Author: News Desk Benkiyabale

ತುಮಕೂರು: ಜಗತ್ತಿಗೆ ಶಾಂತಿ ಹಾಗೂ ಅಹಿಂಸೆಯ ಅಸ್ತçಗಳನ್ನು ಕೊಟ್ಟಂತಹವರು ಮಹಾತ್ಮ ಗಾಂಧೀಜಿ, ಸರಳತೆಯನ್ನು ತಿಳಿಸಿಕೊಟ್ಟವರು ಲಾಲ್ ಬಹದ್ದೂರ್ ಶಾಸ್ತಿçಜೀ. ಇಂತಹ ಮಹನೀಯರು ಹಾಕಿ ಕೊಟ್ಟಂತಹ ಆದರ್ಶಗಳನ್ನು ಅನುಕರಣೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ೧೫೪ನೇ ಮಹಾತ್ಮ ಗಾಂಧಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮದಿನಾಚರಣೆ ಹಾಗೂ ಪ್ರಬಂಧ ವಿಜೇತ ಅಭ್ಯರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಅವರು, ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯ ಪೂರ್ವ ಚಳುವಳಿ ಸಂಬAಧ ಜಾಗೃತಿ ಮೂಡಿಸಲು ೧೯೨೭ರ ಆಗಸ್ಟ್ ತಿಂಗಳಿನಲ್ಲಿ ಕಸ್ತೂರಬಾರವರೊಂದಿಗೆ ಆಗಮಿಸಿದ್ದರು ಎಂದು ಸ್ಮರಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಂಗಿದ್ದ ಮಹಾತ್ಮ ಗಾಂಧೀಜಿಯವರು ಬಹಿರಂಗ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದರು. ಮರುದಿನ ಬೆಳಿಗ್ಗೆಯೇ ಕೋತಿತೋಪು ಬಳಿಯ ಹರಿಜನರ ಕೇರಿಗೆ…

Read More

ತುಮಕೂರು ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧೀಜಯAತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದವರು ತುಮಕೂರು ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು ಆಗಮಿಸಿದ್ದರು. ಮೊದಲಿಗೆ ೧೯೨೭ರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣಕ್ಕೆ ಬಂದು ಒಂದು ದಿನ ತಂಗಿ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಅಸ್ಪೃಶ್ಯತೆ ಬಗ್ಗೆ ಕುರಿತು ಮಾತನಾಡಿದರು ಹಾಗೂ ೧೯೩೦ರಲ್ಲಿ ಮತ್ತೊಮ್ಮೆ ತುಮಕೂರಿಗೆ ಭೇಟಿ ನೀಡಿ ಸ್ವಾತಂತ್ರ‍್ಯ ಹೋರಾಟದ ಬಗ್ಗೆ ಜನರಿಗೆ ಹೇಳಿದ್ದರು ಗಾಂಧೀಜಿಯವರು ತುಮಕೂರಿಗೆ ಭೇಟಿ ನೀಡಿ ತಂಗಿದ್ದ ಕೊಠಡಿಯನ್ನು ಪಾಲಿಕೆ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ ಹಾಗೂ ಆ ಕೊಠಡಿ ಮುಂಭಾಗದಲ್ಲಿ ಗಾಂಧಿ ಪ್ರತಿಮೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೀಗುತ್ತಿದ್ದ ಬ್ರಿಟಿಷರಿಗೆ ತನ್ನ ಅಹಿಂಸಾ…

