ತುಮಕೂರು : 116 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು :

     ಜಿಲ್ಲೆಯಲ್ಲಿ 116 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3119 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 49, ಪಾವಗಡ-12, ಕುಣಿಗಲ್-18, ಮಧುಗಿರಿ-06, ಕೊರಗಟಗೆರೆ-02, ತುರುವೇಕೆರೆ-04, ಶಿರಾ-13, ತಿಪಟೂರು-03, ಗುಬ್ಬಿ-08, ಚಿಕ್ಕನಾಯಕನಹಳ್ಳಿ-01 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 92 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 125 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2008 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1019 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 92 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 7 times, 1 visits today)

Related posts

Leave a Comment