ತುಮಕೂರು  :

      ಜಿಲ್ಲೆಯ ಕೆಲ ಗ್ರಾಮಪಂಚಾಯಿತಿಗಳಲ್ಲಿ ಸದಸ್ಯ ಸ್ಥಾನಗಳಿಗೆ ಹರಾಜು ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಪ್ರಕರಣಗಳು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಡಾ: ಕೆ. ರಾಕೇಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನಗಳನ್ನು ಹರಾಜು ಮಾಡಿದರೆ ಅದೊಂದು ಗಂಭೀರ ದುರ್ನಡತೆ ಮತ್ತು ಅವ್ಯವಹಾರವಾಗುತ್ತದೆ. ಅಲ್ಲದೆ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ತುಮಕೂರು ಜಿಲ್ಲೆಯಲ್ಲಿ ಇಂತಹ ಹರಾಜು ಪ್ರಕ್ರಿಯೆಗಳನ್ನು ತಡೆಯಲು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು, ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆಯ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದರು.

     ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದರೆ ಜನಪ್ರತಿನಿಧಿ ಕಾಯ್ದೆ ಹಾಗೂ ಪಂಚಾಯತ್ ರಾಜ್ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಇಂತಹ ವರ್ತನೆಯನ್ನು ಪ್ರದರ್ಶಿಸುವ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

     ಜಿಲ್ಲೆಯಲ್ಲಿರುವ ಜನರು ನ್ಯಾಯ ಮತ್ತು ನಿಷ್ಪಕ್ಷ ಚುನಾವಣೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿಹಿಡಿಯಬೇಕು ಎಂದು ಅವರು ಮನವಿ ಮಾಡಿದ್ದಾರೆ.  ಧಿಸಿದ ಅಧಿಕಾರಿಗಳು ಹಾಜರಿದ್ದರು. 

(Visited 21 times, 1 visits today)