಹಾದಿಯಲ್ಲಿ ಮುನ್ನಡೆಯುತ್ತಿದ್ದು, ಗ್ರಾಮೀಣ ಜನರ ಬದುಕನ್ನು ಆರ್ಥಿಕವಾಗಿ ಸದೃಢವಾಗಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಈ ಕಾರ್ಯಕ್ರಮ ನಡೆಯುತ್ತಿದೆ. ವಿಕಲಚೇತನರಿಗೆ ಸಹಾಯಧನ, ಮನೆಯಿಲ್ಲದವರಿಗೆ ಸೂರು, ಶುದ್ಧ ಕುಡಿಯುವ ನೀರು, ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ವಿತರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗುತ್ತಿದೆ. ಸಾರ್ವಜನಿಕರು ಸರಕಾರಕ್ಕೆ ಸಹಕಾರ ನೀಡಿ, ತಮಗೆ…

Read More

 ಕೊರಟಗೆರೆ:       ಅವೈಜ್ಞಾನಿಕ ಕೇಶಿಪ್ ರಾಜ್ಯ ಹೆದ್ದಾರಿಯ ತಿರುವಿನಲ್ಲಿ ಖಾಸಗಿ ಮತ್ತು  ದ್ವಿಚಕ್ರ ವಾಹನದ ನಡುವೆ ಅಪಘಾತ ಆಗಿ ತನ್ನ ತಮ್ಮನ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಹಿಂದಕ್ಕೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ತಂದೆ ಮತ್ತು ಮಗ ಇಬ್ಬರು ಮೃತ ಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.      ತಾಲೂಕಿನ ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ವಾಸಿಯಾದ ಕೃಷ್ಣಪ್ಪನ ಮಗನಾದ ತಿಮ್ಮಯ್ಯ(62) ಮತ್ತು ತಿಮ್ಮಯ್ಯನ ಮಗನಾದ ವೆಂಕಟೇಶ್(38) ಎಂಬ ತಂದೆಮಗ ಮೃತಪಟ್ಟ ದುರ್ದೈವಿ. ತನ್ನ ಚಿಕ್ಕ ಮಗನ ಮದುವೆಯ ಆಮಂತ್ರಣ ಪತ್ರಿಕೆ ಕೊಟ್ಟು ಹಿಂದಕ್ಕೆ ಬರುವ ದಾರಿಯಲ್ಲಿ ಅಪಘಾತ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.       ಕೊರಟಗೆರೆ ಪಟ್ಟಣದ ಬೈಪಾಸ್‍ಗೆ ಸಂಪರ್ಕ ಕಲ್ಪಿಸುವ ಸಿದ್ದೇಶ್ವರ ಕಲ್ಯಾಣ ಮಂಟಪ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಮಧುಗಿರಿ ಕಡೆಯಿಂದ ತಿರುವಿನಲ್ಲಿ ಅತಿವೇಗದಿಂದ ಬಂದ ಮಾರುತಿ ಕೃಪ ಖಾಸಗಿ ಬಸ್, ಕೊರಟಗೆರೆ ಕಡೆಯಿಂದ ತನ್ನ ಮಲ್ಲೆಕಾವು ಗ್ರಾಮದ…

