ರಸ್ತೆ ಕಾಮಗಾರಿ ವಿಳಂಬ : ಓಡಾಟಕ್ಕೆ ತೊಂದರೆ

ಹುಳಿಯಾರು:        ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ನಿರ್ಮಾಣವಾಗುತ್ತಿರುವ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿಯಿಂದ ಎನ್.ಹೆಚ್.150 ಎ ಗೆ ಸೇರುವ ರಸ್ತೆ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀರ್ವ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ.       ಸುಮಾರು 3.23 ಕಿ.ಮೀ ಉದ್ದರ ಬರದಲೇಪಾಳ್ಯ, ಯಾಕುಬ್ ಸಾಬ್ ಪಾಳ್ಯ ಸೇರಿದಂತೆ ಇತರೆ ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ರಸ್ತೆಗೆ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಜೂನ್ 2020 ರಲ್ಲಿ ಶಂಕುಸ್ಥಾಪನೆ ಮಾಡಿದ್ದು ಇದೂವರೆವಿಗೂ ಅಂದರೆ 11 ತಿಂಗಳು ಕಳೆದಿದ್ದರೂ ಇನ್ನೂ ಪೂರ್ಣಗೊಳ್ಳದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ.       ಅಲ್ಲದೆ ತಮ್ಮಡಿಹಳ್ಳಿ ಗ್ರಾಮದಲ್ಲಿ ಕೆರೆ ಏರಿಯ ಮೇಲೆ ಒಂದು ಭಾಗದಲ್ಲಿ ರಸ್ತೆ ಮಾಡುತ್ತೇವೆಂದು ಕೆರೆ ಏರಿಯನ್ನು ಬಗೆದು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಕೆರೆ ಏರಿಯ ಮೇಲೆ ಒಂದು ಕಡೆಯಿಂದ…

ಮುಂದೆ ಓದಿ...

ಕೊರೊನಾ ಲಸಿಕೆ ಪಡೆದ ಪರಮೇಶ್ವರ್

ತುಮಕೂರು:       ನಗರದ ಹೊರವಲಯದ ಅಗಳಕೋಟೆಯಲ್ಲಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಕೋವಿಡ್-19 ಲಸಿಕೆ ಪಡೆದರು.       ಕೊರೊನಾ ಲಸಿಕೆ ಪಡೆದ ನಂತರ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು, ದೇಶದಲ್ಲಿ ಇತ್ತೀಚೆಗೆ ಕೊರೊನಾ 2ನೇ ಆರ್ಭಟ ಜಾಸ್ತಿಯಾಗುತ್ತಿದೆ. ಹೀಗಾಗಿ ಸೋಂಕಿತರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದ ಪಾರಾಗಲು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.       ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಲಸಿಕೆ ಪಡೆದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿಯಾಗಿ ಸೋಂಕಿನಿಂದ ಪಾರಾಗಬಹುದು. ಯಾರೂ ಸಹ ಹೆದರದೆ ಧೈರ್ಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬಹುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿಲ್ಲ ಎಂದರು. ಕೊರೊನಾ ಮಹಾಮಾರಿಯ ಆರ್ಭಟ ರಾಜ್ಯ…

ಮುಂದೆ ಓದಿ...

ಪ್ರವಾಸಿ ತಾಣಗಳಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ

ತುಮಕೂರು :        ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಪ್ರವಾಸೋದ್ಯಮ ಇಲಾಖೆ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ವಿಶೇಷ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನುಷ್ಠಾನಗೊಳಿಸುತ್ತಿರುವ 69 ಕಾಮಗಾರಿಗಳ ಪೈಕಿ 12 ಕಾಮಗಾರಿಗಳು ಪೂರ್ಣಗೊಂಡಿದ್ದು, ಪ್ರಗತಿಯಲ್ಲಿರುವ 46 ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಪ್ರಾರಂಭಿಸದೇ ಇರುವ 11 ಕಾಮಗಾರಿಗಳನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಬೇಕು ಎಂದು ನಿರ್ದೇಶಿಸಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ದಂತೆ ಸಣ್ಣ-ಪುಟ್ಟ ಕಾಮಗಾರಿಗಳ ಅನುದಾನ ಬಿಡುಗಡೆಗಾಗಿ ಕೇಂದ್ರ ಕಚೇರಿಗಳಿಗೆ ಪತ್ರ ಬರೆದು ಕಾಯುವುದು ಬೇಡ. ಅಂತಹ ಕಾಮಗಾರಿಗಳ ಬಗ್ಗೆ ತಮ್ಮ ಗಮನಕ್ಕೆ ತಂದು, ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ…

ಮುಂದೆ ಓದಿ...

