BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ
ಇತರೆ ಸುದ್ಧಿಗಳು

ತುಮಕೂರು : ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ

By News Desk BenkiyabaleUpdated:March 10, 2021 6:04 pm

ತುಮಕೂರು:

      ದಲಿತರ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ ಎಂದು ತಾಲ್ಲೂಕು ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಬೆಳಗುಂಬ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದರು.

      ತಾಲ್ಲೂಕಿನ ಗೂಳೂರಿನಲ್ಲಿ ಬಜೆಟ್‍ನಲ್ಲಿ ಪರಿಶಿಷ್ಟರ ಅಭಿವೃದ್ಧಿ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ವಿರೋಧಿಸಿ ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

      ಒಳ ಮೀಸಲಾತಿ ಸೇರಿದಂತೆ ದಲಿತರ ಅಭಿವೃದ್ಧಿಗೆ ಭರಪೂರ ಭರವಸೆಗಳನ್ನು ನೀಡಿದ್ದ ಬಿಜೆಪಿ ಇಂದು ಅನುದಾನವನ್ನು ನಿಗದಿಪಡಿಸುವುದರಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಂದುವರೆದ ಜಾತಿಗಳಿಗೆ ಒಂದು ಸಾವಿರ ಕೋಟಿ ಅನುದಾನ ನೀಡಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳಿಗೆ ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ಬಿಎಸ್‍ವೈ ದಲಿತರಿಗೆ ಅನ್ಯಾಯವನ್ನು ಮಾಡಿದ್ದಾರೆ ಎಂದು ದೂರಿದರು.
ಈ ಹಿಂದೆ ಇದ್ದ ಸಮ್ಮಿಶ್ರವಾಗಲಿ, ಕಾಂಗ್ರೆಸ್ ಸರ್ಕಾರವಾಗಲಿ ದಲಿತರ ಅಭಿವೃದ್ಧಿಗೆ ಅನುದಾನವನ್ನು ನೀಡುವುದರಲ್ಲಿ ಹಿಂದೆ ಬಿದ್ದಿರಲಿಲ್ಲ, ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಬಹುಸಂಖ್ಯಾತ ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ಅಲ್ಪಸಂಖ್ಯಾತರಿಗೆ ಕನಿಷ್ಠ ಅನುದಾನವನ್ನು ನೀಡುವ ಮೂಲಕ ಮಾಡಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ತಕ್ಕ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.
ಬಿಜೆಪಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರು, ಪರಿಶಿಷ್ಟ ಅನುದಾನವನ್ನು ಕಡಿತಗೊಳಿಸಿರುವುದಕ್ಕೆ ಚಕಾರ ಎತ್ತದೇ, ಮೌನವಹಿಸಿರುವುದನ್ನು ನೋಡಿದರೆ, ಬಿಜೆಪಿಯ ಪರಿಶಿಷ್ಟ ಜಾತಿ, ಪಂಗಡದ ಶಾಸಕರು, ಸಚಿವರು ಅಸಹಾ ಯಕರಾಗಿದ್ದಾರೆ, ಸಮುದಾಯದ ಅಭಿವೃದ್ಧಿಯ ಅನುದಾನ ಕಡಿತಗೊಳಿಸಿದರು ತೆಪ್ಪಗಿರುವ ಪರಿಶಿಷ್ಟರ ಹೆಸರಿನಲ್ಲಿ ಶಾಸಕರು, ಸಚಿವರಾಗಿರುವರು, ತಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸಲು ಆಗದೇ ಇದ್ದರೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.

      ಸಿಂಡಿಕೇಟ್ ಮಾಜಿ ಸದಸ್ಯ ಹೆತ್ತೇನಹಳ್ಳಿ ಮಂಜುನಾಥ್ ಮಾತನಾಡಿ ಸಂವಿಧಾನ ಜಾರಿಯಾದ ನಂತರ ಬಂದ ಲಜ್ಜೆಗೇಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತ್ರ, ಜನರ ಕಲ್ಯಾಣಕ್ಕಾಗಿ ಮಂಡಿಸುವ ಬಜೆಟ್‍ನಲ್ಲಿ ಸಾಮಾಜಿಕ ನ್ಯಾಯವನ್ನು ಕಾಪಾಡಲು ವಿಫಲವಾಗಿದ್ದು, ಅಹಿಂದ ವರ್ಗಗಳಿಗೆ ನೇಣು ಹಾಕುವಂತೆ ಆಡಳಿತವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