Read More

ಗುಬ್ಬಿ :       ಖಾಸಗಿ ಒಡೆತನದ ಆರ್.ಸಿ.ಸಿ ಪೋಲ್‍ಗಳನ್ನು ತಯಾರಿಸುವ ಸಿಮೆಂಟ್ ಕಾರ್ಖಾನೆಯ ಹಳ್ಳಕ್ಕೆ ಲಾರಿ ಬಿದ್ದು ಯಾದಗಿರಿ ಮೂಲದ ಕೂಲಿ ಕಾರ್ಮಿಕ ಶಾಂತಪ್ಪ ಅಸುನೀಗಿರುವ ಘಟನೆ ನಡೆದಿದೆ.       ತಾಲ್ಲೂಕಿನ ಎನ್.ಹೆಚ್. 206 ರಸ್ತೆಯ ಬದಿಯಲ್ಲಿರುವ ನಂದಿ ಕಾಂಕ್ರಿಟ್ ಪ್ರಾಡಕ್ಟ್‍ನಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಅನುನಾಳದ ಗ್ರಾಮದ ಶಾಂತಪ್ಪ ಮತ್ತು ಕುಟುಂಬದವರು ಸುಮಾರು ಒಂದೂವರೆ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು ಇಂದು ಬೆಳಗಿನ ಸಮಯದಲ್ಲಿ ಟಿಪ್ಪರ್ ಲಾರಿಯಲ್ಲಿ ಬಂದಂತಹ ಸರಕನ್ನು ಇಳಿಸಲು ಗುಂಡಿಯ ಒಳಗೆ ಇಳಿದಿದ್ದ ಕಾರ್ಮಿಕನಿಗೆ ಮೇಲಿದ್ದ ಲಾರಿಯು ಗುಂಡಿಯು ಕುಸಿದ ಕಾರಣ ಲಾರಿ ಸಮೇತ ಗುಂಡಿಯೊಳಗೆ ಜಾರಿದ ಕಾರಣ ವ್ಯಕ್ತಿಯು ಮೃತಪಟ್ಟಿದ್ದಾನೆ.       ಮೂಕನಹಳ್ಳಿ ಪಟ್ಟಣ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಈ ಕಾರ್ಖಾನೆಗೆ ದಿನಾಂಕ : 12-04-2018ರಂದು ಪರವಾನಗಿ ಪಡೆದಿದ್ದು ಮೂರು ಜನ ಒಡೆತನದ ಈ ಕಾರ್ಖಾನೆಗೆ ಕಾರ್ಮಿಕ ಇಲಾಖೆಯಿಂದ ಯಾವುದೇ ಕಾರ್ಮಿಕರನ್ನು ನೊಂದಾಯಿಸದೆ ಇರುವುದು ಒಂದೆಡೆಯಾದರೆ…

Read More

ಬೆಂಗಳೂರು:     ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ ಅಂಬರೀಶ್(66), ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅಂಬರೀಶ್ ರನ್ನು ಕುಟುಂಬದ ಸದಸ್ಯರು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಾಗಲೇ ಉಸಿರಾಟದ ಸಮಸ್ಯೆ ಮತ್ತು ಕಿಡ್ನಿ‌ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಅವರಿಗೆ ವಿಕ್ರಂ ಆಸ್ಪತ್ರೆಯ ಡಾ.ಸತೀಶ್ ಅವರ ತಂಡ ಚಿಕಿತ್ಸೆ ನೀಡಲು ಸತತ ಪ್ರಯತ್ನ‌ ನಡೆಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಬರೀಶ್ ರಾತ್ರಿ 9.30ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ.  ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.       ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, ಸಚಿವ ಜಾರ್ಜ್, ಮಂಡ್ಯದ ಸಂಸದ ಎಲ್‌. ಆರ್.ಶಿವರಾಮೇಗೌಡ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಮುನಿರತ್ನ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದರು.‌​        ಮಂಡ್ಯದ ಜನರ ಕಣ್ಮಣಿಯಾಗಿ ಮಂಡ್ಯದ ಗಂಡು ಎಂದೇ ಹೆಸರಾಗಿದ್ದರು. ಅಂಬರೀಶ್ ನಿಧನದ ಸುದ್ದಿ ತಿಳಿದು ಆಸ್ಪತ್ರೆಗೆ ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ…

