ಸಿದ್ಧಗಂಗಾ ಮಠದಲ್ಲಿ 15 ದಿನಗಳ ಕಾಲ ಕೃಷಿ-ಕೈಗಾರಿಕಾ ವಸ್ತು ಪ್ರದರ್ಶನ

ತುಮಕೂರು:

     ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು
ಚಾಲನೆ ನೀಡಿದರು.

     15 ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಜನರಿಗೆ ಕೃಷಿ, ತೋಟಗಾರಿಕೆ, ರೇμÉ್ಮ , ಆರೋಗ್ಯ, ಶಿಕ್ಷಣ, ಪೊಲೀಸ್ ಹೀಗೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ.

      ಚಾಲನೆ ನೀಡಿದ ಬಳಿಕ ವಸ್ತುಪ್ರದರ್ಶನದಲ್ಲಿ ಅನಾವರಣಗೊಂಡಿದ್ದ ಪ್ರದರ್ಶನಗಳನ್ನು ಒಂದೊಂದಾಗಿಯೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರು ಜೊತೆಯಾಗಿ ವೀಕ್ಷಿಸಿದರು.ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ದಿವ್ಯಸಾನಿಧ್ಯವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು ವಹಿಸಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊರೊನಾ ಕುರಿತ ಜಾಗೃತಿ ಮೂಡಿಸುವ ವಿಶೇಷ ಪ್ರದರ್ಶನವನ್ನು ಅನಾವರಣಗೊಳಿಸಲಾಗಿತ್ತು.
ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಡಾ.ಕೆ. ವಂಶಿಕೃಷ್ಣ ಮತ್ತಿತರರು ಹಾಜರಿದ್ದರು.

     ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು, ಸುಮಾರು ವರ್ಷಗಳಿಂದ ಈ ವಸ್ತು ಪ್ರದರ್ಶನ ನಡೆಸಿಕೊಂಡು ಬರಲಾಗುತ್ತಿದೆ. ಕೃಷಿ, ಅರಣ್ಯ, ಮೀನುಗಾರಿಕೆ ಹೀಗೆ ಪ್ರತಿಯೊಂದು ಇಲಾಖೆಗಳು ವ್ಯವಸ್ಥಿತವಾಗಿ ಪ್ರದರ್ಶಿಸಲಾಗಿದ್ದು, ಜನರಿಗೆ ಬಹಳ ಉಪಯುಕ್ತ ಮಾಹಿತಿ ಕೊಡುವ ಕೆಲಸ ಮಾಡಲಾಗಿದೆ. ಜನರು ಎಲ್ಲಾ ಪ್ರದರ್ಶನಗಳನ್ನು ವೀಕ್ಷಿಸಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು ಎಂದರು.
ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು, ನಿರಂತರವಾಗಿ ಶ್ರೀ ಸಿದ್ದಗಂಗಾ ಮಠದ ವಸ್ತು ಪ್ರದರ್ಶನವನ್ನು ನಡೆಸಿಕೊಂಡು ಬರುತ್ತಿದೆ. ವಸ್ತುಪ್ರದರ್ಶನವು ಜನರಿಗೆ ಅರಿವು ಮೂಡಿಸುವುದರ ಜೊತೆಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ವಿಸ್ತಾರಗೊಳ್ಳಬೇಕು ಎಂದು ಸಲಹೆ ನೀಡಿದರು.

     ಪ್ರದರ್ಶನಕ್ಕೆ ಆಗಮಿಸುವ ಮಂದಿ ಸ್ವಲ್ಪಮಟ್ಟಿಗಾದರೂ ಜ್ಞಾನ ಸಂಪಾದಿಸಿಕೊಂಡು ಹೋದರೆ ವಸ್ತು ಪ್ರದರ್ಶನಕ್ಕೆ ಅರ್ಥ ಬರುತ್ತದೆ. ತೆಂಗು ಒಂದು ಜಿಲ್ಲೆ ಒಂದು ಉತ್ಪನ್ನವಾಗಿ ಆಯ್ಕೆಯಾಗಿದೆ. ತೆಂಗು ಉತ್ಪನ್ನಗಳ ಬಗ್ಗೆ ಹೆಚ್ಚಿನ ಮಾಹಿತಿ ಜನರಿಗೆ ಸಿಗಬೇಕು. ಈ ಬಗ್ಗೆ ಇಲಾಖೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು. 

