ಮಧುಗಿರಿ : ಬಂಕ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ!

ಮಧುಗಿರಿ :

      ಮಧುಗಿರಿಯ ಸಿದ್ದಾಪುರ ಕೆರೆಯ ಬಳಿ ನಿರ್ಮಿಸುತ್ತಿರುವ ಪೆಟ್ರೋಲ್ ಬಂಕ್ ನಿರ್ಮಾಣವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಹಲವು ಕನ್ನಡಪರ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.

        ಮಧುಗಿರಿ ಪಟ್ಟಣಕ್ಕೆ ಕುಡಿಯುವ ನೀರೋದಗಿಸುವ ಸಿದ್ದಾಪುರ ಕೆರೆಯ ಬಳಿಯಲ್ಲಿ ಖಾಸಗಿ ಜಮೀನಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪೆಟ್ರೋಲ್ ಬಂಕ್‍ನಿಂದ ಪೆಟ್ರೋಲಿಯಂ ಉತ್ಪನ್ನಗಳು ಸೋರಿಕೆಯಾಗಲಿದ್ದು, ಇದರಿಂದ ಸಮಸ್ಯೆಗಳು ಹೆಚ್ಚಾಗಲಿವೆ ಎಂದು ಒತ್ತಾಯಿಸಿ ಗ್ರೇಡ್ 2 ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದವು.

       ಮನವಿ ನೀಡಿ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ರಾಘವೇಂದ್ರ, ಈ ಬಂಕ್ ನಿರ್ಮಾಣದಿಂದ ಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಪಟ್ಟಣದಲ್ಲಿನ 30 ಸಾವಿರ ಜನರಿಗೆ ಇದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ ಎಂದು ತಿಳಿಸಿ, ಕಾಮಗಾರಿಯನ್ನು ನಿಲ್ಲಿಸಿ ಕೆರೆಯನ್ನು ಉಳಿಸುವಂತೆ ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಪುರಸಭಾ ಸದಸ್ಯ ಗಂಗರಾಜು, ಮುಖಂಡ ರವಿಕಾಂತ್ ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷ ರಾಘವೇಂದ್ರ, ಕನ್ನಡ ರಕ್ಷಣಾ ವೇದಿಕೆಯ ಶಿವಕುಮಾರ್, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಚಿಕ್ಕಕಾಮಯ್ಯ, ದೇವರಾಜ, ನಾಗಾರ್ಜುನ, ಮಂಜುನಾಥ್, ಗಂಗರಾಜು, ಹಾಗೂ ಇತರರು ಇದ್ದರು.

(Visited 9 times, 1 visits today)

Related posts