ಶಬರಿಮಲೆ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರು!

ಶಬರಿಮಲೆ:        ಭಾರೀ ಹೋರಾಟ, ಪರ- ವಿರೋಧಗಳ ಬಳಿಕ ಕೊನೆಗೂ ಶಬರಿಮಲೆಯಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಸುಪ್ರೀಂ ತೀರ್ಪಿನ ಬಳಿಕ ಇದೇ ಮೊದಲ ಬಾರಿ ಇಬ್ಬರು ಮಹಿಳಾ ಭಕ್ತರು ಅಯ್ಯಪ್ಪನ ದೇಗುಲ ಪ್ರವೇಶಿಸಿದ್ದಾರೆ.        ಶತಮಾನಗಳಿಂದ ನಡೆದು ಬಂದ ಸಂಪ್ರದಾಯಕ್ಕೆ ಕೊನೆಗೂ ಬ್ರೇಕ್ ಬಿದ್ದಿದ್ದು, ಹೊಸ ವರ್ಷದ ಆರಂಭದಲ್ಲಿ 40 ವರ್ಷದ ಇಬ್ಬರು ಮಹಿಳೆಯರು ಪೊಲೀಸ್ ಬಿಗಿ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ್ದಾರೆ. ಮಕರ ಸಂಕ್ರಾಂತಿ ವೇಳೆಗೆ ದೇಗುಲ ಪ್ರವೇಶಿಸಬೇಕೆಂಬ ನಿಟ್ಟಿನಲ್ಲಿ ಮಹಿಳಾ ಕ್ರಾಂತಿ ಆರಂಭವಾಗಿತ್ತು. ಆದರೀಗ ತೀವ್ರ ವಿರೋಧದ ನಡುವೆಯೂ ಬುಧವಾರ ಮುಂಜಾನೆ 3.45ಕ್ಕೆ ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ. ದೇಗುಲ ಪ್ರವೇಶಿಸಿದ ಮಹಿಳೆಯರನ್ನು ಕನಕದುರ್ಗಾ ಹಾಗೂ ಬಿಂದು ಎಂದು ಗುರುತಿಸಲಾಗಿದ್ದು, ತಾವು ದೇಗುಲ ಪ್ರವೆಶಿಸುತ್ತಿರುವ ವಿಡಿಯೋವನ್ನು ಖುದ್ದು ಮಹಿಳೆಯರೇ ಬಹಿರಂಗಪಡಿಸಿದ್ದಾರೆ ಹಾಗೂ ಸುಪ್ರೀಂ ತೀರ್ಪಿನ ಬಳಿಕವೂ ಅಸಾಧ್ಯವೆನ್ನಲಾಗುತ್ತಿದ್ದ ಕಾರ್ಯವನ್ನು ಮಾಡಿದ್ದಾರೆ.    …

ಮುಂದೆ ಓದಿ...

ಪಾವತಿಯಾಗದ ಸಾಲ: 6,000 ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಕ್ರಮ

ಹೊಸದಿಲ್ಲಿ :        ಕಳೆದ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಪಾವತಿಯಾಗದ ಸಾಲಗಳ ಪ್ರಮಾಣ ಹೆಚ್ಚಾಗುವಲ್ಲಿ ಕರ್ತವ್ಯ ಲೋಪ ತೋರಿದ ಆರು ಸಾವಿರಕ್ಕೂ ಅಧಿಕ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.       ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಲೋಕಸಭೆಯಲ್ಲಿಂದು, ತಪ್ಪುಗಾರ ಅಧಿಕಾರಿಗಳಿಗೆ ಲಘು ಪ್ರಮಾಣದಿಂದ ಕಠಿನ ಪ್ರಮಾಣದ ವರೆಗಿನ ದಂಡವನ್ನು ಹೇರಲಾಗಿದೆ ಎಂದು ಲಿಖೀತ ಉತ್ತರದಲ್ಲಿ ಈ ವಿಷಯ ತಿಳಿಸಿದರು.       ಕೆಲವೊಂದು ಪ್ರಕರಣಗಳಲ್ಲಿ ಕೆಲಸದಿಂದ ಕಿತ್ತು ಹಾಕುವ, ಕಡ್ಡಾಯ ನಿವೃತ್ತಿ ನೀಡುವ ಮತ್ತು ಹಿಂಭಡ್ತಿ ನೀಡುವ ಶಿಕ್ಷೆಯನ್ನು ಕರ್ತವ್ಯ ಲೋಪ ತೋರಿದ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು. (Visited 13 times, 1 visits today)Share

