Author: News Desk Benkiyabale

ತುಮಕೂರು ಎಲ್ಲರೂ ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ ೧೫ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಅಂದು ರಾಜ್ಯ ಮಟ್ಟದಲ್ಲಿ ಬೆಂಗಳೂರಿನ ವಿಧಾನ ಸೌಧದ ಮುಂಭಾಗದಲ್ಲಿ ಭಾರತ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ, ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ…

Read More

ಕೊರಟಗೆರೆ ಧಾನ್ ಫೌಂಡೇಷನ್ ಹಾಗೂ ಕಸ್ತೂರಿಬಾ ಆಸ್ಪತ್ರೆ ಸಹಯೋಗದಲ್ಲಿ ಪಟ್ಟಣದ ಶ್ರೀ ಗುಂಡ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು. ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸದಸ್ಯರು ಆರೋಗ್ಯ ಶಿಬಿರವನ್ನು ಉದ್ಘಾಟನೆ ಮಾಡಿದರು. ಧಾನ್ ಫೌಂಡೇಷನ್ ನ ಸಂಯೋಜಕ ಶಶಿಧರ್ ಮಾತನಾಡಿ, ಬಡವರ ಆರೋಗ್ಯವನ್ನು ಕಾಪಾಡುವುದು, ಬಡವರ ಆರ್ಥಿಕತೆ ಸುಧಾರಿಸುವುದು ಹಾಗೂ ಬಡತನ ನಿರ್ಮೂಲನೆ ನಮ್ಮ ಸಂಸ್ಥೆಯ ಮೂಲ ಉದ್ದೇಶ ಎಂದು ತಿಳಿಸಿದರು. ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಇಂತಹ ಸಾಮಾಜಿಕ ಸೇವಾ ಮನೋಭಾವನೆ ಹೊಂದಿರುವ ಸಂಘ-ಸAಸ್ಥೆಗಳು ಮತ್ತಷ್ಟು ಬರಬೇಕು, ಬಡವರ ಪರ ಕೆಲಸ ಮಾಡಬೇಕು, ಬಡ ಹೆಣ್ಣು ಮಕ್ಕಳ ಆರ್ಥಿಕತೆ ಸುಧಾರಿಸಬೇಕು. ಇಂದು ಇಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಮೇಳದಿಂದ ಸಾಕಷ್ಟು ಬಡವರಿಗೆ ಆರೋಗ್ಯ ಲಭಿಸಿದಂತಾಯಿತು ಎಂದರು. ಕಾರ್ಯಕ್ರಮದ ಸಂದರ್ಭದಲ್ಲಿ ಕಸ್ತೂರಿಬಾ ಆಸ್ಪತ್ರೆಯ ವೈದ್ಯರಾದ ಭುವನೇಶ್ವರಿ,ಸುಜಾತ,ಮಮತಾ, ಸುರಕ್ಷಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶಿವಶಂಕರಪ್ಪ ರಾಘವೇಂದ್ರ ಹನುಮಂತರಾಯಪ್ಪ ಮಧುಸೂದನ್ ಧಾನ…

