Author: News Desk Benkiyabale

 ತುಮಕೂರು:       ನಮ್ಮ ನಾಡಿನ ಭವ್ಯ ಪರಂಪರೆ, ಸಂಸ್ಕೃತಿಯನ್ನು ಉಳಿಸುವ ಜತೆಗೆ ಕನ್ನಡ ಶಾಲೆಗಳನ್ನು ಸಂರಕ್ಷಿಸಬೇಕು ಎಂದು ಸಾಹಿತಿ ಕವಿತಾಕೃಷ್ಣ ಸರ್ಕಾಕವನ್ನು ಒತ್ತಾಯಿಸಿದರು.       ಇಲ್ಲಿನ ಮಾರುತಿ ನಗರದಲ್ಲಿ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ದೇಶದ ವಿವಿಧ ರಾಜ್ಯಗಳ ಭಾಷೆಗಳು ರಾಷ್ಟ್ರಭಾಷೆಯಾಗಿದ್ದು, ನಮ್ಮ ಕನ್ನಡವೂ ಸಹ ರಾಷ್ಟ್ರಭಾಷೆಯೇ ಆಗಿದೆ ಎಂದರು.       ಕರ್ನಾಟಕಕ್ಕೆ ನಮ್ಮ ತುಮಕೂರು ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದವರಲ್ಲಿ ನಮ್ಮ ಜಿಲ್ಲೆಯ ಶಿವಮೂರ್ತಿ ಶಾಸ್ತ್ರಿಗಳು ಪ್ರಮುಖರಾಗಿದ್ದಾರೆ. ಇನ್ನು ಈ ದೇಶಕ್ಕೆ ರಾಷ್ಟ್ರಪತಿ ಎಂಬ ಶಬ್ದವನ್ನು ಪರಿಚಯಿಸಿದವರು ನಮ್ಮ ಜಿಲ್ಲೆಯ ಹೆಮ್ಮೆಯ ಸಾಹಿತಿ ದಿ. ತೀ.ನಂ.ಶ್ರೀ.ರವರು ಎಂದು ಅವರು ಹೇಳಿದರು. ಇಂದು ಕನ್ನಡತನ ಮಾಯವಾಗುತ್ತಿದೆ. ಅಪ್ಪ, ಅಮ್ಮ ಎಂದು ಮುದ್ದಿನಿಂದ ಕನ್ನಡದಲ್ಲಿ ಕರೆಯುವುದು ಕ್ಷೀಣವಾಗುತ್ತಿದ್ದು, ಮಮ್ಮಿ-ಡ್ಯಾಡಿ ಸಂಸ್ಕೃತಿ ಆವರಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.    …

Read More

ಚಿಕ್ಕನಾಯಕನಹಳ್ಳಿ :       ತುಮಕೂರು ವಿಶ್ವವಿದ್ಯಾನಿಲಯದಲ್ಲಿ ತೀ.ನಂ.ಶ್ರೀ ಅಧ್ಯಯನ ಕೇಂದ್ರ ಸ್ಥಾಪಿಸುವಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದರು.       ಪಟ್ಟಣದಲ್ಲಿ ತೀ.ನಂ.ಶ್ರೀ 113ನೇ ಜನ್ಮದಿನಾಚರಣೆ ಅಂಗವಾಗಿ ಆಚಾರ್ಯ ತೀ.ನಂ.ಶ್ರೀಕಂಠಯ್ಯನವರ ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ತೀ.ನಂ.ಶ್ರೀ ಗುರು ಪರಂಪರೆಯಲ್ಲಿ ಅದ್ವಿತೀಯ ನಾಯಕ ಹಾಗೂ ಚಿಂತಕ, ವಿದ್ವತ್ ಹಾಗೂ ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡು ಸಮಕಾಲೀನ ವಿದ್ವಾಂಸರೊಂದಿಗೆ ವಿನಯತೆಯನ್ನು ಸಾರಿದ ವ್ಯಕ್ತಿ, ತೀ.ನಂ.ಶ್ರೀಯವರ ಕಾವ್ಯಮೀಮಾಂಸೆ ಸಾಹಿತ್ಯದ ಅಧ್ಯಯನಕ್ಕೆ ಭದ್ರ ಬುನಾದಿ ಹಾಕಿದೆ, ಬಿ.ಎಲ್.ಎನ್.ಎನ್, ಬಿ.ಎಂ.ಶ್ರೀ ಮುಂತಾದವರ ಸಾಲಿನಲ್ಲಿ ತೀ.ನಂ.ಶ್ರೀಯವರ ಕಾವ್ಯ ಹೆಚ್ಚು ವಿಶಿಷ್ಠತೆಯನ್ನು ಮೆರೆದಿದೆ.       ಮರೆಯಾಗುತ್ತಿರುವ ಮಾನವೀಯ ಮೌಲ್ಯಗಳ ನಡುವೆ ತೀ.ನಂ.ಶ್ರೀಯವರ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ಆದರ್ಶ, ತಾಲ್ಲೂಕಿನಲ್ಲಿ ನಿರ್ಮಾಣವಾಗಿರುವ ತೀ.ನಂ.ಶ್ರೀ ಭವನ ಒಂದು ಸಾಂಸ್ಕøತಿಕ ಚಟುವಟಿಕೆಗಳ ಕೇಂದ್ರವಾಗಲಿ, ಶೈಕ್ಷಣಿಕವಾಗಿ ತೀ.ನಂ.ಶ್ರೀ ವಿಚಾರಗಳ ಕುರಿತು ಸಂಶೋಧನೆಗಳಾಗಲಿ ಎಂದು ಆಶಿಸಿದ ಅವರು, ತೀ.ನಂ.ಶ್ರೀ ಅಧ್ಯಯನ ಪೀಠದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ…