Read More

ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿ ೪೦೦ ಸ್ವಸಹಾಯ ಗುಂಪಿನ ಸದಸ್ಯರು ಹಾಗೂ ನಗರಸಭಾ ಸದಸ್ಯರನ್ನು ತೊಡಗಿಸಿಕೊಂಡು ಹೆಚ್ಚಾಗಿ ಕಸ ಬಿದ್ದಿರುವ ೧೦೦ಕ್ಕೂ ಹೆಚ್ಚು ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸ್ವಚ್ಛಗೊಳಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತೆ ಬಿ.ವಿ. ಅಶ್ವಿಜಾ ಅವರು ತಿಳಿಸಿದರು. ನಗರದ ಎಂಪ್ರೆಸ್ ಕಾಲೇಜಿನಲ್ಲಿಂದು ಏರ್ಪಡಿಸಲಾಗಿದ್ದ “ಯೋಗ ಶಿಬಿರದ ಮೂಲಕ ಸ್ವಚ್ಛತಾ ಅರಿವು” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್ ಮಾಹೆಯ ೧೬ ರಿಂದ “ಸ್ವಚ್ಛತಾ ಹೀ ಸೇವಾ ಆಂದೋಲನ” ಕಾರ್ಯಕ್ರಮದಡಿ ನಗರದಾದ್ಯಂತ ರಸ್ತೆ, ಶೌಚಾಲಯ, ಬಸ್ ನಿಲ್ದಾಣ, ಶಾಲೆ, ಅಂಗನವಾಡಿ, ಕೆರೆ, ಉದ್ಯಾನವನ ಸೇರಿದಂತೆ ಮತ್ತಿತರ ಸ್ಥಳಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ತಿಳಿಸಿದರು. ಎಲೆಕ್ಟಾçನಿಕ್ ಉಪಕರಣಗಳಿಂದ ಉತ್ಪತ್ತಿಯಾಗುವ ಇ-ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ಅದರಲ್ಲಿರುವ ರಾಸಾಯನಿಕ ವಸ್ತುಗಳಿಂದ ಆರೋಗ್ಯದ ದುಷ್ಪರಿಣಾಮ ಉಂಟಾಗುತ್ತದೆ ಹಾಗೂ ಎಲೆಕ್ಟಿçಕ್ ವೈರ್, ಲೆಡ್, ಎ.ಸಿ, ಟಿವಿ, ಫ್ರಿಡ್ಜ್ಗಳಂತಹ ಎಲೆಕ್ಟಾçನಿಕ್ ಉಪಕರಣಗಳಲ್ಲಿ ಬಳಸಿರುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬೆರೆತು ಪರಿಸರವೂ ಕಲುಷಿತವಾಗುತ್ತದೆ. ಈ ನಿಟ್ಟಿನಲ್ಲಿ ಮನೆ-ಮನೆಗೂ ಭೇಟಿ ನೀಡಿ…

Read More

ತುಮಕೂರು: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ರೀಡಾಕೂಟದ ಅಂಗವಾಗಿ ಶಾಲೆಗೆ ಭೇಟಿ ನೀಡಿ ಸಿ.ಎಸ್.ಐ ಸಭೆಯ ಪಾಲಕರು ಹಾಗೂ ಸಮುದಾಯದ ಮುಖಂಡರಿಗೆ ಶುಭ ಕೋರಿದರು. ಸಿಎಸ್‌ಐ ವೆಸ್ಲಿ ದೇವಾಲಯದ ೧೭೫ ವರ್ಷಾಚರಣೆಯ ಅಂಗವಾಗಿ ಅಂತರ ಸಭೆಗಳ ಕ್ರೀಡಾಕೂಟವನ್ನು ಬಿಷಫ್ ಸಾರ್ಜೆಂಟ್ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ರೀಡಾಕೂಟದ ಅಂಗವಾಗಿ ಶಾಲೆಗೆ ಭೇಟಿ ನೀಡಿ ಸಿ.ಎಸ್.ಐ ಸಭೆಯ ಪಾಲಕರು ಹಾಗೂ ಸಮುದಾಯದ ಮುಖಂಡರಿಗೆ ಶುಭ ಕೋರಿದರು. ಸಿಎಸ್‌ಐ ವೆಸ್ಲಿ ದೇವಾಲಯದ ೧೭೫ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಕ್ರೀಡಾಕೂಟವನ್ನು ಕೆಪಿಸಿಸಿ ವಕ್ತಾರರಾದ ನಿಕೇತ್‌ರಾಜ್ ಮೌರ್ಯ,ಏರಿಯಾ ಚೆರ್ಮನ್ ಮನೋಜ್‌ಕುಮಾರ್ ವೆಸ್ಲಿ ದೇವಾಲಯದ ಸಭಾ ಪಾಲಕರಾದ ಮಾರ್ಗನ್ ಸಂದೇಶ್, ಸುಧೀರ್,ವಿಕ್ಬರ್ ಜೀ.ಹೆಬಿಕ್ ,ಮಿಥುನ್ ಕುಮಾರ್, ವೋಕೇಷನ್ ಸೆಂಟರ್‌ನ ಅಧೀಕ್ಷಕರಾ ಪ್ರಸಾದ್, ಯುಸಿಸಿ ಪ್ರಾಂಶುಪಾಲರಾದ ಜಾಯ್ ನರೇಲ್,ವೆಸ್ಲಿ ದೇವಾಲಯದ ಕಾರ್ಯದರ್ಶಿ ಸುರೇಶ್‌ಬಾಬು,ಖಜಾಂಚಿ ಸುಂದರ್‌ರಾಜ್ ಅವರುಗಳು ಶಾಂತಿಯ ಸಂಕೇತವಾದ ಪಾರಿವಾಳ ಮತ್ತು ಬಲೂನ್ ಹಾರಿ…

