ತುಮಕೂರು :132 ಮಂದಿಗೆ ಕೊರೊನಾ ಸೋಂಕು ದೃಢ!!

 ತುಮಕೂರು:

      ಜಿಲ್ಲೆಯಲ್ಲಿಂದು 132 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1346ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು-56, ಶಿರಾ-5, ಪಾವಗಡ-5, ಗುಬ್ಬಿ-6, ಕುಣಿಗಲ್-22, ತಿಪಟೂರು-9, ಮಧುಗಿರಿ-8, ಚಿಕ್ಕನಾಯಕನಹಳ್ಳಿ-4, ತುರುವೇಕೆರೆ-13, ಕೊರಟಗೆರೆ-4 ಸೇರಿದಂತೆ ಒಟ್ಟು 132 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಇಂದು ಜಿಲ್ಲಾಸ್ಪತ್ರೆಯಿಂದ 33 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 636 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 667 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದು, ಈವರೆಗೆ 43 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 17 times, 1 visits today)

Related posts

Leave a Comment