Read More

ತುಮಕೂರು :       ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳಂತೆ ಜಲಾನಯನ ಅಭಿವೃದ್ಧಿ ಇಲಾಖೆಯ ಕಾಮಗಾರಿಗಳನ್ನೂ ಸಹ ನರೇಗಾ ಯೋಜನೆಯಡಿ ಕೈಗೊಳ್ಳಬೇಕೆಂದು ಜಲಾನಯನ ಅಭಿವೃದ್ದಿ ಇಲಾಖಾಯುಕ್ತ ಪ್ರಭಾಷ್ ಚಂದ್ರ ರೇ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಪಂಚಾಯತಿಯ ಜಂಟಿ ಆಶ್ರಯದಲ್ಲಿ ಶನಿವಾರ ಬಾಲಭವನದಲ್ಲಿ ನರೇಗಾ ಯೋಜನಾನುಷ್ಠಾನಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.       ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬಕ್ಕೂ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಉದ್ಯೋಗ ನೀಡುವಲ್ಲಿ ನಿರ್ಗತಿಕರು, ಕಡು ಬಡವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೆಚ್ಚಿನ ಪ್ರಥಮಾದ್ಯತೆ ನೀಡಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಾನವ ದಿನಗಳನ್ನು ಸೃಜಿಸುವ ಪ್ರಮಾಣವನ್ನು 100 ರಿಂದ 150ಕ್ಕೆ ಹೆಚ್ಚಿಸಲಾಗಿದ್ದು, ಎಲ್ಲಾ ಅನುಷ್ಠಾನಾಧಿಕಾರಿಗಳು ಕಡ್ಡಾಯವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗಧಿತ ಗುರಿಯನ್ನು…

Read More

ಮಂಡ್ಯ:        ಹೃದಯ ವಿದ್ರಾವಕ ಘಟನೆಯೊಂದರಲ್ಲಿ, ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್​ ವಿ.ಸಿ.ನಾಲೆಗೆ ಉರುಳಿ ಸುಮಾರು30 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.       ನಾಲೆಯಲ್ಲಿ ಬಸ್‌ ಸಂಪೂರ್ಣ ಮುಳುಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಸದ್ಯಕ್ಕೆ 30 ಮೃತದೇಹಗಳನ್ನು ಹೊತೆಗೆಯಲಾಗಿದ್ದು, ಮಂಡ್ಯ, ಮೈಸೂರಿನಿಂದ ಆರು ಅಗ್ನಿಶಾಮಕ‌ ಮತ್ತು ತುರ್ತು ಸೇವೆಗಳ ಸಿಬ್ಬಂದಿ ನಿಯೋಜಿಸಲಾಗಿದೆ. ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಸಿಬ್ಬಂದಿ ಸೇರಿ ಸುತ್ತಮುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದಾರೆ. 35ಕ್ಕೂ ಹೆಚ್ಚು ಮಂದಿ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.       ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದೆ. ನಾಲೆಗೆ ತಡೆಗೋಡೆ ಇಲ್ಲದಿರುವುದೂ ಬಸ್​ ಸುಲಭವಾಗಿ ನಾಲೆಗೆ ಉರುಳಲು ಕಾರಣ ಎನ್ನಲಾಗಿದೆ.       ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ…