ತುಮಕೂರು: ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಮೀಸಲಿಡಲು ಡಿಸಿ ಸೂಚನೆ

ತುಮಕೂರು:        ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಎಲ್ಲಾ ಸಮುದಾಯದವರ ಸಹಭಾಗಿತ್ವ ಮತ್ತು ಸಹಕಾರ ಅತ್ಯಾವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣ ಸಂಬಂಧ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ಒಂದಾಗಿರುವ ತುಮಕೂರಿನಲ್ಲಿಯೂ ದಿನೇ ದಿನೇ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ರಂಜಾನ್ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಕಿಕೊಳ್ಳುವುದು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಯಸ್ಸಾದವರು ಅನವಶ್ಯಕವಾಗಿ ಹೊರಗಡೆ ಬರಬಾರದು ಎಂದು ತಿಳಿಸಿದರು.      …

ಮುಂದೆ ಓದಿ...

ತುಮಕೂರು : ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ತುಮಕೂರು:       ಕೊವೀಡ್-19 2ನೇ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್, ವ್ಯಾಕ್ಸೀನೇಷನ್ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.        ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾದ ಕೂಡಲೇ ಚಿಕಿತ್ಸೆ ನೀಡಲು ಟ್ರೈಯೆಜ್ ಮಾಡಬೇಕು. ಇದರಿಂದ ಸೋಂಕಿತರ ಆರೋಗ್ಯ ಸ್ಥಿತಿ ಹಾಗೂ ಅವರಿಗೆ ಅಗತ್ಯವಿರುವ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದರು. ಟ್ರೈಯೆಜ್ ಅಡಿಯಲ್ಲಿ ರೋಗಿಗಳು ಬಯಸಿದರೆ ಅಥವಾ ಜಿಲ್ಲಾಸ್ಪತ್ರೆಯಲ್ಲಿ ಬೆಡ್, ಐಸಿಯು ಸಿಗದೇ ಇರುವ ಸಂದರ್ಭದಲ್ಲಿ ಕೋವಿಡ್ ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ರೋಗಿಯ ಆರೋಗ್ಯ ಸ್ಥಿತಿ ತಿಳಿಯಲು ಅನುಕೂಲವಾಗುವುದು. ಇದನ್ನು ಇಂದಿನಿಂದಲೇ ಜಾರಿಗೆ ಬರುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.         ಜಿಲ್ಲೆಯಲ್ಲಿ ಪ್ರತಿದಿನ 4000 ಕೋವಿಡ್ ಸ್ಯಾಂಪಲ್ ಟೇಸ್ಟ್ ನಡೆಸಬೇಕು.…

ಮುಂದೆ ಓದಿ...

