ಸುಳ್ಳು ಭರವಸೆ ಮೂಲಕ ಬಿಜೆಪಿಯಿಂದ ಜನರಿಗೆ ಮೋಸ-ಶೇಷಾದ್ರಿ

 ತುಮಕೂರು:       ದೇಶದಲ್ಲಿ ಸುಳ್ಳುಹೇಳುವ ಪಕ್ಷ ಎಂದರೆ ಅದು ಬಿಜೆಪಿ ಪಕ್ಷ. ಕೇವಲ ಸುಳ್ಳು ಭರವಸೆಗಳನ್ನು ನೀಡಿ ಬಡಜನರನ್ನು, ಕಾರ್ಮಿಕ ವರ್ಗದವರನ್ನು ಮೋಸ ಮಾಡಿದ್ದಾರೆ ಎಂದು ಸಿಪಿಐನ ಜಿಲ್ಲಾ ಉಸ್ತುವಾರಿ ಶೇಷಾದ್ರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.       ಸಿಪಿಐ ಪಕ್ಷದ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಡಜನರಿಗೆ ವಿವಿಧ ಆಶ್ವಾಸನೆಗಳನ್ನು ನೀಡಿತ್ತು.ಅದರಲ್ಲಿ ಇಲ್ಲಿಯವರೆಗೆ ಯಾವೊಂದು ಭರವಸೆಯೂ ಈಡೇರಿಲ್ಲ. ಬದಲಿಗೆ ನೋಟು ಅಮಾನಿಕರಣ, ಜಿಎಸ್‍ಟಿ ಜಾರಿಯಂತಹ ಯೋಜನೆಗಳಿಂದ ಬಡವರಿಗೆ ಸಮಸ್ಯೆಯನ್ನುಂಟು ಮಾಡಿದೆ ಎಂದರು.       ಇಂದು ಕೇಂದ್ರದಲ್ಲಿ ಬಿಜೆಪಿ ಪಕ್ಷ ಇಲ್ಲ.ಮೋದಿ ಪಕ್ಷ ಮಾತ್ರ ಇದೆ. ಮೋದಿಯವರು ಸರ್ವಾಧಿಕಾರ ಧೋರಣೆಯನ್ನು ತೋರುತ್ತಿದ್ದಾರೆ. ಅದಕ್ಕಾಗಿಯೇ ವಿವಿಧ ಪಕ್ಷಗಳು ಬಿಜೆಪಿಯೊಂದಿಗಿನ ಮೈತ್ರಿ ತ್ಯಜಿಸಿ ಬೇರೆಯಾಗಿದ್ದಾರೆ. ಕೇಂದ್ರ ಸರ್ಕಾರವು ರೈತರ ಹಾಗೂ ಕಾರ್ಮಿಕರ ವಿರೋಧಿಯಾಗಿದೆ.ಚುನಾವಣೆ ಮುಂಚೆ…

ಮುಂದೆ ಓದಿ...

21 ನಿಮಿಷದಲ್ಲಿ ಉಗ್ರರ ನೆಲೆಗಳ ಧ್ವಂಸ, ಆಪರೇಷನ್ ಫಿನಿಷ್!