Read More

ಮೈಸೂರು:       ಈಗಾಗಲೇ ನಮ್ಮಿಬ್ಬರದು ಮದುವೆಯಾಗಿದೆ. ಸಂಸಾರ ಚೆನ್ನಾಗಿ ನಡೆಯುತ್ತಿದೆ. ನಮ್ಮದೇನು ಬೇರೆ ಬೇರೆ ಕುಟುಂಬವಲ್ಲ. ಒಂದೇ ಕುಟುಂಬ ಆಗಿರುವುದರಿಂದ ಬಾಳ್ವೆ ಚೆನ್ನಾಗಿ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ತಿಳಿಸಿದರು.       ಮೈತ್ರಿ ಸರ್ಕಾರ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು,“ಇಂದು ಸಮ್ಮಿಶ್ರ ಸರಕಾರ ಆರು ತಿಂಗಳನ್ನು ಪೂರೈಸಿದೆ. ಮೈತ್ರಿ ಸರಕಾರ ಚೆನ್ನಾಗಿ ಸಂಸಾರ ಮಾಡುತ್ತಿದೆ. ತೊಂದರೆ ಏನು ಇಲ್ಲ. ನಮ್ಮದೇನು ಬೇರೆ ಬೇರೆ ಕುಟುಂಬವಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ಕುಟುಂಬವಾಗಿದೆ” ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.       ಇಂದು ದೋಸ್ತಿ ಸರಕಾರಕ್ಕೆ ಅರ್ಧವಾರ್ಷಿಕ ಸಂಭ್ರಮ. ಮೈತ್ರಿ ಸರಕಾರ ರಚನೆಯಾಗಿ ಇಂದಿಗೆ ಆರು ತಿಂಗಳನ್ನು ಪೂರೈಸಿದೆ. 2018 ಮೇ 23 ರಂದು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.  

Read More

ಬೆಂಗಳೂರು :       ರಾಜ್ಯದ ರೈತರ ಆತ್ಮಹತ್ಯೆಗೆ ಮುಖ್ಯಮಂತ್ರಿಯೇ ಹೊಣೆ. ಈ ಸಾಂದರ್ಭಿಕ ಶಿಶುವಿಗೆ ಯಾವುದೇ ಗೊತ್ತು ಗುರಿ ಇಲ್ಲ. ಸರ್ಕಾರದ ಮೇಲೆ ಸಿಎಂಗೆ ಹಿಡಿತವೇ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.       ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಒಳ್ಳೆಯ ಕೆಲಸ ಮಾಡಿದ್ರೆ ಅವರೇ 5 ವರ್ಷ ಸಿಎಂ ಆಗಿರಲಿ. ಆದ್ರೆ, 6 ತಿಂಗಳು ಅಧಿಕಾರದಲ್ಲಿ ಇರೋದನ್ನೇ ಇವರು ಸಾಧನೆ ಅಂದುಕೊಂಡಿದ್ದಾರೆ. ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದ್ದು, ಕುಮಾರಸ್ವಾಮಿ ಸರಕಾರ ಏನಾದರೂ ಸಾಧನೆ ಮಾಡಿದ್ದರೆ ರೈತರು ಏಕೆ ಆತ್ಮಹತ್ಯೆಗೆ ಶರಣಾಗುತ್ತಿದ್ದರು ಎಂದು ಪ್ರಶ್ನಿಸಿರುವ ವಿಪಕ್ಷ ನಾಯಕ ಯಡಿಯೂರಪ್ಪ, ರೈತರೇ ಸಿಎಂ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅವರೇ ನೇರ ಹೊಣೆ ಎಂದು ದೂರಿದ್ದಾರೆ.       ಜನರ ಸಮಸ್ಯೆಗಳನ್ನು ಆಲಿಸುವ ಪ್ರಮೇಯವೇ ಇಲ್ಲ. ಮಹಿಳೆಯರು ಮತ್ತು ರೈತರಿಗೆ ಅಪಮಾನ ಮಾಡುವುದು ಮತ್ತು ದರ್ಪದ ಮಾತುಗಳನ್ನು…

