ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಜಾತಿ ನಿಂದನೆ

ಚಿಕ್ಕನಾಯಕನಹಳ್ಳಿ:

      ಗ್ರಾಮ ಪಂಚಾಯಿತಿ ಪಿಡಿಒ ಮೇಲೆ ಜಾತಿ ನಿಂದನೆಮಾಡಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ಪಿಡಿಓ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

         ತಾಲ್ಲುಕಿನ ದೊಡ್ಡೆಣ್ಣೆಗೆರೆ ಗ್ರಾಮ ಪಂಚಾಯಿತಿಯ (ಪ್ರಭಾರ) ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಡವೀಶ್‍ಕುಮಾರ್‍ರವರ ಮೇಲೆ ಫೆ.24 ರಂದು ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ.ವೈ ರಮ್ಯರವರ ಪತಿ ಮಂಜುನಾಥ್, ಹಾಗೂ ಸದಸ್ಯರಾದ ಡಿ.ಎಸ್. ಪ್ರಶಾಂತ್ ಹಾಗೂ ಡಿ.ಎಂ. ಶಿವಕುಮಾರ್‍ರವರು ಪಿಡಿಓರವರನ್ನು ಅವಾಚ್ಯವಾಗಿ ನಿಂದಿಸಿ, ಕರ್ತವ್ಯದಲ್ಲಿದ್ದ ಅವರನ್ನು ಕಚೇರಿಯಿಂದ ಹೊರಕ್ಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಪಿಡಿಓರವರನ್ನು ಜಾತಿನಿಂದನೆ ಮಾಡಿ ಅವರಿಗೆ ಮಾನಹಾನಿÀ ಮಾಡಿದ್ದಾರೆ. ಈ ಪ್ರಕರಣದಿಂದ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಪಿಡಿಒಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳಿಗೆ ಮಾನಸಿಕವಾಗಿ ಕುಗ್ಗಿಹೋಗಿದ್ದಾರೆ. ಸದರಿ ಪ್ರಕರಣ ಸಂಬಂಧ ದೂರು ದಾಖಲಾಗಿದೆ.

     ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಮಗೆ ಕರ್ತವ್ಯ ನಿರ್ವಹಿಸಲು ನೈತಿಕ ಸ್ಥೈರ್ಯ ಮೂಡಿಸಲು ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಿಡಿಓ ಕ್ಷೆಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ, ಗೌರವಾಧ್ಯಕ್ಷ ನಾಗೇಶ್, ಸಂಘಟನಾ ಕಾರ್ಯದರ್ಶಿ ರಮೇಶ್ ಹಾಗೂ ಹಲವು ಪಂಚಾಯಿತಿಗಳ ಪಿಡಿಓಗಳು ಹಾಜರಿದ್ದರು.

(Visited 5 times, 1 visits today)

Related posts

Leave a Comment