       ವಸ್ತು ಪ್ರದರ್ಶನದಲ್ಲಿ ಇನ್ನೂ ಹೆಚ್ಚಿನ ವಿಚಾರ ಅನಾವರಣಗೊಳ್ಳಬೇಕಿದೆ. ಸಾಮಾಜಿಕ ಅರಣ್ಯ, ತೋಟಗಾರಿಕೆ, ಕೃಷಿ, ಕೈಗಾರಿಕೆ, ಆರೋಗ್ಯ ಪ್ರದರ್ಶನಗಳಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು

      ಜಿಲ್ಲೆಯಲ್ಲಿ ಆರು ತಾಲೂಕುಗಳು ಬರಪೀಡಿತ ಪ್ರದೇಶವಾಗಿದ್ದು, ಈ ಪ್ರದೇಶಗಳಲ್ಲಿ ಅಂತರ್ಜಲ ಅಭಿವೃದ್ಧಿ ಹೇಗೆ ಮಾಡಬೇಕು ಎಂಬುದನ್ನು ಪ್ರದರ್ಶಿಸಬೇಕಾಗಿತ್ತು. ಕೃಷಿ ಕೈಗಾರಿಗೆ ಒತ್ತು ಕೊಡಬೇಕಾಗಿತ್ತು ಎಂದು ಅವರು ಹೇಳಿದರು.ವಸ್ತುಪ್ರದರ್ಶನ ಮಾತ್ರವಲ್ಲದೆ ಜನರಿಗೆ ಮಾಹಿತಿ ನೀಡಲು ಅವಕಾಶ ಸಿಕ್ಕಲೆಲ್ಲಾ ಪ್ರದರ್ಶನ ಮಾಡಬೇಕು. ವಸ್ತುಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಆಕರ್ಷಣೆ ಬರಬೇಕು. ಆವಿμÁ್ಕರ ಮತ್ತು ಸಂಶೋಧನೆಗಳ ಬಗ್ಗೆ ವಸ್ತುಪ್ರದರ್ಶನದಲ್ಲಿ ಅನಾವರಣಗೊಳಿಸಬೇಕು ಎಂದು ಅವರು ಹೇಳಿದರು.
ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಲಿಂ. ಡಾ.ಶ್ರೀ ಶಿವಕುಮಾರ ಶ್ರೀಗಳ ಸೇವಾ ಕಾರ್ಯದಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ತದರ್ಶನವೂ ಮಹತ್ವದ್ದಾಗಿದೆ ಎಂದರು.

     ವಸ್ತುಪ್ರದರ್ಶನ ಆಕರ್ಷಣೆಗೆ ಸೀಮಿತವಾಗದೆ ಮಾಹಿತಿ ಕೊಡುವ ಹೆಚ್ಚು ಶಕ್ತಿಯುತವಾಗಿ ವಿಸ್ತಾರಗೊಳ್ಳಬೇಕು. ವರ್ಷದಿಂದ ವರ್ಷಕ್ಕೆ ಪ್ರದರ್ಶನ ಹೆಚ್ಚು ಪ್ರದರ್ಶನಗೊಳ್ಳಬೇಕು ಎಂದು ಹೇಳಿದರು.
ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅವರು ಮಾತನಾಡಿ, ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನವು ಲಿಂ.ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ದೂರದೃಷ್ಠಿಯ ಫಲ. ಈ ವಸ್ತುಪ್ರದರ್ಶನ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವೇದಿಕೆಯಾಗಿದೆ ಎಂದರೆ ತಪ್ಪಾಗಲಾರದು. ಈ ಪ್ರದರ್ಶನ ಮತ್ತಷ್ಟು ವಿಸ್ತಾರಗೊಂಡು ಹೆಚ್ಚಿನ ಮಾಹಿತಿ ಒದಗಿಸುವಂತಾಗಲಿ ಎಂದರು.
ನಂದಿ ಸ್ತಂಭ: ಕೃಷಿ ಮತ್ತು ವಸ್ತು ಕೈಗಾರಿಕಾ ವಸ್ತು ಪ್ರದರ್ಶನದ ಆವರಣದಲ್ಲಿ ಸ್ವಾಮೀಜಿ ಚಿತ್ರವುಳ್ಳ ಮತ್ತು ಧ್ವಜದಲ್ಲಿಯೇ ನಂದಿ ಇರುವ ನಂದಿ ಸ್ತಂಭವನ್ನು ನಿರ್ಮಾಣ ಮಾಡಿಲಾಗಿದ್ದು, ಆಕರ್ಷಣೀಯವಾಗಿದೆ. ಈ ವಿಗ್ರಹವನ್ನು ರಾಮನಗರದ ಶಿಲ್ಪಿ ವಿನೋದ್ ನಿರ್ಮಿಸಿದ್ದು, ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

(Visited 8 times, 1 visits today)

Related posts

Leave a Comment