ಮಣ್ಣು ಮಾಫಿಯಾಗೆ ಕೆರೆ ಬಲಿ : ತುಮಕೂರು ನಗರಕ್ಕೆ ಕುಡಿಯುವ ನೀರಿಲ್ಲ!!

ತುಮಕೂರು:       ನಗರಕ್ಕೆ ಕುಡಿಯುವ ನೀರು ಪೂರೈಸುವ ಬುಗುಡನಹಳ್ಳಿ ಪಂಪ್ ಹೌಸ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಎಕ್ಸ್‍ಪ್ರೆಸ್ ಲೈನ್‍ನ ಕಂಬಗಳು ಮಣ್ಣು ಮಾಫಿಯಾದ ಕರಾಳತೆಯಿಂದ ನೀರಿನಲ್ಲಿ ಮುಳುಗಿದ್ದು ನಗರಕ್ಕೆ ಎರಡು ದಿನಗಳಿಂದ ನೀರು ಪೂರೈಕೆ ಮಾಡಲಾಗುತ್ತಿಲ್ಲ.       ನಗರದ ವಾರ್ಡ್ ನಂ-01ರ ಸಂಜೀವಯ್ಯನ ಕಟ್ಟೆಯಲ್ಲಿ ಅಕ್ರಮವಾಗಿ ಮಣ್ಣು ತುಂಬುತ್ತಿರುವ ಬಗ್ಗೆ ಸಿಪಿಐ 26-10-2018ರಂದು ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಕಂದಾಯಾಧಿಕಾರಿಗಳು, ಪೊಲೀಸ್ ಸೇರಿದಂತೆ ಆಡಳಿತ ವ್ಯವಸ್ಥೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇದ್ದರಿಂದ ಇಂದು ಸಂಜೀವಯ್ಯನ ಕೆರೆಯಲ್ಲಿ 40ರಿಂದ 50 ಅಡಿ ಆಳ ತೆಗೆದು ಅಕ್ರಮವಾಗಿ ಮಣ್ಣನ್ನು ಪ್ರತಿಷ್ಠಿತ ವ್ಯಕ್ತಿಗಳ ಲೇಔಟ್ ಹಾಗೂ ರೈಲ್ವೆ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ.       ಕೆರೆಯಲ್ಲಿ ಮಣ್ಣು ತುಂಬುತ್ತಿರುವುದರಿಂದಾಗಿ ಬುಗುಡನಹಳ್ಳಿ ಪಂಪ್‍ಹೌಸ್‍ಗೆ ಸಂಪರ್ಕ ಕಲ್ಪಿಸುವ ಎಕ್ಸ್‍ಪ್ರೆಸ್ ಲೈನ್‍ನ ವಿದ್ಯುತ್ ಕಂಬಗಳು ನೀರಿನಲ್ಲಿ ಮುಳುಗುಡೆಯಾಗುತ್ತವೆ. ಇದರಿಂದಾಗಿ ಬೆಸ್ಕಾಂ…

ಮುಂದೆ ಓದಿ...

ಆಹ್ವಾನ ಪತ್ರಿಕೆಗಳಲ್ಲಿ ನಿಯಮದ ಶಿಷ್ಟಾಚಾರ ಉಲ್ಲಂಘನೆ!!

ಕೊರಟಗೆರೆ :       ತುಮಕೂರು ಕೆ.ಎಂ.ಎಫ್ ನಿಂದ ಉದ್ಘಾಟನೆಗೊಂಡ ಘಟಕಗಳನ್ನು ಮತ್ತೆ ಉದ್ಘಾಟಿಸಿ, ಆಹ್ವಾನ ಪತ್ರಿಕೆಗಳಲ್ಲಿ ಸರ್ಕಾರದ ನಿಯಮದ ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.       ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕುರಂಕೋಟೆ ಮತ್ತು ಬೆಂಡೋಣೆ ಗ್ರಾವiಗಳಲ್ಲಿ ನೂತನ ಬಿ.ಎಂ.ಸಿ ಕಟ್ಟಡಗಳನ್ನು ಉದ್ಘಾಟನಾ ಸಮಾರಂಭವನ್ನು ನ.6 ರಂದು ಕಾರ್ಯಕ್ರಮ ನಡೆಸುವ ಮುಖಾಂತರ ಉದ್ಘಾಟಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹಾಲು ಉತ್ಪಾದಕರ ಸಂಘದ ಅದ್ಯಕ್ಷರನ್ನೊಳಗೊಂಡು ಕೆಲ ನಿರ್ದೇಶಕರು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಆದರೆ ತಾಲ್ಲೂಕಿನಲ್ಲಿ ಈ ಹಿಂದೆಯೇ ಸೆ.6. 2018 ರಂದು 6 ಗ್ರಾಮಗಳಲ್ಲಿ ಬಿ.ಎಂ.ಸಿ ಘಟಕಗಳ ಉದ್ಘಾಟನೆಯನ್ನು ತಾಲ್ಲೂಕಿನ ಕ್ಯಾಮೇನಹಳ್ಳಿ ಗ್ರಾಮದಲ್ಲಿ ಸಮೂಹಿಕವಾಗಿ ಉದ್ಘಾಟನಾ ಸಮಾರಂಭ ನಡೆದಿತ್ತು. ಹಾಲು ಉತ್ಪಾದಕರ ಸಂಘಗಳಲ್ಲಿ ಆರ್ಥಿಕ ಸ್ಥಿತಿ ಉಳಿಸುವ ನಿಟ್ಟಿನಲ್ಲಿ ಆರೂ ಕಡೆ ಸಮಾರಂಭ ಮಾಡದೆ ವಿದ್ಯುಕ್ತವಾಗಿ…

