ತುಮಕೂರು:

      ಜಿಲ್ಲೆಯಲ್ಲಿ 23 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

     ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 16, ಚಿಕ್ಕನಾಯಕನಹಳ್ಳಿ-1, ಕೊರಟಗೆರೆ-2 ಕುಣಿಗಲ್-3 ಮಂದಿ ಗುಬ್ಬಿ-1 ಒಟ್ಟು 23 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಜಿಲ್ಲಾಸ್ಪತ್ರೆಯಿಂದ 20 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 287 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 346 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 20 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 21 times, 1 visits today)