ತುಮಕೂರು: 

      ರೈತ ವಿರೋಧಿ ಕಾಯ್ದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

      ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ಪ್ರೊ|| ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

      ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಮೆಳೇಕಲ್ಲಹಳ್ಳಿ ಯೋಗೀಶ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಹೊರಟಿರುವುದು ಖಂಡನೀಯ ಎಂದರು.

      ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂಸುಧಾರಣಾ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಕಾಯ್ದೆ ಖಾಸಗೀಕರಣ, ದಲಿತ ವಿರೋಧಿ ನೀತಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ಈ ಕೂಡಲೇ ಕೈ ಬಿಡಬೇಕು. ಇಲ್ಲದಿದ್ದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

      ಪ್ರೊ. ನಂಜುಂಡಸ್ವಾಮಿ ಅವರ ಹೆಸರಿನಲ್ಲಿ ಸಂಘಟನೆಯು ನೊಂದ ರೈತರ ಪರವಾಗಿ ಸಂಘಟನೆ ನಿರಂತರ ಹೋರಾಟ ಮಾಡಲಿದೆ. ಸರ್ಕಾರ ಕೂಡಲೇ ನಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

      ಈ ತಿದ್ದುಪಡಿಗಳನ್ನು ಜಾರಿ ಮಾಡುವ ಮೂಲಕ ರೈತ ದಲಿತ ಕಾರ್ಮಿಕರ ಪಾಲಿಗೆ ಮರಣ ಶಾಸನ ಬರೆದು ರೈತರಿಗೆ ಈ ವಿರೋಧಿ ಕಾಯ್ದೆಗಳನ್ನು ನೇಣು ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಈ ವಿರೋಧಿ ಕಾಯ್ದೆಗಳನ್ನು ತಕ್ಷಣ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

      ಪ್ರತಿಭಟನೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಅರುಣ್‍ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಂಗನಾಥ್ ಕೆ., ಅಪ್ಪಾಜಿಗೌಡ, ಜೆಸಿಬಿ ವೆಂಕಟೇಶ್, ಶಿವರಾಜು, ಜಗದೀಶ್ ಇದ್ದರು.

(Visited 8 times, 1 visits today)