ತುಮಕೂರು :

      ಜಿಲ್ಲೆಯಲ್ಲಿ 108 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3578 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 57, ಪಾವಗಡ-5, ಕುಣಿಗಲ್-10, ಮಧುಗಿರಿ-03, ಕೊರಟಗೆರೆ-06, ತುರುವೇಕೆರೆ-09, ಶಿರಾ-03, ತಿಪಟೂರು-09, ಗುಬ್ಬಿ-04, ಚಿಕ್ಕನಾಯಕನಹಳ್ಳಿ-02 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 103 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 2462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 900 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 108 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 14 times, 1 visits today)