ತುಮಕೂರು : 171 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು :

     ಜಿಲ್ಲೆಯಲ್ಲಿ 171 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3749 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 50, ಪಾವಗಡ-24, ಕುಣಿಗಲ್-21, ಮಧುಗಿರಿ-21, ಕೊರಟಗೆರೆ-06, ತುರುವೇಕೆರೆ-09, ಶಿರಾ-10, ತಿಪಟೂರು-18, ಗುಬ್ಬಿ-06, ಚಿಕ್ಕನಾಯಕನಹಳ್ಳಿ-05 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 171 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 967 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 117 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 11 times, 1 visits today)

Related posts

Leave a Comment