ತುಮಕೂರು :

      ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ ಹೋಂ ಕ್ವಾರೆಂಟೈನ್‍ನಲ್ಲಿ ಯಾರೂ ಇರುವುದಿಲ್ಲ.

      ಒಟ್ಟು 395 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, ಆಸ್ಪತ್ರೆಯ ಐಸೋಲೇಷನ್‍ನಲ್ಲಿರುವವರು 76 ಮಂದಿ, 370 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 1078 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 884 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

      ಮತ್ತೊಬ್ಬ ಗುಣಮುಖರಾಗಿರುತ್ತಾರೆ. 9 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ 183 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

(Visited 335 times, 1 visits today)