ತೊಡಕುಗಾಗಿ ಮಾಂಸ ಪ್ರಿಯರ ನೂಕು-ನುಗ್ಗಲು : ಏರಿಕೆಯಾದ ಮಾಂಸದ ಬೆಲೆ

ಹುಳಿಯಾರು:      ಬೆಳಕು ಹರಿಯುವ ಮುನ್ನವೇ ಬುಧವಾರ ಮಾಂಸದ ಅಂಗಡಿಗಳ ಮುಂದೆ ಜನ ಜಾತ್ರೆ ಪ್ರಾರಂಭವಾಗಿತ್ತು. ಕೈಯಲ್ಲಿ ಬ್ಯಾಗ್ ಹಿಡಿದ ಮಾಂಸ ಪ್ರಿಯರು ಯುಗಾದಿ ಹಬ್ಬದ ವರ್ಷ ತೊಡಕು ಆಚರಣೆಗೆ ಮಾಂಸ ಖರೀದಿಸಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದರು.       ಮಾಂಸಾಹಾರಿ ಪ್ರೇಮಿಗಳು ಯುಗಾದಿಗಿಂತ ಯುಗಾದಿ ಮಾರನೆಯ ದಿನಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತ ಬಂದಿದ್ದು ಸಂಬಂಧಿಗಳನ್ನು ಹಾಗೂ ಸ್ನೇಹಿತರನ್ನು ಊಟಕ್ಕೆ ಕರೆಯುವುದು ವಾಡಿಕೆ. ಹಾಗಾಗಿ ಹಬ್ಬದ ವರ್ಷ ತೊಡಕು ಪ್ರಯುಕ್ತ ಮುಂಜಾನೆಯಿಂದಲೆ ಪಟ್ಟಣದ ವಿವಿಧ ಮಾಂಸಾಹಾರಿ ಅಂಗಡಿಗಳಲ್ಲಿ ಮಾಂಸದ ವ್ಯಾಪಾರ ಭರ್ಜರಿಯಾಗಿ ನಡೆಯಿತು.      ಪಟ್ಟಣದ ಪ್ರವಾಸಿಮಂದಿರದ ರಸ್ತೆ, ಟಿ.ಎಸ್.ಹಳ್ಳಿ ರಸ್ತೆ, ಹೊಸದುರ್ಗ ರಸ್ತೆ ಹಾಗೂ ರಾಮಗೋಪಾಲ್ ಸರ್ಕಲ್‍ನಲ್ಲಿ ಕೋಳಿ ಅಂಗಡಿಗಳಲ್ಲಿ, ಮಸೀದಿ ರಸ್ತೆ, ಬನಶಂಕರಮ್ಮನ ದೇವಸ್ಥಾನ ರಸ್ತೆಗಳಲ್ಲಿನ ಮಾಂಸದ ಅಂಗಡಿಗಳ ಮುಂದೆ ಜಾತ್ರಾ ವಾತಾವರಣ ಉಂಟಾಗಿತ್ತು. ಹಳ್ಳಿಗಳಲ್ಲಿನ…

ಮುಂದೆ ಓದಿ...

ಅಂಬೇಡ್ಕರ್ ಜಯಂತಿ ನೆಪದಲ್ಲಿ ಮಾಂಸ ಮಾರಾಟ ನಿಷೇಧ

ತುಮಕೂರು :       ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ ನೆಪವಾಗಿಟ್ಟುಕೊಂಡು ನಗರಾಡಳಿತ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ನಿಯಂತ್ರಿಸುವ ಸಲುವಾಗಿ ನಗರದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಜನಸಂದಣಿ ಸೇರದಂತೆ ವರ್ಷದ ತೊಡಕು ದಿನವಾದ ಇಂದು ಮಾಂಸ ಮಾರಾಟವನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಚಿಕನ್, ಮಟನ್ ಖರೀದಿಗಾಗಿ ಮಾಂಸ ಪ್ರಿಯರ ಪರದಾಟ ಹೇಳತೀರದಾಗಿತ್ತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ನೆಪದಲ್ಲಿ ನಗರದಲ್ಲಿ ಇಂದು ಮಾಂಸ ಮಾರಾಟ ನಿಷೇಧಿಸಿರುವುದು ನಗರದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.       ವರ್ಷಕ್ಕೊಮ್ಮೆ ಬರುವ ಯುಗಾದಿ ಹಬ್ಬದ ಮಾರನೇ ದಿನ ವರ್ಷದ ತೊಡಕನ್ನು ಆಚರಿಸಲು ಮಾಂಸ ಪ್ರಿಯರು ಬಹಳ ಉತ್ಸುಕತೆಯಿಂದ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ ಈ ಬಾರಿ ನಗರದಲ್ಲಿ ಮಾಂಸ ಮಾರಾಟ ನಿಷೇಧಿಸಿರುವುದಿಂದ ಮಟನ್ ಮತ್ತು ಚಿಕನ್ ಅಂಗಡಿಗಳು ಬಂದ್ ಆಗಿದ್ದವು.…

ಮುಂದೆ ಓದಿ...