Read More

ದೆಹಲಿ:        ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭಾರತದ ಬಾಕ್ಸಿಂಗ್‌ ತಾರೆ ಎಂ.ಸಿ. ಮೇರಿ ಕೋಮ್‌ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.       ಇಂದು ನಡೆದ 48 ಕೆಜಿ ಲೈಟ್‌ ಫ್ಲೈವೇಟ್‌ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಉಕ್ರೇನ್‌ನ ಎಚ್ ಓಕೋಟೊ ವಿರುದ್ಧ 5-0 ಅಂತರದ ಗೆಲುವು ಸಾಧಿಸುವ ಮೂಲಕ, ಆರು ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ವಿಶ್ವದ ಮೊದಲ ಬಾಕ್ಸಿಂಗ್ ತಾರೆ ಎಂಬ ಗೌರವಕ್ಕೆ ಮೇರಿ ಕೋಮ್ ಪಾತ್ರವಾಗಿದ್ದಾರೆ.        ಮೇರಿ ಕೋಮ್ ಈ ಹಿಂದೆ ಐದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕದೊಡನೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಆಗಿ ಮಿಂಚಿದ್ದರು. ಮೇರಿ ಕೋಮ್‌ 2010ರಲ್ಲಿ ಕೊನೆಯದಾಗಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನ ಗೆದ್ದಿದ್ದರು.

Read More

ಬೆಂಗಳೂರು:       ನವೆಂಬರ್ 25ನೇ ತಾರೀಕು (ಭಾನುವಾರ) ನಿಗದಿಯಾಗಿದ್ದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ (2113 ಹುದ್ದೆಗಳು) ಹುದ್ದೆ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದರ ಬಗ್ಗೆ ರಾಜ್ಯದ ನಾನಾ ಭಾಗಗಳಿಂದ ದೂರುಗಳು ಬಂದಿದ್ದು, 116 ಅಭ್ಯರ್ಥಿಗಳು, ಆರೋಪಿ ಮತ್ತು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.       ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆಯ ಕೊಠಡಿಯೊಂದರಲ್ಲಿ ಅಭ್ಯರ್ಥಿಗಳನ್ನೆಲ್ಲ ಒಟ್ಟಿಗೆ ಮಾಡಿಕೊಂಡು, ಪ್ರಶ್ನೆಪತ್ರಿಕೆ ಹಾಗೂ ಅದಕ್ಕೆ ಉತ್ತರ ಹೇಳಿಕೊಡಲು ಸಿದ್ಧತೆ ನಡೆಸಲಾಗಿತ್ತು. ಶಿವಕುಮಾರ್ ಹಾಗೂ ಬಸವರಾಜ್ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.       ಆ ಮಾಹಿತಿ ಆಧರಿಸಿ ಎರಡು ತಂಡಗಳನ್ನು ರಚಿಸಿಕೊಂಡ ಸಿಸಿಬಿ ಪೊಲೀಸರು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದರು. ಈ ವೇಳೆ ಪ್ರಮುಖ ಆರೋಪಿ ಶಿವಕುಮಾರ್ ನನ್ನು ಬಂಧಿಸಲಾಗಿದೆ. ಪ್ರತಿ ಅಭ್ಯರ್ಥಿಯಿಂದ 6 ರಿಂದ 8 ಲಕ್ಷದವರೆಗೆ ಹಣ ಪಡೆದಿರುವುದಾಗಿಯೂ ಆತ ಒಪ್ಪಿಕೊಂಡಿದ್ದಾನೆ. ಈ ಕೃತ್ಯಕ್ಕಾಗಿ ಬೇರೆ…