Read More

ತುಮಕೂರು ನಮ್ಮ ಕನ್ನಡ ಭಾಷೆಯ ಸಾಹಿತ್ಯವನ್ನು, ಕಾವ್ಯಗಳನ್ನು ಜಗತ್ತಿನ ಇತರೆ ಭಾಷೆಗಳೊಂದಿಗೆ ತೌಲನಿಕ ಅಧ್ಯಯನಕ್ಕೆ ಒಳಪಡಿಸಿದಾಗ ಮಾತ್ರ ಹಲವಾರು ವಿಷಯಗಳಲ್ಲಿ ಸಾಮ್ಯತೆ ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಹಂ. ಪ. ನಾಗರಾಜಯ್ಯ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ. ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರವು ಸೋಮವಾರ ಆಯೋಜಿಸಿದ್ದ ಹಂಪನಾ ವಿರಚಿತ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕುರಿತ ಅನುಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದೇಶ ವಿವಿಗಳ ಗ್ರಂಥಾಲಯಗಳಲ್ಲಿ ನಮ್ಮ ಕನ್ನಡ ಭಾಷಾ ಸಾಹಿತ್ಯದ ಸಂಗ್ರಹ ಕಾಣದಿದ್ದಾಗ ನಿರ್ಧರಿಸಿ ಕನ್ನಡ ಭಾಷಾ ಸಾಹಿತ್ಯದ ಗಡಿಯನ್ನು ಅಂತಾರಾಷ್ಟಿçÃಯ ಮಟ್ಟದಲ್ಲಿ ವಿಸ್ತರಿಸುವ ಮಹತ್ವಾಕಾಂಕ್ಷೆಯಿAದ ಐದು ಸಂಪುಟಗಳ ‘ಸ್ಪೆಕ್ಟçಮ್ ಆಫ್ ಕ್ಲಾಸಿಕಲ್ ಲಿಟರೇಚರ್ ಇನ್ ಕರ್ನಾಟಕ’ ಕೃತಿ ಆಂಗ್ಲ ಭಾಷೆಯಲ್ಲಿ ರಚಿಸಿದೆ. ನಮ್ಮ ಮಣ್ಣಿನ ಸಾಹಿತಿಗಳು, ಕವಿಗಳು ರಚಿಸಿರುವ ಸಾಹಿತ್ಯ, ಮಹಾಕಾವ್ಯಗಳು ಪ್ರಪಂಚದ ಮೂಲೆ ಮೂಲೆಯಲ್ಲೂ ತಲುಪಬೇಕೆಂಬ ಕನಸಿದೆ ಎಂದರು. ಕನ್ನಡ ಭಾಷೆಯ, ಕರ್ನಾಟಕದ ಹಿರಿಮೆ, ಗರಿಮೆ, ಪರಂಪರೆ, ಪ್ರಸ್ತುತತೆಯನ್ನು ವಿಶ್ವದೆಲ್ಲಡೆ ಪರಿಚಯಿಸುವ…

Read More

ತುಮಕೂರು ಪ್ರಸ್ತುತ ದೇಶದಲ್ಲಿರುವ ಮೀಸಲಾತಿ ವ್ಯವಸ್ಥೆಯಿಂದ ಹೆಚ್ಚು ನರಳುತ್ತಿರುವ ಸಮುದಾಯವೆಂದರೆ ಒಕ್ಕಲಿಗರು.ಹಾಗಾಗಿ ಜನಸಂಖ್ಯಾವಾರು ಮೀಸಲಾತಿ ಹೆಚ್ಚಳವಾಗಬೇಕೆಂಬ ಹೋರಾಟ ತೀವ್ರಗೊಳ್ಳಬೇಕಾಗಿದೆ ಎಂದು ಅರೆ ಶಂಕರ ಮಠದ ಶ್ರೀಸಿದ್ದರಾಮಚೈತನ್ಯ ಮಹಾಸ್ವಾಮೀಜಿಗಳು ತಿಳಿಸಿದ್ದಾರೆ. ನಗರದ ಬಾಲಭವನದಲ್ಲಿ ತುಮಕೂರು ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ಆಯೋಜಿಸಿದ್ದ ೧೩ನೇ ವರ್ಷದ ಪ್ರತಿಭಾಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಪ್ರವರ್ಗ ೩ಎ ನಲ್ಲಿ ರುವ ಶೇ೪ರ ಮೀಸಲಾತಿಗೆ ೩೨ಕ್ಕೂ ಹೆಚ್ಚು ಜಾತಿಗಳು ಪೈಪೋಟಿ ನಡೆಸಬೇಕಾಗಿದೆ.ಅದರಲ್ಲಿ ನಗರದಲ್ಲಿ ವಾಸವಾಗಿರುವ ಒಕ್ಕಲಿಗರಿಗೆ ಮೀಸಲಾತಿ ಇಲ್ಲ,ಹೀಗೆ ಹತ್ತು ಹಲವರು ಷರತ್ತುಗಳಿವೆ.ಇದರಿಂದ ಅರ್ಥಿಕವಾಗಿ,ಉದ್ಯೋಗ ವಿಭಾಗದಲ್ಲಿ ಸಮುದಾಯದ ದಿನದಿಂದ ದಿನಕ್ಕೆ ತೀವ್ರವಾಗಿ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ ಮಾತನಾಡಿ,ಪ್ರತಿಭಾ ಪುರಸ್ಕಾರವೆಂಬುದು ಒಂದು ಸ್ಪೂರ್ತಿದಾಯಕ ಕಾರ್ಯಕ್ರಮ. ಸಮುದಾಯದ ಉದ್ದಿಮೆದಾರರು, ಅರ್ಥಿಕ ಸ್ಥಿತಿವಂತರು ಇಂತಹ ಕಾರ್ಯಕ್ರಮಗಳಿಗೆ ಕೈಜೋಡಿಸಬೇಕು.ಹಾಗೆಯೇ ವಿದ್ಯಾರ್ಥಿಗಳು ಸಹ ತಂದೆ,ತಾಯಿಗಳ ಆಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸ ಬೇಕೆಂದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ತುಮಕೂರು ಶಾಖಾ…

