ತುಮಕೂರು:

      ಕೋವಿಡ್-19 ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಲವಾರು ಕಾರಣಗಳಿಂದ ಕೂಲಿ ಕಾರ್ಮಿಕರ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದಿನನಿತ್ಯ ವಹಿವಾಟು ನಡೆಯುವ ಎಪಿಎಂಸಿ ಮಾರುಕಟ್ಟೆ/ ತರಕಾರಿ ಮಾರುಕಟ್ಟೆ/ಮತ್ತಿತರ ಅಂಗಡಿ-ಮುಂಗಟ್ಟುಗಳಲ್ಲಿ ಮೂಟೆಗಳನ್ನು ಏರಿಸಲು ಮತ್ತು ಇಳಿಸಲು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೆ ಬಂದಿದ್ದು, ಬಾಲ ಕಾರ್ಮಿಕ ನಿಷೇಧ ಕಾಯ್ದೆಯನ್ವಯ ಅಪ್ತಾಪ್ರ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವುದು ಅಪರಾಧವಾಗಿದೆ.

      ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.

(Visited 13 times, 1 visits today)