ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳುವಳ್ಳಿ ಬಳಿ ಭೀಕರ ಖಾಸಗಿ ಬಸ್ ಅಪಘಾತಗೊಂಡು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಈ ದುರಂತದಲ್ಲಿ ಬರೋಬ್ಬರಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಸುಮಾರು ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆ ಪ್ರತಿಪಕ್ಷಗಳು ಸರ್ಕಾರದ ಆಡಳಿತದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಸರ್ಕಾರವು ಈ ದುರಂತದ ಬಳಿಕ 7 ಕೆ.ಎಸ್.ಆರ್.ಟಿ.ಸಿ ಬಸ್ ಗಳ ಸಂಚಾರವನ್ನು, ಈ ಮಾರ್ಗದಲ್ಲಿ ಆರಂಭಿಸಿದೆ. ಪಳವಳ್ಳಿ ಕಟ್ಟೆ ಬಳಿಯಲ್ಲಿನ ಖಾಸಗಿ ಬಸ್ ಅಪಘಾತದ ಬಳಿಕ, 24 ಗಂಟೆಯೊಳಗೆ ಕೆ ಎಸ್ ಆರ್ ಟಿ ಸಿ ಚುರುಕುಗೊಂಡಿದ್ದು, ವೈ ಎನ್ ಹೊಸಕೋಟೆ ಟು ಪಾವಗಡ ಮಾರ್ಗಕ್ಕೆ ಸುಮಾರು 7 ಬಸ್ ಗಳನ್ನು ಸಂಚಾರಕ್ಕಾಗಿ ನಿಯೋಜಿಸಲಾಗಿದೆ.

(Visited 619 times, 1 visits today)