Read More

ಗುಬ್ಬಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನ ವಿರೋಧಿಸಿ ಗುಬ್ಬಿ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣವಾಗಿ ಗುಬ್ಬಿಯನ್ನು ಬಂದ್ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವನ್ನು ಮಾಡಲು ಸಿದ್ಧವಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಮಾತನಾಡಿ ಮಂಡ್ಯ, ಮೈಸೂರು, ಹಾಗೂ ಬೆಂಗಳೂರು ಭಾಗಗಳಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿ ಈಗಾಗಲೇ ಪ್ರತಿಭಟನೆ ಹಾಗೂ ಬಂದ್ ಗಳನ್ನ ಮಾಡಲಾಗಿದೆ, ಅದೇ ರೀತಿಯಲ್ಲಿ ರಾಜ್ಯಾದ್ಯಂತ ಫೆಬ್ರವರಿ ೨೯ಕ್ಕೆ ಕರೆದಿರುವ ಕರ್ನಾಟಕ ಬಂದ್ ಗೂ ಸಹ ಎಲ್ಲಾ ಸಂಘಟನೆಗಳು ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ಸಹ ಇದರಲ್ಲಿ ಭಾಗಿಯಾಗುವ ಮೂಲಕ ನಮ್ಮ ನೀರನ್ನು ನಾವು ಉಳಿಸಿಕೊಳ್ಳುವ ಮೂಲಕ ರಾಜ್ಯವನ್ನ ಉಳಿಸುವಂತಹ ಕೆಲಸ ಮಾಡಬೇಕಾಗಿದೆ. ತಮಿಳುನಾಡಿಗೆ ಎರಡನೇ ಅವಧಿಗೆ ಬೆಳೆ ಬೆಳೆಯಲು ನೀರು ಬಿಡಲು ಮುಂದಾಗಿದೆ ಇಲ್ಲಿ ಕುಡಿಯುವ ನೀರಿಗೆ…

