ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ತುಮಕೂರು:

      ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಮದ್ ಐಮಾನ್‍ಗೆ ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯ್ದೆ ಕಲಂ 6ರಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಂಡ ಮತ್ತು ಕಲಂ 366 ಐಪಿಸಿ ಅಡಿ 5 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

      ಅಧಿಕ ಜಿಲ್ಲಾ ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಯ್ಯ ಅವರು ಈ ತೀರ್ಪು ನೀಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ತನಿಖಾಧಿಕಾರಿಗಳಾದ ರಾಘವೇಂದ್ರ ಸಿ.ಪಿ.ಐ ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ವಿಶೇಷ ಅಭಿಯೋಜಕಿ ಗಾಯತ್ರಿ ರಾಜು ಸರ್ಕಾರದ ಪರ ವಾದ ಮಂಡಿಸಿದ್ದರು.

(Visited 7 times, 1 visits today)

Related posts

Leave a Comment