ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಗೆ ಐಟಿ ಶಾಕ್!!

ತುಮಕೂರು: 

      ಶಾಸಕ ಡಾ.ಜಿ.ಪರಮೇಶ್ವರ್ ಒಡೆತನದ ಎಸ್‍ಎಸ್‍ಐಟಿ ಎಂಜಿನಿಯರಿಂಗ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಹನ್ನೆರೆಡು ಅಧಿಕಾರಿಗಳಿದ್ದ ತಂಡ ದಾಳಿ ನಡೆಸಿದೆ.

      ಕಾಂಗ್ರೆಸ್‍ನ ಪ್ರಭಾವಿ ಮುಖಂಡರಾಗಿರುವ ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಕುಣಿಗಲ್ ರಸ್ತೆಯ ಮರಳೂರು ದಿಣ್ಣೆಯಲ್ಲಿರುವ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ನೆಲಮಂಗಲದಲ್ಲಿರುವ ವೈದ್ಯಕೀ ಯ ಕಾಲೇಜು, ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸ, ಕಚೇರಿ ಹಾಗೂ ಸಹೋದರ ಒಡೆತನದ ಸಂಸ್ಥೆಗಳ ಮೇಲೂ ದಾಳಿ ನಡೆಸಲಾಗಿದೆ.

       ದಾಳಿ ಸಂದರ್ಭದಲ್ಲಿ ಕಾಲೇಜಿನಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ಐಟಿ ಅಧಿಕಾರಿಗಳು ಹೊರಗೆ ಕಳುಹಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಈ ಶಿಕ್ಷಣ ಸಂಸ್ಥೆಯಲ್ಲಿ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕವನ್ನು ಪಡೆಯಲಾಗುತ್ತಿತ್ತು ಎಂಬ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

      ಮುಂಜಾನೆ 5.30ಕ್ಕೆ ಆರಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಈ ವೇಳೆ ಪರಮೇಶ್ವರ್ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿದ್ದರು. ಮನೆಯಲ್ಲಿ ಪರಮೇಶ್ವರ್ ಅವರ ಪತ್ನಿ ಮತ್ತು ಕುಟುಂಬದ ಕೆಲವು ಸದಸ್ಯರು ಇದ್ದರು ಎನ್ನಲಾಗಿದೆ.

(Visited 6 times, 1 visits today)

Related posts

Leave a Comment