ಮುಂದೆ ಓದಿ...

ಲೋಕಸಭಾ ಚುನಾವಣೆಯಲ್ಲಿ ಕಮಲ್​ ಹಾಸನ್ ಸ್ಪರ್ಧೆ ಖಚಿತ

ಮುಂಬೈ:        ಮುಂಬರುವ 2019ನೇ ಲೋಕಸಭಾ ಚುನಾವಣೆಗೆ ಮಕ್ಕಳ್​ ನಿಧಿ ಮೈಯಮ್​ (ಎಂಎನ್ಎಂ) ಪಕ್ಷ ಖಂಡಿತವಾಗಿಯೂ ಸ್ಪರ್ಧಿಸುತ್ತದೆ ಎಂದು ನಟ, ಪಕ್ಷದ ಸಂಸ್ಥಾಪಕ ಕಮಲ್​ ಹಾಸನ್​ ತಿಳಿಸಿದ್ದಾರೆ.        ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾನ ಮನಸ್ಸಿನ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲೂ ನಮ್ಮ ಎಂಎನ್​ಎಂ ಪಾರ್ಟಿ ಸಿದ್ಧವಾಗಿದೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೋಸ್ಕರ ಸಮಿತಿ ರಚನೆ ಮಾಡುತ್ತೇವೆ. ಈ ಬಾರಿಯ ಸಾರ್ವತ್ರಿಕ ಚುನಾವಣೆಯನ್ನು ನಾನು ಎದುರಿಸುತ್ತೇನೆ ಎಂದು ಹೇಳಿದ್ದಾರೆ.        ಮೈತ್ರಿ ಬಗ್ಗೆ ಚುನಾವಣೆ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ತಮಿಳುನಾಡಿನ ರಾಜಕೀಯದ ಮೂಲ ಸ್ವರೂಪವನ್ನೇ ಬದಲಿಸಲು ಹೊರಟ ಪಕ್ಷಗಳೊಂದಿಗೆ ಯಾವ ಕಾರಣಕ್ಕೂ ಹೊಂದಾಣಿಕೆ ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿ ಘೋಷಣೆಯೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತೇವೆ ಎಂದಿದ್ದಾರೆ.    (Visited 5 times, 1 visits today)Share

ಮುಂದೆ ಓದಿ...