      ಸಮಾಜದಲ್ಲಿ ಯಾವುದೇ ಉನ್ನತ ಹುದ್ದೆಯನ್ನು ಪಡೆದರು ಕೊನೆಗೆ ಜಾತಿ ದಲಿತರಿಗೆ ಅಂಟುಕೊಂಡಿದೆ, ದಲಿತರು ಆರ್ಥಿಕವಾಗಿ ಸಬಲವಾಗಬೇಕಾದರೆ, ಆರ್ಥಿಕ ಸಮಾನತೆಯ ಬಜೆಟ್ ಮಂಡಿಸಬೇಕು ಆದರೆ ಬಿಎಸ್‍ವೈ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ವಿರೋಧವಾಗಿ ಆಡಳಿತ ನಡೆಸುತ್ತಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಯಾವ ಪುರುಷಾರ್ಥಕ್ಕಾಗಿ ಅಧಿಕಾರದಲ್ಲಿದ್ದಾರೋ ಗೊತ್ತಿಲ್ಲ, ಸ್ವಾಭಿಮಾನವಿಲ್ಲದ ದಲಿತ, ಹಿಂದುಳಿದ ಶಾಸಕ ಮೌನವಹಿಸಿದ್ದಾರೆ. ಅಹಿಂದ ವರ್ಗಕ್ಕೆ ಜಾತಿ ಸಂಖ್ಯೆ ಆಧಾರದ ಮೇಲಾದರೂ ಅನುದಾನ ನೀಡದ ಬಜೆಟ್ ದಲಿತರಿಗೆ ಮಾರಕವಾಗಿದೆ ಎಂದರು.
ಅಂಬೇಡ್ಕರ್ ಅವರು ಹೇಳಿದಂತೆ ಸ್ವಾಭಿಮಾನವಿಲ್ಲದೇ ಬದುಕಬಾರದು, ಹೋರಾಟದ ಹಕ್ಕು, ಮತದಾನದ ಹಕ್ಕು ನೀಡಿದ್ದಾರೆ, ಅನುದಾನ ನೀಡದೇ ಇರುವುದರ ವಿರುದ್ಧ ಹೋರಾಟ ಮಾಡಬೇಕಾಗಿದೆ, ಸಂವಿಧಾನಾತ್ಮಕವಾಗಿ ನೀಡಿರುವ ಮತದಾನದ ಹಕ್ಕನ್ನು ಅಚ್ಛೇದಿನ್ ನೋಡಿ ಹಾಕಿರುವ ದಲಿತರು, ಭ್ರಷ್ಟಾಚಾರಿ, ದಲಿತ ವಿರೋಧಿ ಸರ್ಕಾರದ ವಿರುದ್ಧ ಚಲಾಯಿಸಲಿದ್ದಾರೆ ಎಂದು ಹೇಳಿದರು.

      ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ ಅಹಿಂದ ವರ್ಗವನ್ನು ಬಜೆಟ್‍ನಲ್ಲಿ ಕಡೆಗಣಿಸಿರುವುದನ್ನು ವಿರೋಧಿಸಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡುವ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಬೇಕಿದೆ, ಸಾಮಾಜಿಕ ನ್ಯಾಯಕ್ಕೆ ವಿರೋಧಿಯಾಗಿರುವ ಈ ಬಜೆಟ್‍ನಲ್ಲಿ ಕೆಲ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡಿರುವುದು ಸ್ವಾಗಾತಾರ್ಹ ಆದರೆ ಅಹಿಂದ ವರ್ಗವನ್ನು ಕಡೆಗಣಿಸಿರುವುದು ಏಕೆ ಎಂದು ಪ್ರಶ್ನಿಸಿದರು.

      ಪ್ರತಿಭಟನೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನರುಗನಹಳ್ಳಿ ವಿಜಯಕುಮಾರ್, ಜಹೀರ್ ಅಬ್ಬಾಸ್, ಗೂಳೂರು ಗ್ರಾ.ಪಂ.ಅಧ್ಯಕ್ಷ ಕೃಷ್ಣೇಗೌಡ, ಕೆಂಪಹನುಮಣ್ಣ, ಕರೆ ರಂಗಪ್ಪ, ಚಲುವಣ್ಣ ಸೇರಿದಂತೆ ಇತರರಿದ್ದರು.

 

(Visited 3 times, 1 visits today)
Previous Articleಎಡೆಯೂರು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಲು ಡಿಸಿ ಸೂಚನೆ
Next Article ‘ಗರ್ಭಿಣಿ ಬಾಲಕಿಯರ ಪುನರ್ವಸತಿಗಾಗಿ ಪ್ರತ್ಯೇಕ ಸಂಸ್ಥೆಗಳ ಪ್ರಾರಂಭಿಸಿ’ – ಡೀಸಿ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.