Read More

ಮಂಡ್ಯ:        ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಂಡ್ಯ ಭೇಟಿ ದಿನವೇ ರೈತರೊಬ್ಬರು ಸಾಲಬಾಧೆ ಮತ್ತು ಅನಾರೋಗ್ಯ ಸಮಸ್ಯೆ ತಾಳಲಾರದೆ ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆೆ ಮಾಡಿಕೊಂಡ ಘಟನೆ ತಾಲೂಕಿನ ಕನ್ನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.      ಜೈಕುಮಾರ(43) ಮೃತ ರೈತ. ತನ್ನ ಸಾಲ ಮತ್ತು ಅನಾರೋಗ್ಯದ ಸಮಸ್ಯೆೆ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಳಾಸಕ್ಕೆೆ ಡೆತ್‌ನೋಟ್ ಬರೆದಿಟ್ಟು, ಆತ ತನ್ನ ಜಮೀನಿನ ಬಳಿ ವಿಷ ಸೇವಿಸಿ, ಆತ್ಮಹತ್ಯೆೆ ಮೊರೆ ಹೋಗಿದ್ದಾನೆ. 35 ಗುಂಟೆ ಜಮೀನು ಹೊಂದಿದ್ದ ರೈತ ಜೈಕುಮಾರ ಕಬ್ಬು ಮತ್ತು ತರಕಾರಿ ಬೇಸಾಯ ಮಾಡುತ್ತಿದ್ದರು. 2.80 ಲಕ್ಷ ರು. ಸಾಲ ಮಾಡಿಕೊಂಡಿದ್ದರು. ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರ ಚಿಕಿತ್ಸೆೆಗೆ 3 ಲಕ್ಷ ರು. ಅಗತ್ಯವೆಂದು ವೈದ್ಯರು ತಿಳಿಸಿದ್ದರು.       ಒಂದೆಡೆ ಸಾಲ, ಮತ್ತೊಂದೆಡೆ ಮಾರಕ ಕ್ಯಾನ್ಸರ್. ಎರಡರಿಂದ ಬೇಸತ್ತ ಜೈಕುಮಾರ ಆತ್ಮಹತ್ಯೆೆ ಮೊರೆ ಹೋದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಶಿವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.…

Read More

ಬೆಂಗಳೂರು:       ಸಮ್ಮಿಶ್ರ ಸರ್ಕಾರದ ಸಿಎಂ ಹೇಳುವುದೊಂದು, ಮಾಡುವುದೊಂದು. ಸರ್ಕಾರ ದಿವಾಳಿಯಾಗಿದೆ. ಸರ್ಕಾರ ಸತ್ತು ಹೋಗಿದೆ. ರಾಜ್ಯದಲ್ಲಿ ಸರ್ಕಾರ ಎಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಿಡಿಕಾರಿದ್ದಾರೆ.       ಶುಕ್ರವಾರ ವಿಧಾನಸೌಧದಲ್ಲಿನ ವಿಪಕ್ಷ ನಾಯಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಈ ಸರಕಾರ ಅಸ್ತಿತ್ವದಲ್ಲೆ ಇಲ್ಲ, ಸತ್ತು ಹೋಗಿದೆ’ ಎಂದು  ಟೀಕಿಸಿದ್ದಾರೆ.        ಐದಾರು ತಿಂಗಳಿಂದ ಪಿಂಚಣಿ ನೀಡಲು ಈ ಸರಕಾರದ ಬಳಿ ಹಣವಿಲ್ಲ. ವಿವಿಧ ಕಾಮಗಾರಿಗಳ 6 ಸಾವಿರ ಕೋಟಿ ರೂ.ಬಿಲ್ ಬಾಕಿ ಇದೆ. ಇನ್ನೂ 46 ಸಾವಿರ ಕೋಟಿ ರೂ.ರೈತರ ಸಾಲಮನ್ನಾವೂ ಆಗಿಲ್ಲ. ಸರಕಾರದ ಖಜಾನೆ ಖಾಲಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.        ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದೆ. ಸಕ್ಕರೆ ಸಚಿವರು ಇದ್ದಾರೆಂದು…