ಮಲ್ಯ ಜೊತೆಗೆ 58 ವಿತ್ತಪರಾಧಿಗಳ ಬೇಟೆಗೆ ಸರ್ಕಾರ ಸಿದ್ದ

      ದೇಶ ತೊರೆದು ವಿದೇಶಗಳಲ್ಲಿ ತಲೆಮರೆಸಿಕೊಂಡಿರುವ ವಿಜಯ್‌ ಮಲ್ಯ ಹಾಗೂ 58 ವಿತ್ತಪರಾಧಿಗಳನ್ನು ಕರೆ ತರಲು ಶತಾಯಗತಾಯ ಕಾರ್ಯಪ್ರವೃತ್ತವಾಗಿರುವುದಾಗಿ ಕೇಂದ್ರ ಸರಕಾರ ಸಂಸತ್ತಿಗೆ ತಿಳಿಸಿದೆ.      ನೀರವ್‌ ಮೋದಿ, ಮೆಹುಲ್‌ ಚೋಕ್ಸಿ ಅಷ್ಟೇ ಅಲ್ಲದೆ ಒಟ್ಟು 58 ವಿತ್ತಪರಾಧಿಗಳನ್ನು ಕರೆ ತರಲು ಕಾರ್ಯಚರಣೆ ನಡೆಸಿರುವುದಾಗಿ ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಕೆ ಸಿಂಗ್‌ ಈ ಸಂಬಂಧ ಲೋಕಸಭೆಗೆ ವಿವರಗಳನ್ನು ನೀಡಿದ್ದಾರೆ.        ಒಟ್ಟು 58 ಆರೋಪಿಗಳ ವಿರುದ್ಧ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಸಚಿವ ವಿ.ಕೆ ಸಿಂಗ್‌ ಮಾಹಿತಿ ನೀಡಿದ್ದಾರೆ. ಒಟ್ಟು 58 ವಿತ್ತಪರಾಧಿಗಳ ಪೈಕಿ 16 ಮಂದಿಯ ಗಡಿಪಾರು ಕೋರಿ ಬ್ರಿಟನ್‌, ಯುಎಇ, ಬೆಲ್ಜಿಯಂ, ಈಜಿಪ್ತ್‌, ಅಮೆರಿಕ, ಅಂಟಿಗುವಾ ಮತ್ತು ಬಾರ್ಬುಡಾಗೆ ಮನವಿ ಸಲ್ಲಿಸಲಾಗಿದೆ.       ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ಲಲಿತ್ ಮೋದಿ, ನೀರವ್‌…

ಮುಂದೆ ಓದಿ...

ಈ ತಿಂಗಳ ಅಂತ್ಯಕ್ಕೆ ಸರ್ಕಾರಿ ಕಚೇರಿಗಳಲ್ಲಿ ಎಲ್‌ಇಡಿ ಬಲ್ಬ್‌ ಅಳವಡಿಕೆ

ನವದೆಹಲಿ:       ಈ ವರ್ಷಾಂತ್ಯದ ಒಳಗಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಈಗಿರುವ ಬಲ್ಬ್‌ಗಳ ಬದಲಾಗಿ ಎಲ್‌ಇಡಿಗೆ ಪರಿವರ್ತಿಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯೂಡಿ) ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಿದೆ.       ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕೇಂದ್ರ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಹಿಸುತ್ತದೆ. ಇದರ ವ್ಯಾಪ್ತಿಗೆ ಒಳಪಡುವ 1,241 ಕಟ್ಟಡಗಳಲ್ಲಿ ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈಗಾಗಲೇ 223 ಕಟ್ಟಡಗಳಲ್ಲಿ ಎಲ್‌ಇಡಿಗೆ ಪರಿವರ್ತಿಸುವ ಕೆಲಸ ಪೂರ್ಣಗೊಂಡಿದ್ದು, 230 ಕಟ್ಟಡಗಳಲ್ಲಿ ಕೆಲಸ ನಡೆಯುತ್ತಿದೆ.       ಕೇಂದ್ರ ಸರ್ಕಾರದ ಎಲ್ಲ ಕಟ್ಟಡಗಳ ನಿರ್ವಹಣೆ ಹಾಗೂ ಅಂತರರಾಷ್ಟ್ರೀಯ ಗಡಿಗಳಲ್ಲಿ ಬೇಲಿ ಹಾಕುವ ಕೆಲಸವನ್ನು ಸಿಪಿಡಬ್ಲ್ಯೂಡಿ ನಿರ್ವಹಿಸುತ್ತದೆ. ಇದಲ್ಲದೇ, ಸ್ನೇಹಹಸ್ತ ಕಾರ್ಯಕ್ರಮಗಳ ಅಡಿಯಲ್ಲಿ ವಿದೇಶಗಳಲ್ಲಿ ಕೂಡ ಭಾರತ ಸರ್ಕಾರದ ನೆರವಿನೊಂದಿಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತದೆ. (Visited 7 times, 1 visits today)Share

ಮುಂದೆ ಓದಿ...

