ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಜವಾಬ್ದಾರಿ ಮುಖಂಡರದ್ದು

ತುಮಕೂರು: 

      ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು.

      ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ಅವರು, ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಜವಾಬ್ದಾರಿಯನ್ನು ಮುಖಂಡರ ಹೊರಬೇಕಿದೆ ಎಂದು ಹೇಳಿದರು.

     ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಯುವಕರನ್ನು ಕಣಕ್ಕಿಳಿಸುವ ಮೂಲಕ ಪಕ್ಷಕ್ಕೆ ಹೊಸ ಹುರುಪು ತರುವ ನಿಟ್ಟಿನಲ್ಲಿ ವಿಧಾನ ಸಭಾ ಕ್ಷೇತ್ರಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಮುಖಂಡರನ್ನು ನಿಯೋಜಿಸಲಾಗಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

      ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಹಾಗೂ ಮುಖಂಡರ ಸಭೆಯನ್ನು ಹಮ್ಮಿಕೊಳ್ಳುವ ಮೂಲಕ ಸಂಘಟನೆಗೆ ಒತ್ತು ನೀಡಲಾಗಿದ್ದು, ಕ್ಷೇತ್ರವಾರು ಮುಖಂಡರಿಗೆ ಉಸ್ತುವಾರಿಯನ್ನು ನೀಡಲಾಗಿದ್ದು, ಜಿಲ್ಲಾ ಘಟಕದ ಮುಖಂಡರು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವಂತೆ ಸೂಚಿಸಿದರು

      ಹಿಂದುಳಿದ ವರ್ಗಗಳ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಪುಟ್ಟರಾಜು ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆಗೆ ಒತ್ತು ನೀಡಿದ್ದು, ಬೂತ್ ಮತಗಟ್ಟೆ ಏಜೆಂಟ್ ಗಳನ್ನು ನೇಮಕ ಮಾಡುವ ಮೂಲಕ ಅವರ ಉಸ್ತುವಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನೀಡಲಾಗಿದೆ ಎಂದರು.

      ಪಕ್ಷವನ್ನು ಪ್ರಾಮಾಣಿಕವಾಗಿ ಸಂಘಟಿಸುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಮೂಲಕ ಅವರಿಗೆ ಪಕ್ಷದ ದೊರೆಯುವ ಸಹಾಯ ಮಾಡುವ ಮೂಲಕ ಪಕ್ಷಕ್ಕೆ ಭದ್ರ ಬುನಾದಿಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮತಗಟ್ಟೆ ಏಜೆಂಟ್ ನೇಮಿಸಲಾಗುತ್ತಿದ್ದು, ಬಿಎಲ್‍ಒ2 ಗಳಾಗಿ ಕಾರ್ಯನಿರ್ವಹಿಸುವವರ ವಿವರ ಕೆಪಿಸಿಸಿ ಮತ್ತು ಎಐಸಿಸಿಯಲ್ಲಿಯೂ ಲಭ್ಯವಿದ್ದು, ಮುಖಂಡರನ್ನು ನೇರವಾಗಿ ಭೇಟಿ ಮಾಡಿ ಅವರೊಂದಿಗೆ ಚರ್ಚಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

      ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಮಣಿ ವೆಂಕಟಾಚಲಯ್ಯ, ನೇತೇಗೌಡ, ಗುರುಪ್ರಸಾದ್, ಅನಿಲ್ ಕುಮಾರ್, ರೂಪತಾರಾ, ಅಂಬರೀಶ್, ನಟರಾಜು, ಮಂಜುನಾಥ್, ನಿಂಗರಾಜು ಸೇರಿದಂತೆ ಇತರರಿದ್ದರು.

(Visited 6 times, 1 visits today)

Related posts

Leave a Comment