ದೆಹಲಿ:

       ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ (ಜೂನ್ 03, 1930 – ಜನವರಿ 29, 2019) ಮಂಗಳವಾರ ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

       ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಅವರು ಅಲ್ಝಮೈರ್(ಮರೆವಿನ ಕಾಯಿಲೆ) ಕಾಯಿಲೆಯಿಂದ ಬಳಲುತ್ತಿದ್ದರು.

      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಫರ್ನಾಡಿಸ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಮಾಜಿಕ ಹೋರಾಟಕ್ಕೆ ಧುಮುಕಿದ್ದರು. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ 1930 ಜೂನ್ 3 ರಂದು ಜನಿಸಿದ್ದರು.

 

(Visited 17 times, 1 visits today)