ಮುಂದೆ ಓದಿ...

ಕೈ ಚಾಚಿ ಬೆಲೆ ಕಳೆದುಕೊಂಡಿತೇ ಖಾಕಿ..!

ತುಮಕೂರು :       ನಗರದ ಹೃದಯ ಭಾಗದ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ನಿರ್ಭಯವಾಗಿ ರೌಡಿ ಗ್ಯಾಂಗ್ ಲಾಂಗು ಮಚ್ಚು ಹಿಡಿದು ರಾಜಾರೋಷವಾಗಿ ಮತ್ತೊಂದು ರೌಡಿ ಗ್ಯಾಂಗ್ ನ ಇಬ್ಬರನ್ನೂ ಕೊಚ್ಚಿ ಕೊಲೆ ಮಾಡುವ ಹಂತ ತಲುಪಿದೆ ಎಂದರೆ ಸ್ಥಳೀಯ ಖಾಕಿಯಲ್ಲಿ ಖಧರ್ ಇಲ್ಲವೆನ್ನುವುದು ಸ್ಪಷ್ಟವಾಗುತ್ತಿದೆ.       ವಿಶೇಷವೆಂದರೆ ಕುಕೃತ್ಯ ನಡೆದದ್ದು ಬೇರೆಲ್ಲೂ ಅಲ್ಲ ಲೇಡಿ ಸಿಗಂ ಆಗಲು ಹೋಗಿ ಲೇವಡಿ ಸಿಂಗಂ ಆಗಿ ಸಾರ್ವಜನಿಕವಾಗಿ ನಗೆ ಪಾಟಲಿಗೀಡಾದ ಪಾರ್ವತಮ್ಮ ಎಂಬ ತಿಲಕ್ ಪಾರ್ಕ್ ವೃತ್ತನಿರೀಕ್ಷಕರ ವ್ಯಾಪ್ತಿಯ ತಿಲಕ್ ಪಾರ್ಕ  ಪೊಲೀಸ್ ಠಾಣಾ ಸರಹದ್ದಿನ ರೈಲ್ವೆ ಸ್ಟೇಷನ್ ರಸ್ತೆಯ ಮಹಾವೀರ ಕಲ್ಯಾಣ ಮಂಟಪದ ಎದುರು. ನವೆಂಬರ್ 2 ರ ರಾತ್ರಿ 11-30 ರ ಸುಮಾರಿನಲ್ಲಿ ಹತ್ಯೆಯಾದ ಕುಖ್ಯಾತ ರೌಡಿ ಹಟ್ಟಿ ಮಂಜನ ಬಲಗೈ ಭಂಟ ರೌಡಿಶೀಟರ್‍ಗಳಾದ ದಿವಾಕರ್ ಮತ್ತು ಸಾಲೆ ಮಂಜನ ಮೇಲೆ…

ಮುಂದೆ ಓದಿ...