Read More

ಗುಬ್ಬಿ :       ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್‍ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ರೇಣುಕಾಚಾರ್ಯ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಧೋರಣೆಗೆ ಜೆ.ಡಿ.ಎಸ್.ಕಾರ್ಯಕರ್ತರು ಹಾಗೂ ಮುಖಂಡರುಗಳು ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ರೇವಣ್ಣ ತಿಳಿಸಿದರು.       ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಚಿವ ಎಸ್.ಆರ್.ಶ್ರೀನಿವಾಸ್‍ರವರು 20 ವರ್ಷಗಳ ರಾಜಕೀಯ ಭವಿಷ್ಯದಲ್ಲಿ ಅಭಿವೃದ್ಧಿಯ ಪಥಕ್ಕೆ ಹೆಚ್ಚಿನ ಒತ್ತು ನೀಡಿದ್ದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿ 7 ಬಾರಿ ದಾವಣಗೆರೆಗೆ ಭೇಟಿ ನೀಡಿದ್ದು ಜಿಲ್ಲೆಯ ಅಭಿವೃದ್ದಿಗೆ ಮಾರಕವಾದ ಮರಳು ದಂಧೆಗೆ ಕಡಿವಾಣ ಹಾಕಿದ್ದು ಮರಳುದಂಧೆಕೋರರಿಗೆ ಅತಿ ಹೆಚ್ಚಿನ ಬೆಂಬಲ ನೀಡುತ್ತಿದ್ದ ರೇಣುಕಾಚಾರ್ಯರವರ ಮಾಮುಲನ್ನು ನಿಲ್ಲಿಸಿದ ಪರಿಣಾಮ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದು ಕೇವಲ ಮೋಜು ಮಸ್ತಿ ಮಾಡಲು ದಾವಣಗೆರೆ ಬರುತ್ತಿದ್ದಾರೆ ಎಂಬ ಹೇಳಿಕೆಯಿಂದ ರಾಜ್ಯದ ಜೆ.ಡಿ.ಎಸ್. ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ತೀವ್ರವಾಗಿ ಖಂಡಿಸಲಿದ್ದಾರೆ ಎಂದ ಅವರು ಭಾರತೀಯ ಜನತಾ…

Read More

ಗುಬ್ಬಿ :       ಅನಾಥಾಲಯದ ಹೆಸರಿನಲ್ಲಿ ಹಣ ದುರ್ಬಳಕೆಯಾಗಿ ವಿದ್ಯಾರ್ಥಿಗಳೇ ಇಲ್ಲದ ಅನಾಥಾಲಯಕ್ಕೆ 2017-18ನೇ ಸಾಲಿನಲ್ಲಿ 93 ವಿದ್ಯಾರ್ಥಿಗಳಿಗೆ 77,13,300 ರೂ.ಗಳನ್ನು ಸಭೆಯ ಅನುಮೋದನೆ ಪಡೆಯದೆ ನೀಡಿರುವುದು ಎಷ್ಟು ಸಮಂಜಸ ಎಂದು ದೇವರಾಜು ಅರಸು ಅಭಿವೃದ್ದಿ ನಿಗಮದ ಅಧಿಕಾರಿಗಳನ್ನು ಸಚಿವ ಎಸ್.ಆರ್.ಶ್ರೀನಿವಾಸ್ ತರಾಟೆಗೆ ತೆಗೆದುಕೊಂಡ ಘಟನೆ ಕೆ.ಡಿ.ಪಿ ಸಭೆಯಲ್ಲಿ ನಡೆಯಿತು.       ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಕರೆದಿದ್ದ ಕೆ.ಡಿ.ಪಿ ಸಭೆಯ ಇಲಾಖಾವಾರು ಅಭಿವೃದ್ದಿಯ ಸಭೆಯಲ್ಲಿ ಮಾತನಾಡಿದ ಅವರು ಹಿಂದಿನ ಬಾರಿಯೇ ಈ ಬಗ್ಗೆ ವಿವರಣೆ ಕೇಳಿದ್ದು ಇಲ್ಲಿಯವರೆಗೂ ಯಾವುದೇ ದಾಖಲಾತಿಯನ್ನು ಕೇಳದೆ ಸರ್ಕಾರದ ಹಣವನ್ನು ಪೋಲು ಮಾಡುತ್ತಿರುವ ಅಧಿಕಾರಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂಗಳನ್ನು ನೀಡುವಲ್ಲಿ ಸರಿಯಾದ ಮಾಹಿತಿ ನೀಡದೆ ಇಲಾಖೆಯ ಅನುಮತಿ ಪಡೆಯದೆ ಎಸ್.ಡಿ.ಎಂ.ಸಿ ಸದಸ್ಯರುಗಳೇ ಶೂಗಳನ್ನು ಖರೀದಿಸುವ ಹಕ್ಕನ್ನು ನೀಡಿ ಕಳಪೆ ಕಂಪನಿಯ ಶೂಗಳನ್ನು ನೀಡುತ್ತಿದ್ದು ಇಲ್ಲಿನ ಶಿಕ್ಷಣಾಧಿಕಾರಿಗಳು ಪರಿಶೀಲಿಸದೆ…

Read More