ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ :  

      ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

      ನಿನ್ನೆ ರಾತ್ರಿಯಿಂದಲೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಸೆಪ್ಟಿಕ್​ ಆಗಿತ್ತು ಎಂದು ಇಂದು ಬೆಳಗ್ಗೆಯಷ್ಟೇ ಆರ್ಮಿ ಆಸ್ಪತ್ರೆ ಮಾಹಿತಿ ನೀಡಿತ್ತು

      ಮುಖರ್ಜಿ ಅವರು ನಿಧನರಾದ ಸಂಗತಿಯನ್ನು ಸ್ವತಃ ಅವರ ಪುತ್ರ ಅಭಿಜಿತ್‌ ಮುಖರ್ಜಿ ಅವರು ಸೋಮವಾರ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

     ಮಿದುಳಿನಲ್ಲಿ ಹೆಪ್ಪುಗಟ್ಟಿದ್ದ ರಕ್ತವನ್ನು ಹೊರತೆಗೆಯುವ ಸಲುವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲೆಂದು ಆಗಸ್ಟ್‌ 10ರಂದು ಪ್ರಣವ್‌ ಮುಖರ್ಜಿ ಅವರು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಕೋವಿಡ್‌ ಇರುವುದು ಖಚಿತವಾಗಿತ್ತು. ಶಸ್ತ್ರಚಿಕಿತ್ಸೆ ನಂತರ ಕೋಮಾಕ್ಕೆ ಜಾರಿದ್ದ ಪ್ರಣವ್‌ ಮುಖರ್ಜಿ ಅವರ ಶ್ವಾಸಕೋಶಕ್ಕೆ ಸೋಂಕು ತಗುಲಿ ಪರಿಸ್ಥಿತಿ ವಿಷಮವಾಗಿತ್ತು. ಇಂದೂ ಕೂಡ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದ ಆಸ್ಪತ್ರೆ, ಪ್ರಣವ್‌ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿರುವುದಾಗಿ ಹೇಳಿತ್ತು.

 

(Visited 6 times, 1 visits today)

Related posts

Leave a Comment