Read More

ತುಮಕೂರು ಭೂಮಿ ಮೇಲೆ ಮನುಷ್ಯ ಸೇರಿದಂತೆ ಎಲ್ಲ ಜೀವಿಗಳು ಸಮೃದ್ದಿಯಾಗಿ ಜೀವಿಸಲು ಗಾಳಿ ನೀರು ಆಹಾರ ಮೂಲಭೂತವಾಗಿ ಬೇಕು. ಇದೆಲ್ಲವನ್ನು ನಮಗೆ ನೀಡುವ ಪರಿಸರದ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ. ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಆಲದಮರ ಪಾರ್ಕ್ನಲ್ಲಿ ವರ್ಣೋದಯ ಆರ್ಟ್ ಗ್ರೂಪ್ ಟ್ರಸ್ಟ್ (ರಿ), ಪ್ರೆಸ್ ಕ್ಲಬ್ ತುಮಕೂರು, ಉತ್ಸವ್ ಕಲೆಕ್ಷನ್ ಹಾಗೂ ರಾಜಾ ಬ್ರಿಕ್ ಆ?ಯಂಡ್ ಟೈಲ್ಸ್ ಇಂಡಸ್ಟಿçÃಸ್ ಸಹಯೋಗದೊಂದಿಗೆ ಏರ್ಪಡಿಸಿದ್ದ ಪರಿಸರ ಸ್ನೇಹಿ ಗಣೇಶ ಮೂರ್ತಿ ರಚನಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ವೈರುಧ್ಯಗಳ ನಡುವೆ ನಾವು ಬದುಕುತ್ತಿದ್ದೇವೆ. ಜಾಗತಿಕ ತಾಪಮಾನ ಪ್ರತಿ ವರ್ಷ ಏರುತ್ತಾ ಇದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಲು ಸಾಧ್ಯವಾಗುವುದಿಲ್ಲ ಎಂಬ ಆತಂಕ ಎದುರಾಗಿದೆ. ವಿಶ್ವದಲ್ಲೇ ಅತ್ಯಂತ ಹೆಚ್ಚು ಕ್ಯಾನ್ಸರ್ ಇರುವಂತಹ ದೇಶ ನಮ್ಮದು. ಇದಕ್ಕೆ ನಾವು ಸೇವಿಸುವ ಆಹಾರ ಕಲುಷಿತವಾಗಿರುವುದೇ ಕಾರಣ ಎಂದರು. ವಿದ್ಯಾವಾಹಿನಿ ಸಮೂಹ ಸಂಸ್ಥೆಯ ಕಾರ್ಯದರ್ಶಿ ಪ್ರದೀಪ್‌ಕುಮಾರ್ ಮಾತನಾಡಿ, ಕೆಲ ದಿನಗಳಲ್ಲಿ ಹಬ್ಬ ಪ್ರಾರಂಭವಾಗುತ್ತದೆ…

Read More

ತುಮಕೂರು- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ೪ ತಿಂಗಳಾಗಿದೆ. ಆದರೆ ಬಿಜೆಪಿಯವರಿಗೆ ಇನ್ನೂ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದರು. ಬಿಜೆಪಿ ಪಕ್ಷದಲ್ಲಿ ಆಂತರಿಕ ಕಚ್ಚಾಟ, ಬಿಕ್ಕಟ್ಟು, ಜಗಳ ನಡೆಯುತ್ತಿರುವುದರಿಂದ ಬಿಜೆಪಿ ನಾಯಕರು ಆಂತಕದಲ್ಲಿದ್ದಾರೆ. ಅಲ್ಲದೆ ಕರ್ನಾಟಕದ ಬಿಜೆಪಿ ಗೊಂದಲದ ಗೂಡಾಗಿದೆ ಎಂದು ಅವರು ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ದಿನಗಳಾದರೂ ವಿಪಕ್ಷ ನಾಯಕರ ಆಯ್ಕೆ ಮಾಡಿಲ್ಲ. ಇದು ವಿಧಾನ ಮಂಡಲಕ್ಕೆ ಮಾಡಿದ ಅಪಮಾನವಾಗಿದೆ. ಇಂತಹ ಹೀನಾಯ ಸ್ಥಿತಿಗೆ ಬಿಜೆಪಿ ಬರಲು ಆ ಪಕ್ಷದಲ್ಲಿ ಆಂತರಿಕ ಗೊಂದಲ, ಬಿಕ್ಕಟ್ಟು ಕಾರಣ ಎಂದು ಛೇಡಿಸಿದರು. ಮೈತ್ರಿ ವಿಚಾರ ಗೊತ್ತಿಲ್ಲ ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ವಿಚಾರ ನನಗೆ ನಿಖರವಾಗಿ ಗೊತ್ತಿಲ್ಲ. ಆದರೆ ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳು…

