ಬೃಹತ್ ಉದ್ಯೋಗ ಮೇಳ: ಇಂದಿನಿಂದ ನೋಂದಣಿ ಹಾಗೂ ತರಬೇತಿ

 ತುಮಕೂರು:

      ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಉದ್ಯೋಗಾಕಾಂಕ್ಷಿ ಯುವಕ/ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಫೆಬ್ರುವರಿ 16 ಹಾಗೂ 17ರಂದು ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಫೆಬ್ರುವರಿ 6 ಹಾಗೂ 7ರಂದು ನೋಂದಣಿ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

      ಈ ತರಬೇತಿ ಕಾರ್ಯಕ್ರಮವನ್ನು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಶಾಸಕ ಡಿ.ಸಿ.ಗೌರಿಶಂಕರ್ ಉದ್ಘಾಟಿಸಲಿದ್ದಾರೆ.
ನೋಂದಣಿ ಮತ್ತು ತರಬೇತಿಯು ಫೆಬ್ರುವರಿ 6ರಂದು ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಹಾಗೂ ಫೆ.7ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಉದ್ಯೋಗಾರ್ಥಿಗಳು ಈ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

      ತರಬೇತಿಯಲ್ಲಿ 18 ರಿಂದ 35 ವರ್ಷದೊಳಗಿನ 7ನೇ ತರಗತಿ ಉತ್ತೀರ್ಣ, 10ನೇ ತರಗತಿ ಉತ್ತೀರ್ಣ/ಅನುತ್ತೀರ್ಣ, ಪಿ.ಯು.ಸಿ., ಯಾವುದೇ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿದ ಪುರುಷ/ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಲ್ಲದೆ ಅಂಗವಿಕಲ ಅಭ್ಯರ್ಥಿಗಳು ಸಹ ತರಬೇತಿಯ ಪ್ರಯೋಜನ ಪಡೆಯಬಹುದಾಗಿದೆ.

      ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಫೆ.16, 17ರಂದು ನಡೆಯಲಿರುವ ಉದ್ಯೋಗ ಮೇಳದಲ್ಲಿ ನೇರವಾಗಿ ಭಾಗವಹಿಸಲಿಚ್ಚಿಸುವವರು ಫೆ.14ರೊಳಗಾಗಿ ಜಾಲತಾಣ http://tumkurandchitradurgajobfair ದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.

(Visited 493 times, 1 visits today)

Related posts