Read More

ತುಮಕೂರು ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಹೇಮಾವತಿ ನಾಲಾ, ಎತ್ತಿನಹೊಳೆ, ಕೆಐಎಡಿಬಿ, ರಾಷ್ಟಿçÃಯ ಹೆದ್ದಾರಿ-೨೦೬, ತುಮಕೂರು-ದಾವಣಗೆರೆ ರೈಲ್ವೆ, ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗಳಿಗೆ ಸಂಬAಧಿಸಿದAತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಕಾಮಗಾರಿಗಳಿಗೆ ವೇಗ ನೀಡಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸಂಜೆ ವಿವಿಧ ಯೋಜನೆಗಳಿಗೆ ಸಂಬAಧಿಸಿದ ಭೂಸ್ವಾಧೀನ ಪ್ರಕರಣಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಹೇಮಾವತಿ ಹಾಗೂ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂ ಮಾಲೀಕರಿಗೆ ಅವಾರ್ಡ್ ಆದ ಪರಿಹಾರ ಹಣವನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ನೀಡಬೇಕು ಎಂದರಲ್ಲದೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಯೋಜನೆಗಳು ನಿಗಧಿತ ಅವಧಿಯೊಳಗೆ ಪೂರ್ಣಗೊಳ್ಳದಂತಾಗಿದೆ. ಯೋಜನೆಗಳು ಜಾರಿಯಾಗಿ ಹಲವಾರು ವರ್ಷ ಕಳೆದರೂ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲು ಕಾರಣವೇನೆಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅನುದಾನ ಕೊರತೆ, ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಹಿನ್ನಡೆಯಾಗಿದ್ದು, ಕಾಮಗಾರಿಗಳಿಗೆ ವೇಗ ನೀಡಲು ಅಗತ್ಯ ಕ್ರಮವಹಿಸಲಾಗುವುದೆಂದು ಅಧಿಕಾರಿಗಳು ಸಚಿವರ…

Read More

ತುಮಕೂರು ಸಾರ್ವಜನಿಕರಿಂದ ಯಾವುದೇ ಅರ್ಜಿ ಬಂದಲ್ಲಿ ಅದನ್ನು ತಿರಸ್ಕರಿಸಬಾರದು. ಆದಷ್ಟು ಸಕಾರಾತ್ಮಕವಾಗಿ ಸ್ಪಂದಿಸುವAತಹ ಕೆಲಸ ಸರ್ಕಾರಿ ಅಧಿಕಾರಿ/ನೌಕರ ವಲಯದಿಂದ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ.ಪರಮೇಶ್ವರ್ ಅವರು ತಿಳಿಸಿದರು. ಅವರಿಂದು ‘ಗಾಜಿನ ಮನೆ ಅಮಾನಿಕೆರೆ’ ಪಾರ್ಕ್ ತುಮಕೂರು ಇಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಜನತಾ ದರ್ಶನ ಕಾರ್ಯಕ್ರಮ’ದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರವೇ ತೆರಳುವ ಕಾರ್ಯಕ್ರಮ ‘ಜನತಾ ದರ್ಶನ ಕಾರ್ಯಕ್ರಮ’ವಾಗಿದ್ದು, ಈ ಮೂಲಕ ನಮ್ಮ ಸರ್ಕಾರ ಜನಪರ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದು, ನುಡಿದಂತೆ ನಡೆಯುತ್ತಿದ್ದೇವೆ ಎಂದು ಅವರು ತಿಳಿಸಿದರು. ಸಾರ್ವಜನಿಕರ ಅಹವಾಲು ಆಲಿಸುವ ಕೆಲಸ ತಾಲ್ಲೂಕು ಮಟ್ಟ/ ಹೋಬಳಿ ಮಟ್ಟ/ ಗ್ರಾಮಪಂಚಾಯತಿ ಮಟ್ಟದಲ್ಲೂ ಆಗಬೇಕಿದೆ. ಜನರ ಕೆಲಸಗಳು ಪ್ರಾಥಮಿಕವಾಗಿ ಪ್ರಾರಂಭವಾಗುವ ಸ್ಥಳ ಗ್ರಾಮಪಂಚಾಯತಿಗಳು. ಅಲ್ಲಿ ಸಮಸ್ಯೆ ಬಗೆಹರಿದಲ್ಲಿ ಜನರು ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕೇಂದ್ರಗಳಿಗೆ ತರುವುದಿಲ್ಲ ಎಂದರು. ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದಂತಹ ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ…