ನವದೆಹಲಿ:         ಭಾರತದ ಕಾಶ್ಮೀರದಲ್ಲಿ ಹಿಂಸಾಕೃತ್ಯ ಎಸಗುವ ಕನಸು ಕಾಣುತ್ತ ಪಾಕಿಸ್ತಾನಿ ಉಗ್ರರು ಸುಖನಿದ್ರೆಯಲ್ಲಿ ತೊಡಗಿದ್ದಾಗ, ಮಂಗಳವಾರ ಬೆಳಗಿನ ಜಾವ 3.45ರ ಸುಮಾರಿಗೆ ದಾಳಿ ನಡೆಸಿದ ಭಾರತೀಯ ವಾಯು ಸೇನೆ, ಬಾಲಕೋಟ್ ನಲ್ಲಿ          ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಈ ದಾಳಿಯ ಬಗ್ಗೆ ಅರಿಯುವ ಮುನ್ನವೇ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಕಂಟ್ರೋಲ್ ರೂಮ್ ಸೇರಿದಂತೆ ಹಲವಾರು ಉಗ್ರರ ತರಬೇತಿ ನೆಲೆಗಳು ಧ್ವಂಸವಾಗಿವೆ. ಈ ದಾಳಿಯಲ್ಲಿ ಕನಿಷ್ಠಪಕ್ಷ 300ಕ್ಕೂ ಹೆಚ್ಚು ಪಾಕ್ ಬೆಂಬಲಿತ ಉಗ್ರರು ಹತರಾಗಿದ್ದಾರೆ.        ಈ ದಾಳಿ ನಡೆದಿದ್ದು ಕೇವಲ 21 ನಿಮಿಷಗಳು ಮಾತ್ರ. ಬೆಳಗಿನ ಜಾವ 3.45ಕ್ಕೆ ಆರಂಭವಾದ ದಾಳಿ 4 ಗಂಟೆ 6 ನಿಮಿಷದ ಹೊತ್ತಿಗೆ ಮುಕ್ತಾಯವಾಗಿತ್ತು. ಮೊದಲಿಗೆ ಬಾಲಕೋಟ್ ನಲ್ಲಿ ದಾಳಿ ನಡೆದರೆ, ನಂತರ ಮುಜಫರಾಬಾದ್ ಮತ್ತು ಚಾಕೋಟಿಯಲ್ಲಿ, ಭಾರತೀಯ ವಾಯು…

ಮುಂದೆ ಓದಿ...

ಭಾರತೀಯ ಸೈನಿಕರ ಕೈಗೆ ‘ಡೆಡ್ಲಿ’ ಸ್ನೈಪರ್ ರೈಫಲ್ ಗಳು!

ನವದೆಹಲಿ:        ಪಾಕಿಸ್ತಾನ ಸೈನಿಕರ ಮತ್ತು ಅಲ್ಲಿನ ಉಗ್ರರ ಸ್ನೈಪರ್ ರೈಫಲ್ ಗಳಿಗೆ ಬಲಿಯಾಗುತ್ತಿದ್ದ ಭಾರತೀಯ ಸೈನಿಕರ ಬಹು ದಿನಗಳ ಆಸೆ ಕೊನೆಗೂ ಈಡೇರಿದ್ದು, ಇದೀಗ ಭಾರತೀಯ ಸೈನಿಕರ ಕೈಗೂ ಅತ್ಯಾಧುನಿಕ ಡೆಡ್ಲಿ ಸ್ನೈಪರ್ ರೈಫಲ್ ಗಳು ಬಂದಿವೆ.       ಡೆಡ್ಲಿ ಸ್ನೈಪರ್ ರೈಫಲ್ಸ್ ಎಂದೇ ಕರೆಯಲಾಗುವ ಅತ್ಯಾಧುನಿಕ ಬೆರೆಟ್ಟಾ ಸಂಸ್ಥೆಯ 0.338 ಲಪುವಾ ಮ್ಯಾಗ್ನಮ್ ಸ್ಲಾರ್ಪಿಯೋ ಟಿಜಿಟಿ ಸೂಪರ್ ಸ್ನೈಪರ್ ರೈಫಲ್ ಹಾಗೂ ಬರೆಟ್ಟ್ ಸಂಸ್ಥೆಯ 0.50 ಕ್ಯಾಲಿಬರ್ ಎ095 ಸ್ನೈಪರ್ ರೈಫಲ್‍ಗಳನ್ನ ಖರೀದಿ ಮಾಡಲಾಗಿದೆ. ಒಂದು ವರ್ಷದ ಹಿಂದೆಯೇ ಸರ್ಕಾರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು.        ಪಾಕ್‌ ಮೂಲದ ನುಸುಳುಕೋರ ಉಗ್ರರನ್ನು ಮತ್ತು ಅಪ್ರಚೋದಿತ ದಾಳಿ ಮಾಡುವ ಪಾಕ್ ಸೈನಿಕರ ಮಟ್ಟಹಾಕಲು ಅನುಕೂಲವಾಗುವಂತೆ ಅತ್ಯಾಧುನಿಕ ಸ್ನೈಪರ್‌ ರೈಫ‌ಲ್ ಗ‌ಳ ಬಳಕೆಯನ್ನು ಭಾರತೀಯ ಸೇನೆ…

ಮುಂದೆ ಓದಿ...