ಟ್ಯೂಷನ್ ಶುಲ್ಕ ಕಟ್ಟಲಿಲ್ಲವೆಂದು ಬಾಲಕನಿಗೆ ಹೊಡೆದ ಶಾಲಾ ಸಿಬ್ಬಂದಿ

ತುಮಕೂರು :       ಕೊರೋನಾ ವೈರಸ್‍ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ ಹೊಡೆದ ಪ್ರಕರಣ ನಡೆದಿದೆ.      ತುಮಕೂರು ಜಿಲ್ಲೆಯ ಪಾವಗಡದ ಬಳ್ಳಾರಿ ರಸ್ತೆಯಲ್ಲಿರುವ ವಿನಾಯಕ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ತಾಲಾ ಶಾಲೆಯಲ್ಲಿ ಹೆಚ್ಚುವರಿ ಕೋಚಿಂಗ್ ತೆಗೆದುಕೊಳ್ಳುತ್ತಿದ್ದಾರೆ, ಕಲಿಯೋಣವೆಂದು ಹೋದಾಗ ಈ ಘಟನೆ ನಡೆದಿದೆ.       ಹಿಂದಿ ಶಿಕ್ಷಕ ರಾಮಕೃಷ್ಣ ನಾಯಕ್ ನಾನು ಕಲಿಯುವುದರಲ್ಲಿ ಮುಂದಿಲ್ಲ ಎಂದು ದೂರಿದಾಗ ಎಲ್ಲ ಮಕ್ಕಳೆದುರು ಶಾಲೆಯ ಸೆಕ್ರೆಟರಿ ಅಶ್ವಥ್ ನಾರಾಯಣ ನನಗೆ ಕೋಲಿನಿಂದ ಹೊಡೆದರು. ಅವರು ನನಗೆ ದಿನನಿತ್ಯ ಟ್ಯೂಷನ್ ಫೀಸ್ ಕಟ್ಟಲಿಲ್ಲವೆಂದು ಹೊಡೆಯುತ್ತಿದ್ದರು ಎಂದು ನೊಂದ ಬಾಲಕ ಹೇಳುತ್ತಾನೆ. ಟ್ಯೂಷನ್ ಫೀಸ್ ಕಟ್ಟಬೇಕೆಂಬ ಒತ್ತಡದಿಂದ ನನಗೆ ಕಲಿಕೆ ಮೇಲೆ ಗಮನ ಹರಿಸಲು…

ಮುಂದೆ ಓದಿ...

