ಕೆಎಸ್‍ಒಯು: ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನ ನಿಗಧಿ

ತುಮಕೂರು:

      ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿದೆ ಎಂದು ತುಮಕೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

      ವಿ.ವಿ.ಯಲ್ಲಿ 2011-12 ಹಾಗೂ 2012-13ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಹಾಗೂ 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಬಿ.ಎ/ಬಿ.ಕಾಂ, ಎಂ.ಎ/ಎಂ.ಕಾಂ ವಿದ್ಯಾರ್ಥಿಗಳು 200 ರೂ.ಗಳ ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜೂನ್ 29 ಅಂತಿಮ ದಿನವಾಗಿರುತ್ತದೆ. ಅದೇ ರೀತಿ 2018-19ನೇ ಸಾಲಿನಲ್ಲಿ ಪ್ರವೇಶ ಪಡೆದ ಎಂಬಿಎ ವಿದ್ಯಾರ್ಥಿಗಳಿಗೆ (ಪ್ರಥಮ ಸೆಮಿಸ್ಟರ್)ದಂಡದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಜುಲೈ 6 ಕಡೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.ksoumysore.karnataka.gov.in  ಅಥವಾ ದೂರವಾಣಿ ಸಂಖ್ಯೆ 0821-2519947/2515405/2519948/2519942ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

(Visited 14 times, 1 visits today)

Related posts