Read More

ತುಮಕೂರು ಇಲ್ಲಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ೫೭ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್, ಜಿಲ್ಲಾ ಲೋಕಶಿಕ್ಷಣ ಇಲಾಖೆ ಹಾಗೂ ಡಯಟ್ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟಿçÃಯ ಸಾಕ್ಷತಾ ದಿನಾಚರಣೆ ಪ್ರಯುಕ್ತ ಜಿ.ಪಂ. ಸಿಇಓ ಜೆ. ಪ್ರಭು ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಶಿಕ್ಷಣ ಮನುಷ್ಯನ ಮೂಲಭೂತ ಹಕ್ಕು. ಇದರ ಭಾಗವಾಗಿರುವ ಸಾಕ್ಷರತೆ ಬಹಳ ಮುಖ್ಯ. ಕಳೆದ ೧೦ ವರ್ಷದಲ್ಲಿ ಪ್ರತಿ ವರ್ಷ ಕನಿಷ್ಠ ೮ ರಿಂದ ೧೦ ಸಾವಿರ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಕೆಲಸವನ್ನು ಜಿ.ಪಂ., ಗ್ರಾ.ಪಂ. ವತಿಯಿಂದ ಮಾಡಲಾಗುತ್ತಿದೆ ಎಂದರು. ಭಾರತ ಸದೃಢವಾದ ಸಾಕ್ಷರತಾ ರಾಷ್ಟçವಾಗುವವರೆಗೆ ಈ ಕೆಲಸ ಮುಂದುವರೆಯುತ್ತದೆ. ಜ್ಞಾನದಿಂದ ಹೆಚ್ಚು ಹೆಚ್ಚು ಕೌಶಲ್ಯಭರಿತರಾಗಬೇಕು ಎಂಬ ಆಶಯ ಈ ಸಾಕ್ಷರತಾ ದಿನಾಚರಣೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಸಾಕ್ಷರತೆ ಹೊಂದಿರುವವರು ಸದೃಢವಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಲಿ ಎಂದು ಅವರು ಆಶಿಸಿದರು. ವಯಸ್ಕರ ಶಿಕ್ಷಣ ಇಲಾಖೆಯ ಲಕ್ಷಿ÷್ಮ ಸಿ.ಎಂ. ಮಾತನಾಡಿ, ಈ ಬಾರಿ ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ…

Read More

ತುಮಕೂರು: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ, ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತಿರುವ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನಾ ಮರವಣಿಗೆ ನಡೆಸಿ, ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಸ್ಕಾಂ ಕಚೇರಿ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್,ರೈತ ಇಂದು ಬರಗಾಲದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾನೆ.ಮಳೆಯಿಲ್ಲದೆ ಹಾಕಿದ್ದ ಬೆಳೆ ನಷ್ಟವಾಗಿದೆ.ಬೆಳೆ ಉಳಿಸಿಕೊಳ್ಳಲು ನೀರಾವರಿ ಪಂಪ್‌ಸೆಟ್‌ಗಳ ಮೊರೆ ಹೋಗಿದ್ದಾರೆ.ಇಂತಹ ಸಂದರ್ಭದಲ್ಲಿ ಸರಕಾರ ವಿದ್ಯುತ್ ಕಡಿತ ಮಾಡುವ ಮೂಲಕ ರೈತರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ.ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು. ರಾಜ್ಯದಲ್ಲಿ ಮಳೆಯಿಲ್ಲದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ.ಹೀಗಿದ್ದರೂ ಸರಕಾರ ತೆಮಿಳುನಾಡಿಗೆ ಪ್ರತಿದಿನ ೫ ಸಾವಿರ ಕ್ಯೂಸೆಕ್ಸ್ನಂತೆ ನೀರು ಹರಿಸುತ್ತಿದೆ.ಅಲ್ಲದೆ ಸುಮಾರು ೧೩೫ ತಾಲೂಕುಗಳಲ್ಲಿ ಬರ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಅಧಿಕಾರಿಗಳಾಗಲಿ ಬರ ಅಧ್ಯಯನ ನಡೆಸಿಲ್ಲ. ಇದರ…

