ತುಮಕೂರು:

       ತುಮಕೂರು ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಉಚಿತವಾಗಿ ಕರೆದೊಯ್ಯುವ ಕೆಸ್ಸಾರ್ಟಿಸಿ ಬ ಸ್ಸುಗಳಿಗೆ ತುಮಕೂರು ನಗರದ ಶಾಸಕರಾದ ಜಿ.ಬಿ ಜ್ಯೋತಿಗಣೇಶ್ ಅವರು ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದಿಂದ ಹಸಿರು ನಿಶಾನೆ ತೋರಿದರು.

      ಅನಂತರ ಮಾತನಾಡಿದ ಅವರು, ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಕರ್ನಾಟಕ ಸರ್ಕಾರ, ಕೆ.ಎಸ್.ಆರ್.ಟಿ.ಸಿ ಮತ್ತು ಜಿಲ್ಲಾಡಳಿತ ವತಿಯಿಂದ ಇವತ್ತು ಮತ್ತು ನಾಳೆ ತಮ್ಮ ತಮ್ಮ ಊರುಗಳಿಗೆ ಹೋಗಲು ಉಚಿತ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಆರೋಗ್ಯ ಇಲಾಖೆಯಿಂದಲೂ ಸಹ ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ. ಎಷ್ಟು ಜನ ಬಂದರೂ ಕೂಡ ಕರೆದುಕೊಂಡು ಹೋಗುವ ವವ್ಯಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ ಎಂದರು.

      ವಿಭಾಗ ನಿಯಂತ್ರಣಾಧಿಕಾರಿ ಗಜೇಂದ್ರ ಕುಮಾರ್ ಮಾತನಾಡಿ ಜಿಲ್ಲಾಡಳಿತ ವತಿಯಿಂದ ತುಮಕೂರು ನಗರದಲ್ಲಿ ಉಳಿದು ಕೊಂಡಿರುವ ಮುದ್ದೆಬಿಹಾಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಹೀಗೆ ನಾನಾ ಕಡೆಯ ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಒಂದು ಬಸ್‍ನಲ್ಲಿ 30 ಜನರು ಮಾತ್ರ ಹೋಗುವ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

      ಉಪವಿಭಾಗಾಧಿಕಾರಿ ಅಜಯ್ ಮಾತಾನಾಡಿ, ಅಂತರ್ ಜಿಲ್ಲೆಗೆ ಹೋಗುವವರಿಗೆ ನಮ್ಮ ಜಿಲ್ಲಾಡಳಿತದ ವತಿಯಿಂದ ಪ್ರತಿ ಒಬ್ಬ ವ್ಯಕ್ತಿಗೂ ಆರೋಗ್ಯ ತಪಾಸಣೆಯನ್ನು ಸಹ ಮಾಡಿ ಕಳುಹಿಸಲಾಗುತ್ತಿದೆ ಮತ್ತು ಅವರಿಗೆ ಊಟದ ವ್ಯವಸ್ಥೆಯನ್ನು ಸಹ ಜಿಲ್ಲಾಡಳಿತದಿಂದ ಮತ್ತು ಕೆ.ಎಸ್.ಆರ್.ಟಿ.ಸಿ ವತಿಯಿಂದ ಮಾಡಲಾಗಿದೆ ಎಂದರು.

      ಈ ಸಂದರ್ಭದಲ್ಲಿ ಸಂಸದರಾದ ಜಿ.ಎಸ್. ಬಸವರಾಜು, ತಹಶೀಲ್ದಾರ್ ಮೋಹನ್ ಕುಮಾರ್, ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

(Visited 30 times, 1 visits today)