0.25ರಷ್ಟು ರೆಪೋ ದರ ಇಳಿಕೆ

ದೆಹಲಿ:        ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ 0.25ರಷ್ಟು ಅಂಕ ಇಳಿಕೆ ಮಾಡಿದೆ. ಇದರಿಂದಾಗಿ ಈ ಹಿಂದೆ ಇದ್ದ ಶೇ.6.50 ರೆಪೋ ದರ ಈಗ ಶೇ.6.25ಕ್ಕೆ ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಗೃಹ, ಮೋಟಾರು ವಾಹನ ಸಾಲಗಳ ಮೇಲಿನ ಬಡ್ಡಿದರ ಕಡಿಮೆಯಾಗಲಿವೆ.        ಆರ್‌ಬಿಐನ ನೂತನ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅಧಿಕಾರ ವಹಿಸಿಕೊಂಡ ನಂತರದಲ್ಲಿ ಆರ್‌ಬಿಐ ಬಿಡುಗಡೆ ಮಾಡಿದ ಮೊದಲ ವಿತ್ತೀಯ ನೀತಿ ಇದಾಗಿದೆ. ಆರು ಸದಸ್ಯರನ್ನು ಒಳಗೊಂಡ ಹಣಕಾಸು ನೀತಿ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರಕ್ಕೆ ಒಪ್ಪಿಗೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.       ಆರ್‌ಬಿಐನ ಈ ನಿರ್ಧಾರದಿಂದ ಗೃಹ, ಮೋಟಾರು ವಾಹನ ಸಾಲ ಪಡೆಯುವ ಆಕಾಂಕ್ಷಿಗಳಿಗೆ ಇಎಂಐ ಹೊರೆ ಕಡಿಮೆಯಾಗಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದರು. ಆರ್‌ಬಿಐನ ಈ ದರ ಇಳಿಕೆ ನೀತಿಯನ್ನು ಅನುಸರಿಸಿ…

ಮುಂದೆ ಓದಿ...

ಲಿಂ.ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಲು ಸಂಸದರ ಆಗ್ರಹ

 ತುಮಕೂರು:        ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಜನವರಿ 21ರಂದು ಲಿಂಗೈಕ್ಯರಾದ ಶತಾಯುಷಿ, ನಡೆದಾಡುವ ದೇವರು, ಪರಮಪೂಜ್ಯ ಶ್ರೀಶ್ರೀಶ್ರೀ ಡಾ: ಶಿವಕುಮಾರ ಮಹಾಸ್ವಾಮೀಜಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಲು ಆಗ್ರಹಿಸಿದರು.       ಅನ್ನದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಪರಮಪೂಜ್ಯರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಪರಮಪೂಜ್ಯರಿಗೆ ಭಾರತರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಈ ಹಿಂದೆ ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಈವರೆಗೂ ನೀಡದೇ ಇರುವುದು ದುರಾದುಷ್ಟಕರ. ಈಗಲಾದರೂ ಪರಮಪೂಜ್ಯ ಶ್ರೀಗಳ ಸಾಧನೆಯನ್ನು ಗುರುತಿಸಿ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿಯನ್ನು ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. (Visited 59 times, 1 visits today)

ಮುಂದೆ ಓದಿ...