ಲಂಕಾ ಪ್ರಧಾನಿ ಹುದ್ದೆ ತ್ಯಜಿಸಿದ ರಾಜಪಕ್ಸೆ

ಕೊಲೊಂಬೋ:        ಸುಪ್ರೀಂಕೋರ್ಟ್ ಆದೇಶದಿಂದ ಕೊನೆಗೂ ಶ್ರೀಲಂಕಾದ ಪ್ರಧಾನಿ ಹುದ್ದೆಗೆ ಮಹೀಂದ್ರ ರಾಜಪಕ್ಸೆ ಶನಿವಾರ ರಾಜೀನಾಮೆ ನೀಡುವ ಮೂಲಕ ಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ವಿವಾದಿತ ನಿರ್ಧಾರದ ಜಟಾಪಟಿ ಅಂತ್ಯಗೊಂಡಂತಾಗಿದೆ.       ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಶನಿವಾರ ಬೆಳಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟಕ್ಕೂ, ರಾಜಪಕ್ಸೆ ಅವರು ಶನಿವಾರ ರಾಜೀನಾಮೆ ನೀಡುವ ಬಗ್ಗೆ ಶುಕ್ರವಾರ ಸಂಜೆಯೇ ಎಲ್ಲೆಡೆ ಸುದ್ದಿ ಹರಿದಾಡಿತ್ತು.        ಈ ಹಿನ್ನೆಲೆಯಲ್ಲಿ ರನಿಲ್ ವಿಕ್ರಮಸಿಂಘೆ ಅವರ ಹಾದಿ ಸುಗಮವಾದಂತಾಗಿದ್ದು, ಭಾನುವಾರ ಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.        ಶುಕ್ರವಾರ ಮತ್ತೆ ಸುಪ್ರೀಂಕೋರ್ಟ್ ರಾಜಪಕ್ಸೆ ಕುರಿತಂತೆ ನೀಡಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದರಿಂದ ಕಾನೂನು ಸಮರದಲ್ಲಿ ಸೋಲು ಕಂಡ ರಾಜಪಕ್ಸೆ ಪ್ರಧಾನಿ ಹುದ್ದೆಗೆ ರಾಜೀನಾಮೆ…

ಮುಂದೆ ಓದಿ...

ಸೋನಿಯಾ ಕ್ಷೇತ್ರ ರಾಯ್‍ಬರೇಲಿಗೆ ನಾಳೆ ಮೋದಿ ಭೇಟಿ

ಲಖನೌ:        ಸೋನಿಯಾ ಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ರಾಯ್ ಬರೇಲಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಭೇಟಿ ನೀಡಲಿದ್ದಾರೆ. ಇದು ರಾಯ್‌ಬರೇಲಿಗೆ ಅವರ ಮೊದಲ ಭೇಟಿ.       ಮುಂದಿನ ವರ್ಷ ಕುಂಭೇಮೇಳ ನಡೆಯಲಿರುವ ಅಲಹಾಬಾದ್‌ಗೂ ಅವರು ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. ಹಮ್‌ಸಫರ್ ಪೆಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿರುವ ಪ್ರಧಾನಿ, ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿ ಮಾಧ್ಯಮ ಸಹಸಂಚಾಲಕ ನವೀನ್ ಶ್ರೀವಾಸ್ತವ ತಿಳಿಸಿದ್ದಾರೆ.        ಇದೇ ವೇಳೆ ₹1,100 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಚುನಾವಣಾ ರಣತಂತ್ರ?       2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಏಟು ನೀಡಲು ಸೋನಿಯಾಗಾಂಧಿ ಅವರ ತವರು ಕ್ಷೇತ್ರಕ್ಕೆ ಭೇಟಿ ನೀಡುವ ಮೂಲಕ ಪ್ರಧಾನಿ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.  …

ಮುಂದೆ ಓದಿ...

ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ

ಚನ್ನೈ:       ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಸಿದ್ದಗಂಗಾ ಮಠ ಇವರ ಆರೋಗ್ಯ ವಿಚಾರಿಸಿದರು.       ಶ್ರೀಗಳು ಶೀಘ್ರವೇ ಗುಣಮುಖರಾಗಿ ಜನತಾ ಜನಾರ್ದನನ ಸೇವೆಯಲ್ಲಿ ತೊಡಗಲಿ. ಶ್ರೀಗಳು ಮಾಡುತ್ತಿರುವ ತ್ರಿವಿಧ ದಾಸೋಹ ಕೈಂಕರ್ಯ ಇಡೀ ದೇಶಕ್ಕೆ ಮಾದರಿಯಾಗಿದ್ದು ಅವರ ಆಶೀರ್ವಾದ ಎಲ್ಲರ ಮೇಲೂ ನಿರಂತರವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. (Visited 9 times, 1 visits today)Share

ಮುಂದೆ ಓದಿ...

ಭಯೋತ್ಪಾದಕರ ಗುಂಡಿನ ಚಕಮಕಿಗೆ ಮೂವರು ಪೊಲೀಸರು ಬಲಿ

ಶ್ರೀನಗರ:        ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಮೂವರು ಪೋಲಿಸರು ಹುತ್ಮಾತರಾಗಿದ್ದಾರೆ.       ಈ ಪ್ರದೇಶದಲ್ಲಿನ ಝೈನ್‌ಪೋರಾದಲ್ಲಿ ಕಾವಲು ಕಾಯುತ್ತಿದ್ದ ನಾಲ್ವರು ಪೋಲಿಸರಿದ್ದರು. ಇಲ್ಲಿಗೆ ನುಗ್ಗಿದ ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಮೂರು ಮಂದಿ ಪೋಲಿಸರು ಸ್ಥಳದಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪೋಲಿಸ್‌‌ ಅಧಿಕಾರಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.       ದಾಳಿ ಬಳಿಕ ಪೋಲಿಸರ ಬಳಿಯಿದ್ದ ಎಲ್ಲ ಶಸ್ತ್ರಾಸ್ತ್ರಗಳನ್ನು ಪೋಲಿಸರು ಹೊತ್ತೊಯ್ದಿದ್ದು, ಸ್ಥಳದಿಂದ ಪರಾರಿಯಾಗಿದ್ದಾರೆ. (Visited 6 times, 1 visits today)Share

ಮುಂದೆ ಓದಿ...

ಆರನೇ ಬಾರಿ ವಿಶ್ವಚಾಂಪಿಯನ್ ಆಗಿ ದಾಖಲೆ ಬರೆದ ಮೇರಿ ಕೋಮ್

ದೆಹಲಿ:        ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭಾರತದ ಬಾಕ್ಸಿಂಗ್‌ ತಾರೆ ಎಂ.ಸಿ. ಮೇರಿ ಕೋಮ್‌ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.       ಇಂದು ನಡೆದ 48 ಕೆಜಿ ಲೈಟ್‌ ಫ್ಲೈವೇಟ್‌ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಉಕ್ರೇನ್‌ನ ಎಚ್ ಓಕೋಟೊ ವಿರುದ್ಧ 5-0 ಅಂತರದ ಗೆಲುವು ಸಾಧಿಸುವ ಮೂಲಕ, ಆರು ಬಾರಿ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ವಿಶ್ವದ ಮೊದಲ ಬಾಕ್ಸಿಂಗ್ ತಾರೆ ಎಂಬ ಗೌರವಕ್ಕೆ ಮೇರಿ ಕೋಮ್ ಪಾತ್ರವಾಗಿದ್ದಾರೆ.        ಮೇರಿ ಕೋಮ್ ಈ ಹಿಂದೆ ಐದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕದೊಡನೆ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಆಗಿ ಮಿಂಚಿದ್ದರು. ಮೇರಿ ಕೋಮ್‌ 2010ರಲ್ಲಿ ಕೊನೆಯದಾಗಿ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನ ಗೆದ್ದಿದ್ದರು. (Visited 6 times, 1 visits…

ಮುಂದೆ ಓದಿ...