Read More

ಮಧುಗಿರಿ :       ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲಾ ಮಗು ಎಂದು ಹಸುಳೆ ದ್ರುವನಿಗೆ ನಾರದ ಮಹರ್ಷಿ ಹೇಳಿದಂತೆ ಮಹಿಳೆಯೊಬ್ಬರು ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ರಾಜ್ಯ ಸರಕಾರದ ಒಂದು ನೌಕರಿ ಮತ್ತು ನಾಲ್ಕು ಅಧಿಕಾರಿ ಸ್ಥಾನವನ್ನು ಗಿಟ್ಟಿಸಿರುವ ಗ್ರಾಮೀಣ ಬಹುಮುಖ ಪತ್ರಿಭೆ ಮಧುಗಿರಿ ತಾಲೂಕಿನ ತವಕದಹಳ್ಳಿ ಗ್ರಾಮದವರಾಗಿದ್ದಾರೆ.       ತವಕದಹಳ್ಳಿ ಗ್ರಾಮದ ಟಿ.ರಮ್ಯ ಈ ಸಾಧನೆ ಮಾಡಿರುವ ಸಾಧಕಿಯಾಗಿದ್ದು ಈಕೆ ಪ್ರಾಥಮಿಕ ಶಿಕ್ಷಣವನ್ನು ತವಕದಹಳ್ಳಿ ಗ್ರಾಮದಲ್ಲಿ, ಬಿಜವರ ಗ್ರಾಮದಲ್ಲಿ ಪ್ರೌಢಶಿಕ್ಷಣವನ್ನು ತುಮಕೂರಿನಲ್ಲಿ ಪಿಯುಸಿ ಮತ್ತು ಡಿಇಡಿ ವಿದ್ಯಾಭ್ಯಾಸವನ್ನು ಮುಂದುವರೆಸಿದ್ದರು. ಡಿಇಡಿ ಅಂತಿಮ ಹಂತದಲ್ಲಿದ್ದಾಗ 2006 ರಲ್ಲಿ ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಗೆ ಅರ್ಜಿಸಲ್ಲಿಸಿ, 2007 ರಲ್ಲಿ ಪೊಲೀಸ್ ಇಲಾಖೆಗೆ ನೇಮಕವಾದ ನಂತರ ಡಿಇಡಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದರು. ಆಗ ಅವರು 19 ವರ್ಷ ಪೂರೈಸಿದ್ದರು. ಧಾರವಾಡದಲ್ಲಿ ತರಬೇತಿಯಲ್ಲಿದ್ದಾಗಲೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೂಲಕ ಬಿಎ ಪದವಿ ಪಡೆದರು.       ಅದಾದನಂತರ ದೂರಶಿಕ್ಷಣದ ಮೂಲಕ…

Read More

ಮಧುಗಿರಿ :       ಗಂಡನಿಂದ ಹೆಂಡತಿಗೆ ದಾನಪತ್ರ ನೊಂದಣಿ ಮಾಡಿಸುವ ಸಲುವಾಗಿ 5 ಸಾವಿರ ರೂಗಳ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರರ್ ವೈ.ಎನ್. ರಾಮಚಂದ್ರಯ್ಯ ಎಸಿಬಿ ಬಲೆಗೆ ಶುಕ್ರವಾರ ಸಿಕ್ಕಿ ಬಿದ್ದಿದ್ದಾರೆ.       ಮಧುಗಿರಿ ತಾಲೂಕಿನ ಪುರವರ ಹೋಬಳಿ ಚಿಕ್ಕಹೊಸಹಳ್ಳಿ ಗ್ರಾಮದ ಸರ್ವೆ ನಂಬರ್ 21/10 ರ 2 ಎಕರೆ 14 ಗುಂಟೆ ಜಮೀನಿನ್ನು ತನ್ನ ಪತ್ನಿಯ ಹೆಸರಿಗೆ ದಾನಪತ್ರವನ್ನು ಮಾಡಿಸಲು ಮುದ್ದಯ್ಯನಪಾಳ್ಯದ ದೇವರಾಜು ಎಂಬುವವರು ನ. 20 ರಂದು ಸಬ್ ರಿಜಿಸ್ಟ್ರರ್ ರಿಂದ ಮಾಹಿತಿ ಪಡೆದಿದ್ದರು ಈ ವೇಳೆ ನಡೆದಿದ್ದ ಒಂದು ಎಕರೆಗೆ 5 ಸಾವಿರದಂತೆ ನಡೆದ ಲಂಚದ ಮಾತುಕತೆಯನ್ನು ವೀಡಿಯೋ ಚಿತ್ರಿಕರಣ ಮಾಡಿಕೊಂಡು ಎಸಿಬಿಗೆ ನೀಡಿದ್ದರು. ಅದರ ಆಧಾರದಂತೆ ನ.23 ರಂದು ಚಿಕ್ಕಹೊಸಹಳ್ಳಿ ಗ್ರಾಮದ ಸುರೇಂದ್ರರೆಡ್ಡಿ ಹಾಗೂ ಮುದ್ದಯ್ಯನಪಾಳ್ಯದ ನಾಗರಾಜು ರವರ ಸಹಕಾರದೊಂದಿಗೆ ದೇವರಾಜು ಎಸಿಬಿಯವರು ನೀಡಿದ್ದ 5 ಸಾವಿರ ಹಣವನ್ನು ಕಚೇರಿಯ ಗುಮಾಸ್ಥ ರಂಗನಾಥನಿಗೆ ನೀಡಿದ್ದಾರೆ. ನಂತರ ತುಮಕೂರು ಡಿವೈಎಸ್‍ಪಿ ಪಿ.…

Read More