ಭೂಗತಪಾತಕಿ ರವಿ ಪೂಜಾರಿ ಬಂಧನ

ನವದೆಹಲಿ:        ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಬಂಧನಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.       ಹಫ್ತಾ ವಸೂಲಿ, ಕೊಲೆ ಬೆದರಿಕೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಸಿಸಿಬಿಯ ಹಿಟ್ ಲಿಸ್ಟ್ ನಲ್ಲಿ ಅಗ್ರ ಸಾಲಿನಲ್ಲಿದ್ದನೆನ್ನಲಾಗಿದೆ. ರಿಮೋಟ್ ರೌಡಿಸಂ ನಡೆಸಿದ ಮೊದಲ ಭೂಗತ ಪಾತಕಿ ಎಂಬ ಕುಖ್ಯಾತಿಯೂ ರವಿ ಪೂಜಾರಿಗಿದೆ. ಇಂಟರ್ ಪೋಲ್ ನಿಂದಲೂ ಪೂಜಾರಿ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.       ಕರ್ನಾಟಕ, ಮಹಾರಾಷ್ಟ್ರ ರಾಜ್ಯದ ಹಲವೆಡೆ ರವಿ ಪೂಜಾರಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರು ರವಿ ಪೂಜಾರಿ ಗ್ಯಾಂಗ್​ನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಈ ಬಂಧಿತರಲ್ಲಿ ಬೆಂಗಳೂರಿನ ಆಕಾಶ್ ಶೆಟ್ಟಿ ಕೂಡ ಒಬ್ಬ. ಭೂಗತ ಪಾತಕಿಯು ಬ್ಯುಲ್ಡರ್​ವೊಬ್ಬರಿಗೆ ಫೋನ್​ನಲ್ಲಿ ಬೆದರಿಕೆ ಹಾಕಿದ್ದನೆನ್ನಲಾಗಿದೆ.…

ಮುಂದೆ ಓದಿ...

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನ

ದೆಹಲಿ:        ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ (ಜೂನ್ 03, 1930 – ಜನವರಿ 29, 2019) ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.        ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಅವರು ಅಲ್ಝಮೈರ್(ಮರೆವಿನ ಕಾಯಿಲೆ) ಕಾಯಿಲೆಯಿಂದ ಬಳಲುತ್ತಿದ್ದರು.       ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಫರ್ನಾಡಿಸ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಮಾಜಿಕ ಹೋರಾಟಕ್ಕೆ ಧುಮುಕಿದ್ದರು. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ 1930 ಜೂನ್ 3 ರಂದು ಜನಿಸಿದ್ದರು.   (Visited 16 times, 1 visits today)

ಮುಂದೆ ಓದಿ...

ಮಾಜಿ ಸಿಬಿಐ ಮುಖ್ಯಸ್ಥ ಅಲೋಕ್​ ವರ್ಮ ರಾಜೀನಾಮೆ

ನವದೆಹಲಿ:        ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಅಲೋಕ್​ ಕುಮಾರ್​ ವರ್ಮ​ ಅವರು ತಮ್ಮ ನೂತನ ಹುದ್ದೆ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲು ನಿರಾಕರಿಸಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.       ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವರ್ಮಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿ, ಅಗ್ನಿಶಾಮಕ ವಿಭಾಗದ ಡಿಜಿ ಹುದ್ದೆಗೆ ವರ್ಗಾಯಿಸಿತ್ತು.       ಇನ್ನೊಂದೆಡೆ ಅಲೋಕ್ ವರ್ಮಾ ವರ್ಗಾವಣೆಯುಇಂದ ತೆರವಾದ ಸ್ಥಾನಕ್ಕೆ ಇಂದು ಮತ್ತೆ ಹಂಗಾಮಿ ನಿರ್ದೇಶಕರಾಗಿ ಹೆಚ್ಚುವರಿ ನಿರ್ದೇಶಕ ಎಂ. ನಾಗೇಶ್ವರರಾವ್‌ ನೇಮಕ ಆಗಿದ್ದಾರೆ.        ಈ ಹಿಂದೆ ಕೇಂದ್ರೀಯ ತನಿಇಖಾ ದಳದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದ ತರುವಾಯ ಕೇಂದ್ರ ಸರ್ಕಾರ ಅಲೋಕ್ ವರ್ಮಾ ಹಾಗೂ ಅವರ ಸಹವರ್ತಿ ರಾಕೇಶ್ ಅಸ್ತಾನ ಅವರುಗಳನ್ನು ಸುದೀರ್ಘಾವಧಿಯ…

ಮುಂದೆ ಓದಿ...

8ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಕೇಂದ್ರ ಸಜ್ಜು

ನವದೆಹಲಿ:       ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಅನ್ವಯ ಎಂಟನೇ ತರಗತಿವರೆಗೆ ಹಿಂದಿ ಭಾಷೆ ಕಲಿಕೆ ಕಡ್ಡಾಯ ಆಗಲಿದೆ. ಹೊಸ ಶಿಕ್ಷಣ ನೀತಿ ವರದಿ ತಯಾರಿಸಲಾಗಿದ್ದು, ಕೇಂದ್ರಕ್ಕೆ ಸಲ್ಲಿಕೆ ಆಗಲಿದೆ.       ಕೆ.ಕಸ್ತೂರಿ ರಂಗನ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯು ಶಿಕ್ಷಣ ನೀತಿ ಕುರಿತಾಗಿ ವರದಿ ತಯಾರಿಸಿದ್ದು, ವರದಿ ಜಾರಿಯಾದಲ್ಲಿ ದೇಶದಾದ್ಯಂತ ಎಂಟನೇ ತರಗತಿ ವರೆಗೂ ಹಿಂದಿ ಶಿಕ್ಷಣ ಕಡ್ಡಾಯ ಆಗಲಿದೆ.       ಕೆ.ಕಸ್ತೂರಿರಂಗನ್ ಅವರ ಸಮಿತಿಯು ಭಾರತ ಕೇಂದ್ರಿತ ಶಿಕ್ಷಣ ಪದ್ಧತಿಗೆ ಒತ್ತು ನೀಡುವ ಸಲುವಾಗಿ ಶಿಕ್ಷಣ ನೀತಿಯಲ್ಲಿ ಹಲವು ಬದಲಾವಣೆಗಳನ್ನು ಸೂಚಿಸಲಿದೆ. ವ್ಯವಸ್ಥಿತ ಮಾದರಿಯಲ್ಲಿ ಏಕರೂಪದ ಪ್ರಾಥಮಿಕ ಶಿಕ್ಷಣವನ್ನು ದೇಶದಾದ್ಯಂತ ನೀಡುವಂತೆ ಸಹ ವರದಿಯಲ್ಲಿ ಹೇಳಲಾಗಿದೆ.       2018 ರ ಡಿ. 31 ರಂದು ಅವಧಿ ಕೊನೆಗೊಳ್ಳುವ ಮುಂಚೆ ಸಮಿತಿಯು ಮಾನವ…

ಮುಂದೆ ಓದಿ...

ನಾಳೆ ಬಂದ್ ಇರುತ್ತಾ?

ನವದೆಹಲಿ:       ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಎರಡು ದಿನಗಳ ಕಾಲ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಎರಡು ದಿವಸಗಳ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಮೊದಲ ದಿವಸದ ಮುಷ್ಕರ ಕೆಲ ನಿಮಿಷಗಳ ಹಿಂದಷ್ಟೆ ಮುಕ್ತಾಯವಾಗಿದೆ.       ಇನ್ನು ಎರಡು ದಿವಸಗಳ ಬಂದ್ ಪೈಕಿ ಮೊದಲನೇ ದಿವಸದ ಬಂದ್ ಇಂದು ಮುಕ್ತಾಯವಾಗಿದ್ದು, ಎಂದಿನಿಂತೆ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಇನ್ನು ನಾಳೆ ಕೂಡ ಬಂದ್ ಮುಂದುವರೆಯಲಿದ್ದು, ನಾಳೆ ಬೆಂಗಳೂರು ಸೇರಿ ರಾಜ್ಯಾದಂತ್ಯ ಸರಕಾರಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎನ್ನಲಾಗುತ್ತಿದೆ.       ನಾಳೆಯೂ ಕೂಡ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಇಲ್ಲಿ ತನಕ ಯಾವುದೇ ಅಧಿಕೃತ ಆದೇಶವು ಬಂದಿಲ್ಲ. ಇನ್ನು ಖಾಸಗಿ ಶಾಲೆಗಳು ಪರಿಸ್ಥಿತಿ ನೋಡಿಕೊಂಡು ಶಾಲೆಗೆ ರಜೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಬಹುದಾಗಿದೆ ಅಂತ ಖಾಸಗಿ ಶಾಲೆಗಳ…

ಮುಂದೆ ಓದಿ...