Read More

ಕೊರಟಗೆರೆ : ನಮ್ಮ ರಾಜ್ಯದಲ್ಲಿ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿಯಾಗಲಿದೆ ಎಂದು ತಹಶಿಲ್ದಾರ್ ಮುನಿಶಾಮಿರೆಡ್ಡಿ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದ ಸಮುದಾಯದ ಭವನದಲ್ಲಿ ಬುಧವಾರ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಹೆಚ್ಚು ಗೃಹಲಕ್ಷ್ಮೀ ನೋಂದಣಿ ಕಾರ್ಯ ನಡೆದಿದೆ, ಈ ಹಣವನ್ನು ಸದುದ್ದೇಶಕ್ಕೆ ಬಳಸಿಕೊಳ್ಳಿ ಎಂದು ಮಹಿಳೆಯರು ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು. ತಾ.ಪಂ ಇಓ ಡಾ. ದೊಡ್ಡಸಿದ್ದಯ್ಯ ಮಾತನಾಡಿ ಈ ಸರ್ಕಾರದ ಯೋಜನೆಯನ್ನು ಎಲ್ಲಾರೂ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಇಡೀ ತಾಲ್ಲೂಕಿನಲ್ಲಿ ಎಲ್ಲರಿಗೂ ನೋಂದಣಿ ಮಾಡಿ ಈ ಯೋಜನೆಯ ಬಳಕೆಗೆ ಅನುಕೂಲ ಕಲ್ಪಿಸಲಾಗಿದ್ದು, ಇದನ್ನು ಉತ್ತಮ ಕೆಲಸಕ್ಕೆ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು. ಮಾನ್ಯ ಗೃಹಸಚಿವರ ತವರು ಕ್ಷೇತ್ರದಲ್ಲಿ ಸುಮಾರು ಪಟ್ಟಣ ಹಾಗೂ ೨೪ ಗ್ರಾಮ ಪಂಚಾಯತಿಗಳು ಒಳಗೊಂಡAತೆ ೪೨,೭೭೧ ಪಡಿತರ ಕಾರ್ಡ್ ಹೊಂದಿದ್ದು, ಶೇ. ೯೮.೨೨%ರಷ್ಟು ನೋಂದಣಿಯಾಗಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದು ಸುಮಾರು ೯ಕೋಟಿ ಅಧಿಕ…

Read More

ಶಿರಾ ಶಿರಾ ತಾಲೂಕಿನಾದ್ಯಂತ ಒಟ್ಟು ೬೮,೫೧೨ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಿಕೊಂಡಿರುತ್ತಾರೆ. ತುಮಕೂರು ಜಿಲ್ಲೆಯಲ್ಲೇ ಅತಿ ಹೆಚ್ಚು ನೊಂದಣಿ ಮಾಡಿಕೊಂಡಿರುವ ಹೆಗ್ಗಳಿಕೆ ನಮ್ಮ ಶಿರಾ ತಾಲೂಕಿಗೆ ಸಲ್ಲುತ್ತದೆ. ಭಾರತ ದೇಶದ ಇತಿಹಾಸದಲ್ಲೇ ಸಾಮಾಜಿಕ ನ್ಯಾಯ ದೊರಕಿಸಲು ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೈಗೊಂಡ ಗೃಹಲಕ್ಷ್ಮಿ ಯೋಜನೆ ವಿದ್ಯುಕ್ತವಾಗಿ ರಾಜ್ಯಾದ್ಯಂತ ಚಾಲನೆಗೊಂಡು ದಾಖಲೆ ನಿರ್ಮಿಸಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದರು. ಅವರು ದಿನಾಂಕ ೩೦ ೮ ೨೦೨೩ ರಂದು ಶಿರಾ ನಗರದ ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಜಾರಿಗೆ ತರುತ್ತೇವೆ ಎಂಬ ಭರವಸೆ ನೀಡಿತ್ತು. ಇದಕ್ಕೆ ಅನೇಕ ವಿರೋಧ ಪಕ್ಷಗಳು ಅದು ಅಸಾಧ್ಯ ಎಂದು…

Read More