Read More

ತುಮಕೂರು ಬರ, ಮಳೆ ಕೊರತೆ ನಡುವೆಯೂ ಗೌರಿ-ಗಣೇಶ ಹಬ್ಬವನ್ನು ಕಲ್ವತರುನಾಡಿನಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯೇ ಮಹಿಳೆಯರು ತಮ್ಮ ತಮ್ಮ ಮನೆಗಳ ಬಾಗಿಲಲ್ಲಿ ಮೊರಗಳನ್ನು ಇಟ್ಟು ಪೂಜೆ ಸಲ್ಲಿಸುವ ಮೂಲಕ ಗೌರಿ ಹಬ್ಬ ಆಚರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ನಂತರ ಮನೆಯಲ್ಲಿ ಗೌರಿ ಮೂರ್ತಿ ಇಟ್ಟು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಮನೆಯಲ್ಲಿ ಪೂಜೆ, ವ್ರತ ಆಚರಣೆ ಬಳಿಕ ತಮ್ಮ ಬಡಾವಣೆಗಳ ವ್ಯಾಪ್ತಿಯಲ್ಲಿ ಗೌರಿ ಮೂರ್ತಿ ಪೂಜಿಸಿ ಬಾಗಿನ ಅರ್ಪಿಸಲು ಸಿದ್ದತೆ ಮಾಡಲಾಗಿದ್ದ ದೇವಾಲಯಗಳಿಗೆ ತೆರಳಿದ ಸುಮಂಗಲಿಯರು, ಮಕ್ಕಳು, ಯುವತಿಯರು ಗೌರಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಆಶೀರ್ವಾದ ಪಡೆದರು. ನಗರದ ಬಿ.ಹೆಚ್. ರಸ್ತೆಯ ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿರುವ ಮಹಾಲಕ್ಷಿ÷್ಮ ದೇವಾಲಯ, ಭದ್ರಮ್ಮ ವೃತ್ತದಲ್ಲಿರುವ ಸೋಮನಾಥೇಶ್ವರ ದೇವಾಲಯ, ಕುಣಿಗಲ್ ರಸ್ತೆಯ ಬನಶಂಕರಿಯಮ್ಮ, ಸೇರಿದಂತೆ ನಗರದ ವಿವಿಧ ದೇವಾಲಯಗಳಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಈ ಎಲ್ಲ…

