ಉಸ್ತುವಾರಿ ಸಚಿವರಿಗೆ ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲು

ತುಮಕೂರು:

      ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಭಾನುವಾರ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಅಧಿವೇಶನ ಮುಗಿದ ಬಳಿಕ ತಮ್ಮ ಸ್ವಾಬ್ ಟೆಸ್ಟ್ ಮಾಡಿಸಿದ್ದರು. ಭಾನುವಾರ ಸಂಜೆ ಬಂದ ವರದಿಯಲ್ಲಿ ಸಚಿವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಹಳೆ ಏರ್‍ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವರಿಗೆ ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ.

     ಜಿಲ್ಲಾ ಉಸ್ತುವಾರಿ ಸಚಿವರ ಆರೋಗ್ಯ ಕುರಿತಂತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.

(Visited 6 times, 1 visits today)

Related posts