ಮೀಸಲಾತಿ ನಮ್ಮ ಹಕ್ಕು, ಯಾರಪ್ಪನ ಮನೆಯ ಸ್ವತ್ತಲ್ಲ – ಪ್ರಸನ್ನಾನಂದ ಸ್ವಾಮೀಜಿ

ಗುಬ್ಬಿ :      ಜನಸಂಖ್ಯಾ ಅನುಗುಣವಾಗಿ ಪರಿಶಿಷ್ಟ ಪಂಗಡಕ್ಕೆ ನೀಡಬೇಕಾದ ಮೀಸಲಾತಿಯನ್ನು ಶೇ.೭.೫ ಕ್ಕೆ ಏರಿಸಬೇಕು. ಈ ಬಗ್ಗೆ ದೊಡ್ಡ ಹೋರಾಟ ನಡೆಸಿ ಹಕ್ಕೋತ್ತಾಯ ಮಂಡಿಸಲಾಗಿದೆ. ಆದರೂ ಸರ್ಕಾರ ನಿರ್ಲಕ್ಷ್ಯ ತೋರಿದಂತೆ ಕಾಣುತ್ತಿದೆ. ಮೀಸಲಾತಿ ನಮ್ಮ ಹಕ್ಕು ಯಾರಪ್ಪನ ಮನೆಯ ಸ್ವತ್ತಲ್ಲ ಎಂದು ರಾಜನಹಳ್ಳಿ ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಗುಡುಗಿದರು.        ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ವಾಲ್ಮೀಕಿ ನಾಯಕರ ಸಮಾಜ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬುಡಕಟ್ಟು ಜನಾಂಗವಾಗಿ ತನ್ನದೇ ಆದ ವೈಶಿಷ್ಟ ಬೆಳೆಸಿಕೊಂಡು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಎಲ್ಲಾ ರಂಗದಲ್ಲೂ ಮೀಸಲಾತಿ ಪಡೆದಲ್ಲಿ ನಮ್ಮ ಸಮುದಾಯ ಮುಖ್ಯವಾಹಿನಿಗೆ ಬರಲಿದೆ. ಈ ನಿಟ್ಟಿನಲ್ಲಿ ನಿಗದಿಯಾಗಿರುವ ಶೇ.೩ ರ ಮೀಸಲಾತಿಯನ್ನು ಶೇ.೭.೫ ಕ್ಕೆ…

ಮುಂದೆ ಓದಿ...

ತುಮಕೂರು : ಕಸ ಸ್ಥಳಾಂತರಿಸಲು ಪಾಲಿಕೆ ಅಧಿಕಾರಿಗಳಿಗೆ ಮನವಿ!

ತುಮಕೂರು:       ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ನಿವೇಶನವನ್ನು ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ದಲಿತ ಪರ ಸಂಘಟನೆಗಳ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆಂದು ಮೀಸಲಿಟ್ಟಿರುವ ಜಾಗದ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟರ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರು ಪ್ರಸ್ತಾಪಿಸಿ, ಭವನ ನಿರ್ಮಾಣಕ್ಕೆ ಮುಂದಾಗಬೇಕು, ಕಾಪೌಂಡ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಭವನಕ್ಕೆಂದು ಮೀಸಲಿಟ್ಟಿರುವ ಜಾಗದಲ್ಲಿ ಸುರಿಯಲಾಗಿರುವ ಕಸವನ್ನು ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ನಿವೇಶನವನ್ನು ಒತ್ತುವರಿ ಮಾಡದಂತೆ ಹಾಗೂ ನಿವೇಶನವನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಭರವಸೆ…

ಮುಂದೆ ಓದಿ...

ರಾಜ್ಯದ ಸಿಎಂ, ಕೇಂದ್ರ ಗೃಹಸಚಿವರನ್ನು ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

ತುಮಕೂರು:       ರಾಜ್ಯ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.       ಜಿಲ್ಲಾಧ್ಯಕ್ಷ ರಾಮಕೃಷ್ಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪಚುನಾವಣೆ ತಯಾರಿಗೆಂದು ಬಿಜೆಪಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ, ಸಮ್ಮಿಶ್ರ ಸರ್ಕಾರವನ್ನು ಕೆಡವಲು ಬಿಜೆಪಿ ಅನುಸರಿಸಿದ ವಾಮಮಾರ್ಗದ ಬಗ್ಗೆ ಯಡಿಯೂರಪ್ಪ ಅವರೇ ಹೇಳಿಕೊಂಡಿದ್ದು, ಅಸಂವಿಧಾನಿಕವಾಗಿ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.         ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂಬ ಏಕೈಕ ಉದ್ದೇಶದಿಂದ ೧೭ ಮಂದಿ ಶಾಸಕರಿಗೆ ಪ್ರಲೋಭನೆ ತೋರಿ, ಮುಂಬೈ ಹಾಗೂ ಚೆನ್ನೆ…

ಮುಂದೆ ಓದಿ...

ಬಸ್ ಅಪಘಾತ:ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ!!

ತುಮಕೂರು :       ಅಕ್ಟೋಬರ್ ೩೦ರಂದು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರದ ಬಳಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಳಿಗೆ ೨ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್‌ಕುಮಾರ್ ತಿಳಿಸಿದ್ದಾರೆ.       ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ೨ಲಕ್ಷ ರೂ. ಪರಿಹಾರ ಧನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. (Visited 4 times, 1 visits today)Share

ಮುಂದೆ ಓದಿ...

ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಇಂಜಿನಿಯರುಗಳ ಮೇಲೆ ಕಾನೂನು ಕ್ರಮ!

ತುಮಕೂರು :       ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳದ ಇಂಜಿನಿಯರುಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‌ಕುಮಾರ್ ಕಡಕ್ ಸೂಚನೆ ನೀಡಿದರು.       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಸಮನ್ವಯ ಸಮತಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಿಂಗ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಪ್ರತಿ ದಿನ ಕನಿಷ್ಠ 10 ದೂರವಾಣಿ ಕರೆಗಳು ಬರುತ್ತಿದ್ದು, ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ. ಕಾಮಗಾರಿ ಪ್ರಗತಿಯಲ್ಲಿರುವ ಜಾಗದಲ್ಲಿ ಸೂಚನಾ ಫಲಕಗಳನ್ನು ಪ್ರದರ್ಶಿಸದಿರುವುದು ಅಪಘಾತಗಳಿಗೆ ಕಾರಣವಾಗಿವೆ. ಮಳೆ ಬಂದಿರುವುದರಿದ ರಸ್ತೆ ಯಾವುದು..? ಹಳ್ಳ ಯಾವುದು..? ಎಂದು ಗೊತ್ತಾಗದೆ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳು ಕೆಸರಿನಲ್ಲಿ ಹೂತುಕೊಂಡು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ರಿಂಗ್ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಮರುಕಳಿಸಿದರೆ ಇಂಜಿನಿಯರುಗಳನ್ನೇ ನೇರ…

ಮುಂದೆ ಓದಿ...

ನ.18ರಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣ ತಾತ್ಕಾಲಿಕ ಸ್ಥಳಾಂತರ!

ತುಮಕೂರು:       ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ನಿರ್ಮಾಣ ಕಾಮಗಾರಿಯು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ನವೆಂಬರ್ ೧೮ ರಿಂದ ಜೆಸಿ ರಸ್ತೆಯಲ್ಲಿರುವ ಕೆಸ್ಸಾರ್ಟಿಸಿ ಘಟಕ ೧ ರ ಸ್ಥಳಕ್ಕೆ ತಾತ್ಕಾಲಿಕವಾಗಿ ಬಸ್ಸು ನಿಲ್ದಾಣವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಕೆಸ್ಸಾರ್ಟಿಸಿ, ಸ್ಮಾರ್ಟ್ ಸಿಟಿ ಮಹಾನಗರ ಪಾಲಿಕೆ ಹಾಗೂ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.       ತುಮಕೂರು ನಗರದಲ್ಲಿರುವ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣವನ್ನು ಹೈಟೆಕ್ ಆಗಿ ನಿರ್ಮಾಣ ಮಾಡಲು ಸ್ಮಾಟ್‌ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯು ಪೂರ್ಣ ಗೊಳ್ಳುವರೆಗೂ ಈಗಿರುವ ಬಸ್ಸು ನಿಲ್ದಾಣದ ಹತ್ತಿರದಲ್ಲಿರುವ ಜೆಸಿ ರಸ್ತೆಯ ಕೆಸ್ಸಾರ್ಟಿಸಿ ಬಸ್ಸು ಡಿಪೋ ಸ್ಥಳಕ್ಕೆ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ಅಲ್ಲಿಂದ ಬಸ್ಸುಗಳನ್ನು ಓಡಿಸಿದರೆ…

ಮುಂದೆ ಓದಿ...

ತುಮಕೂರು : ಎಂ.ಜಿ. ರಸ್ತೆಯಿಂದ ಬಿ.ಹೆಚ್. ರಸ್ತೆವರೆಗೆ ನೋ-ಪಾರ್ಕಿಂಗ್!!

ತುಮಕೂರು :       ನಗರದ ಎಂ.ಜಿ. ರಸ್ತೆಯ ಮುಂಭಾಗದ ಕೃಷ್ಣ ಚಿತ್ರಮಂದಿರದಿಂದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತೆ ಗಾಯಿತ್ರಿ ಚಿತ್ರಮಂದಿರ ಮುಂಭಾಗದವರೆಗೆ ನೋ-ಪಾರ್ಕಿಂಗ್ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ|| ಕೆ. ರಾಕೇಶ್‌ಕುಮಾರ್ ಇಂದು ಆದೇಶ ಹೊರಡಿಸಿದ್ದಾರೆ.       ಸುಗಮ ಸಂಚಾರದ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. (Visited 4 times, 1 visits today)Share

ಮುಂದೆ ಓದಿ...