Read More

ತುಮಕೂರು ಕರ್ನಾಟಕರಾಜ್ಯವನ್ನು ಮುಂಗಾರು ತಡವಾಗಿ ಪ್ರವೇಶಿಸಿದ್ದರಿಂದ ಮತ್ತು ತಡವಾಗಿಯಾದರು ಮುಂಗಾರುಸುರಿದರು ರಾಜ್ಯದ ಹಲವಡೆ ಸುಮಾರು ೨೫ ಲಕ್ಷ ಎಕರೆ ಪ್ರದೇಶದಲ್ಲಿ ಭಿತ್ತನೆಯು ನಡೆಯಲಿಲ್ಲ ವೆಂದು ಸರಕಾರದ ಅಂಕಿ ಅಂಶಗಳು ಹೇಳುತಿವೆ. ಆದ್ದರಿಂದ ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಮತ್ತು ಅಗತ್ಯ ಪರಿಹಾರ ಕ್ರಮ ಕೈಗೂಳ್ಳುವಂತೆ ಒತ್ತಾಯಿಸಿ ದಿನಾಂಕ:೨೦-೯-೨೦೨೩ ರಂದು ಜಿಲ್ಲಾಧಿಕಾರಿಗಳ ಕಛೇರಿ ಎದರು ಪ್ರತಿಭಟನೆಯನ್ನು ಉದ್ದಶೇಸಿ ಮತನಾಡುತ್ತಾ ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಸಿ.ಅಜ್ಜಪ್ಪ ಸರ್ಕರವನ್ನು ಅಗ್ರಹಿಸಿದರು.ಮುಂದುವರದು ಮತನಾಡುತ್ತಾ ಒಕ್ಕೂಟ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹೇರಿ ನೆರವು ಪಡೆಯಲು ಮುಂದಾಗಲು ಕರನೀಡಿದರು. ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯಬಿ.ಉಮೇಶ್ ಮತನಾಡುತ್ತಾ ರಾಜ್ಯ ಸರ್ಕಾರ ಗ್ಯಾರಂಟಿಗಳ ಹೆಸರಲ್ಲಿ ಮಾತ್ರ ಆಡಳಿತ ನಡೆಸದೆ ಇತರೆವಿಷಯಗಳ ಬಗ್ಗೆ ಗಮನಹರಿಸಿ ಮಹಿಳೆಯ ಸಬಲಿಕರಣದಿಂದ ಕೂಳ್ಳುವ ಶಕ್ತಿಯಿಂದ ಹಣ ಚಲಾವಣೆಯಿಂದ ಅಭಿವೃಧ್ದಿ ಸಾಧ್ಯವಾಗುತ್ತದೆ ಎಂದರು ಜಿಲ್ಲೆಯಲ್ಲಿ ಬಿತ್ತಿದ ಬೀಜ ಉಟ್ಟದೆ ಬರಗಾಲ ಹಿನ್ನೆಲೆಯಲ್ಲಿ ಹತ್ತು ತಾಲ್ಲೂಕುಗಳನ್ನು ಬರಗಾಲ ಎಂದು ಘೋಷಿಸಬೇಕು ನಷ್ಟವಾದ ಬೆಳೆಗಳಿಗೆ ಪರಿಹಾರ…

Read More

ತುಮಕೂರು ಗಾಂಧೀಜಯAತಿ ಪ್ರಯುಕ್ತ ಅಕ್ಟೋಬರ್ ೨ರವರೆಗೆ ನಗರದಾದ್ಯಂತ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ ತಿಳಿಸಿದರು. ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ಸಂಜೆ ವಿವಿಧ ಇಲಾಖಾಧಿಕಾರಿಗಳೊಂದಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಡಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ, ಶ್ರಮದಾನ, ಪ್ರಮುಖ ರಸ್ತೆಯ ಗೋಡೆ ಹಾಗೂ ಶೌಚಾಲಯಗಳಿಗೆ ಬಣ್ಣ ಬಳಿಯುವ, ಸೈಕ್ಲೊಥಾನ್, ಸಸಿ ನೆಡುವ, ಗೋಡೆ ಬರಹ, ತ್ಯಾಜ್ಯ ನಿರ್ವಹಣೆ ಕುರಿತು ಅರಿವು, ಶಾಲೆ-ಕಾಲೇಜುಗಳಲ್ಲಿ ಸ್ವಚ್ಛತಾ ಅರಿವು, ಪೌರಕಾರ್ಮಿಕರಿಗೆ ಸನ್ಮಾನ, ಬೀದಿ ನಾಟಕ, ಫ್ಯಾಷನ್ ಷೋ, ನೃತ್ಯ ಸೇರಿದಂತೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರಲ್ಲದೆ, ಸ್ವಚ್ಛತಾ ಅರಿವು ಕಾರ್ಯಕ್ರಮಗಳಲ್ಲಿ ವಿವಿಧ ಇಲಾಖೆಗಳ ಪಾತ್ರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಪ್ರಯುಕ್ತ ರೈಲು ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಗುವುದು. ಮೊಬೈಲ್, ಕಂಪ್ಯೂಟರ್, ಟಿವಿ, ಎಸಿ, ವೈರ್ ಸೇರಿದಂತೆ ಎಲೆಕ್ಟಾçನಿಕ್ ಉಪಕರಣಗಳಿಂದ ಉತ್ಪತ್ತಿಯಾಗುವ ಇ-ವೇಸ್ಟ್…

Read More