ಕೊರಟಗೆರೆ :
      ತಾಲೂಕಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ಕ್ಷೇತ್ರದ  ದೇವಸ್ಥಾನ ಒಂದರ ಅರ್ಚಕರ ಮಡದಿಗೆ ಕಾಣಿಸಿಕೊಂಡಿದ್ದ ಕೊರೊನಾ ಪಾಸಿಟಿವ್ ವರದಿಯಿಂದ ದೇವಸ್ಥಾನ ಹಾಗೂ ಆವರಣವನ್ನು ಸೀಲ್ಡ್ ಮಾಡಲಾಗಿತ್ತು .
      ಇನ್ನೇನು ಇದೇ ತಿಂಗಳ 31 ರಂದು ವರಮಹಾಲಕ್ಷ್ಮಿ ಹಬ್ಬವಾಗಿದ್ದು ಕರುನಾಡಿನ ಸುಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮಿ ದೇವಿಯ ದರ್ಶನಕ್ಕೆ ಜುಲೈ 28 ರ ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಧುಗಿರಿ ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ ಭಾನುವಾರ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ ತಾಲ್ಲೂಕಿನ ಪುಣ್ಯಕ್ಷೇತ್ರ ಶ್ರೀ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಿಯ ದೇವಾಲಯವನ್ನು ಜುಲೈ 27 ರಂದು ತೆರೆದು ಸ್ವಚ್ಛತೆ ಮತ್ತು ಕೊರೊನಾ ಭದ್ರತಾ ಕ್ರಮ ಕೈಗೊಂಡು ಮರುದಿನ ಮುಂಜಾನೆಯಿಂದ ಭಕ್ತರಿಗೆ ದೇವಿಯ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ .
  
      ಜುಲೈ ೩೧ ಶುಭ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ದಿನವೂ ದೇವಿಯ ದರ್ಶನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ದೇವಿಯ ವಿಶೇಷ ಪೂಜೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.
 
       ಹಣ್ಣು-ಕಾಯಿ ಹೂವು ಯಾರೂ ತರಬಾರದು ಪ್ರಸಾದ ವಿತರಣೆಯನ್ನು ಈಗಾಗಲೇ ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು .
  
ವಿಶೇಷ ಸೂಚನೆ :-
     65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ೧೦ ವರ್ಷದ ಒಳಗಿನ ಮಕ್ಕಳಿಗೆ ಮಹಾಲಕ್ಷ್ಮಿ ದರ್ಶನಕ್ಕೆ ಅವಕಾಶವಿಲ್ಲ ಎಂದಿದ್ದಾರೆ.ಬರುವಂತಹ ಭಕ್ತಾದಿಗಳು ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು .
(Visited 14 times, 1 visits today)