ತುಮಕೂರು ಲೋಕಸಭೆಯನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇರುತ್ತೆ : ಕೆ.ಎನ್.ಆರ್

ತುಮಕೂರು: 

     ತುಮಕೂರು ಲೋಕಸಭೆಯನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇರುತ್ತೆ ಎಂದು ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆಎನ್ ರಾಜಣ್ಣ ಅವರು ಜೆಡಿಎಸ್ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

      ತುಮಕೂರು ಲೋಕಸಭಾ ಕ್ಷೇತ್ರವನ್ನ ಜೆಡಿಎಸ್‌‌ಗೆ ಬಿಟ್ಟುಕೊಡುವ ವಿಚಾರದ ಕುರಿತು ಮಾಜಿ ಶಾಸಕ ಕೆ.ಎನ್.ಆರ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತ ಕಾಂಗ್ರೆಸ್ ಸಂಸದರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವಾಗ ನಮಗೇ ಬಿಟ್ಟುಕೊಡಿ ಎಂದು ಜೆಡಿಎಸ್‌ ನವ್ರು ಕೇಳುತ್ತಿದ್ದಾರೆ. ಅವರಿಗೆ ಮಾನ ಮರ್ಯಾದೆ ಬೇಡ್ವಾ? ಕ್ಷೇತ್ರದಲ್ಲಿ ನಾವೇ ಮುಂದಿದ್ದೇವೆ ಅನ್ನುವುದಾದರೆ, ಹಿಂದೆ ನಾಲ್ಕು ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡಿದ್ದನ್ನ ಜೆಡಿಎಸ್‌ ನವ್ರು ಮರೆತು ಬಿಟ್ರಾ? ಒಂದು ವೇಳೆ ಜೆಡಿಎಸ್‌ಗೆ ಬಿಟ್ಟು ಕೊಟ್ರೆ ನನ್ನದೊಂದು ಅರ್ಜಿ ಇದ್ದೇ ಇರುತ್ತೆ ಎಂದು ಮಾಜಿ ಶಾಸಕ ರಾಜಣ್ಣ ಬಂಡಾಯವೆದ್ದು ಸ್ಪರ್ಧೆ ಮಾಡುವ ಬಗ್ಗೆಯೂ ಎಚ್ಚರಿಕೆ ನೀಡಿದರು.

(Visited 10 times, 1 visits today)

Related posts

Leave a Comment