ಮಧುಗಿರಿ : ಶವ ಸಂಸ್ಕಾರದ ವೇಳೆ 2 ಗ್ರಾಮಗಳ ಮಧ್ಯೆ ಘರ್ಷಣೆ

ಮಧುಗಿರಿ:      ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದ ಗ್ರಾಪಂ ಕಾರ್ಯದರ್ಶಿ ಶವ ಸಂಸ್ಕಾರದ ಸ್ಥಳ ನಿಗದಿಗಾಗಿ 2 ಗ್ರಾಮಗಳ ಗ್ರಾಮಸ್ಥರ ನಡುವೆ ನಡೆದ ಘರ್ಷಣೆ ಕಂದಾಯ ಇಲಾಖೆ, ಪೆÇಲೀಸರು, ಮಾದಿಗ ದಂಡೋರ ಸಮಿತಿ ಹಾಗೂ ಗ್ರಾಪಂ ಅಧಿಕಾರಿಗಳ ಸಂಧಾನದಿಂದ ಅಂತಿಮ ಕಾರ್ಯ ಸುಗಮವಾಗಿ ನಡೆಯಿತು. ಕೊರಟಗೆರೆ ತಾಲ್ಲೂಕು ಅಕ್ಕಿರಾಂಪುರ ಗ್ರಾಪಂ ಕಾರ್ಯದರ್ಶಿ ನರಸಪ್ಪ (55) ಶುಕ್ರವಾರದಂದು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗೆ 8ರ ಸಮಯದಲ್ಲಿ ಮೃತಪಟ್ಟಿದ್ದರು. ಶುಕ್ರವಾರವಾಗಿದ್ದರಿಂದ ಶವಸಂಸ್ಕಾರ ಮಾಡಿರಲಿಲ್ಲ. ಇವರು ಮಧುಗಿರಿ ತಾಲ್ಲೂಕಿನ ಬಸವನಹಳ್ಳಿ ಗ್ರಾಮದವರಾಗಿದ್ದು ಬಸವನಲ್ಲಿ ಗ್ರಾಮದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶವ ಸಂಸ್ಕಾರ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ದೇವಸ್ಥಾನದ ಟ್ರಸ್ಟ್‍ನವರು ಶವಸಂಸ್ಕಾರಕ್ಕೆ ಅನುಮತಿ ನಿರಾಕರಿಸಿದರು. ನಂತರ ವಡೇರಹಳ್ಳಿ ಗ್ರಾಮದ ಸರ್ವೆ ನಂಬರ್ 48 ರಲ್ಲಿ ಜಿಲ್ಲಾಧಿಕಾರಿಗಳು ಇಪ್ಪತ್ತು ಗುಂಟೆ ಜಾಗವನ್ನು ಸ್ಮಶಾನಕ್ಕಾಗಿ ಮಂಜೂರು ಮಾಡಲಾಗಿದ್ದ ಸ್ಥಳಕ್ಕೆ ಶವವನ್ನು ಶನಿವಾರ ಬೆಳಿಗ್ಗೆ ತಂದರು.…

ಮುಂದೆ ಓದಿ...

ತುಮಕೂರು : ನೈಟ್ ಕಪ್ರ್ಯೂ ಜಾರಿ : ಬೀದಿಗಿಳಿಯುವ ಮುನ್ನ ಎಚ್ಚರ!!

ತುಮಕೂರು:       ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ರಾತ್ರಿ ಕಫ್ರ್ಯೂ ವಿಧಿಸಿದ್ದು, ಇದನ್ನು ಕಟ ್ಟು ನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಸರಕಾರ ಪ್ರಧಾನ ಕಾರ್ಯದರ್ಶಿಗಳ ನಿರ್ದೇಶನದಂತೆ ಸ್ಥಾಪಿಸಿರುವ 10 ಚೆಕ್‍ಪೋಸ್ಟ್‍ಗಳಲ್ಲಿ ನಿಗಾವಹಿಸುವ ಬಗ್ಗೆ ನೇಮಕವಾಗಿರುವ ಅಧಿಕಾರಿಗಳಿಗೆ ನಗರ ಡಿವೈಎಸ್ಪಿ ಶ್ರೀನಿವಾಸ್ ನಿರ್ದೇಶನ ನೀಡಿದರು.        ನಗರದ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ತುರ್ತು ವಾಹನಗಳನ್ನು ಹೊರತು ಪಡಿಸಿ, ಉಳಿದ ವಾಹನಗಳು ನಗರದಲ್ಲಿ ಪ್ರವೇಶಿಸಲು ಅವಕಾಶವಿಲ್ಲ. ಸಿನಿಮಾಮಂದಿರ, ಮಾಲ್ ಸೇರಿದಂತೆ ವ್ಯಾಪಾರ ವಹಿವಾಟು ರಾತ್ರಿ 10ಕ್ಕೆ ಬಂದ್ ಆಗಬೇಕು. ಈಗಾಗಲೇ ಜಿಲ್ಲಾಧಿಕಾರಿಗಳು ಸಭೆ, ಸಮಾರಂಭ, ಜಾತ್ರೆಗಳ ಬಗ್ಗೆ ನಿಯಮ ರೂಪಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ವರಿಷ್ಠಾಧಿಕಾರಿಗಳು ಸಹ ಸೂಚನೆ ನೀಡಿದ್ದು ಅವರ ಆದೇಶವನ್ನು ನಾವೆಲ್ಲರೂ…

ಮುಂದೆ ಓದಿ...